ಗ್ಯಾರಂಟಿ ಯೋಜನೆಗಳ ಜಾಗೃತಿ ಸಮಾವೇಶ ಟೀಕೆ-ಟಿಪ್ಪಣಿ ಹಾಗೂ ಕುಹಕಗಳಿಗೆ ಉತ್ತರವಾಗಿ ಗ್ಯಾರೆಂಟಿ ಯೋಜನೆಗಳು ಜಾರಿ- ಶಾಸಕ ಟಿ.ರಘುಮೂರ್ತಿ

by | 05/03/24 | ಸುದ್ದಿ

ಚಿತ್ರದುರ್ಗ ಮಾರ್ಚ್ 05:
ಚುನಾವಣೆ ಸಂದರ್ಭದಲ್ಲಿ ಜನರಿಗೆ ಅನ್ನಭಾಗ್ಯ, ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ ಹಾಗೂ ಯುವನಿಧಿ ಯೋಜನಗಳನ್ನು ಜಾರಿ ಮಾಡುವ ಭರವಸೆಯನ್ನು ಪ್ರಣಾಳಿಕೆಯಲ್ಲಿ ನೀಡಲಾಗಿತ್ತು. ವಿರೋಧ ಪಕ್ಷಗಳು ಈ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದು ಸಾಧ್ಯವಿಲ್ಲ. ಒಂದು ವೇಳೆ ಜಾರಿ ಮಾಡಿದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಟೀಕೆ ಮಾಡುವುದರೊಂದಿಗೆ, ಕುಹಕದ ಮಾತುಗಳನ್ನು ಆಡಿದ್ದವು. ಆದರೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನವರ ನೇತೃತ್ವದಲ್ಲಿ ಅಧಿಕಾರಕ್ಕೆ ಬಂದ ನಮ್ಮ ಸರ್ಕಾರ, ಕೊಟ್ಟ ಮಾತಿನಂತೆ ಯೋಜನೆಗಳನ್ನು ಯಶಸ್ವಿಯಾಗಿ ಜಾರಿ ಮಾಡಿ, ಟೀಕೆ ಟಿಪ್ಪಣಿ ಹಾಗೂ ಕುಹಕಗಳಿಗೆ ತಕ್ಕ ಉತ್ತರ ನೀಡಿದೆ ಎಂದು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಹೇಳಿದರು.
ಚಿತ್ರದುರ್ಗ ತಾಲ್ಲೂಕು ತುರುವನೂರು ಗ್ರಾಮದ ಪ್ರೌಢಶಾಲಾ ಆವರಣದಲ್ಲಿ ಮಂಗಳವಾರ ಆಯೋಜಿಸಲಾದ ಹೋಬಳಿ ಮಟ್ಟದ ಪಂಚ ಗ್ಯಾರಂಟಿ ಯೋಜನಗಳ ಜಾಗೃತಿ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ಗ್ಯಾರಂಟಿ ಯೋಜನೆಗಳ ಜಾರಿಯಿಂದ ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿಲ್ಲ. ಮತ್ತಷ್ಟು ಬಲಿಷ್ಠವಾಗಿದೆ. ಈ ಬಾರಿ ಬಜೆಟ್‍ನ ಸುಮಾರು ರೂ.50 ಸಾವಿರ ಕೋಟಿಗೂ ಅಧಿಕ ಹಣವನ್ನು ಗ್ಯಾರಂಟಿ ಯೋಜನೆಗಳಿಗಾಗಿ ಮೀಸಲು ಇರಿಸಲಾಗಿದೆ. ಕಳೆದ ಜೂನ್ 21 ರಂದು ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. ಇದರಿಂದ ರಾಜ್ಯದ ಎಲ್ಲಾ ವರ್ಗದ ಮಹಿಳೆಯರು ಉಚಿತವಾಗಿ ರಾಜ್ಯಾದ್ಯಂತ ಪ್ರಯಾಣ ಮಾಡುವ ಅವಕಾಶ ಲಭಿಸಿದೆ. ದೇಶದಲ್ಲೇ ಪ್ರಥಮ ಬಾರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನವರು ಅನ್ನಭಾಗ್ಯ ಯೋಜನೆ ಜಾರಿ ಮಾಡಿ, ಬಿಪಿಎಲ್ ಕುಟುಂಬದ ಪ್ರತಿ ವ್ಯಕ್ತಿಗೂ 5 ಕೆ.ಜಿ. ಉಚಿತ ಅಕ್ಕಿಯನ್ನು ನೀಡಿದರು. ಕಳೆದ ಬಾರಿ ನಮ್ಮ ಸರ್ಕಾರ ಇದ್ದಂತಹÀ ಅವಧಿಯಲ್ಲಿಯೇ 5 ಕೆ.ಜಿ. ಅಕ್ಕಿ ಪ್ರಮಾಣವನ್ನು 7 ಕೆ.ಜಿ.ಗೆ ಏರಿಸಲಾಗಿತ್ತು. ಆದರೆ ನಂತರ ಬಂದ ಸರ್ಕಾರ ಅನ್ನಭಾಗ್ಯ ಯೋಜನೆಯನ್ನು ನಿಲ್ಲಿಸುವ ಚಿಂತನೆ ನಡೆಸಿತ್ತು. ದೇಶ ಕೋವಿಡ್ ಮಹಾಮಾರಿಗೆ ಸಿಲುಕಿದ್ದರಿಂದ ಯೋಜನೆಯನ್ನು ಮುಂದುವರಿಸಲಾಯಿತು. ಬಡವರಿಗೆ ಅನ್ನಭಾಗ್ಯ, ಕೋವಿಡ್ ಲಾಕ್‍ಡೌನ್ ಸಂದರ್ಭದಲ್ಲಿ ಸಂಜೀವಿನಿ ಆಯಿತು. ನಮ್ಮ ಸರ್ಕಾರ ಅನ್ನಭಾಗ್ಯ ಯೋಜನೆಗೆ ಕೇಂದ್ರಕ್ಕೆ ಅಕ್ಕಿ ನೀಡಲು ಕೋರಿದಾಗ ಮನವಿಯನ್ನು ತಿರಸ್ಕರಿಸಲಾಯಿತು. ಹೀಗಾಗಿ ನಮ್ಮ ಸರ್ಕಾರ ಆಹಾರ ಧಾನ್ಯಕ್ಕೆ ಪ್ರತಿಯಾಗಿ ಪ್ರತಿ ತಿಂಗಳು ಪ್ರತಿ ಸದಸ್ಯರಿಗೆ ರೂ.170 ಮೊತ್ತವನ್ನು ಡಿಬಿಟಿ ಮೂಲಕ ಫಲಾನುಭವಿಗಳ ಖಾತೆಗೆ ಜಮೆ ಮಾಡುವ ನಿರ್ಧಾರ ಕೈಗೊಂಡು ಅದನ್ನು ಪಾಲಿಸಿಕೊಂಡು ಬರುತ್ತಿದ್ದೇವೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.
ಚುನಾವಣೆ ಸಂದರ್ಭದಲ್ಲಿ ನೀಡುತ್ತಿದ್ದ ಆಶ್ವಾಸನೆಗಳನ್ನು ಈಡೇರಿಸುವ ಬದ್ದತೆಗೆ ಹೊಸ ರೂಪವಾಗಿ ಗ್ಯಾರಂಟಿ ಎಂಬ ಮಾತು ಪ್ರಚಲಿತವಾಗಿದೆ. ಮಾರುಕಟ್ಟೆಯಲ್ಲಿ ಖರೀದಿಸುವ ವಸ್ತುಗಳಿಗೆ ತಯಾರಕರು ಗ್ಯಾರಂಟಿ ಅವಧಿಯ ಕಾರ್ಡುಗಳನ್ನು ನೀಡುತ್ತಾರೆ. ಅದೇ ರೀತಿ ಸರ್ಕಾರವು ಪ್ರಣಾಳಿಕೆಯಲ್ಲಿ ನೀಡಿದ ಆಶ್ವಾಸನೆಗಳನ್ನು ಈಡೇರಿಸುವ ಬದ್ದತೆ ತೋರಬೇಕು. ತುರುವನೂರು ಹೋಬಳಿಯಲ್ಲಿ ಶೇ.95 ರಷ್ಟು ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಫಲಾನುಭವಿಗಳಿಗೆ ನೀಡಲಾಗಿದೆ. ದಾಖಲೆಗಳ ಕೊರತೆ ಹಾಗೂ ತಾಂತ್ರಿಕ ಕಾರಣಗಳಿಂದ ಹಲವು ಜನರ ಅರ್ಜಿಗಳಲ್ಲಿ ತೊಂದರೆ ಉಂಟಾಗಿದೆ. ಇದನ್ನು ಸಹ ಸರಿಪಡಿಸಿ 100ಕ್ಕೆ 100 ರಷ್ಟು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದಾಗಿ ಶಾಸಕ ಟಿ.ರಘುಮೂರ್ತಿ ಹೇಳಿದರು.


ತಹಶೀಲ್ದಾರ್ ಡಾ.ನಾಗವೇಣಿ ಪ್ರಾಸ್ತಾವಿಕವಾಗಿ ಮಾತನಾಡಿ, ಹೋಬಳಿಯಲ್ಲಿ ಅನ್ನಭಾಗ್ಯ ಯೋಜನೆಯಡಿ 11,812 ಫಲಾನುಭವಿಗಳ ಪೈಕಿ 11,679 ಜನರಿಗೆ, ಗೃಹಲಕ್ಷ್ಮೀ ಯೋಜನೆಯಡಿ 9,832 ಫಲಾನುಭವಿಗಳ ಪೈಕಿ 9,784, ಗೃಹಜ್ಯೋತಿ ಯೋಜನೆಯಡಿ 9,247 ಫಲಾನುಭವಿಗಳ ಪೈಕಿ 8,641 ಫಲಾನುಭವಿಗಳು ಲಾಭ ಪಡೆಯುತ್ತಿದ್ದಾರೆ. ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆಗಾಗಿ ಹೋಬಳಿಯ 3939 ಯುವಕರು ನೊಂದಣಿ ಮಾಡಿಕೊಂಡಿದ್ದಾರೆ. ಶಕ್ತಿ ಯೋಜನೆಯು ಹೋಬಳಿಯಲ್ಲಿ ಯಶಸ್ವಿಯಾಗಿದೆ. ಸರ್ಕಾರದ ಗ್ಯಾರಂಟಿ ಯೋಜನೆಗಳು ಮಹಿಳೆಯರ ಅಭ್ಯುದಯಕ್ಕೆ ಪೂರಕವಾಗಿವೆ ಎಂದರು.
ಫಲಾನುಭವಿಗಳಾದ ಬೆಳಗಟ್ಟ ಗ್ರಾಮದ ಹೇಮಲತಾ, ತುರುವನೂರು ಗ್ರಾಮದ ಲಲಿತಮ್ಮ ಗ್ಯಾರಂಟಿ ಯೋಜನೆಗಳ ಕುರಿತು ತಮ್ಮ ಅನಿಸಿಕೆ ಹಂಚಿಕೊಂಡರು.
ಇದೇ ಸಂದರ್ಭದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು. ಇದರ ಅಂಗವಾಗಿ ಗ್ರಾಮದ ಪ್ರೌಢಶಾಲಾ ವಿಧ್ಯಾರ್ಥಿನಿಯರಿಗೆ ಏರ್ಪಡಿಸಲಾದ ಪ್ರಬಂಧ, ಚಿತ್ರಕಲೆ, ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ವೇದಿಕೆಯಲ್ಲಿ ಸನ್ಮಾನಿಸಿ ಪ್ರಮಾಣ ಪತ್ರ ವಿತರಿಸಲಾಯಿತು. ವಕೀಲರಾದ ದಿಲ್‍ಶಾದ್ ಮಹಿಳಾ ಕಾನೂನು ಹಾಗೂ ಮಹಿಳೆಯರ ಸುರಕ್ಷತೆ ಕುರಿತು ಉಪನ್ಯಾಸ ನೀಡಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಉಪಾಧ್ಯಕ್ಷ ಹಾಗೂ ಜಿ.ಪಂ. ಮಾಜಿ ಸದಸ್ಯ ಬಾಬುರೆಡ್ಡಿ, ತಾ.ಪಂ. ಇ.ಓ. ಅನಂತರಾಜು, ತುರುವನೂರು ಗ್ರಾ.ಪಂ. ಅಧ್ಯಕ್ಷೆ ದೀಪಾ.ಪಿ ಮಹೇಶ್, ಬೆಳಗಟ್ಟ ಗ್ರಾ.ಪಂ. ಅಧ್ಯಕ್ಷೆ ಮಂಜುಶ್ರೀ ಪಾಲಯ್ಯ, ಕೂನಬೇವು ಗ್ರಾ.ಪಂ. ಅಧ್ಯಕ್ಷ ಜಿ.ಪಿ. ಅನಿಲ್ ಕುಮಾರ್, ಮಾದನಾಯಕನಹಳ್ಳಿ ಗ್ರಾ.ಪಂ. ಅಧ್ಯಕ್ಷೆ ಕವಿತಾ ನಾಗರಾಜ್, ಮುದ್ದಾಪುರ ಗ್ರಾ.ಪಂ. ಅಧ್ಯಕ್ಷೆ ಮಂಗಳಾ, ಚಿಕ್ಕಗೊಂಡನಹಳ್ಳಿ ಗ್ರಾ.ಪಂ. ಅಧ್ಯಕ್ಷೆ ಮಹಾಂತಮ್ಮ, ಸಿಡಿಪಿಓ ಸುಧಾ, ವೈದ್ಯಾಧಿಕಾರಿ ಸುಶ್ಮಿತಾ ಉಪಸ್ಥಿತರಿದ್ದರು. ಕೂನಬೇವು ಪಿಡಿಓ ಧನಂಜಯ ಸ್ವಾಗತಿಸಿದರು. ತುರುವನೂರು ಪಿಡಿಓ ಖಲೀಂ ಕಾರ್ಯಕ್ರಮ ನಿರೂಪಿಸಿದರು.

Latest News >>

ಮಹಾವೀರರ ತತ್ವ ಆದರ್ಶಗಳು ಸರ್ವಕಾಲಕ್ಕೂ ಪ್ರಸ್ತುತ: ತಹಸಿಲ್ದಾರ್ ರೆಹಾನ್ ಪಾಷ

ಚಳ್ಳಕೆರೆ: ನಗರದ ತಾಲೂಕು ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತ ಮತ್ತು ಜೈನ ಸಮುದಾಯ ವತಿಯಿಂದ ಇಂದು ಮಹಾವೀರ  ಜಯಂತಿಯನ್ನು ಲೋಕಸಭಾ ಚುನಾವಣೆ...

ಕುಡಿಯುವ ನೀರಿನ ಯೋಜನೆಯ ಜಾಕ್ ವೆಲ್ ನ ಸ್ಥಳಕ್ಕೆಮುಖ್ಯಕಾರ್ಯದರ್ಶಿಯಾದ ಅಂಜುಮ್ ಫರ್ವೇಜ್ ಭೇಟಿ

ಹಿರಿಯೂರು: ವಾಣಿವಿಲಾಸ ಸಾಗರದ ಐಮಂಗಲ ಹಾಗೂ ಹೊಳಲ್ಕೆರೆ ತಾಲ್ಲೂಕಿನ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಜಾಕ್ ವೆಲ್ ಸ್ಥಳಕ್ಕೆ...

ಸಡಗರ ಸಂಭ್ರಮದಿಂದ ಜರುಗಿದ ಶ್ರೀರಾಮನವಮಿ- ಶ್ರೀರಾಮ ಭಕ್ತರಿಂದ ಪಾನಕ. ಕೋಸಂಬರಿ ವಿತರಣೆ- ವಿಶೇಷ ಪೂಜೆ.

ಚಳ್ಳಕೆರೆ ಜನಧ್ವನಿ ವಾರ್ತೆ ಏ17. ಶ್ರೀರಾಮನವಮಿ ಅಂಗವಾಗಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಶ್ರೀರಾಮ ಜಪದೊಂದಿಗೆ ಸಡಗರ ಸಂಭ್ರಮದಿಂದ...

ವಾಣಿ ವಿಲಾಸ ಸಾಗರ ಜಲಾಶಯದ ನೀರನ್ನ ಖಾಲಿ ಮಾಡವಂತ ಹುನ್ನಾರ ನಡೆಸಲಾಗಿದೆ ಎಂಬುದಾಗಿ ರೈತ ಮುಖಂಡ :ಕಸವನಹಳ್ಳಿ ರಮೇಶ್ ಆರೋಪ

ಹಿರಿಯೂರು: ವಾಣಿವಿಲಾಸ ಸಾಗರ ಜಲಾಶಯದ ನೀರು ಖಾಲಿ ಮಾಡಲು ಹುನ್ನಾರ ನಡೆಸಲಾಗಿದೆ ಎಂಬುದಾಗಿ ರೈತ ಮುಖಂಡ ಹಾಗೂವಾಣಿವಿಲಾಸ ಸಾಗರ ಹಾಗೂ ಭದ್ರಾ...

ಬೆಳೆವಿಮೆ ಪರಿಹಾರದಲ್ಲಿ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ.ಮರುಪರಿಶೀಲಿಸಿ ಹೆಚ್ಚುವರಿ ಪರಿಹಾರ ಕೊಡಿಸಲು ಪ್ರಯತ್ನ: ಎಚ್.ಎನ್.ಶಿವೇಗೌಡ

ಹಿರಿಯೂರು: ಬೆಳೆವಿಮೆ ಪರಿಹಾರದಲ್ಲಿ ರೈತರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ. ಮರುಪರಿಶೀಲಿಸಿ ಹೆಚ್ಚುವರಿ ಪರಿಹಾರ ಕೊಡಿಸಲು...

ಯುಗಾದಿ ಹಬ್ಬಕ್ಕೆ ಬಂದವರಿಗೆ ಬೆಂಗಳೂರಿಗೆ ತೆರಳಲು ಬಸ್ಸಿಗಾಗಿ ಸಾರಿಗೆ ಬಸ್ಸು ನಿಲ್ದಾಣದಲ್ಲಿ ಕಾಯುತ್ತಿರುವ ಪ್ರಯಾಣಿಕರು.

ಚಳ್ಳಕೆರೆ ಏ11 ಯುಗಾದಿ ಹಬ್ಬ ಮುಗಿಸಿಕೊಂಡು ಮತ್ತೆ ಬೆಂಗಳೂರಿಗೆ ತೆರಳಲು ಸಾರಿಗೆ ಬಸ್ಸುಗಳ ವ್ಯವಸ್ಥೆಯಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ....

ರಂಜಾನ್ ಹಾಗೂ ಯುಗಾದಿ ಹಬ್ಬದ ಪ್ರಯುಕ್ತ ಅಗತ್ಯವಸ್ತುಗಳ ಖರೀದಿ ಬಲು ಜೋರು..

ಚಳ್ಳಕೆರೆ ಚಳ್ಳಕೆರೆ ಏ.8 ಅಗತ್ಯ ವಸ್ತುಗಳ ಬೆಳೆ ಏರಿಕೆ , ಬಿಸಿಲಿನ ತಾಪ ಹಾಗೂ ಬರಗಾಲದ ನಡುವೆಯೂ ರಂಜಾನ್ ಹಾಗೂ ಯುಗಾದಿ ಹಬ್ಬದ ಖರೀದಿ ಭರಾಟೆ...

ಯುಗಾದಿ ಹಾಗೂ ರಂಜಾನ್ ಹಬ್ಬಗಳನ್ನು‌ ಶಾಂತಿ‌ಸೌಹಾರ್ಧತೆಯಿಂದ ಆಚರಿಸಿ ಠಾಣಾಧಿಕಾರಿ ಕೆ.ಕುಮಾರ್.

ಚಳ್ಳಕೆರೆ ಏ.8 ಈ ಬಾರಿ ರಂಜಾನ್ ಹಾಗೂ ಯುಗಾದಿ ಹಬ್ಬಗಳು ಒಟ್ಟಾಗಿ ಬಂದಿದ್ದು, ಸೌಹಾರ್ದಯುತವಾಗಿ ಹಬ್ಬಗಳನ್ನು ಆಚರಿಸಬೇಕು ಎಂದು ಠಾಣಾಧಿಕಾರಿ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page