ಗ್ರಾ.ಪಂ.ಕಾರ್ಯದರ್ಶಿಗಳ ಹೆಗಲಿಗೆ ಜನನ-ಮರಣ ನೋಂದಣಿ ಹೊಣೆ ಕಾರ್ಯಾಲಯಗಳಲ್ಲಿ ನೋಂದಣಿ ಸೌಲಭ್ಯ ಫಲಕ ಅಳವಡಿಸಲು ಸೂಚನೆ-ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ

by | 15/06/24 | ಸುದ್ದಿ

ಚಿತ್ರದುರ್ಗ ಜೂನ್.15: ಸರ್ಕಾರ ಗ್ರಾ.ಪಂ. ಕಾರ್ಯದರ್ಶಿಗಳನ್ನು ಜನನ-ಮರಣ ಉಪ ನೋಂದಣಾಧಿಕಾರಿಗಳನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ. ಗ್ರಾ.ಪಂ.ಕಾರ್ಯದರ್ಶಿಗಳ ಹೆಗಲಿಗೆ ಜನನ-ಮರಣ ನೋಂದಣಿ ಹೊಣೆ ನೀಡಲಾಗಿದ್ದು, ಜಿಲ್ಲೆಯ ಎಲ್ಲಾ ಗ್ರಾ.ಪಂ. ಕಾರ್ಯದರ್ಶಿಗಳಿಗೆ ಈ ಕುರಿತು ತರಬೇತಿ ನೀಡಲಾಗಿದೆ. ಸಾರ್ವಜನಿಕರ ತಿಳುವಳಿಕೆಗಾಗಿ ಎಲ್ಲಾ ಗ್ರಾ.ಪಂ. ಕಾರ್ಯಾಲಯಗಳಲ್ಲಿ ಜನನ-ಮರಣ ನೋಂದಣಿ ಮಾಡಲಾಗುವುದು ಎಂದು ಫಲಕ ಅಳವಡಿಸುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಜರುಗಿದ ಜಿಲ್ಲಾ ಮಟ್ಟದ ನಾಗರೀಕ ಪದ್ದತಿ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗ್ರಾ.ಪಂ.ಕಾರ್ಯದರ್ಶಿಗಳಿಗೆ ಶೀಘ್ರವೇ ಸಾಂಖ್ಯಿಕ ಇಲಾಖೆಯಿಂದ ಡಿಜಿಟಲ್ ಸಹಿ ಮಾದರಿ ಕೀ ನೀಡಲಾಗುವುದು. ಸರ್ಕಾರ ನಿರ್ಧರಿಸುವ ದಿನಾಂಕದಿAದ ಗ್ರಾ.ಪಂ.ಕಾರ್ಯಾಲಯಗಳಲ್ಲಿ ಜನನ-ಮರಣ ನೊಂದಣಿ ಆರಂಭವಾಗಲಿದೆ. ಜನನ ಹಾಗೂ ಮರಣದ ನೋಂದಣಿ ಅತ್ಯಂತ ಮುಖ್ಯವಾದ ಕೆಲಸವಾಗಿದೆ. ಯಾವುದೇ ಕಾರಣಕ್ಕೂ ನಿರ್ಲಕ್ಷö್ಯ ತೋರದೆ ಕಾರ್ಯ ನಿರ್ವಹಿಸಬೇಕು ಎಂದರು.
ಸಾಂಸ್ಥಿಕ ಜನನ ಹಾಗೂ ಮರಣಗಳ ನೋಂದಣಿಯನ್ನು ತಪ್ಪದೇ ಮಾಡಲಾಗುತ್ತದೆ. ಆದರೆ ಗ್ರಾಮಾಂತರ ಪ್ರದೇಶದಲ್ಲಿ ಮನೆಗಳಲ್ಲಿ ಆಗುವ ಜನನ ಹಾಗೂ ಮರಣಗಳನ್ನು ಸಹ ನೊಂದಣಿ ಮಾಡುವುದು ಕಡ್ಡಾಯವಾಗಿದೆ. ಗ್ರಾಮಲೆಕ್ಕಾಧಿಕಾರಿಗಳು, ಆಶಾ ಕಾರ್ಯಕರ್ತರು ತಪ್ಪದೇ ತಮ್ಮ ವ್ಯಾಪ್ತಿಯಲ್ಲಿನ ಜನನ ಹಾಗೂ ಮರಣ ನೊಂದಣಿ ಮಾಡಲು ಸಹಕಾರ ನೀಡಬೇಕು. ಇನ್ನೂ ವೈದ್ಯಾಧಿಕಾರಿಗಳು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಇತರೆ ಆಸ್ಪತ್ರೆಗಳಲ್ಲಿ ಉಂಟಾಗುವ ಜನನ ಹಾಗೂ ಮರಣ ನೋಂದಣಿಯನ್ನು 21 ದಿನಗಳ ಕಾಲವಧಿಯಲ್ಲಿ ಮಾಡಬೇಕು. ನಿರ್ಲಕ್ಷö್ಯ ಹಾಗೂ ತಾಂತ್ರಿಕ ಕಾರಣಗಳನ್ನು ಒಡ್ಡಿ ನೋಂದಣಿ ಮಾಡದೆ ಇರಬಾರದು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.

ಜಿಲ್ಲೆಯಲ್ಲಿ 102 ಸರ್ಕಾರಿ ಆಸ್ಪತ್ರೆ ಹಾಗೂ 41 ಖಾಸಿಗಿ ಆಸ್ಪತ್ರೆಗಳು ಸೇರಿ 143 ನೋಂದಣಿ ಘಟಕಗಳಿವೆ. ಜನವರಿ 2024 ರಿಂದ ಮೇ 2024ರ ವರೆಗೆ ಜಿಲ್ಲೆಯಲ್ಲಿ ಒಟ್ಟು 7736 ಜನನ ಪ್ರಮಾಣ 6569 ಮರಣಗಳು ನೋಂದಣಿಯಾಗಿವೆ. ಗ್ರಾಮೀಣ ಭಾಗದಲ್ಲಿ 1167 ಜನನ, 4803 ಮರಣ, ನಗರ ಪ್ರದೇಶದಲ್ಲಿ 6569 ಜನನ 1766 ಮರಣ ನೋಂದಣಿಯಾಗಿವೆ. ಪ್ರತಿ ತಾಲ್ಲೂಕು ಹಂತದಲ್ಲಿ ತಹಶೀಲ್ದಾರ ನೇತೃತ್ವದಲ್ಲಿ ನಾಗರೀಕ ನೋಂದಣಿ ಪದ್ದತಿ ಸಮನ್ವಯ ಸಮಿತಿ ಸಭೆ ನಡೆಸಲಾಗಿದೆ ಎಂದು ಜಿಲ್ಲಾ ಅಂಕೆ ಸಂಖ್ಯೆ ಸಂಗ್ರಹಣಾಧಿಕಾರಿ ರವಿಕುಮಾರ್.ಎನ್ ಸಭೆಯಲ್ಲಿ ತಿಳಿಸಿದರು.

ಸಭೆಯಲ್ಲಿ ಹೆಚ್ಚವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಸಾದ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್ ಸೇರಿದಂತೆ ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ತಾಲ್ಲೂಕು ಹಂತದ ಜನನ ಮರಣ ನೊಂದಣಾಧಿಕಾರಿಗಳು, ವೈದ್ಯಾಧಿಕಾರಿಗಳು, ಸಾಂಖ್ಯಿಕ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ಬೆಸ್ಕಾಂ: ನೀರಾವರಿ ಪಂಪ್‍ಸೆಟ್ ಬಳಕೆದಾರರು ಆರ್ ಆರ್ ಸಂಖ್ಯೆಗೆ ಆಧಾರ್ ಜೋಡಣೆ ಕಡ್ಡಾಯ

ಚಿತ್ರದುರ್ಗಜು 15 ಚಿತ್ರದುರ್ಗ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೃಷಿ ನೀರಾವರಿ ಪಂಪ್‍ಸೆಟ್ ಬಳಕೆದಾರರು ತಮ್ಮ ನೀರಾವರಿ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page