ಗ್ರಾಮೀಣ ಮತ್ತು ನಗರ ಕುಂಚಿಟಿಗ ಎಂದುತಾರತಮ್ಯ ಮಾಡದಂತೆ ಸಮಸ್ಥ ಕುಂಚಿಟಿಗರಿಗೆ ಕೇಂದ್ರ ಓಬಿಸಿ ಮೀಸಲಾತಿ ಕಲ್ಪಿಸಲು ಆಗ್ರಹ :ಎಸ್.ವಿ.ರಂಗನಾಥ್

by | 12/06/24 | ಸುದ್ದಿ


ಹಿರಿಯೂರು:
ಕುಂಚಿಟಿಗರಿಗೆ ಗ್ರಾಮೀಣ ಮತ್ತು ನಗರ ಕುಂಚಿಟಿಗ ಎಂದು ತಾರತಮ್ಯ ಮಾಡದಂತೆ ಸಮಸ್ಥ ಕುಂಚಿಟಿಗರಿಗೆ ಕೇಂದ್ರ ಸರ್ಕಾರದ ಓಬಿಸಿ ಮೀಸಲಾತಿ ಕಲ್ಪಿಸಬೇಕು ಎಂಬುದಾಗಿ ಕುಂಚಿಟಿಗ ಕುಲಶಾಸ್ತ್ರ ಅಧ್ಯಯನಕಾರ ಎಸ್.ವಿ.ರಂಗನಾಥ್ ಆಗ್ರಹ ಪೂರ್ವಕ ಒತ್ತಾಯ ಮಾಡಿದ್ದಾರೆ.
ಇತ್ತೀಚೆಗೆ ಕುಂಚಿಟಿಗ ಸಮಾಜದಲ್ಲಿ ಬಹಳ ಚರ್ಚೆಗೆ ಗ್ರಾಸವಾಗಿರುವ ಸುದ್ದಿ ಏನೆಂದರೆ ಅದು ಕುಂಚಿಟಿಗರಿಗೆ ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿ. ಅದು ಕೂಡ ಹಲವು ರೀತಿಯ ಹೋರಾಟಗಳ ನಂತರ ಕುಂಚಿಟಿಗ ಕುಲಶಾಸ್ತ್ರ ಅಧ್ಯಯನ ವರದಿಯಲ್ಲಿ ಇಲ್ಲದಿರುವ ಶಬ್ದ ಸೇರಿಸಿ ಗ್ರಾಮೀಣ ಕುಂಚಿಟಿಗರಿಗೆ ಮಾತ್ರ ಕೇಂದ್ರ ಒಬಿಸಿ ಮೀಸಲಾತಿ ಎಂದು ಕೇಂದ್ರಕ್ಕೆ ಶಿಫಾರಸು ಮಾಡಿ,ಗ್ರಾಮೀಣ ಮತ್ತು ನಗರ ಕುಂಚಿಟಿಗ ಎಂದು ತಾರತಮ್ಯ ಮಾಡಲಾಗಿದೆ ಎಂಬುದಾಗಿ ಅವರು ಆಪಾದಿಸಿದ್ದಾರಲ್ಲದೆ,
ಈ ರೀತಿ ಮಾಡಿದರೆ ನಗರ ಕುಂಚಿಟಿಗರಿಗೆ ಹಾಲಿ ಇರುವ EWS ಮೀಸಲಾತಿ ಕೂಡ ಕೈತಪ್ಪಿ ಜನರಲ್ ಮೆರಿಟ್ ನಲ್ಲಿ ಬರುತ್ತಾರೆ.ಸದ್ಯ ಕುಂಚಿಟಿಗರು ಕೇಂದ್ರದ ಇ. ಡಬ್ಲೂ.ಎಸ್ ಪ್ರವರ್ಗದಡಿ ಬರುತ್ತಾರೆ. ಇಡಬ್ಲೂಎಸ್ ಎಂದರೆ (ಎಕನಾಮಿಕಲಿ ಎನಾಮಿಕಲಿ ವೀಕರ್ ಸೆಕ್ಷನ್) ಆರ್ಥಿಕವಾಗಿ ಹಿಂದುಳಿದ ವರ್ಗಗಳ ಜನರು ಎಂದರ್ಥ.
ಕುಂಚಿಟಿಗರಿಗೆ ಸದ್ಯ ಇರುವ ಇಡಬ್ಲೂಎಸ್ ಪ್ರವರ್ಗ ಸಾಕೇ ಅಥವಾ ಒಬಿಸಿ ಪ್ರವರ್ಗ ಖಂಡಿತಾ ಬೇಕೆ ಎಂದು ನೋಡುವುದಾದರೆ,ನಮ್ಮ ದೇಶದಲ್ಲಿ ಸದ್ಯ ಲಭ್ಯವಿರುವ ಮಾಹಿತಿಯಂತೆ ಒಬಿಸಿಗಳ ಜನಸಂಖ್ಯೆ 41% ರಿಂದ 44% ಇದೆ ಅಂತ ಹೇಳಲಾಗುತ್ತಿದೆ. ನಿಖರವಾದ ಅಂಕಿ ಅಂಶಗಳು ಲಭ್ಯವಿಲ್ಲದಿದ್ದರೂ ಇತ್ತೀಚೆಗೆ ನಡೆದ ಸಮೀಕ್ಷೆಗಳನ್ನು ಆಧಾರವಾಗಿಟ್ಟುಕೊಂಡು ಹೇಳಲಾಗಿದೆ.

1980 ರ ಮಂಡಲ್ ಆಯೋಗದ ವರದಿಯಲ್ಲಿ 52% ಇದ್ದಾರೆಂದು ಹೇಳಲಾಗಿತ್ತು. ಆದರೆ ನಂತರ ಕೆಲ ಸಮುದಾಯಗಳನ್ನು ಪರಿಶಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಗಳಿಗೆ ಸೇರ್ಪಡೆ ಮಾಡಿರುವುದರಿಂದ ಅವರ ಜನಸಂಖ್ಯೆ ಕಡಿಮೆ ಕೂಡಾ ಆಗಿರಬಹುದು. ಒಟ್ಟಾರೆ ಒಬಿಸಿ ಗೆ 27% ಮೀಸಲಾತಿ ಇದೆ.
ಕೇಂದ್ರ ಸರ್ಕಾರದ ಯಾವುದೇ ಮೀಸಲಾತಿ ಪಡೆಯದ ಆರ್ಥಿಕವಾಗಿ ಹಿಂದುಳಿದವರಿಗೆ ಇಡಬ್ಲಯೂಎಸ್ ಮೀಸಲಾತಿ ಅಡಿ ಬರುವ ಒಟ್ಟು ಸಮುದಾಯಗಳ ಜನಸಂಖ್ಯೆ ಶೇ.12 ರಷ್ಟು ಮಾತ್ರ ಇದೆ.ಒಟ್ಟಾರೆ ಇಡಬ್ಲ್ಯೂಎಸ್ ಗೆ 10% ಮೀಸಲಾತಿ ಇದೆ. ಈ ರೀತಿ ಒಟ್ಟಾರೆ ಜನಸಂಖ್ಯೆಗೆ ಅನುಗುಣವಾಗಿ ಒಬಿಸಿ ಉತ್ತಮವೇ ಅಥವಾ ಇಡಬ್ಲ್ಯೂಎಸ್ ಉತ್ತಮವೇ ಎಂದು ನೋಡುವುದಾದರೆ,
41% ಜನಸಂಖ್ಯೆ ಇರುವ ಒಬಿಸಿಗಳಿಗೆ 27% ಮೀಸಲಾತಿ ಇದೆ. ಅಂದರೆ ಯಾವುದಾದರೂ ಉದ್ಯೋಗಕ್ಕೆ ಅರ್ಜಿ ಹಾಕಿದ 41 ಜನರಲ್ಲಿ 27 ಜನರಿಗೆ ಮಾತ್ರ ಉದ್ಯೋಗ ಸಿಗುವ ಸಾಧ್ಯತೆ ಇದೆ.
ಅದೇ 12% ಜನಸಂಖ್ಯೆ ಇರುವ ಇಡಬ್ಲ್ಯೂಎಸ್ ವರ್ಗಕ್ಕೆ 10% ಮೀಸಲಾತಿ ಇದೆ. ಅಂದರೆ ಯಾವುದಾದರೂ ಉದ್ಯೋಗಕ್ಕೆ ಅರ್ಜಿ ಹಾಕಿದ 12 ಜನರಲ್ಲಿ 10 ಜನರಿಗೆ ಉದ್ಯೋಗ ಸಿಗುವ ಸಾಧ್ಯತೆ ಇದೆ. ಈ ರೀತಿ ನೋಡಿದರೆ ಕುಂಚಿಟಿಗರು ಹಾಲಿ ಇರುವ ಇಡಬ್ಲ್ಯೂಎಸ್ ಪ್ರವರ್ಗದಲ್ಲಿ ಮುಂದುವರಿಯುವುದು ಉತ್ತಮ ಎಂಬುದಾಗಿ ಕುಂಚಿಟಿಗ ಕುಲಶಾಸ್ತ್ರ ಅಧ್ಯಯನಕಾರ ಎಸ್.ವಿ.ರಂಗನಾಥ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ಬೆಸ್ಕಾಂ: ನೀರಾವರಿ ಪಂಪ್‍ಸೆಟ್ ಬಳಕೆದಾರರು ಆರ್ ಆರ್ ಸಂಖ್ಯೆಗೆ ಆಧಾರ್ ಜೋಡಣೆ ಕಡ್ಡಾಯ

ಚಿತ್ರದುರ್ಗಜು 15 ಚಿತ್ರದುರ್ಗ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೃಷಿ ನೀರಾವರಿ ಪಂಪ್‍ಸೆಟ್ ಬಳಕೆದಾರರು ತಮ್ಮ ನೀರಾವರಿ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page