ಗ್ರಾಪಂ ಮಹಿಳಾ ಸದಸ್ಯೆಯ ಪತಿರಾಯನಿಂದ ವಸತಿ ಯೋಜನೆಯ ಬಿಲ್ ಗೆ ಬಡಕುಟುಂಬಕ್ಕೆ 30 ಸಾವಿರ ಲಂಚಕ್ಕೆ ಬೇಡಿಕೆ -ಕುಟುಂಬಸ್ಥರು ತಾಪಂ ಕಚೇರಿ ಮುಂದೆ ಪ್ರತಿಭಟನೆ..

by | 22/12/23 | ಪ್ರತಿಭಟನೆ


ಚಳ್ಳಕೆರೆ ಜನಧ್ವನಿ ವಾರ್ತೆ ಡಿ 22
ಬಡವರಿಗಾಗಿ ಸರಕಾರದಿಂದ ಹತ್ತು ಹಲವು ಯೋಜನೆಗಳು ಜಾರಿಗೊಳ್ಳುತ್ತವೆ ಇದನ್ನೇ ಬಂಡವಾಳ ಮಾಡಿಕೊಂಡ ಜನರಿಂದ ಆಯ್ಕೆಯಾದವರು ಹಣಕೊಟ್ಟವರಿಗೆ ಸೌಲಭ್ಯ ಎನ್ನುವಂತಾಗಿದ್ದು ಮಹಿಳಾ ಸದಸ್ಯರಿಗೆ ವರದಾನವಾಗಿದೆ.


ಹೌದು ಇದು ಚಳ್ಳಕೆರೆ ತಾಲೂಕಿನ ಚನ್ನಮ್ಮನಾಗತಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾಲಿಗೊಂಡನಹಳ್ಳಿ ಗ್ರಾಮದಕವಿತಮ್ಮ ಎಂಬುವರಿಗೆ ವಸತಿ ಯೋಜನೆಯಡಿ ಮಂಜೂರಾದ ಮನೆ ಕಟ್ಟಿಕೊಳ್ಳಲು ಗ್ರಾಮದ ಗ್ರಾಮ ಪಂಚಾಯಿತಿ ಸದಸ್ಯೆ ಅನಿಲಾಕ್ಷಿ ಎಂಬುವರ ಪತಿ ಹನುಮಂತರಾಜು ಕೇಳಿದ್ದ 30 ಸಾವಿರ ಲಂಚ ನೀಡಲಿಲ್ಲ ಎನ್ನುವ ಕಾರಣಕ್ಕೆ, ಮನೆ ಕಟ್ಟಿಕೊಳ್ಳಲು ಅಡ್ಡಿಪಡಿಸುತ್ತಿದ್ದಾರೆ ಎಂದು ತಾಲೂಕು ಪಂಚಾಯಿ ಕಚೇರಿ ಮುಂದೆ ಚಿಕ್ಕಮಕ್ಕಳೊಂದಿಗೆ ಧರಣಿ ಕುಳಿತು ಬಡಕುಟುಂಬಕ್ಕೆ ನ್ಯಾಯ ಬೇಕೆಂದು ತಾಪಂ ಇಒ ಎಚ್. ಶಶಿಧರ ಬಳಿ ಅಳಲು ತೊಡಿಕೊಂಡಿದ್ದಾರೆ.

2017 ರಲ್ಲಿ ರಾಜೀವ್ ಗಾಂಧಿ ವಸತಿ ಯೋಜನೆಯಡಿ ಮನೆ ಮಂಜೂರಾಗಿತ್ತು. ಬಡತನದ ಪರಿಸ್ಥಿತಿ ಮತ್ತು ಕೋವಿಡ್ ಕಾಲದಲ್ಲಿ ಮನೆ ಕಟ್ಟಿಕೊಳ್ಳಲಿಲ್ಲ. ಈ ವರ್ಷದಲ್ಲಿ ಮನೆ ಕಟ್ಟಿಕೊಳ್ಳುತ್ತಿರುವ ನಮಗೆ ನಮ್ಮ ಅವಧಿಯಲ್ಲಿ ಮನೆ ಕಟ್ಟಿಕೊಳ್ಳುತ್ತಿದ್ದೀರಾ ಇಂತಿಷ್ಟು ದುಡ್ಡು ಕೊಡಬೇಕೆಂದು ಗ್ರಾಪಂ ಸದಸ್ಯೆ ಪತಿ ಹನುಮಂತರಾಜು ನಮಗೆ ಲಂಚದ ಹಣಕ್ಕಾಕಿ ಹಿಂಸೆ ನೀಡುತ್ತಾದ್ದೇರೆ. ಹಣ ಕೊಡಿದ್ದಕ್ಕೆ ಜಾಗ ಒತ್ತುವರಿ ಮಾಡಿಕೊಂಡು ಮನೆ ಕಟ್ಟುತ್ತಿದ್ದಾರೆ ಎಂದು ಐದಾರು ಬಾರಿ ನೋಟೀಸ್ ಕೊಡಿಸುವ ಮೂಲಕ ಮನೆಯ ಬಿಲ್ಲುಗಳನ್ನು ತಡೆಯಲಾಗಿದೆ. ಬೀಳುವ ಸ್ಥಿತಿಯಲ್ಲಿರುವ ಗುಡಿಸಲಿನಲ್ಲಿ ಮಕ್ಕಳನ್ನು ಕಟ್ಟಿಕೊಂಡು ಜೀವನ ಮಾಡುವುದು ಕಷ್ಟವಾಗಿದೆ. ಕಳೆದ ತಿಂಗಳು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಕಾಲಿಡಿದು ಬೇಡಿಕೊಂಡಿದ್ದರೂ ಮನೆ ಕಟ್ಟಿಕೊಳ್ಳಲು ಬಿಡುತ್ತಿಲ್ಲ. ಪಂಚಾಯಿತಿ ಅಧ್ಯಕ್ಷರು ಮತ್ತು ಎಲ್ಲಾ ಸದಸ್ಯರು ಮನೆ ಕಟ್ಟಿಕೊಳ್ಳಲು ಒಪ್ಪಿಗೆ ನೀಡಿದ್ದರೂ, ಸದಸ್ಯೆ ಪತಿಯಾಗಿರುವ ಹನುಮಂತರಾಜು ಅಡ್ಡಿಪಡಿಸುತ್ತಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.
ಇಒ ಶಶಿಧರ್ ಮನವಿ ಸ್ವೀಕರಿಸಿ ಮಾತನಾಡಿ, ಸಂಜೆ ೪ ಗಂಟೆ ಸಮಯಕ್ಕೆ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಲಾಗುವುದು. ಕೆಲವರಿಗೆ ಮನೆ ಮಂಜೂರಾತಿ ಆದರೂ ಕಟ್ಟಿಕೊಳ್ಳುವುದು ಕಷ್ಟ. ಅಂತಹದರಲ್ಲಿ ಬಡ ಕುಟುಂಬದವರಾಗಿ ಮನೆ ಕಟ್ಟಿಕೊಳ್ಳುತ್ತಿದ್ದೀರ. ಈ ಸಮಸ್ಯೆ ಬಗೆಹರಿಸಿ ಉಳಿದ ಮೂರು ಬಿಲ್ಲುಗಳು ಕೊಡಿಸುವ ಭರವಸೆ ನೀಡಿದ್ದಾರೆ.
ಕುಟುಂಬಸ್ಥರಾದ ಕವಿತಾ, ರಮೇಶ, ರತ್ನಮ್ಮ, ಗುರುಮೂರ್ತಿ ಇತರರಿದ್ದರು.
ಈಗಲಾದರೂ ಗ್ರಾಮಪಂಚಾಯಿತಿ ಆಡಳೀತದಲ್ಲಿ ಮಹಿಳಾ ಸದಸ್ಯರ ಬದಲಾಗಿ ಪತಿರಾಯರು ಮೂಗುತೂರಿಸುವವರಿಗೆ ಕಾನೂನು ಕ್ರಮ ಕೈಗೊಳ್ಳ ಬೇಕಿದೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page