ಚಿತ್ರದುರ್ಗ ನ. 16 :
ರಾಜ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ ಅವರು ನ. 17 ರಂದು ಒಂದು ದಿನದ ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಬೆಳಿಗ್ಗೆ ಬೆಂಗಳೂರಿನಿಂದ ಹೊರಟು ಬೆ. 10.30 ಗಂಟೆಗೆ ಚಿತ್ರದುರ್ಗ ನಗರಕ್ಕೆ ಆಗಮಿಸುವರು. ಬೆ. 11 ಗಂಟೆಗೆ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಇಲಾಖಾ ಪ್ರಗತಿ ಪರಿಶೀಲನೆ ಸಭೆ ನಡೆಸುವರು. ಮದ್ಯಾಹ್ನ 12 ಗಂಟೆಗೆ ಚಿತ್ರದುರ್ಗದ ಬಸವೇಶ್ವರ ನಗರದಲ್ಲಿ ಏರ್ಪಡಿಸಿರುವ 72 ಪೊಲೀಸ್ ವಸತಿ ಗೃಹಗಳ ಉದ್ಘಾಟನೆ, ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ಕಟ್ಟಡ ಉದ್ಘಾಟನೆ ಹಾಗೂ ತಳಕು ಪೊಲೀಸ್ ಠಾಣಾ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಸಚಿವರು ಅದೇ ದಿನ ಸಂಜೆ 4 ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.
ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರ ಪ್ರವಾಸ ಕಾರ್ಯಕ್ರಮ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments