ಚಳ್ಳಕೆರೆ ಆ.28. ಗೃಹಲಕ್ಷ್ಮಿ ಯೋಜನೆಯಡಿ ನೋಂದಾಯಿಸಿರುವ ಕುಟುಂಬದ ಯಜಮಾನಿಗೆ ಇದೇ 30 ರಂದು ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಬರುವಂತೆ ಅಂಗನವಾಡಿ ಕಾರ್ಯಕರ್ತರು ಮಹಿಳೆಯರಿಗೆ ಹೂವು ಹರಿಸಿನ ಕುಂಕುಮ ನೀಡುವ ಮೂಲಕ ಆಹ್ವಾನ ನೀಡುತ್ತಿದ್ದಾರೆ ಎಂದು ತಾಲೂಕು ಶಿಶು ಅಭಿವೃದ್ಧಿ ಅಧಿಕಾರಿ ತಿಳಿಸಿದರು.
ನೇರವಾಗಿ ಬ್ಯಾಂಕ್ ಖಾತೆಗೆ ಸರ್ಕಾರದಿಂದ ಇದೇ 30 ರಂದು ಮೈಸೂರಿನಲ್ಲಿ ಸಾಮೂಹಿಕ ವಾಗಿ ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಆಯ್ಕೆಯಾದ ಯಜಮಾನಿಯರ ಖಾತೆಗೆ 2 ಸಾವಿರ ರೂ ಹಣ ಜಮೆಯಾಗಲಿದೆ. ಅದೇ ರೀತಿ ತಾಲೂಕಿನಲ್ಲಿ ಸುಮಾರು 77537 ಫಲಾನುಭವಿಗಳು ಆಯ್ಕೆಯಾಗಿದ್ದು ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿದ್ದು ಆಯ್ಕೆಯಾದ ಗೃಹಲಕ್ಷ್ಮಿಯರಿಗೆ
ಇದೇ ತಿಂಗಳು 30 ರಂದು ಫಲಾನುಭವಿಗಳ ಖಾತೆಗೆ ಮೊದಲ ಬಾರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮೆಯಾಗಲಿದ್ದು ಆದ್ದರಿಂದ ಈ ಅವಧಿಯ ಒಳಗೆ ಗರಿಷ್ಠ ಸಾಧನೆ ಮಾಡಬೇಕೆಂದು ಸರ್ಕಾರ ಸೂಚಿಸಿದ್ದರಿಂದ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಅಭಿಯಾನ ನಡೆಸುವ ಮೂಲಕ ಅಂಗನವಾಡಿ ಕಾರ್ಯಕರ್ತರು ಹೂವು. ಹರಿಶಿಣ. ಕುಂಕುಮ ನೀಡಿ ಆಹ್ವಾನ ನೀಡಲಾಗುತ್ತಿದೆ ಎಂದು ತಿಳಿಸಿದರು
.
ಗೃಹಲಕ್ಷ್ಮಿ ಯಜಮಾನಿಯರಿಗೆ ಕುಂಕುಮ ಹೂವು ನೀಡಿ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ ಅಂಗನವಾಡಿ ಕಾರ್ಯಕರ್ತೆಯರು.
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments