ಚಳ್ಳಕೆರೆ ಏ.20 ಎರಡನೇ ದಿನದ ಯುಗಾದಿ ಹಬ್ಬದ ಬುಧವಾರ ಸಂಜೆ ಸೂರ್ಯಾಸ್ತದ ಜತೆ ಚಂದ್ರದರ್ಶನ ಮಾಡಿ, ಜನರು ಸಂಭ್ರಮದ ಯುಗಾದಿ ಹಬ್ಬದ ಆಚರಣೆ ಮಾಡಿದರು. ಸೂರ್ಯಾಸ್ತದ ನಂತರ ಚಂದ್ರನ ದರ್ಶನ ಮಾಡಿ ಪುನೀತ ಭಾವದಿಂದ ನಮನ ಸಲ್ಲಿಸಿ ನಂತರ ಹಿರಿಯರ ಕಾಲಿಗೆ ಬಿದ್ದು ನಮಸ್ಕರಿಸಿ ದೇವಸ್ಥಾನಗಳಿಗೆ ಭೇಟಿ ನೀಡಿ ಹಣ್ಣು ಕಾಯಿ ನೀಡಿ ಪೂಜೆ ಸಲ್ಲಿಸಲು ದೇವಸ್ಥಾನಗಳಲ್ಲಿ ಜನದಟ್ಟಣೆಯಿಂದ ಕೂಡಿದ್ದವು.
ಚಂದ್ರ ದರ್ಶನವಾಗುತ್ತಲೇ ಮಹಿಳೆಯರು ದೇವಸ್ಥಾನಗಳಿಗೆ ತೆರಳಿ ದೇವರಿಗೆ ಪೂಜೆ ಸಲ್ಲಿಸಿದರು. ರಸ್ತೆಯಲ್ಲಿ ಎದುರಾದ ಗೆಳೆಯರಿಗೆ ಶುಭಾಶಯ ವಿನಿಮಯ ಮಾಡಿಕೊಳ್ಳುವುದು, ಹಿರಿಯರಿಗೆ ನಮಸ್ಕರಿಸುವುದು ಕಂಡುಬಂದಿತು
0 Comments