ಗ್ರಾಮೀಣ ಸಾರಿಗೆ ಡಿಪೋ ಆರಂಭಿಸುವಂತೆ ಒತ್ತಾಯಿಸಿ ರಾಜ್ಯರೈತಸಂಘ ಹಾಗೂಹಸಿರುಸೇನೆಯಿಂದ ಪ್ರತಿಭಟನೆ

by | 21/06/24 | ಪ್ರತಿಭಟನೆ


ಹಿರಿಯೂರು:
ಗ್ರಾಮಾಂತರ ಪ್ರದೇಶದಿಂದ ವಿದ್ಯಾರ್ಥಿಗಳು, ಕೂಲಿ ಕೆಲಸಕ್ಕೆಂದು ನಗರಕ್ಕೆ ಬರುವವರು, ಹಣ್ಣು ,ತರಕಾರಿ ಹೂ ,ಬೆಳೆಗಾರರು, ಹಾಲು ಉತ್ಪಾದಕರು ಸಾರಿಗೆ ವ್ಯವಸ್ಥೆ ಇಲ್ಲದೆ ತೊಂದರೆ ಎದುರಿಸುತ್ತಿದ್ದಾರೆ, ಆದ್ದರಿಂದ ಗ್ರಾಮೀಣ ಸಾರಿಗೆ ಡಿಪೋ ಪ್ರಾರಂಭಿಸಿ ಗ್ರಾಮೀಣ ಭಾಗಕ್ಕೆ ಬಸ್ಸುಗಳನ್ನು ಬಿಡಬೇಕು ಎಂಬುದಾಗಿ ರೈತ ಸಂಘದ ಅಧ್ಯಕ್ಷ ಕೆ.ಟಿ.ತಿಪ್ಪೇಸ್ವಾಮಿ ಒತ್ತಾಯಿಸಿದರು.
ನಗರದಲ್ಲಿ ಗ್ರಾಮೀಣ ಸಾರಿಗೆ ಡಿಪೋ ಪ್ರಾರಂಭಿಸಿ ಗ್ರಾಮೀಣ ಭಾಗಕ್ಕೆ ಬಸ್ಸುಗಳನ್ನು ಬಿಡುವಂತೆ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಕೆ ಎಸ್ ಆರ್ ಟಿ ಸಿ ಡಿಪೋ ಮ್ಯಾನೇಜರ್ ಹುಸೇನ್ ವರಿಗೆ ಮನವಿಪತ್ರ ಸಲ್ಲಿಸಿ, ನಂತರ ಅವರು ಮಾತನಾಡಿದರು.
ಇದರಿಂದ ತಾಲ್ಲೂಕಿನ ಸಾವಿರಾರು ಬಡ ಕಾರ್ಮಿಕರು ಶಿಕ್ಷಣ ಮತ್ತು ಉದ್ಯೋಗದಿಂದ ವಂಚಿತರಾಗುತ್ತಿದ್ದಾರೆ, ಅಲ್ಲದೆ ಜಿಲ್ಲೆಯಲ್ಲಿ ಮೊದಲು ಹಿರಿಯೂರು ತಾಲ್ಲೂಕಿನಲ್ಲಿ ಡಿಪೋ ಆರಂಭವಾಗಬೇಕಿತ್ತು. ಆದರೆ ಚಿತ್ರದುರ್ಗ ಜಿಲ್ಲೆಯ ಎಲ್ಲಾ ತಾಲ್ಲೂಕಿನಲ್ಲೂ ಡಿಪೋ ಆಗಿದ್ದು, ಹಿರಿಯೂರಿನಲ್ಲಿ ಮಾತ್ರ ಏಕೆ ಡಿಪೋ ಪ್ರಾಂಭಿಸುತ್ತಿಲ್ಲ ಎಂಬುದಾಗಿ ಅಧಿಕಾರಿಗಳಿಗೆ ಪ್ರಶ್ನಿಸಿದರು.
ಜಿಲ್ಲೆಯ ಚಿತ್ರದುರ್ಗ, ಹೊಸದುರ್ಗ,ಹೊಳಲ್ಕೆರೆ,ಚಳ್ಳಕೆರೆ ತಾಲ್ಲೂಕುಗಳಲ್ಲಿ ಸಾರಿಗೆ ಸಂಸ್ಥೆ ಡಿಪೋಗಳಿದ್ದು, ಎರಡು ರಾಷ್ಟ್ರೀಯ ಹೆದ್ದಾರಿ ಕೂಡುವ ಸ್ಥಳವಾಗಿರುವ ಹಿರಿಯೂರಿನಲ್ಲಿ ಸಾರಿಗೆ ಡಿಪೋ ಆರಂಭವಾಗದಿರುವುದು ಬೇಸರದ ಸಂಗತಿ. ಮೂರು ವರ್ಷದ ಹಿಂದೆ ರೈತ ಸಂಘದ ನೇತೃತ್ವದಲ್ಲಿ ಆಹೋರಾತ್ರಿ ಧರಣಿ ನಡೆಸಿದ್ದರಿಂದ ಮಂಜೂರಾತಿ ನೀಡಲಾಗಿತ್ತು.
ಮೂರು ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಳಿಸದೇ ಇರುವುದು ಆಡಳಿತ ಯಂತ್ರದ ವೈಫಲ್ಯಕ್ಕೆ ನಿದರ್ಶನವಾಗಿದೆ. ಡಿಪೋ ಕಾಮಗಾರಿ ಅಮೆಗತಿಯಲ್ಲಿ ಸಾಗುತ್ತಿರುವುದು ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷಣವೇ ಕಾರಣ ಎಂಬುದಾಗಿ ಅವರು ಆರೋಪಿಸಿದರು.
ಡಿಪೋ ಕಾಮಗಾರಿ ಬೇಗನೆ ಮುಗಿಸಿ ಗ್ರಾಮೀಣ ಭಾಗಕ್ಕೆ ಬಸ್ಸುಗಳನ್ನು ಬಿಡದಿದ್ದರೆ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಉಗ್ರಹೋರಾಟ ನಡೆಸಲಾಗುವುದು ಎಂಬುದಾಗಿ ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ.
ಈ ಸಂದರ್ಭದಲ್ಲಿ ಕೆ.ಟಿ. ತಿಪ್ಪೇಸ್ವಾಮಿ, ಸಿದ್ದರಾಮಣ್ಣ, ತಿಮ್ಮಾರೆಡ್ಡಿ, ಶಿವಣ್ಣ, ಹೊಸಕೆರೆ ಜಯಣ್ಣ, ಕೆಂಚಪ್ಪ, ಜಗದೀಶ್, ರಾಜಣ್ಣ, ಸಿದ್ದಪ್ಪ, ಮೀಸೆ ರಾಮಣ್ಣ, ನಾರಾಯಣಪ್ಪ, ಜಗನ್ನಾಥ್, ಗಿರೀಶ್, ರಘುನಾಥ್ ಗೌಡ, ಬಾಲಕೃಷ್ಣ, ರಾಮಕೃಷ್ಣ, ಕಲಾಂ, ನಾಗರಾಜಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page