ನಾಯಕನಹಟ್ಟಿ:: ಆಗಸ್ಟ್ 4 .
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಗ್ರಾಮೀಣ ಪ್ರದೇಶದ ಜನರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಶುದ್ಧಗಂಗಾ ಘಟಕಗಳನ್ನು ನಿರ್ಮಿಸಿ ಕೊಡುತ್ತದೆ ಎಂದು ತಾಲೂಕು ಯೋಜನಾಧಿಕಾರಿ ಅಣ್ಣಪ್ಪ ಹೇಳಿದ್ದಾರೆ.
ಭಾನುವಾರ ಪಟ್ಟಣ ಪಂಚಾಯತಿ ವ್ಯಾಪ್ತಿಯ ಮಾದಯ್ಯನಹಟ್ಟಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಮಾರಿಕಾಂಬ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಶುದ್ಧ ಕುಡಿಯುವ ನೀರಿನ ಬಳಕೆ ಬಗ್ಗೆ ಸೃಜನಶೀಲ ಕಾರ್ಯಕ್ರಮವನ್ನು ಜ್ಯೋತಿ ಬೆಳಗುವುದರ ಮುಖಾಂತರ ಉದ್ಘಾಟಿಸಿ ಮಾತನಾಡಿದ ಅವರು ಮಹಿಳೆಯರು ಶುದ್ಧವಾಗಿರುವ ನೀರನ್ನು ಪ್ರತಿನಿತ್ಯ ಕುಡಿಯುವುದರ ಮೂಲಕ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಯೋಜನೆಯ ವಿವಿಧ ಕಾರ್ಯಕ್ರಮಗಳ ಬಗ್ಗೆ ಪರಿಚಯಿಸಿ ಮಾಹಿತಿಯನ್ನು ನೀಡಿದರು.
ಇನ್ನೂ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷರಾದ ತಿಪ್ಪೇಸ್ವಾಮಿ ಇವರು ವಹಿಸಿಕೊಂಡಿದ್ದರು.
ಇನ್ನೂ ನಲಗೇತನಹಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶೇಷಾದ್ರಿ ನಾಯಕ ಮಾತನಾಡಿದರು. ಶುದ್ಧ ಕುಡಿಯುವ ನೀರಿನ ಮಹತ್ವ ಕುರಿತು ಹಾಗೂ ಮನೆಯ ಸುತ್ತಮುತ್ತ ಸ್ವಚ್ಛತೆಯನ್ನು ಕಾಪಾಡಿಕೊಂಡು ಸಾಂಕ್ರಾಮಿಕ ರೋಗಗಳು ಬಾರದಂತೆ ಎಚ್ಚರವಹಿಸಿ ಎಂದು ಮಾಹಿತಿಯನ್ನು ನೀಡಿದರು.
ಮಾಜಿ ಪಟ್ಟಣ ಪಂಚಾಯತಿ ಸದಸ್ಯ ಟಿ ಬಸಪ್ಪ ನಾಯಕ ಮಾತನಾಡಿ ಸರ್ಕಾರ ಮಾಡುವ ಕೆಲಸವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮಾಡುತ್ತಿದೆ ಗ್ರಾಮೀಣ ಪ್ರದೇಶದ ಮಹಿಳೆಯರು ಸಂಸ್ಥೆಯಲ್ಲಿ ಸೌಲಭ್ಯವನ್ನು ಪಡೆದುಕೊಂಡು ಆರ್ಥಿಕವಾಗಿ ಸದೃಢರಾಗಲು ಸಾಲ ಸೌಲಭ್ಯವನ್ನು ಒದಗಿಸಿ ಕೊಡುತ್ತದೆ ಉತ್ತಮ ಜೀವನ ಕಟ್ಟಿಕೊಳ್ಳಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಶ್ರಮಿಸುತ್ತಿದೆ ಎಂದರು.
ಇದೇ ಸಂದರ್ಭದಲ್ಲಿ ಪತ್ರಕರ್ತ ವಿ. ಧನಂಜಯ, ಇಂದಿರಾಗಾಂಧಿ ವಸತಿ ಶಾಲೆ ವಿಜ್ಞಾನ ಶಿಕ್ಷಕ ಮಹಾಂತೇಶ್, ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಪಿ ಯಶೋಧ, ಸೇವಾ ಪ್ರತಿನಿಧಿ ಮಹಾಂತಮ್ಮ, ಮತ್ತು ಜ್ಞಾನವಿಕಾಸ ಕೇಂದ್ರದ ಸರ್ವ ಸದಸ್ಯರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
0 Comments