*ಗ್ರಾಮಗಳನ್ನು ಸ್ವಚ್ಛ, ಸುಂದರಗೊಳಿಸಲು ಶ್ರಮಿಸಿ : ಸಂಜೀವಪ್ಪ*

by | 02/12/22 | ಸುದ್ದಿ

ಮಂಡ್ಯ‌ ಗ್ರಾಮೀಣ ಪ್ರದೇಶದಲ್ಲಿ ಸ್ವಚ್ಛ ಭಾರತ್ ಮಿಷನ್(ಗ್ರಾ) ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನ ಮಾಡುವ ಮೂಲಕ ಸ್ವಚ್ಛ ಗ್ರಾಮ ಪರಿಕಲ್ಪನೆಯನ್ನು ಸಾಕಾರಗೊಳಿಸಿ, ಮಾದರಿ ಸ್ವಚ್ಛ, ಸುಂದರ ಗ್ರಾಮಗಳನ್ನಾಗಿ ರೂಪಿಸಲು ಕ್ರಮವಹಿಸುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಂಜೀವಪ್ಪ‌ಅವರು
ತಿಳಿಸಿದರು.
ಅವರು ಇಂದು ಮಂಡ್ಯ ಜಿಲ್ಲೆಯ ಜಿಲ್ಲಾ ಪಂಚಾಯಿತಿಯ ಕಾವೇರಿ ಸಭಾಂಗಣದಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾ) ಹಂತ-2 ರ ಘಟಕಾಂಶಗಳ ತ್ವರಿತ ಅನುಷ್ಠಾನ ಕುರಿತು, ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾಂiÀರ್iಪಾಲಕ ಅಭಿಯಂತರರು ಮತ್ತು ಕಿರಿಯ ಅಭಿಯಂತರರು ಮತ್ತು ನರೇಗಾ ಯೋಜನೆಯ ತಾಂತ್ರಿಕ ಸಂಯೋಜಕರು, ಹಾಗೂ ತಾಂತ್ರಿಕ ಸಹಾಯಕರಿಗೆ ಆಯೋಜಿಸಲಾಗಿದ್ದ ಒಂದು ದಿನದ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದರು‌.

ಸ್ವಚ್ಛ ಭಾರತ್ ಮಿಷನ್ (ಗ್ರಾ) ಹಂತ-2 ರ ಘಟಕಾಂಶಗಳಾದ ಘನ ತ್ಯಾಜ್ಯ ನಿರ್ವಹಣೆ, ಬೂದು ನೀರಿನ ನಿರ್ವಹಣೆ, ಮಲ ತ್ಯಾಜ್ಯ ನಿರ್ವಹಣೆ, ಅವಳಿಗುಂಡಿ ಶೌಚಾಲಯ ನಿರ್ಮಾಣ, ಗೋಬರ್ ಧನ್ ಘಟಕಗಳ ಅನುಷ್ಠಾನ ಮಾಡುವ ಕುರಿತು ನೀಡಲಾಗುವ ನಿರ್ದೇಶನಗಳನ್ನು ಅನುಸರಿಸಿ ಸ್ವಚ್ಛ ಗ್ರಾಮ ನಿರ್ಮಿಸಲು ಎಲ್ಲರೂ ಶ್ರಮಿಸಬೇಕು ಎಂದರು.

ಈ ಸಂದರ್ಭದಲ್ಲಿ ಡಿ,ಆರ್.ಡಿ,ಎ ಶಾಖೆಯ ಸಹಾಯಕ ಯೋಜನಾಧಿಕಾರಿಗಳಾದ ಷಣ್ಮುಗಂ ರವರು ಮಾತನಾಡಿ, ಘನ ತ್ಯಾಜ್ಯ ವೈಜ್ಞಾನಿಕ ನಿರ್ವಹಣೆಗಾಗಿ ಈಗಾಗಲೇ ಗ್ರಾಮ ಪಂಚಾಯಿತಿಗಳಲ್ಲಿ ವಾಹನ ಖರೀದಿ ಹಾಗೂ ತ್ಯಾಜ್ಯ ನಿರ್ವಹಣಾ ಘಟಕಗಳು ನಿರ್ಮಾಣವಾಗಿದ್ದು, ಮನೆಯ ಹಂತದಲ್ಲಿ ಒಣ ತ್ಯಾಜ್ಯವನ್ನು ಸಂಗ್ರಹಿಸಿ, ನಿರ್ವಹಿಸಲು ತ್ವರಿತವಾಗಿ ಕ್ರಮವಹಿಸುವಂತೆ ತಿಳಿಸಿದರು.

ನಂತರ ಸ್ವಚ್ಛ ಭಾರತ್ ಮಿಷನ್(ಗ್ರಾ) ಯೋಜನೆಯ ಜಿಲ್ಲಾ ಸಮಾಲೋಚಕರಾದ ಚನ್ನೇಗೌಡರವರು ತರಬೇತಿ ನೀಡಿದರು.

ಈ ತರಬೇತಿ ಕಾರ್ಯಾಗಾರದಲ್ಲ್ಲಿ ಜಿಲ್ಲಾ ಸ್ವಚ್ಛ ಭಾರತ್ ಮಿಷನ್(ಗ್ರಾ) ಯೋಜನೆಯ ಸಮಾಲೋಚಕರುಗಳಾದ ಶಿವಕುಮಾರ್.ಎಸ್, ಜೈದೇವ್, ತಮ್ಮಣ್ಣ ಹಾಗೂ ಶಶಿಕಿರಣ, ಹಾಗೂ ವಲಯ ಮೇಲ್ವಿಚಾರಕರುಗಳು ಹಾಜರಿದ್ದರು.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *