ಗ್ಯಾರಂಟಿಯೋಜನೆಗಳು ಬಡವರ ಬದುಕಿಗೆ ಆಸರೆ ಕಾಂಗ್ರೆಸ್ ಪಕ್ಷ ಬಡವರ ಧ್ವನಿಯನ್ನು ಆಲಿಸಬಲ್ಲದು ಜಿ.ಪಂ. ಮಾಜಿ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು

by | 19/04/24 | ಲೋಕಸಭಾ ಚುನಾವಣೆ-2024


ಹಿರಿಯೂರು :
ಪಂಚ ಗ್ಯಾರಂಟಿ ಯೋಜನೆಗಳು ಬಡವರ ಬದುಕಿಗೆ ಆಸರೆಯಾಗಿದ್ದು, ಜನಪರವಾದ ಆಡಳಿತ ನೀಡುತ್ತಿದೆ, ಕಾಂಗ್ರೆಸ್ ಪಕ್ಷ ಮಾತ್ರ ಬಡವರ ಧ್ವನಿಯನ್ನು ಆಲಿಸಬಲ್ಲದು ಎಂಬುದಾಗಿ ಜಿಲ್ಲಾಪಂಚಾಯ್ತಿ ಮಾಜಿ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು ಹೇಳಿದರು.
ತಾಲೂಕಿನ ಮಸ್ಕಲ್ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಟಿಬಿ ಗೊಲ್ಲರಹಟ್ಟಿಯಲ್ಲಿ ಲೋಕಸಭಾ ಚುನಾವಣೆ ಪ್ರಯುಕ್ತ ಅಭ್ಯರ್ಥಿ ಚಂದ್ರಪ್ಪನವರ ಪರ ಪ್ರಚಾರ ಮಾಡಿ ಅವರು ಮಾತನಾಡಿದರು.
ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವ ದಿನದಿಂದ ಹಿಡಿದು ಇಲ್ಲಿಯವರೆಗೆ ಕಾಂಗ್ರೆಸ್ ಪಕ್ಷ ಬಡವರ, ದೀನ ದಲಿತರ, ಅಲ್ಪ ಸಂಖ್ಯಾತರ ಪರ ನಿಂತಿದೆ. ಇದೀಗ ರಾಜ್ಯದಲ್ಲಿ ಅಧಿಕಾರದಲ್ಲಿರುವ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರವೂ ಸಹ ಅಧಿಕಾರಕ್ಕೆ ಬಂದ ದಿನದಿಂದಲೂ ನುಡಿದಂತೆ ನಡೆದುಕೊಂಡಿದೆ ಎಂದರಲ್ಲದೆ,
ಆರ್ಥಿಕ ಪರಿಸ್ಥಿತಿಯ ಬಗ್ಗೆ ಆತಂಕ ವ್ಯಕ್ತಪಡಿಸಿ ಕಾಂಗ್ರೆಸ್ಸಿಗರ ಕೈಲಿ ಗ್ಯಾರoಟಿ ಕೊಡಲಾಗುವುದಿಲ್ಲ ಎಂಬ ವಿರೋಧಿಗಳ ಮಾತನ್ನು ಲೆಕ್ಕಿಸದೆ ಬಡವರ ಬದುಕಿಗೆ ಬೆನ್ನೆಲುಬು ಆಗುವುದೇ ಕಾಂಗ್ರೆಸ್ ಪಕ್ಷದ ಸಿದ್ಧಾಂತ ಎಂಬುದಾಗಿ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮತ್ತು ಡಿ.ಕೆ. ಶಿವಕುಮಾರ್ ರವರು ಐದು ಗ್ಯಾರಂಟಿಗಳನ್ನು ಅನುಷ್ಠಾನ ಮಾಡಿ ಯಶಸ್ವಿಗೊಳಿಸಿದರು.
ಇವತ್ತು ಬಡವರು ವಿದ್ಯುತ್ ಬಿಲ್ ಹೊರೆಯಿಲ್ಲದೆ, ಬಸ್ ಚಾರ್ಜ್ ನ ಆತಂಕವಿಲ್ಲದೆ ಜೀವನ ನಡೆಸುತ್ತಿದ್ದಾರೆ. ಪ್ರತಿ ತಿಂಗಳು 2ಸಾವಿರ ಸಿಗುತ್ತಿರುವುದರಿಂದ ಮಹಿಳೆಯರ ಸಂಕಷ್ಟಗಳು ಕಡಿಮೆಯಾಗಿವೆ. ಆದ್ದರಿಂದ ನಮ್ಮ ಅಭ್ಯರ್ಥಿ ಚಂದ್ರಪ್ಪನವರನ್ನು ಅತ್ಯಧಿಕ ಮತಗಳ ಅಂತರದಲ್ಲಿ ಗೆಲ್ಲಿಸಲು ಎಲ್ಲರೂ ಸಹಕರಿಸಬೇಕು ಎಂಬುದಾಗಿ ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಮೊದಲಮೇರಿ, ಕೆಪಿಸಿಸಿ ಸದಸ್ಯರಾದ ಕಂದಿಕೆರೆ ಸುರೇಶಬಾಬು, ಗಿಡ್ಡೋಬನಹಳ್ಳಿಅಶೋಕ್, ಮಸ್ಕಲ್ ಶ್ರೀನಿವಾಸ್, ಕುಮಾರ್ ನಾಯ್ಕ, ಪರಮೇಶ್, ವೈ.ನಾಗರಾಜ್, ಪೆಪ್ಸಿ ನಾಗರಾಜ್, ನಿಜಲಿಂಗಪ್ಪ, ಮಂಜು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Latest News >>

ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು,ನಾವು ರೋಗಿಗಳ ಸೇವೆಮಾಡುವಲ್ಲಿ ದೇವರನ್ನ ಕಾಣಬೇಕು. ಬೆಂ.ಗ್ರಾ.ಕ್ಷೇತ್ರದಸಂಸದ ಡಾ.ಸಿ.ಎನ್.ಮಂಜುನಾಥ್

ತುಮಕೂರು : ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು ಸಾರ್ವಜನಿಕರು, ರೋಗಿಗಳು ನಮ್ಮನ್ನು ದೇವರಿಗೆ ಹೋಲಿಕೆ ಮಾಡುತ್ತಾರೆ. ನಾವು...

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page