ಗೃಹ ಸಚಿವರ ಬೆಂಗಾವಲು ವಾಹನ ಡಿಕ್ಕಿ ಪ್ರಕರಣ ಪೊಲೀಸರ ವಿರುದ್ಧ ಜನರ ಪ್ರತಿಭಟನೆ

by | 02/03/23 | ಪ್ರತಿಭಟನೆ


ಹಾಸನ ; ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಾವಲು ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬಸ್ಥರಿಗೆ ಮಾಹಿತಿ ನೀಡದೆ ಮೃತದೇಹವನ್ನು ಗ್ರಾಮಕ್ಕೆ ತೆಗೆದುಕೊಂಡು ಹೋಗಿರುವ ಪೊಲೀಸರ ನಡೆ ಖಂಡಿಸಿ ನೂರಾರು ಜನರು ಗಂಡಸಿ ಪೊಲೀಸ್ ಠಾಣೆ ಎದುರು ಧರಣಿ ಮಾಡಿದ್ದಾರೆ.

ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿ ಹೋರಾಟ ಮಾಡಲಾಗುತ್ತಿದ್ದು, ಮೃತದೇಹವನ್ನು ಪೊಲೀಸ್ ಠಾಣೆ ಎದುರು ತರುವಂತೆ ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ.

ನಿನ್ನೆ ರಾತ್ರಿ ಶಿವಮೊಗ್ಗಕ್ಕೆ ತೆರಳುವ ವೇಳೆ ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಾವಲು ವಾಹನ ಡಿಕ್ಕಿಯಾಗಿ ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಗಂಡಸಿ ಪೊಲೀಸ್ ಠಾಣೆ ಬಳಿ ನಡೆದಿದೆ.

ಚಿಕ್ಕಗಂಡಸಿ ಗ್ರಾಮದ ನಿವಾಸಿ ರಮೇಶ್‌ (45) ಮೃತ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿ ಸಚಿವರು ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ಈ ವೇಳೆ ಬಂಕ್‌ನಿಂದ ಬೈಕ್ ಸವಾರ ಬೆಂಗಾವಲು ವಾಹನಕ್ಕೆ ದಿಢೀರ್ ಅಡ್ಡ ಬಂದಿದ್ದಾರೆ ಎನ್ನಲಾಗಿದೆ. ಕೆಎ 13 ಜಿ 1467 ಸಂಖ್ಯೆಯ ಪೊಲೀಸ್ ವಾಹನ ಡಿಕ್ಕಿಯಾಗಿದೆ. ಬೈಕ್ ಸವಾರ ರಮೇಶ್ ಹೆಲ್ಮೆಟ್‌ ಧರಿಸಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದ ಬಳಿಕ ಘಟನೆ ಬಗ್ಗೆ ಮಾಹಿತಿ ಇಲ್ಲದೆ ಸಚಿವರು ತೆರಳಿದ್ದಾರೆ ಎನ್ನಲಾಗುತ್ತಿದೆ. ವಿಚಾರ ತಿಳಿಯುತ್ತಿದಂತೆ ಪೊಲೀಸರಿಗೆ ಕರೆಮಾಡಿ ಮಾಹಿತಿ ಪಡೆದು ಸೂಕ್ತ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ನೆನ್ನೆ ಅಪಘಾತದ ಬಳಿಕ ಇಂದು ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸದೆ ಪೊಲೀಸರು ಗ್ರಾಮಕ್ಕೆ ತೆಗೆದುಕೊಂಡು ಹೋಗಿದ್ದಾರೆ.

ಪ್ರತಿಭಟನಾ ನಿರತರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದಿದೆ. ಎಸ್ಪಿ ಹರಿರಾಮ್ ಶಂಕರ್ ಮತ್ತು ಶಾಸಕ ಶಿವಲಿಂಗೇಗೌಡ ಭೇಟಿ ನೀಡಿದ್ದು, ಹೊರಾಟನಿರತರನ್ನು ಮನವೊಲಿಸಲು ಪ್ರಯತ್ನಿಸಿದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page