ಗೃಹಲಕ್ಷ್ಮೀ ಯೋಜನೆಗೆ ಚಾಲನೆ : ಜಿಲ್ಲೆಯಲ್ಲಿ 3.54 ಲಕ್ಷ ನೋಂದಣಿ‌ ಅತಿದೊಡ್ಡ ಖಾತ್ರಿ ಯೋಜನೆ ಜಾರಿಮಹಿಳೆಯರ ಸಬಲೀಕರಣಕ್ಕೆ ಸರ್ಕಾರದ ಬದ್ಧ -ಸಚಿವ ಡಿ.ಸುಧಾಕರ್

by | 30/08/23 | ಆರ್ಥಿಕ


ಚಿತ್ರದುರ್ಗ ಆ.30:
ಚುನಾವಣೆಗೂ ಮುನ್ನ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಸರ್ಕಾರ ಅತಿದೊಡ್ಡ ಖಾತ್ರಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಿದೆ. ಮಹಿಳೆಯರ ಸಬಲೀಕರಣಕ್ಕೆ ಸರ್ಕಾರ ಸದಾ ಬದ್ಧವಾಗಿದೆ ಎಂದು ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
ಬುಧವಾರ ನಗರದ ತರಾಸು ರಂಗಮಂದಿರಲ್ಲಿ ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ನಗರಸಭೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ, ಮೈಸೂರಿನಲ್ಲಿ ನಡೆದ ಗೃಹಲಕ್ಷ್ಮೀ ಯೋಜನೆಯ ಚಾಲನಾ ಕಾರ್ಯಕ್ರಮದ ನೇರ ಪ್ರಸಾರ ಹಾಗೂ ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಿ, ಅವರು ಮಾತನಾಡಿದರು.
ಈ ಹಿಂದೆ ಜಾರಿಗೊಳಿಸಿದ, ಮಹಿಳೆಯರು ಉಚಿತವಾಗಿ ಬಸ್‍ಗಳಲ್ಲಿ ಪ್ರಯಾಣಿಸುವ “ಶಕ್ತಿ” ಯೋಜನೆಗೆ ಉತ್ತಮ ಸ್ಪಂದನೆ ದೊರೆತಿದೆ. ಮಹಿಳೆಯರ ಬಸ್ ಪ್ರಯಾಣದಿಂದಾಗಿ ಸದಾ ನಷ್ಟದಿಂದ ಬಳಲುತ್ತಿದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಲಾಭದತ್ತ ಮುಖ ಮಾಡಲು ಯೋಜನೆ ಕಾರಣವಾಗಿದೆ. ಇದೀಗ ನಮ್ಮ ಸರ್ಕಾರ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸುತ್ತಿದ್ದು, ಮನೆಯ ಯಜಮಾನಿಗೆ ಪ್ರತಿ ತಿಂಗಳು 2000 ರೂ. ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮಾ ಆಗಲಿದೆ. ಮಹಿಳೆಯರ ಸಬಲೀಕರಣಕ್ಕೆ ಈ ಯೋಜನೆ ಪೂರಕವಾಗಿದೆ. ಗೃಹಲಕ್ಷ್ಮೀ ಯೋಜನೆ ನೊಂದಣಿಗೆ ಯಾವುದೇ ಕಾಲಮಿತಿ ಇಲ್ಲ. ಅರ್ಹರು ಈಗಲೂ ಅರ್ಜಿ ಸಲ್ಲಿಸುವುದರ ಮೂಲಕ ಯೋಜನೆಯ ಲಾಭ ಪಡೆಯಲು ನೋಂದಾಯಿಸಿಕೊಳ್ಳಬಹುದು. ಈ ಹಿಂದೆ 2014 ರಿಂದ 2018 ವರೆಗೆ ಅಧಿಕಾರ ನಡೆಸಿದ ನಮ್ಮ ಪಕ್ಷದ ಸರ್ಕಾರ ಪ್ರಣಾಳಿಕೆಯಲ್ಲಿ ನೀಡಿದ 168 ಭರವಸೆಗಳನ್ನು ಈಡೇರಿಸಿದ್ದು ಮಾತ್ರವಲ್ಲದೆ, ಇನ್ನೂ ಹಲವಾರು ಯೋಜನೆ ಜಾರಿಗೊಳಿಸಿತ್ತು. ಈ ಬಾರಿಯೂ ಪ್ರಣಾಳಿಕೆಯಲ್ಲಿ ನೀಡಿದ ಅಷ್ಟು ಭರವಸೆಗಳನ್ನು ಈಡೇರಿಸಲಾಗುವುದು. ಈಗಾಗಲೆ ನಾವು ನೀಡಿದ ಗ್ಯಾರಂಟಿ ಭರವಸೆಗಳಲ್ಲಿ ನಾಲ್ಕು ಗ್ಯಾರಂಟಿಗಳನ್ನು ಈಡೇರಿಸಿದ್ದೇವೆ. ನಮ್ಮ ಗ್ಯಾರಂಟಿ ಯೋಜನೆಗಳು ಜನರ ಕಲ್ಯಾಣಕ್ಕೆ ನೆರವಾಗಿವೆ ಎಂದರು.
ಚಿತ್ರದುರ್ಗ ಜಿಲ್ಲೆಯ ಜನತೆಯ ಪ್ರಮುಖ ಭೇಡಿಕೆಯಾದ ಭದ್ರಾ ಮೇಲ್ದಂಡೆ ಯೋಜನೆಯನ್ನು ಶೀಘ್ರವಾಗಿ ಪೂರ್ಣಗೊಳಿಸಲಾಗುವುದು. ಈಗಾಗಲೇ ಚಿತ್ರದುರ್ಗ ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಸಂಸ್ಥೆ ಸ್ಥಾಪನೆಗೆ ಮುನ್ನಡಿ ಬರೆಯಲಾಗಿದೆ. ಪ್ರಸಕ್ತ ವರ್ಷದಿಂದಲೇ ವೈದ್ಯಕೀಯ ಕಾಲೇಜು ಆರಂಭವಾಗಿಲಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಗೃಹಲಕ್ಷ್ಮೀ ಯೋಜನೆಯಡಿ ರಾಜ್ಯದ 1.10 ಕೋಟಿ ಕುಟುಂಬಗಳ ಯಜಮಾನಿಗೆ ಪ್ರತಿ ತಿಂಗಳು ರೂ.2000 ನೇರವಾಗಿ ಖಾತೆ ಜಮೆ ಮಾಡಲಾಗುವುದು. ಜಿಲ್ಲೆಯಲ್ಲಿ ಖಾತ್ರಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಲಾಗುತ್ತಿದೆ. ಮಹಿಳೆಯರು ಇದರ ಲಾಭಗಳನ್ನು ಪಡೆದುಕೊಳ್ಳುವಂತೆ ಕರೆ ನೀಡಿದರು.
ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ಮಾತನಾಡಿ ಗೃಹಲಕ್ಷ್ಮೀ ಯೋಜನೆಯಡಿ ಈವರೆಗೆ ಒಟ್ಟು 3.54 ಲಕ್ಷ ಮಹಿಳೆಯರು ನೊಂದಣಿ ಮಾಡಿಸಿದ್ದು, ಫಲಾನುಭವಿಗಳ ನೋಂದಣಿಯಲ್ಲಿ ಚಿತ್ರದುರ್ಗ ಜಿಲ್ಲೆ ರಾಜ್ಯದಲ್ಲೇ 2ನೇ ಸ್ಥಾನದಲ್ಲಿದೆ. ಮಹಿಳೆಯನ್ನು ಕೇಂದ್ರವಾಗಿಸಿಕೊಂಡು ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮಹಿಳೆಯರು ಆರ್ಥಿಕವಾಗಿ ಸಬಲರಾಗುವುದರೊಂದಿಗೆ ಸ್ವಾವಲಂಬಿ ಹಾಗೂ ಸ್ವಾಭಿಮಾನದ ಜೀವನ ಕಟ್ಟಿಕೊಳ್ಳಬೇಕು. ಮಹಿಳೆಯರು ಸ್ವಂತ ನಿರ್ಧಾರಗಳನ್ನು ಕೈಗೊಳ್ಳುವ ಮನೋಭಾವ ರೂಢಿಸಿಕೊಳ್ಳಬೇಕು, ಜೀವನದಲ್ಲಿ ಅಭಿವೃದ್ಧಿ ಹೊಂದಬೇಕು ಎಂದರು.
ಜಿ.ಪಂ. ಸಿಇಓ ಎಸ್.ಜೆ.ಸೋಮಶೇಖರ ಮಾತನಾಡಿ ಸರ್ಕಾರ ಘೋಷಿಸಿದ 5 ಖಾತ್ರಿ ಯೋಜನೆ ಪೈಕಿ ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಈಗ ಗೃಹಲಕ್ಷ್ಮಿ ಸೇರಿದಂತೆ ನಾಲ್ಕು ಖಾತ್ರಿ ಯೋಜನೆಗಳನ್ನು ಅಧಿಕಾರಕ್ಕೆ ಬಂದ 100 ದಿನದ ಒಳಗಾಗಿ ಯಶಸ್ವಿಯಾಗಿ ಅನುಷ್ಠಾನಗೊಳಿಸಿದೆ. ಗೃಹಲಕ್ಷ್ಮೀ ಯೋಜನೆ ಅಧಿಕೃತವಾಗಿ ಚಾಲನೆ ದೊರೆತಿದ್ದು, ಜಿಲ್ಲೆಯ ಎಲ್ಲ 189 ಗ್ರಾಮ ಪಂಚಾಯತಿಗಳಲ್ಲಿಯೂ ಮೈಸೂರಿನ ಕಾರ್ಯಕ್ರಮದ ನೇರಪ್ರಸಾರವನ್ನು ವೀಕ್ಷಿಸಿದ್ದಾರೆ. ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮೆಯಾಗಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಗೃಹಲಕ್ಷ್ಮೀ ಯೋಜನೆಯಡಿ ಸುಧಾ ಸಿ.ಕೆ. ಪುರ, ಮಂಜುಳಾ ಗಾರೆಹಟ್ಟಿ, ನಸ್ರಿನ್ ತಾಜ್ ಚಿತ್ರದುರ್ಗ, ಪಾಲಮ್ಮ ಸಿ.ಕೆ. ಪುರ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಮಂಜೂರಾತಿ ಆದೇಶ ಪತ್ರ ವಿತರಿಸಿದರು.
ಜಿಲ್ಲೆಯಾದ್ಯಂತ ಗೃಹಲಕ್ಷ್ಮೀ ಯೋಜನೆ ನೇರ ಪ್ರಸಾರ ವ್ಯವಸ್ಥೆ: ಸರ್ಕಾರದ ಮಹತ್ವಾಂಕ್ಷೆ ಯೋಜನೆಯಾದ ಗೃಹಲಕ್ಷ್ಮೀ ಯೋಜನೆ ಚಾಲನೆ ಕಾರ್ಯಕ್ರಮ ವೀಕ್ಷಿಸಲು ಜಿಲ್ಲೆಯಾದ್ಯಂತ ನೇರ ಪ್ರಸಾರದ ವ್ಯವಸ್ಥೆ ಕಲ್ಪಿಸಲಾಯಿತು.
ನಗರಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಗಳಲ್ಲಿ ಹಾಗೂ ಜಿಲ್ಲೆಯ 189 ಗ್ರಾಮ ಪಂಚಾಯಿತಿಗಳಲ್ಲಿಯೂ ಗೃಹಲಕ್ಷ್ಮೀ ಯೋಜನೆ ಚಾಲನೆಯ ರಾಜ್ಯಮಟ್ಟದ ನೇರ ಪ್ರಸಾರ ಕಾರ್ಯಕ್ರಮ ವೀಕ್ಷಿಸಲು ಟಿವಿ ಹಾಗೂ ಎಲ್.ಇ.ಡಿ ಪರದೆ ಮೂಲಕ ಈ ಕಾರ್ಯಕ್ರಮವನ್ನು ನೇರವಾಗಿ ವೀಕ್ಷಣೆ ಮಾಡಲು ವ್ಯವಸ್ಥೆ ಮಾಡಲಾಯಿತು. ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಯೋಜನೆಯ ಚಾಲನೆ ಕಾರ್ಯಕ್ರಮದಲ್ಲಿ ಹಬ್ಬದ ರೀತಿಯಂತೆ ಸಂಭ್ರಮದಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು, ಜಿಲ್ಲಾ ಪಂಚಾಯತಿ ಸಿಇಒ ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮರ್ ಮೀನಾ, ಉಪವಿಭಾಗಧಿಕಾರಿ ಎಂ.ಕಾರ್ತಿಕ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೆಶಕಿ ಭಾರತಿ.ಆರ್.ಬಣಕಾರ್ ಸೇರಿದಂತೆ ನಗರಸಭಾ ಸದಸ್ಯರುಗಳು ಹಾಗೂ ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳು ಇದ್ದರು.
ಕಾರ್ಯಕ್ರಮ ಬಳಿಕ ಮಾಹಿತಿ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್ ಅವರು, ಗೃಹ ಲಕ್ಷ್ಮೀ ಯೋಜನೆ ಚಾಲನೆಗೊಂಡ ಮೊದಲ ದಿನವೇ ಜಿಲ್ಲೆಯ 1,20,403 ಫಲಾನುಭವಿಗಳ ಬ್ಯಾಂಕ್ ಖಾತೆಗೆ ತಲಾ 2 ಸಾವಿರ ರೂ. ಜಮಾ ಆಗಿದೆ, ಉಳಿದ ಎಲ್ಲ ಅರ್ಹ ಫಲಾನುಭವಿಗಳಿಗೂ ಹಂತ ಹಂತವಾಗಿ ಹಣ ಜಮಾ ಆಗಲಿದೆ ಎಂದರು.

ಫಲಾನುಭವಿಗಳ ಅನಿಸಿಕೆ :
************
ಕಮಲಮ್ಮ, ಕೆಳಗೋಟೆ, ಚಿತ್ರದುರ್ಗ : ಗೃಹಲಕ್ಷ್ಮೀ ಯೋಜನೆ ಜಾರಿಗೊಳಿಸಿ, ನಮಗೆ ಪ್ರತಿ ತಿಂಗಳು 2 ಸಾವಿರ ದೊರಕುವಂತೆ ಮಾಡಿರುವ ಸರ್ಕಾರಕ್ಕೆ ಧನ್ಯವಾದಗಳು, ಮನೆಯ ಸಣ್ಣ ಪುಟ್ಟ ಖರ್ಚಿಗೂ ಇತರರ ಮುಂದೆ ಕೈ ಚಾಚುವ ಸ್ಥಿತಿ ಇನ್ನು ನಮಗೆ ಇರುವುದಿಲ್ಲ. ಈ ಯೋಜನೆಯನ್ನು ಸರ್ಕಾರ ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸದಂತೆ ಮುಂದುವರೆಸಿಕೊಂಡು ಹೋಗಬೇಕು.

ನಸೀರಾ ಬಿ., ನೆಹರು ನಗರ, ಚಿತ್ರದುರ್ಗ : ಪ್ರತಿ ತಿಂಗಳು 2 ಸಾವಿರ ರೂ. ಸರ್ಕಾರ ನಮಗೆ ಕೊಡುವ ಗೃಹಲಕ್ಷ್ಮಿ ಯೋಜನೆ ಜಾರಿಗೊಳಿಸಿ, ಪ್ರತಿ ದಿನ ದುಡಿದು ಜೀವನ ಸಾಗಿಸುವ ನಮ್ಮಂತಹ ಬಡ ಕೂಲಿ ಕಾರ್ಮಿಕರ ಕುಟುಂಬಗಳಿಗೆ ಆರ್ಥಿಕ ಭದ್ರತೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ.

Latest News >>

ನೂತನ ಸಂಸದ ಗೋವಿಂದ ವಿವಿಧ ಕ್ಷೇತ್ರಗಳಲ್ಲಿ ಕೃತಜ್ಞತಾ ಸಮಾವೇಶ.

ಚಿತ್ರದುರ್ಗ ಜೂ. 12 ಚಿತ್ರದುರ್ಗದ ನೂತನ ಸಂಸದರಾದ ಗೋವಿಂದ ಕಾರಜೋಳರವರು ತಮ್ಮ ಗೆಲುವಿಗೆ ಶ್ರಮಿಸಿದ ಮತದಾರರು ಮತ್ತು ಬಿಜೆಪಿ ಹಾಗೂ ಜೆಡಿಎಸ್...

ಗ್ರಾಮೀಣ ಮತ್ತು ನಗರ ಕುಂಚಿಟಿಗ ಎಂದುತಾರತಮ್ಯ ಮಾಡದಂತೆ ಸಮಸ್ಥ ಕುಂಚಿಟಿಗರಿಗೆ ಕೇಂದ್ರ ಓಬಿಸಿ ಮೀಸಲಾತಿ ಕಲ್ಪಿಸಲು ಆಗ್ರಹ :ಎಸ್.ವಿ.ರಂಗನಾಥ್

ಹಿರಿಯೂರು: ಕುಂಚಿಟಿಗರಿಗೆ ಗ್ರಾಮೀಣ ಮತ್ತು ನಗರ ಕುಂಚಿಟಿಗ ಎಂದು ತಾರತಮ್ಯ ಮಾಡದಂತೆ ಸಮಸ್ಥ ಕುಂಚಿಟಿಗರಿಗೆ ಕೇಂದ್ರ ಸರ್ಕಾರದ ಓಬಿಸಿ ಮೀಸಲಾತಿ...

ಅಂಬೇಡ್ಕರ್ ಸ್ವಾಭಿಮಾನಿ ಸೇನೆ ತಾಲ್ಲೂಕು ಸಮಿತಿ ಯಿಂದ ಎಲ್ಲಾ ಜಾತಿಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ:ಅಧ್ಯಕ್ಷರಾದ ರಾಮಚಂದ್ರ

ಹಿರಿಯೂರು: ಅಂಬೇಡ್ಕರ್ ಸ್ವಾಭಿಮಾನಿ ಸೇನೆ ತಾಲ್ಲೂಕು ಸಮಿತಿ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ರವರ ಜಯಂತಿ ಮತ್ತು ಪ್ರೊ.ಬಿ. ಕೃಷ್ಣಪ್ಪ ರವರ...

ಚಿಕ್ಕೋಡಿ ಲೋಕಸಭಾಕ್ಷೇತ್ರದ ನೂತನ ಸಂಸದರಾದ ಪ್ರಿಯಾಂಕ ಹಾಗೂ ರಾಹುಲ್ ಜಾರಕಿಹೊಳಿಯವರಿಗೆ ವಾಲ್ಮೀಕಿನಾಯಕ ಸಮುದಾಯದಿಂದ ಗೌರವಸನ್ಮಾನ

ಹಿರಿಯೂರು: 12-ಜೂನ್ 2024 ಬುಧವಾರದಂದು ನಗರಕ್ಕೆ ಆಗಮಿಸಿದ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸದಸ್ಯರು ಪ್ರಿಯಾಂಕ ಜಾರಕಿಹೊಳಿ ಹಾಗೂ ರಾಹುಲ್...

ಕೇಂದ್ರ ಸಚಿವ ಸಂಪುಟದಲ್ಲಿ ಮಾದಿಗ ಸಮುದಾಯಕ್ಕೆ ಸಚಿವ ಸ್ಥಾನ ನೀಡುವಲ್ಲಿ ಕೇಂದ್ರ ಸರ್ಕಾರ ಎಡವಿದೆ. ಅದಿಜಾಂಬವ ಮಠದ ಶ್ರೀಷಡಕ್ಷರಿಮುನಿಸ್ವಾಮೀಜಿ

ಚಿತ್ರದುರ್ಗ: ಮಾದಿಗ ಸಮುದಾಯ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಕೇಂದ್ರದಲ್ಲಿ ನೂತನ ಸರ್ಕಾರ ರಚನೆಯಾಗಿದೆ ಅದರಲ್ಲಿ ರಾಜಕೀಯವಾಗಿ ಕುಗ್ಗಿರುವ,...

ಕೇಂದ್ರ ಸಚಿವ ಸಂಪುಟದಲ್ಲಿ ಅಹಿಂದ ವರ್ಗಕ್ಕೆ ಅನ್ಯಾಯ* *ವೀರಶೈವ ಲಿಂಗಾಯತ ವರ್ಗಕ್ಕೆ ಅಪಮಾನ* *ಮತಗಳಿಗಷ್ಟೇ ಲಿಂಗಾಯತರು, ಅಧಿಕಾರಕ್ಕೆ ಅಲ್ಲ* *ಬಿಜೆಪಿ ನಿಜವಾದ ಮುಖವಾಡ ಬಯಲು* *ಮಾಜಿ ಸಚಿವ ಎಚ್.ಆಂಜನೇಯ ಆರೋಪ*

ಚಿತ್ರದುರ್ಗ, ಜೂ. 10 ಲಿಂಗಾಯತರು ಹಾಗೂ ಅಹಿಂದ ಸಮುದಾಯದ ಜನರು ಮತ ಹಾಕಲು ಅಷ್ಟೇ ಸೀಮಿತ, ಅಧಿಕಾರಕ್ಕೆ ಅಲ್ಲ ಎಂಬ ಬಿಜೆಪಿಯ ಮನಸ್ಥಿತಿ ಕೇಂದ್ರ...

ವಾಣಿವಿಲಾಸ ಸಾಗರದಿಂದ ಗಾಯಿತ್ರಿ ಜಲಾಶಯಕ್ಕೆ ನೀರು ಹರಿಸುವಂತೆ ಜೆಜೆ ಹಳ್ಳಿಯ ಬಂದ್ ಯಶಸ್ವಿ ತಾಲ್ಲೂಕು ರೈತ ಸಂಘದ ಅಧ್ಯಕ್ಷ ಕೆ.ಟಿ. ತಿಪ್ಪೇಸ್ವಾಮಿ

ಹಿರಿಯೂರು : ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಗಾಯಿತ್ರಿ ಜಲಾಶಯ ಸೇರಿದಂತೆ ಎಲ್ಲಾ ಕೆರೆಗಳಿಗೆ ವಾಣಿವಿಲಾಸ ಸಾಗರ ಜಲಾಶಯದಿಂದ ನೀರು...

ಸಡಗರ ಸಂಭ್ರಮದಿಂದ ಜರುಗಿದ ಬಸವೇಶ್ವರ ಮೂರ್ತಿ ಪ್ರತಿಷ್ಠಾಪನೆ

ಚಳ್ಳಕೆರೆ: ತಾಲ್ಲೂಕಿನ ಮೈಲನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಬಸವ ಮಂಟಪದಲ್ಲಿ ಬಸವಣ್ಣನವರ ನೂತನ ಮೂರ್ತಿ ಪ್ರತಿಷ್ಠಾಪನೆ ಮತ್ತು...

ಶಾಸಕ ಟಿ.ರಘುಮೂರ್ತಿ ಹುಟ್ಟು ಹಬ್ಬದ ಹಂಗವಾಗಿ ಬನಶ್ರೀ ವೃದ್ಧಾಶ್ರಮಕ್ಕೆ ಪಾತ್ರೆ ದಿನಸಿ ಹಾಗೂ ರೋಗಗಿಳಿಗೆ ಹಾಲು ಬ್ರೆಡ್ ವಿತರಿಸಿ ಹುಟ್ಟು ಹಬ್ಬ ಸಂಭ್ರಮಿಸಿದ ಕಾರ್ಯಕರ್ತರು.

ಚಳ್ಳಕೆರೆ ಜೂ10 ಚಳ್ಳಕೆರೆ ಜೂ10 ಶಾಸಕ ಟಿ ರಘುಮೂರ್ತಿ ಇವರ ಹುಟ್ಟು ಹಬ್ಬದ ಪ್ರಯುಕ್ತ ನೂತನ ನಗರಸಭಾ ನಾಮನಿರ್ದೇಶನ ಸದಸ್ಯರು ಬನಶ್ರೀ...

ಒತ್ತುವರಿ ಮಾಡಿಕೊಂಡಿರುವ ನಕಾಷೆ ಕಂಡ ದಾರಿಯನ್ನು ಬಿಡಿಸಿಕೊಡುವಂತೆ ಗ್ರಾಮಸ್ಥರು ಮನವಿ.

ಚಳ್ಳಕೆರೆ ಜೂ.10.ತಾಲ್ಲೂಕಿನ ಚನ್ನಮ್ಮನಾಗತಿಹಳ್ಳಿ ಗ್ರಾಮದಲ್ಲಿ ಜಮೀನಿನಲ್ಲಿ ನಕಾಶೆ ದಾರಿ ಬಿಡಿಸಿಕೊಡುವಂತೆ ಗ್ರಾಮಸ್ಥರು ತಹಶೀಲ್ದಾರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page