ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಆಸ್ತಿಗಳ ಸಮೀಕ್ಷೆ ನಡೆಸಿ ತೆರಿಗೆ ನಿಗದಿ ಮಾಡುವ ಜತೆಗೆ ತೆರಿಗೆ ವಸುಲಾತಿಯನ್ನು ಹೆಚ್ಚಿಸುವ ಮೂಲಕ ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಗೆ ಮುಂದಾಗುವಂತೆ ಜಿಪಂ ಸಿಇಒ ಸೋಮಶೇಖರ್ ತಾಕೀತು.

by | 27/06/24 | ಸುದ್ದಿ


ಚಳ್ಳಕೆರೆ ಜನಧ್ವನಿ ವಾರ್ತೆ ಜೂ.27 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಕೃಷಿಯೇತರ ಭೂಮಿ, ಕಟ್ಟಡಗಳ ಸಮೀಕ್ಷೆ ನಡೆಸಿ, ವೈಜ್ಞಾನಿಕವಾಗಿ ತೆರಿಗೆ ನಿಗದಿ ಮಾಡುವ ಜತೆಗೆ ತೆರಿಗೆ ವಸುಲಾತಿಯನ್ನು ಹೆಚ್ಚಿಸುವ ಮೂಲಕ ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಗೆ ಮುಂದಾಗುವಂತೆ ಜಿಪಂ ಸಿಇಒ ಸೋಮಶೇಖರ್ ತಾಕೀತು ಮಾಡಿದರು.
ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಮೊಳಕಾಲ್ಮೂರು ಹಾಗೂ ಚಳ್ಳಕೆರೆ ತಾಲೂಕಿನ ಪಿಡಿಒ , ತಾಪಂ ಇಒಗಳಿಗೆ ಆಯೋಜಿಸಿದ್ದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು,.
ಪ್ರತಿ ಗ್ರಾಮದ ಮನೆಮನೆಗೆ ತೆರಳಿ ಆಸ್ತಿಗಳ ಸಮೀಕ್ಷೆ ನಡೆಸಬೇಕು. ಕೈಗಾರಿಕಾ ಪ್ರದೇಶಗಳಲ್ಲಿ ಅಧಿಕಾರಿಗಳ ಜತೆ ಜಂಟಿ ಸಮೀಕ್ಷೆ ನಡೆಸಬೇಕು. ನಿಗದಿತ ನಮೂನೆಯಲ್ಲಿ ಆಸ್ತಿಗಳು, ಮಾಲೀಕರ ವಿವರ ಸಂಗ್ರಹಿಸಬೇಕು. ಗ್ರಾಮ ಠಾಣಾ, ಭೂ ಪರಿ ವರ್ತಿತ ಜಮೀನು, ವಿನ್ಯಾಸ ನಕ್ಷೆ ಅನುಮೋದಿತ ಬಡಾವಣೆ, ಸರ್ಕಾರದ ವಸತಿ ಯೋಜನೆ, ಸಾರ್ವಜನಿಕ ಆಸ್ತಿಗಳನ್ನು ಪ್ರತ್ಯೇಕವಾಗಿ ದಾಖಲಿಸಬೇಕು. ಎಲ್ಲ ದಾಖಲೆಗಳ ಪ್ರತಿಗಳನ್ನು ಸಂಗ್ರಹಿಸಬೇಕು. ಮಾಲೀಕರ ಸಮ್ಮುಖದಲ್ಲೇ ದಾಖಲೆಗಳ ವಿವರ ಹಾಗೂ ಅವರ ಆಸ್ತಿ ತೆರಿಗೆ ದೃಢೀಕರಿಸಬೇಕು. ಕ್ರಮಬದ್ಧ ಆಸ್ತಿ ವಿವರಗಳನ್ನು ನಮೂನೆ 9 ಹಾಗೂ 11 ‘ಎ’ ನಲ್ಲಿ, ಕ್ರಮ ಬದ್ಧವಲ್ಲದ ಆಸ್ತಿಗಳ ವಿವರಗಳನ್ನು 11 ‘ಬಿ’ ನಲ್ಲಿ ದಾಖಲಿಸಬೇಕು. ನಂತರ ಇಲಾಖೆಯ ಪಂಚತಂತ್ರ 2.0ದಲ್ಲಿ ಅಳವಡಿಸಬೇಕು.
ಗ್ರಾಮಪಂಚಾಯಿತಿಗಳಲ್ಲಿ ಸಿಬ್ಬಂದಿಗಳ ಇ-ಹಾಜರಾತಿ, ನರೇಗಾ ಯೋಜನೆಯಡಿಯಲ್ಲಿ ದುಡಿಯುವ ಕೈಗಳಿಗೆ ಕೆಲಸ ಕೊಡಲು ಸಮುದಾಯ ಕಾಮಗಾರಿಗಳನ್ನು ಹಮ್ಮಿಕೊಳ್ಳ ಬೇಕು, `15 ನೇ ಹಣಕಾಸು ಯೋಜನೆ.ಸಭಾನಡುವಳಿ ಲೆಕ್ಕಪತ್ರಗಳನಿರ್ವಹಣೆ ಮಾಡಬೇಕು. ಗ್ರಾಮಗಳಲ್ಲಿ ಚರಂಡಿ ಹಾಗೂಕುಡಿಯುವ ನೀರಿನ ಸ್ವಚ್ಚತೆ ಬಗ್ಗೆ ಹೆಚ್ಚು ಗಮನಹಿರಸಬೇಕು, ಕುಡಿಯುವ ನೀರಿನಲ್ಲಿ ಚರಂಡಿ ನೀರು ಮಿಶ್ರಣದಿಂದ ಸಾಂಕ್ರಮಿಕ ರೋಗಗಳು ಬರುವ ಸಾಧ್ಯತೆ ಇದ್ದು ಅಗತ್ಯ ಮುಂಜಾಗೃತೆಯಾಗಿ ಸ್ವಚ್ಚತೆಗೆ ಆಧ್ಯತೆ ನೀಡಿ.
ಪ್ರತಿ ಕುಟುಂಬಗಳಿಗೆ ಶೌಚಾಲಯ, ಜಾನುವಾರು ಶೆಡ್, ಜಿಯೋಟ್ಯಾಟ್, ಕಾಮಗಾರಿಗಳು ಮುಕ್ತಾಯ, ಜಿಯೋಟ್ಯಾಗ್, ನರೇಗಾ ಕಾಮಗಾರಿಗಳಿಗೆ ಕೂಲಿ ಕಾರ್ಮಿಕ ಹಾಜರಾತಿ ಎನ್ ಎಂ ಎಂ ಎಸ್ ಕಡ್ಡಾಯ,ಅಮೃತ ಸರೋವರ ಸೇರಿದಂತೆ ವಿವಿಧ ಯೋಜನೆಗಳ ಕಾಮಗಾರಿಗಳನ್ನು ಸಕಾಲಕ್ಕೆ ಮುಕ್ತಾಯಗೊಳಿಸುವ ಜತಗೆ ಗುಣ ಮಟ್ಟ ಕಾಯ್ದುಕೊಳ್ಳಬೇಕು, ಎಲ್ಲಾ ಗ್ರಾಪಂ ಕಡ್ಡಾಯವಾಗಿ ಸಾಮಾಜಿಕ ಲೆಕ್ಕ ಪರಿಶೋದನೆ ಮಾಡಿಸ ಬೇಕು ಗ್ರಾಮೀಣ ಭಾಗದ ಜನರಿಗೆ ಅಗತ್ಯ ಮೂಲ ಭೂತ ಸೌಲಭ್ಯಗಳನ್ನು ಸಕಾಲಕ್ಕೆ ನೀಡಿದರೆ ನಿಮ್ಮ ಮೇಲೆ ದೂರುಗಳು ಬರುವುದಿಲ್ಲ ಎಂದು ತಿಳಿಸಿದರು.
ಸಭೆಯಲ್ಲಿ ಜಿಪಂ ಯೋಜನಾ ನಿರ್ದೇಶಕ ರಂಗಸ್ವಾಮಿ, ಉಪಕಾರ್ಯದರ್ಶಿ ತಿಮ್ಮಪ್ಪ, ತಾಪಂ ಇಒ ಶಶಿಧರ್ , ಮೊಳಕಾಲ್ಮೂರು ತಾಪಂ ಇಒ ಪ್ರಕಾಶ್, ಪಂಚಾಯರ್ ರಾಜ್ ಸಹಾಯಕನಿರ್ಶೇಕರಾದ ಯಶವಂತೆ, ಸಂಪತ್, ನರೇಗಾಯಕ ನಿರ್ಏಶಕರಾದ ಸಂತೋಷ್,ಕ ಗಣೇಶ್. , ಸಹಾಯಕ ಕೃಷಿ ನಿರ್ದೇಶಕ ಡಾ.ಅಶೋಕ್, ತೋಟಗಾರಿಗೆ ಹಿರಿಯ ಸಹಾಯಕ ನಿರ್ದೇಶಕ ವಿರುಪಾಕ್ಷಪ , ವಲಯ ಅರಣ್ಯಾಧಿಕಾರಿ ನಿತೀನ್, ಮೊಳಕಾಲ್ಮೂರು ಚಳ್ಳಕೆರೆ ತಾಲೂಕಿನ ಪಿಡಿಒಗಳು, ನರೇಗಾ ತಾಂತ್ರಿಕ ಸಿಬ್ಬಂದಿಗಳು ಉಪಸ್ಥಿತರಿದ್ದರು.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ಬೆಸ್ಕಾಂ: ನೀರಾವರಿ ಪಂಪ್‍ಸೆಟ್ ಬಳಕೆದಾರರು ಆರ್ ಆರ್ ಸಂಖ್ಯೆಗೆ ಆಧಾರ್ ಜೋಡಣೆ ಕಡ್ಡಾಯ

ಚಿತ್ರದುರ್ಗಜು 15 ಚಿತ್ರದುರ್ಗ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೃಷಿ ನೀರಾವರಿ ಪಂಪ್‍ಸೆಟ್ ಬಳಕೆದಾರರು ತಮ್ಮ ನೀರಾವರಿ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page