ಗ್ಯಾರೆಂಟಿ ಯೋಜನೆಗಳ ಅನುಷ್ಠಾನದ ಜಿಲ್ಲಾ ಪ್ರಾಧಿಕಾರ ಅಸ್ತಿತ್ವಕ್ಕೆ ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭ ದೊರೆಯಲಿ ನೂತನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ ಹೇಳಿಕೆ

by | 15/03/24 | ಸುದ್ದಿ

ಚಿತ್ರದುರ್ಗ ಮಾ. 15 :
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳ ಲಾಭ ಅರ್ಹ ಫಲಾನುಭವಿಗಳಿಗೆ ದೊರೆಯಬೇಕು. ಜಿಲ್ಲಾಡಳಿತದೊಂದಿಗೆ ಸಮನ್ವಯ ವಹಿಸಿ ಜಿಲ್ಲಾ ಮಟ್ಟದ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಕಾರ್ಯನಿರ್ವಹಿಸಲಿದೆ ಎಂದು ಅಧ್ಯಕ್ಷ ಆರ್.ಶಿವಣ್ಣ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಪ್ರಥಮ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಾಂತ್ರಿಕ ಕಾರಣಗಳಿಂದಾಗಿ ಫಲಾನುಭವಿಗಳು ಗ್ಯಾರೆಂಟಿ ಯೋಜನೆಗಳಿಂದ ವಂಚಿತರಾಗಬಾರದು. ಗ್ರಾಮ ಮಟ್ಟದಲ್ಲಿ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ಸದಸ್ಯರು ಕಾರ್ಯನಿರ್ವಹಿಸಿ ತೊಂದರೆಗಳನ್ನು ಪರಿಹರಿಸಬೇಕು. ಪಕ್ಷಾತೀತವಾಗಿ ಕೆಲಸ ನಿರ್ವಹಿಸಬೇಕು. ಸರ್ಕಾರದ ಎಲ್ಲಾ ಯೋಜನೆಗಳು ನೇರವಾಗಿ ಫಲಾನುಭವಿಗಳಿಗೆ ದೊರಕಲಿವೆ. ಇದರಲ್ಲಿ ಯಾವುದೇ ವೈಯಕ್ತಿಕ ಹಿತಾಸಕ್ತಿಯಿಲ್ಲ. ಸಮಾಜಮುಖಿಯಾಗಿ ಬಡವರಿಗೆ ನೆರವಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸೇರಿದಂತೆ ಎಲ್ಲಾ ಶಾಸಕರು ಹಾಗೂ ಜನಪ್ರತಿನಿಧಿಗಳು ನಮ್ಮನ್ನು ನೇಮಿಸಿದ್ದಾರೆ ಎಂದು ಅಧ್ಯಕ್ಷ ಆರ್.ಶಿವಣ್ಣ ಹೇಳಿದರು.
3.70 ಲಕ್ಷ ಕುಟುಂಬಗಳಿಗೆ ಅನ್ನಭಾಗ್ಯ ಹಾಗೂ ಗೃಹಲಕ್ಷ್ಮೀ ಯೋಜನೆ ಲಾಭ :
ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು 4.01 ಲಕ್ಷ ಬಿ.ಪಿ.ಎಲ್ ಹಾಗೂ ಎ.ಪಿ.ಎಲ್ ಕಾರ್ಡುಗಳು ಇವೆ. ಇದರಲ್ಲಿ 3.70 ಲಕ್ಷ ಕುಟುಂಬಗಳು ಅನ್ನಭಾಗ್ಯ ಯೋಜನೆಯ ಲಾಭ ಪಡೆಯುತ್ತಿವೆ. ಯೋಜನೆಯಡಿ ಪ್ರತಿ ಕುಟುಂಬ ಸದಸ್ಯರಿಗೆ ತಲಾ 5 ಕೆ.ಜಿ. ಅಕ್ಕಿ ನೀಡಲಾಗುತ್ತಿದೆ. ಉಳಿದ 5 ಕೆ.ಜಿ. ಅಕ್ಕಿಗೆ ಪ್ರತಿಯಾಗಿ ತಲಾ ರೂ.170 ರೂಪಾಯಿಗಳನ್ನು ಡಿಬಿಟಿ ಮುಖಾಂತರ ಫಲಾನುಭವಿಗಳಿಗೆ ನೀಡಲಾಗುತ್ತಿದೆ. ಇದುವರೆಗೂ 3.60 ಲಕ್ಷ ಪಡಿತರ ಕಾರ್ಡುದಾರ ಖಾತೆ ಹಣ ವರ್ಗಾವಣೆಯಾಗುತ್ತಿದೆ. ಬಯೋಮೆಟ್ರಿಕ್ ಸೇರಿದಂತೆ ಇತರೆ ತಾಂತ್ರಿಕ ಕಾರಣಗಳಿಗಾಗಿ 10 ಸಾವಿರ ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆ ಸಾಧ್ಯವಾಗಿಲ್ಲ. ಇದರ ಬಗ್ಗೆ ಸರ್ಕಾರಕ್ಕೆ ವರದಿ ನೀಡಲಾಗಿದೆ. ಸರ್ಕಾರ ನಿರ್ದೇಶನ ಅನುಸರಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಆಹಾರ ಇಲಾಖೆ ಜಂಟಿ ನಿರ್ದೇಶಕ ಮಧುಸೂಧನ್ ಸಭೆಯಲ್ಲಿ ಮಾಹಿತಿ ನೀಡಿದರು.
ಶೀಘ್ರವೇ ಸರ್ಕಾರದಿಂದ ಹೊಸ ಬಿ.ಪಿ.ಎಲ್ ಕಾರ್ಡು ವಿತರಣೆ ಆರಂಭಿಸುವಂತೆ ರಾಜ್ಯ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರಕ್ಕೆ ಮನವಿ ಸಲ್ಲಿಸುವ ಕುರಿತು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು.
ಜಿಲ್ಲೆಯಲ್ಲಿ ಒಟ್ಟು 3.84 ಲಕ್ಷಕ್ಕೂ ಅಧಿಕ ಮಹಿಳೆಯರು ಗೃಹಲಕ್ಷ್ಮೀ ಯೋಜನೆಯಡಿ ನೊಂದಣಿ ಮಾಡಿಕೊಂಡಿದ್ದಾರೆ. ಇದರಲ್ಲಿ 3.60 ಲಕ್ಷ ಮಹಿಳೆಯರ ಖಾತೆಗೆ ಪ್ರತಿ ತಿಂಗಳು ರೂ.2000 ಜಮೆ ಮಾಡುತ್ತಿರುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್ ಸಭೆಯಲ್ಲಿ ತಿಳಿಸಿದರು.
ಶಕ್ತಿ ಯೋಜನೆಯಡಿ 1.52 ಕೋಟಿ ಮಹಿಳೆಯರ ಪ್ರಯಾಣ:
ಶಕ್ತಿ ಯೋಜನೆಯ ಜಾರಿ ನಂತರ ಚಿತ್ರದುರ್ಗ ಜಿಲ್ಲೆಯ ವಿಭಾಗೀಯ ಬಸ್‍ಗಳಲ್ಲಿ 1.52 ಕೋಟಿ ಅಧಿಕ ಮಹಿಳೆಯರು ಪ್ರಯಾಣ ಮಾಡಿದಾರೆ. ಪ್ರತಿದಿನ 60 ಸಾವಿರ ಮಹಿಳೆಯರು ಬಸ್‍ಗಳಲ್ಲಿ ಸಂಚರಿಸುತ್ತಿದ್ದಾರೆ. ಚಿತ್ರದುರ್ಗ ವಿಭಾಗಕ್ಕೆ ಶಕ್ತಿ ಯೋಜನೆಯಿಂದ ಒಟ್ಟು ರೂ.52 ಕೋಟಿ ಲಾಭ ಲಭಿಸಿದೆ. ಬಸ್‍ಗಳಲ್ಲಿ ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ಹೊಸ ಬಸ್‍ಗಳ ಖರೀದಿಗೆ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ವಿಭಾಗಕ್ಕೆ 10 ಹೊಸ ಬಸ್‍ಗಳು ಸೇರ್ಪಡೆಯಾಗಿವೆ ಎಂದು ಚಿತ್ರದುರ್ಗ ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದೇಶ್ವರ ಹೆಬ್ಬಾಳ ಮಾಹಿತಿ ನೀಡಿದರು.
ಕೆಲ ಚಾಲಕರು ಹಾಗೂ ನಿರ್ವಾಹಕರು ಶಕ್ತಿ ಯೋಜನೆ ಬಗ್ಗೆ ಟೀಕೆ ಮಾಡುವುದು ಕಂಡುಬರುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು. ನಿಯಮ ಮೀರಿದವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ತೀರ್ಮಾನಿಸಲಾಯಿತು.
3.67 ಲಕ್ಷಕ್ಕೂ ಅಧಿಕ ಗೃಹ ಬಳಕೆದಾರರು ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಲಾಭ ಪಡೆಯುತ್ತಿದ್ದಾರೆ. ಚಿತ್ರದುರ್ಗ ಬೆಸ್ಕಾಂಗೆ ಯೋಜನೆಯಿಂದ ವಾರ್ಷಿಕವಾಗಿ ರೂ.13.84 ಕೋಟಿಯನ್ನು ಸರ್ಕಾರ ಪಾವತಿ ಮಾಡುವುದು ಎಂದು ಬೆಸ್ಕಾಂ ಇಂಜಿಯರ್ ಜಯಣ್ಣ ಸಭೆಗೆ ತಿಳಿಸಿದರು.
ಜಿಲ್ಲೆಯಲ್ಲಿ 4023 ಯುವಕರು ಯುವನಿಧಿ ಯೋಜನೆಯಡಿ ನೊಂದಣಿ ಮಾಡಿಕೊಂಡಿದ್ದಾರೆ. ಇದರಲ್ಲಿ 2379 ಜನರಿಗೆ ಈಗಾಗಲೇ ನೇರವಾಗಿ ಹಣ ವರ್ಗಾವಣೆ ಮಾಡಲಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಕಿಶೋರ್ ಕುಮಾರ್ ತಿಳಿಸಿದರು. +
ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಭಿನಂದನೆ:
ನೂತನವಾಗಿ ಅಸ್ತಿತ್ವಕ್ಕೆ ಬಂದ ಜಿಲ್ಲಾ ಮಟ್ಟದ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರನ್ನು ಸ್ವಾಗತಿಸಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಭಿನಂಧನೆ ಸಲ್ಲಿಸಿದರು.
ಗ್ಯಾರೆಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷರಾಗಿ ಆರ್.ಶಿವಣ್ಣ, ಉಪಾಧ್ಯಕ್ಷರುಗಳಾಗಿ ಡಿ.ಎನ್.ಮೈಲಾರಪ್ಪ, ಖಾದಿ.ಜೆ.ರಮೇಶ್, ಟಿ.ನಿರಂಜನ್, ಜಿ.ಟಿ.ಬಾಬುರೆಡ್ಡಿ, ನಾಗೇಶ್ ರೆಡ್ಡಿ, ಸದಸ್ಯರುಗಳಾಗಿ ಕೆ.ಪಿ.ಸಂಪತ್‍ಕುಮಾರ್, ಬಿ.ಟಿ.ಜಗದೀಶ್, ಅಬ್ದುಲ್ಲಾ ಶಾ ವಲಿ, ಟಿ.ಕೃಷ್ಣಮೂರ್ತಿ, ನಾಗರಾಜ್, ಹೇಮಂತ್ ಯಾದವ್, ಮಹಮದ್ ಇಸ್ಮಾಯಿಲ್, ಎ.ಲೋಹಿತ್, ಕೆ.ಎ.ತಿಪ್ಪೇಶ್, ಎಲ್.ಇಂದಿರಾ, ಪಿ.ಆರ್.ಶಿವಕುಮಾರ್, ಮಧುಪಾಲೇಗೌಡ, ಟಿ.ಪ್ರಕಾಶ್, ಚನ್ನಕೇಶವ, ಜಿ.ಪಿ.ಸುರೇಶ್ ಕಾರ್ಯನಿರ್ವಹಿಸಲಿದ್ದಾರೆ.
ತಾಲ್ಲೂಕು ಮಟ್ಟದಲ್ಲಿಯೂ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯನ್ನು ರಚಿಸಲಾಗಿದೆ. ತಾ.ಪಂ.ಇಓ ಈ ಸಮಿತಿ ಸದಸ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಜಿಲ್ಲಾ ಮಟ್ಟದ ಪ್ರಾಧಿಕಾರದಲ್ಲಿ ಚರ್ಚಿಸುವ ವಿಷಯಗಳ ಆಧಾರದಲ್ಲಿ ಗ್ಯಾರೆಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವುದಾಗಿ ಜಿಲ್ಲಾ ಮಟ್ಟದ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾಗಿರುವ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸಭೆಯಲ್ಲಿ ತಿಳಿಸಿದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page