ಗ್ಯಾರಂಟಿಗಳು ಜಾರಿಯಾಗಿರದಿದ್ದರೆ ಬರಗಾಲದ ಹಾಹಾಕಾರ ಎದ್ದಿರುತ್ತಿತ್ತು. ರಾಜ್ಯದ 223 ತಾಲ್ಲೂಕುಗಳು ಬರಗಾಲ ಪೀಡಿತವಾಗಿದ್ದರೂ ಮೇವಿಗೆ, ಕುಡಿಯುವ ನೀರಿಗೆ, ಉದ್ಯೋಗ ಖಾತ್ರಿಗೆ ತೊಂದರೆಯಾಗಿಲ್ಲ ಸಿ ಎಂ.ಸಿದ್ದರಾಮಯ್ಯ.

by | 10/01/24 | ಕರ್ನಾಟಕ


ಬೆಂಗಳೂರು ಜ.10 ಗ್ಯಾರಂಟಿಗಳು ಜಾರಿಯಾಗಿರದಿದ್ದರೆ ಬರಗಾಲದ ಹಾಹಾಕಾರ ಎದ್ದಿರುತ್ತಿತ್ತು. ರಾಜ್ಯದ 223 ತಾಲ್ಲೂಕುಗಳು ಬರಗಾಲ ಪೀಡಿತವಾಗಿದ್ದರೂ ಮೇವಿಗೆ, ಕುಡಿಯುವ ನೀರಿಗೆ, ಉದ್ಯೋಗ ಖಾತ್ರಿಗೆ ತೊಂದರೆಯಾಗಿಲ್ಲ.

ನಾವು ಸತ್ಯ ಹೇಳಿ ಲಾಭವನ್ನು ಪಡೆಯುವ ಪ್ರಯತ್ನ ಮಾಡಬೇಕು. ಗ್ಯಾರಂಟಿಗಳನ್ನು ಅಪಹಾಸ್ಯ, ಅವಹೇಳನ ಮಾಡಿದವರೇ ಈಗ ಮೋದಿ ಗ್ಯಾರಂಟಿ ಎಂದು ಶುರು ಮಾಡಿದ್ದಾರೆ. ನಾವು ಜನರಿಗೆ ಸತ್ಯವನ್ನು ಹೇಳಬೇಕು. ಭಾರತದ ಇತಿಹಾಸದಲ್ಲಿ ಯಾವ ಸರ್ಕಾರವೂ ಈ ರೀತಿಯ ಗ್ಯಾರಂಟಿ ಕಾರ್ಯಕ್ರಮಗಳನ್ನು ಜಾರಿ ಮಾಡಿಲ್ಲ. ಇದರಿಂದ ಬಡವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬಲು ಸಾಧ್ಯವಾಗುತ್ತದೆ. ದಲಿತರು, ಹಿಂದುಳಿದವರು, ಮಹಿಳೆಯರಿಗೆ ಅನುಕೂಲವಾಗಲಿದೆ. ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗಳು ಮಹಿಳಾ ಸಬಲೀಕರಣಕ್ಕೆ ಪೂರಕವಾಗಿದೆ.

ಸರ್ಕಾರದಲ್ಲಿ ಹಣವಿಲ್ಲ ಎನ್ನುವ ಅಪಪ್ರಚಾರವನ್ನು ಸೋಲಿಸಬೇಕು. ಇಷ್ಟು ದೊಡ್ಡ ದೊಡ್ಡ ಕಾರ್ಯಕ್ರಮಗಳು ಹಣವಿಲ್ಲದೆ ನಡೆಯಲು ಸಾಧ್ಯವೇ? ನಮ್ಮವರೇ ವಿರೋಧ ಪಕ್ಷಗಳ ಅಪಪ್ರಚಾರವನ್ನು ಸೋಲಿಸಲು ಮುಂದಾಗಬೇಕು. ಮಾರ್ಚ್ ಒಳಗೆ ಎಲ್ಲಾ ಶಾಸಕರಿಗೆ 25 ಕೋಟಿ ರೂ.ಗಳ ಕೆಲಸ ನೀಡಲು ಸೂಚಿಸಿದ್ದೇನೆ.

ಕಳೆದ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ನಾವು ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದ್ದರೂ, ಈವರೆಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಸಭೆ ಕರೆದಿಲ್ಲ. ಪ್ರಧಾನಿ ನರೇಂದ್ರ ಮೋದಿಯವರನ್ನು ಹಾಗೂ ಅಮಿತ್ ಶಾ ಅವರನ್ನು ಭೇಟಿ ಮಾಡಿದಾಗ ಭರವಸೆ ನೀಡಿದ್ದರು. ಕೇಂದ್ರ ಸರ್ಕಾರ ಕೊಡುವವರೆಗೆ ಕಾಯಬಾರದು ಎಂದು 2000 ರೂ. ವರೆಗೆ ರೈತರಿಗೆ ಇನ್ ಪುಟ್ ಸಬ್ಸಿಡಿ ಪರಿಹಾರ ನೀಡಲು ಪ್ರಾರಂಭಿಸಲಾಗಿದೆ.

ಬಿಜೆಪಿಯವರು ಬರಪರಿಹಾರ ಕೊಟ್ಟಿಲ್ಲ ಎಂದು ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ. 25 ಸಂಸದರು ರಾಜ್ಯದಿಂದ ಇದ್ದರೂ ಒಂದು ದಿನವೂ ಈ ಬಗ್ಗೆ ಮಾತನಾಡಿಲ್ಲ. 15ನೇ ಹಣಕಾಸಿನ ಆಯೋಗವು 14-15 ನೇ ಸಾಲಿಗೆ 1.07 % ಹಣ ಕಡಿಮೆ ಮಾಡಿದರು. 1ಲಕ್ಷ 66 ಸಾವಿರ ಕೋಟಿ ರೂ.ಗಳು ನಮಗೆ ಬರಬೇಕಿತ್ತು. 15 ನೇ ಹಣಕಾಸು ಆಯೋಗದ ಮಧ್ಯಂತರ ವರದಿಯಲ್ಲಿ 5,495 ಕೋಟಿ ರೂ.ಗಳನ್ನು ಕೊಡುವುದಾಗಿ ಹೇಳಿ ಕೊಟ್ಟಿಲ್ಲ. ಕರ್ನಾಟಕದ ಬಗ್ಗೆ ಇವರಿಗೆ ಕಾಳಜಿ ಇದೆಯೇ?

2018-19 ರಲ್ಲಿ ಕೇಂದ್ರದ ಬಜೆಟ್ ಗಾತ್ರ 23 ಲಕ್ಷ ಕೋಟಿ ರೂ.ಗಳಿತ್ತು. 35 ಸಾವಿರ ಕೋಟಿ ನಮ್ಮ ಪಾಲು ಇತ್ತು. ಈಗ 45 ಲಕ್ಷ ಕೋಟಿ ರೂ.ಗಳಿದ್ದರೂ ನಮಗೆ ಬರುವುದು ಕೇವಲ 37 ಸಾವಿರ ಕೋಟಿ. ಕರ್ನಾಟಕಕ್ಕೆ ಕೇಂದ್ರದಿಂದ ಅನ್ಯಾಯವಾಗಿದೆ. ಅವರು ಕೊಡುವುದು ನಮ್ಮ ತೆರಿಗೆಯ ಹಣವನ್ನೇ.
ಸೆಸ್, ಸರ್ಚಾರ್ಜ್ ನಲ್ಲಿ ನಮಗೆ ಪಾಲಿಲ್ಲ. 4 ಲಕ್ಷ ಕೋಟಿ ರೂ.ಗಳನ್ನು ನಮ್ಮ ರಾಜ್ಯದಿಂದ ಸಂಗ್ರಹ ಮಾಡುತ್ತಾರೆ. 52 ಸಾವಿರ ಕೋಟಿ ರೂ.ಗಳನ್ನು ಮಾತ್ರ ಕೊಡುತ್ತಾರೆ. ಎಲ್ಲಾ ಶಾಸಕರು, ಸಂಸದರು ಇದನ್ನು ಹೇಳಬೇಕು.

ಈ 10 ವರ್ಷಗಳಲ್ಲಿ ನಮಗೆ ದೊಡ್ಡ ಅನ್ಯಾಯವಾಗಿದೆ. ಜಿಎಸ್‌ಟಿ ಇಂದಾಗುವ ನಷ್ಟವನ್ನು ಭರಿಸುವುದಾಗಿ ಹೇಳಿದ್ದರೂ, ನಮಗೆ ಹಣವನ್ನು ಕೊಟ್ಟಿಲ್ಲ. ರಾಜ್ಯದ ಸಂಸದರೂ ತುಟಿಕ್ ಪಿಟಿಕ್ಕೆನ್ನದೇ ಇದ್ದಾರೆ. ಆರ್ಥಿಕವಾಗಿ ಸ್ವಲ್ಪ ಭಾರವಾದರೂ ಗ್ಯಾರಂಟಿಗಳು ಜನರಿಗೆ ಮುಂದಿನ ದಿನಗಳಲ್ಲಿ ಆರ್ಥಿಕ, ಸಾಮಾಜಿಕ ಶಕ್ತಿಯನ್ನು ತುಂಬುತ್ತದೆ.

ಕೇಂದ್ರದಿಂದ ರಾಜ್ಯಕ್ಕಾಗಿರುವ ಅನ್ಯಾಯಗಳ ಬಗ್ಗೆ ಶಾಸಕರಿಗೆ ಪಟ್ಟಿ ಕಳಿಸಿಕೊಟ್ಟು ಅದನ್ನು ಜನರಿಗೆ ತಲುಪಿಸಬೇಕು. ಜನರಿಗೆ ನಮ್ಮ ಗ್ಯಾರಂಟಿಗಳನ್ನು ಜನರಿಗೆ ತಲುಪಿಸಬೇಕು

#ಅಭಿವೃದ್ಧಿಯ_ಗ್ಯಾರಂಟಿ_ಸರ್ಕಾರ

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page