ಚಿತ್ರದುರ್ಗ ಫೆ.22:
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ, ತೆರವಾಗಿರುವ ಸ್ಥಾನಗಳಿಗೆ ಇದೇ ಫೆಬ್ರವರಿ 25ರಂದು ಉಪ ಚುನಾವಣೆ ನಡೆಯಲಿದ್ದು, ಚುನಾವಣೆ ನಿಮಿತ್ತ ಆಯಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆಯಲಿರುವ ಸಂತೆ, ಜಾತ್ರೆ ಮತ್ತು ಉತ್ಸವ ಇತ್ಯಾದಿಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಆದೇಶಿಸಿದ್ದಾರೆ.
ಚುನಾವಣಾ ವೇಳಾಪಟ್ಟಿ ಅನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು 5 ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸಬೇಕಾಗಿದ್ದು, ಈ ಪೈಕಿ ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಮತ್ತು ಹೊಳಲ್ಕೆರೆ ತಾಲ್ಲೂಕಿನ ಹಿರೇಎಮ್ಮಿಗನೂರು ಗ್ರಾಮ ಪಂಚಾಯಿತಿ ಸ್ಥಾನಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಉಳಿದ ಚಳ್ಳಕೆರೆ ತಾಲ್ಲೂಕಿನ ನೆಲಗೇತನಹಟ್ಟಿ ಗ್ರಾಮ ಪಂಚಾಯಿತಿಯಲ್ಲಿ 1 ಸದಸ್ಯ ಸ್ಥಾನ, ಚಿತ್ರದುರ್ಗ ತಾಲ್ಲೂಕಿನ ಯಳಗೋಡು ಗ್ರಾಮ ಪಂಚಾಯಿತಿಯಲ್ಲಿ 1 ಸದಸ್ಯ ಸ್ಥಾನ ಹಾಗೂ ಜಂಪಣ್ಣ ನಾಯಕನಕೋಟೆ ಗ್ರಾಮ ಪಂಚಾಯಿತಿಯಲ್ಲಿ 1 ಸದಸ್ಯ ಸ್ಥಾನ ಸೇರಿದಂತೆ ಒಟ್ಟು 3 ಸದಸ್ಯ ಸ್ಥಾನಗಳಿಗೆ ಫೆ.25ರಂದು ಮತದಾನ ನಡೆಯಲಿದೆ.
ಚುನಾವಣೆಯನ್ನು ಸುಗಮವಾಗಿ ನಡೆಸಲು ಅನುಕೂಲವಾಗುವಂತೆ ಆಯಾ ಗ್ರಾಮ ಪಂಚಾಯಿತಿ ಕ್ಷೇತ್ರಗಳ ವ್ಯಾಪ್ತಿಯಲ್ಲಿನ ಎಲ್ಲಾ ಬಗೆಯ ಸಂತೆ, ಜಾತ್ರೆ, ಉತ್ಸವ ಇತ್ಯಾದಿಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಆದೇಶ ಹೊರಡಿಸಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments