ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ

by | 13/12/23 | ಉದ್ಯೋಗ

ಚಿತ್ರದುರ್ಗ ಡಿ13
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ 06 ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಖಾಲಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಡಿಸೆಂಬರ್ 26 ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ.
ಚಿತ್ರದುರ್ಗ ತಾಲ್ಲೂಕಿನ ಮದಕರಿಪುರ, ಗೊಡಬನಾಳ್, ಚಳ್ಳಕೆರೆ ತಾಲ್ಲೂಕಿನ ಕಾಲುವೇಹಳ್ಳಿ, ಎನ್.ದೇವರಹಳ್ಳಿ, ಗೌರಸಮುದ್ರ, ಮೊಳಕಾಲ್ಮೂರು ತಾಲ್ಲೂಕಿನ ಜೆ.ಬಿ ಹಳ್ಳಿಯಲ್ಲಿ ಪ್ರತಿ ಗ್ರಾಮ ಪಂಚಾಯಿತಿಗೆ ಒಂದರಂತೆ ಒಟ್ಟು 6 ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ 06 ಹುದ್ದೆ ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಮೀಸಲಾತಿ ವಿವರ: ಚಿತ್ರದುರ್ಗ ತಾಲ್ಲೂಕು ಮದಕರಿಪುರ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ (ಪರಿಶಿಷ್ಟ ಜಾತಿ-ಇತರೆ), ಗೊಡಬನಾಳ್ ಗ್ರಾಮ ಪಂಚಾಯಿತಿ (ಸಾಮಾನ್ಯ ಅಭ್ಯರ್ಥಿ-ಇತರೆ), ಚಳ್ಳಕರೆ ತಾಲ್ಲೂಕು ಕಾಲುವೇಹಳ್ಳಿ ಗ್ರಾಮ ಪಂಚಾಯಿತಿ (ಪರಿಶಿಷ್ಟ ಪಂಗಡ-ಇತರೆ, ಎನ್.ದೇವರಹಳ್ಳಿ ಗ್ರಾಮ ಪಂಚಾಯಿತಿ (ಸಾಮಾನ್ಯ ಅಭ್ಯರ್ಥಿ-ಮಹಿಳಾ ಅಭ್ಯರ್ಥಿ), ಗೌರಸಮುದ್ರ ಗ್ರಾಮ ಪಂಚಾಯಿತಿ (ಪ್ರವರ್ಗ-1-ಇತರೆ), ಮೊಳಕಾಲ್ಮುರು ತಾಲ್ಲೂಕು ಜೆ.ಬಿ.ಹಳ್ಳಿ ಗ್ರಾಮ ಪಂಚಾಯಿತಿ (ಸಾಮಾನ್ಯ ಅಭ್ಯರ್ಥಿ-ಗ್ರಾಮೀಣ ಅಭ್ಯರ್ಥಿ) ಗೆ ಮೀಸಲಾತಿ ನಿಗಧಿಪಡಿಸಲಾಗಿದೆ.
ಅರ್ಜಿ ದೊರೆಯುವ ಸ್ಥಳ: ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ, ಜಿಲ್ಲಾ ಪಂಚಾಯತ್ ಹಾಗೂ ಸಂಬಂಧಪಟ್ಟ ತಾಲ್ಲೂಕು ಪಂಚಾಯತಿ ಮತ್ತು ಸಂಬಂಧಿಸಿದ 06 ಗ್ರಾಮ ಪಂಚಾಯಿತಿಗಳಲ್ಲಿ ಅರ್ಜಿ ಪಡೆಯಬಹುದಾಗಿದೆ.
ಅರ್ಜಿ ಸಲ್ಲಿಸುವ ಸ್ಥಳ: ಅರ್ಜಿಯನ್ನು ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿ ಅರ್ಜಿಯನ್ನು ದೃಢೀಕರಿಸಿದ ಅಗತ್ಯ ದಾಖಲೆಗಳನ್ನು ಖುದ್ದಾಗಿ ಅಥವಾ ನೊಂದಾಯಿತ ಅಂಚೆ ಮೂಲಕ “ಆಯ್ಕೆ ಸಮಿತಿ ಸದಸ್ಯ ಕಾರ್ಯದರ್ಶಿಗಳು ಹಾಗೂ ಉಪ ಕಾರ್ಯದರ್ಶಿಗಳು, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ಟೇಡಿಯಂ ರಸ್ತೆ, ಚಿತ್ರದುರ್ಗ ಈ ವಿಳಾಸಕ್ಕೆ ಮಾತ್ರ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಯನ್ನು ಜಿಲ್ಲೆಯ ವೆಬ್‍ಸೈಟ್ chitradurga.nic.in ನಲ್ಲಿ ಡೌನ್‍ಲೋಡ್ ಮಾಡಿಕೊಳ್ಳಬಹುದು ಹಾಗೂ ಮಾಹಿತಿಗಾಗಿ ಖುದ್ದಾಗಿ ಕಚೇರಿ ಅವಧಿಯಲ್ಲಿ ಹಾಗೂ ದೂರವಾಣಿ ಸಂಖ್ಯೆ 08194-223058 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page