ಗ್ರಾಮೀಣ ಭಾಗದ ಓವರ್ ಹೆಡ್ ಟ್ಯಾಂಕ್, ಚಿಕ್ಕಟ್ಯಾಂಕ್, ನೆಲ ತೊಟ್ಟಿಗಳು, ಪೈಪ್ ಲೈನ್ ಲಿಕೇಜ್ಸೇರಿ ನೀರಿನ ಸಂಪರ್ಕದ ಸಮಸ್ಯೆ ಇದ್ದಲ್ಲಿಕೂಡಲೇ ಬಗೆಹರಿಸಬೇಕು. ಯಾವುದೇ ಕಾರಣಕ್ಕೂ ಸ್ವಚ್ಚತೆಗೆ ನಿರ್ಲಕ್ಷ್ಯ ವಹಿಸಬಾರದು.ಶಾಸಕ ಟಿ.ರಘುಮೂರ್ತಿ.

by | 21/08/23 | ಸುದ್ದಿ


ತುರನೂರು ಆ.21. ಗ್ರಾಮೀಣ ಪ್ರದೇಶದಲ್ಲಿ ಎಗ್ಗಿಲ್ಲದೆ ಅಕ್ರಮ ಮದ್ಯಮಾರಾಟ ಮಡುತ್ತಿದ್ದು ಇದರಿಂದ ಹಳ್ಳಿಗಳಲ್ಲಿ ಶಾಂತಿ ಸುವ್ಯವಸ್ಥೆ ಹದಗೆಡುತ್ತಿದ್ದು ಕುಟುಂಬಗಳು ಬೀದಿಗೆ ಬರುವ ಮುನ್ನ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಅಬಕಾರಿ ಅಧಿಕಾರಿಗಳಿಗೆ ಶಾಸಕ ಟಿ.ರಘುಮೂರ್ತಿ ತಾಕೀತು ಮಾಡಿದರು. ಚಿತ್ರದುರ್ಗ ತಾಲೂಕಿನ ಚಳ್ಕಕೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ತುರುವನೂರು ಹೋಬಳಿಯ
ಗ್ರಾಮದಲ್ಲಿ ತಾಲೂಕು
ಅಧಿಕಾರಿಗಳ ಸಮ್ಮುಖದಲ್ಲಿ ಹೋಬಳಿ ಮಟ್ಟದ“ಜನಸ್ಪಂದನ” ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯಮಾರಟದ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿದ್ದು ಶಾಲಾ ಕಾಲೇಜ್ ಸಾರ್ವಜನಿಕ ಸ್ಥಳಗಳು ಕುಡುಕರ ಹಡ್ಡೆಗಳಾಗಿವೆ. ನಾನು ಶಾಸಕನಾಗಿ ಹತ್ತು ವರ್ಷಗಳು ಕಳೆದರೂ ಕ್ಷೇತ್ರದಲ್ಲಿ ಹೊಸ ಮದ್ಯದ ಅಂಗಡಿ ಹಾಗೂ ಸ್ಥಳಾಂತರ ಮಾಡಲು ಬಿಟ್ಟಿಲ್ಲ ಅಂತದರಲ್ಲಿ ಎಗ್ಗೆಲ್ಲದೆ ಅಕ್ರಮ ಮದ್ಯಮಾರಾಟವಾಗುತ್ತಿದ್ದರೆ ಸುಮ್ಮನಿರಲು ಸಾಧ್ಯವಿಲ್ಲ ಎಂದು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ಗ್ರಾಪಂ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಮೂಲಗಳ ಹಾಗೂ ಚರಂಡಿಗಳ ಸಚವಚ್ಚತೆಗೆ ಅಧಿಕಾರಿಗಳು ತೆರಳಿ ಸ್ವಚ್ಚತೆಗೆ ಹೆಚ್ಚಿನ ಒತ್ತು ನೀಡಬೇಕು. ಕೆಲಸ ಮಾಡದೆ ಜನರನ್ನು ಅಲೆದಾಡಿಸುವ ಅಧಿಕಾರಿಗಳ ವಿರುದ್ಧಮುಲಾಜಿಲ್ಲದೇ ಕ್ರಮ ಜರುಗಿಸುತ್ತೇನೆ
ಎಂದು‌ಅಧಿಕಾರಿಗಳಿಗೆ ಖಡಕ್ಸೂ‌ಚನೆ ನೀಡಿದರು.
ಇಂದು ನನ್ನ ಕ್ಷೇತ್ರದಲ್ಲಿ ಎಂಎಸ್ಎಲ್ ಮತ್ತು ಹಳೆ ಬಾರ್
ಗಳು ಬಿಟ್ಟು ಕಳೆದ ಹತ್ತು ವರ್ಷದಲ್ಲಿ ಒಂದು ಸಹ‌ಹೊಸ ಬಾರ್ ಪರವಾನಗಿ ನೀಡಿಲ್ಲ.ಆದರೆ‌ಹಳ್ಳಿಗಳಲ್ಲಿ ಗೂಡು ಅಂಗಡಿಗಳಲ್ಲಿ ಮಧ್ಯ‌ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು
ಬರುತ್ತಿದ್ದು ಅಂತವರ ವಿರುದ್ಧ ಅಬಕಾರಿ ಇಲಾಖೆ ಅಧಿಕಾರಿಗಳು ಕೇಸ್ ದಾಖಲಿಸಿಬೇಕು ಎಂದರು.
ಗ್ರಾಮೀಣ ಭಾಗದ ಓವರ್ ಹೆಡ್ ಟ್ಯಾಂಕ್, ಚಿಕ್ಕಟ್ಯಾಂಕ್, ನೆಲ ತೊಟ್ಟಿಗಳು, ಪೈಪ್ ಲೈನ್ ಲಿಕೇಜ್ಸೇರಿ ನೀರಿನ ಸಂಪರ್ಕದ ಸಮಸ್ಯೆ ಇದ್ದಲ್ಲಿಕೂಡಲೇ ಬಗೆಹರಿಸಬೇಕು. ಯಾವುದೇ
ಕಾರಣಕ್ಕೂ ಸ್ವಚ್ಚತೆಗೆ ನಿರ್ಲಕ್ಷ್ಯ ವಹಿಸಬಾರದು.ಜನರಲ್ಲಿ ಸ್ವಚ್ಚತೆಯ ಬಗ್ಗೆ ಅರಿವು ಮೂಡಿಸಬೇಕು. ಬಯಲು ಶೌಚದ ಬಗ್ಗೆ ಅರಿವು ಮೂಡಿಸಬೇಕು ಎಂದು ಸೂಚಿಸಿದರು.ಕಾಮಗಾರಿಗಳನ್ನ ಪೂರ್ಣಗೊಳಿಸಲು ಸೂಚನೆ:
ತುರುವನೂರು ಹೋಬಳಿಯಲ್ಲಿ ಅರ್ಧಕ್ಕೆ ಸ್ಥಗಿತವಾಗಿರುವ ಕಾಮಗಾರಿ ಶೀಘ್ರವಾಗಿ‌ ಪೂರ್ಣಗೊಳಿಸಬೇಕು. ಕಾಮಗಾರಿಗೆ ಅಡೆತಡೆ‌ಇದ್ದರೆ ನೇರವಾಗಿ ನನ್ನ ಗಮನಕ್ಕೆ ತಂದರೆ
ಸರಿಪಡಿಸಿ ಕಾಮಗಾರಿ ಪೂರ್ಣಗೊಳಿಸಲು‌ ಸಹಕಾರ ನೀಡುತ್ತೇನೆ. ಅಧಿಕಾರಿಗಳು ಕೆಲಸ ಮಾಡದೇ ನೆಪ ಹೇಳಿದರೆ ನಾನು ಸುಮ್ಮನಿರಲ್ಲಎಲ್ಲಾ ಇಲಾಖೆಯವರು ತಮ್ಮ ಕೆಲಸ
ಅಚ್ಚುಕಟ್ಟಾಗಿ ನಿರ್ವಹಿಸಬೇಕು.
ಕುರಿ ಕಳ್ಳರ ಬಗ್ಗೆ ನಿಗಾ ವಹಿಸಿ: ತುರುವನೂರು ವ್ಯಾಪ್ತಿಯಲ್ಲಿ ಕುರಿ ಕಳ್ಳತನ ಹೆಚ್ಚುತ್ತಿದ್ದು ಕಳ್ಳರ ಹಿಡಿಯಲು ಪೋಲಿಸ್ ಇಲಾಖೆ ಗಮನ ಹರಿಸಬೇಕು. ಒಂದು ಕುರಿ ಕಳ್ಳತನ ಕೇಸ್ ಏನು‌ ಅಂತ ಅಸಡ್ಡೆ ತೋರದೆ ಕೇಸ್ ದಾಖಲಿಸಿಕೊಂಡು
ಕಳ್ಳರಿಗೆ ಬಲೆ ಬೀಸಿ ಹಿಡಿಯಬೇಕು ಮತ್ತು ಇಂತಹ
ಪ್ರಕರಣಗಳು ಮರುಕಳಿಸಬಾರದು ಎಂದರು.ಸ್ಮಶಾನ ಸಮಸ್ಯೆ, ರಸ್ತೆ ಸಮಸ್ಯೆ, ನಿವೇಶನ‌ ಸಮಸ್ಯೆಗಳು, ಹೊಲದ ರಸ್ತೆಗಳು, ಹಿರಿಯ ನಾಗರಿಕರ ಪಿಂಚಣಿ, ಅಂಗವಿಕಲರ ಪಿಂಚಣಿ, 94
ಸಿ ಹಕ್ಕು ಪತ್ರ ಸೇರಿ ಯಾವುದೇ ಸಮಸ್ಯೆಗಳು
ಇದ್ದರು ಕೂಡಲೇ ಗಮನ ಹರಿಸಿ‌ ಇತ್ಯರ್ಥಗೊಳಿಸಬೇಕು. ಎಲ್ಲವನ್ನು ಇಓ ಅಧಿಕಾರಿಗಳ ನಿರಂತರ ಸಂಪರ್ಕದ ಮೂಲಕ
ಬಗೆಹರಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ನಾಗವೇಣಿ,
ತಾಲೂಕು ಪಂಚಾಯತಿ ಇಓ ಹನುಮಂತಪ್ಪಡಿವೈಎಸ್ಪಿ ಅನಿಲ್ ಕುಮಾರ್,ತಿಪ್ಪೇಸ್ವಾಮಿ, ಕೃಷಿ ಇಲಾಖೆ ಉಪ ನಿರ್ದೇಶಕ
ಪ್ರಭಾಕರ್, ಗ್ರಾ.ಪಂ. ಅಧ್ಯಕ್ಷೆ ದೀಪಾ ಮಹೇಶ್,ಉಪಾಧ್ಯಕ್ಷ ಆರ್.ತಿಪ್ಪೇಸ್ವಾಮಿ, ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತಿ ಸದಸ್ಯರು ಮತ್ತು ಸಾರ್ವಜನಿಕರು
ಭಾಗವಹಿಸಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page