ಚಳ್ಳಕೆರೆ ಎಸ್ಟಿ ಮೀಸಲು ಕ್ಷೇತ್ರದಿಂದ 2023 ರ ವಿಧಾನಸಭೆ ಚುನಾವಣೆಯಲ್ಲಿ ಬಿ ಜೆ ಪಿ ಪಕ್ಷದಿಂದ ಸ್ಪರ್ಧೆ ಖಚಿತ ಶಶಿಕುಮಾರ್

by | 04/12/22 | ರಾಜಕೀಯ

ಚಳ್ಳಕೆರೆ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷದಿಂದ ಪಕ್ಷಕ್ಕೆ ಜಿಗಿಯುತ್ತಿರುವುದು‌ ಸಾಮಾನ್ಯವಾಗಿದೆ. ಚುನಾವಣೆಗೆ ಇನ್ನು ಬೆರಳೆಣಿಕೆಯಷ್ಟು ತಿಂಗಳು ಬಾಕಿ ಇರುವಾಗಲೇ ಚಿತ್ರದುರ್ಗ ಜಿಲ್ಲೆಯ ಮಾಜಿ ಸಂಸದ, ಚಲನ ಚಿತ್ರನಟ ಶಶಿಕುಮಾರ್ ಚಳ್ಳಕೆರೆ ಎಸ್ಟಿ ಮೀಸಲು ಕ್ಷೇತ್ರದಿಂದ ಬಿಜೆಪಿ ಅಭ್ಯಾರ್ಥಿಯಾಗಿ ಕಣಕ್ಕಿಳಿಯುವುದಾಗಿ ಖಚಿತ ಪಡಿಸಿದ್ದಾರೆ.
ಹೊಸದುರ್ಗ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪರಾಜಿತ ಅಭ್ಯರ್ಥಿ ಹಾಗೂ ಕನ್ನಡದ ಹಿರಿಯ ನಟ ಶಶಿಕುಮಾರ್ ಕೆಲವು ವರ್ಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು ಈಗ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ವಿಧಾನ ಸಭೆ ಚುನಾವಣೆಯ ಅಕಾಡಕ್ಕಿಳಿಯಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ.ರಾಜ್ಯಾಧ್ಯಕ್ಷ ಕಟೀಲ್ ಇವರ ನೇತೃತ್ವದಲ್ಲಿ ಅಧಿಕೃತವಾಗಿ ಬಿಜೆಪಿ ಸೇರುವ ಮೂಲಕ ಶಶಿಕುಮಾರ್‌ ರಾಜಕೀಯ ಜೀವನಕ್ಕೆ ಪ್ರವೇಶ ಮಾಡಿದ್ದಾರೆ.
ಜನತಾದಳದಿಂದ ತಮ್ಮ ರಾಜಕೀಯ ಜೀವನ ಆರಂಭಿಸಿದ ನಟ ಶಶಿಕುಮಾರ್ ಒಂದು ಬಾರಿ ಚಿತ್ರದುರ್ಗದಿಂದ ಲೋಕಸಭೆಗೆ ಆಯ್ಕೆಯಾಗಿದ್ದರು. ನಂತರ ರಾಜಕೀಯದಿಂದ ದೂರ ಸರಿದಿದ್ದರು. 2008ರಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಸೋಲು ಕಂಡಿದ್ದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೊಸದುರ್ಗದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಆದರೆ, ಬಿಜೆಪಿ ಅಭ್ಯರ್ಥಿ ಗೂಳಿಹಟ್ಟಿ ಶೇಖರ್ ಎದುರು ಭಾರೀ ಮತಗಳ ಅಂತರದಲ್ಲಿ ಠೇವಣಿ ಕಳೆದುಕೊಂಡು ಸೋತಿದ್ದರು.

ಇದೀಗ ಬಿಜೆಪಿಗೆ ಸೇರ್ಪಡೆಯಾಗಿರುವ ಅವರು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ. ಬಿಜೆಪಿಯಿಂದ ಟಿಕೆಟ್ ನೀಡಲು ಪಕ್ಷದ ವರಿಷ್ಠರು ಒಪ್ಪಿದ್ದಾರೆ ಎಂಬ ಸುದ್ದಿ ಇದೆ.
ಸಂಯುಕ್ತ ಜನತಾದಳದಿಂದ ರಾಜಕೀಯಕ್ಕೆ ಜಿಗಿದ ಶಶಿಕುಮಾರ್
1999ರಲ್ಲಿ ನಡೆದ (1999-2004) ಲೋಕಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಸಂಯುಕ್ತ ಜನತಾದಳದ ಬಾಣದ ಗುರುತಿನಿಂದ ಸ್ಪರ್ಧಿಸಿ, ಹಳ್ಳಿ ಹಳ್ಳಿಗಳಲ್ಲಿ ನಾನು ಕೂಲಿ ನೀನು ಕೂಲಿ ಎಂಬ ಹಾಡು ಹೇಳಿಕೊಂಡು, ಡ್ಯಾನ್ಸ್ ಮಾಡಿ ಮತದಾರರನ್ನು ರಂಜಿಸಿ ಮತಪಡೆದು ಅಮೋಘ ಗೆಲುವನ್ನು ಶಶಿಕುಮಾರ್ ಪಡೆದಿದ್ದರು. ಅದೇ ಹುರುಪಿನಲ್ಲಿಯೂ ಕೆಲಸವನ್ನು ಮಾಡಿದ್ದರು. ಒಂದು ಹಂತದಲ್ಲಿ ತಾನು ಹುಟ್ಟಿ ಬೆಳೆದ ಚಿತ್ರದುರ್ಗದಲ್ಲಿಯೇ ಚುನಾವಣೆಯಲ್ಲಿ ಸ್ವರ್ಧಿಸಿ ಗೆದ್ದ ಮೇಲೆ ಮತದಾರರ ನಿರೀಕ್ಷೆಯಂತೆ ಕೆಲಸ ಮಾಡಲು ಬರುವ ಅನುದಾನದಲ್ಲಿ ಸಾಧ್ಯವಾಗದೇ ಹೋದರು ಸಾಕಷ್ಟು ಕುಡಿಯುವ ನೀರಿನ ಟ್ಯಾಂಕರ್‌ಗಳನ್ನು ನಗರಸಭೆಗೆ ನೀಡಿದ್ದರು.

ನಗರಗಳಲ್ಲಿ ಬೀದಿ ದೀಪಗಳನ್ನು ನೀಡುವ ಸಲುವಾಗಿ ಸೋಡಿಯಂ ಲೈಟ್‌ಗಳನ್ನು ವಿತರಿಸಿದ್ದರು. ಚಿತ್ರದುರ್ಗ ಜಿಲ್ಲೆಯ ಆರೂ ತಾಲೂಕುಗಳಲ್ಲಿ ಭದ್ರವಾದ ಬಸ್ ನಿಲ್ದಾಣಗಳನ್ನು ನಿರ್ಮಿಸಿದ್ದರು. ಗ್ರಾಮೀಣ ಪ್ರದೇಶಗಳಲ್ಲಿ ಹಾಗೂ ನಗರಗಳಲ್ಲಿ ವಿದ್ಯುತ್ ದೀಪಗಳನ್ನು ಅಳವಡಿಕೆ ಮಾಡಲು ಅನುದಾನ ಖರ್ಚು ಮಾಡಿದ್ದರು.
ಕ್ಷೇತ್ರದ ಜನರಿಂದ ದೂರ ಸರಿದಿದ್ದ ಶಶಿಕುಮಾರ್
ಚಿತ್ರದುರ್ಗದಲ್ಲಿ ಖಾಸಗಿ ಬಸ್ ನಿಲ್ದಾಣವನ್ನು ಶಶಿಕುಮಾರ್ ಬಸ್ ನಿಲ್ದಾಣ ಎಂದು ಕೂಡ ಕರೆಯುವಷ್ಟು ರೀತಿಯಲ್ಲಿ ಸುಸಜ್ಜಿತವಾಗಿ ನಿರ್ಮಿಸಿದ್ದರು. ಆದರೆ ಅವರ ಅವಧಿ ಮುಗಿದ ಮೇಲೆ ಮತ್ತೆ ಅವರು ಚುನಾವಣೆಗೆ ಸ್ಪರ್ಧಿಸಲು ಸಾಧ್ಯವಾಗಲಿಲ್ಲ.
2008ರಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮಾಜಿ ಸಚಿವ ತಿಪ್ಪೇಸ್ವಾಮಿ ವಿರುದ್ಧ ಕೂದಲೆಳೆ ಅಂತರದಲ್ಲಿ ಸೋಲುಕಂಡಿದ್ದರು. ಬಳಿಕ ಅವರು ಕ್ಷೇತ್ರದಲ್ಲಿ ಜನರ ಜೊತೆ ನಿರಂತರ ಸಂಪರ್ಕವನ್ನಾಗಲಿ ಕ್ಷೇತ್ರದ ಜೊತೆಗೆ ಒಡನಾಟವನ್ನಾಗಲಿ ಇಟ್ಟುಕೊಳ್ಳಲಿಲ್ಲ. ಈ ಕಾರಣದಿಂದ ಅವರಿಗೆ ಚಿತ್ರದುರ್ಗ ಜಿಲ್ಲೆಯಲ್ಲಿ ಹಿಡಿತ ಸಾಧಿಸಲು ಸಾಧ್ಯವಾಗಲಿಲ್ಲ. ಇದರಿಂದ ಅವರು ದೂರದ ಬೆಂಗಳೂರಿನಲ್ಲಿಯೇ ಉಳಿದು ಕ್ಷೇತ್ರವನ್ನು ಸಂಪೂರ್ಣವಾಗಿಯೇ ಮರೆತು ಹೋಗಿದ್ದರು.
ಎಸ್‌ಟಿ ಮೀಸಲು ಕ್ಷೇತ್ರದಿಂದ ಶಶಿಕುಮಾರ್‌ ಸ್ಪರ್ಧೆ
ನಂತರದ ಚುನಾವಣೆಯಲ್ಲಿ ಟಿಕೆಟ್ ದೊರೆಯಲಿಲ್ಲ. 2018ರಲ್ಲಿ ಮತ್ತೆ ಚಳ್ಳಕೆರೆ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಲು ಇಂಗಿತ ವ್ಯಕ್ತಪಡಿಸಿದ್ದರು. ಆದರೆ ಟಿಕೆಟ್ ದೊರೆಯದ ಕಾರಣ ಕೊನೆ ಕ್ಷಣದಲ್ಲಿ ಜೆಡಿಎಸ್ ಪಕ್ಷ ಸೇರಿ ಹೊಸದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ, ಪ್ರಚಾರ ನಡಸದೇ ಸುಮಾರು 1500 ಹೆಚ್ಚು ಮತಗಳನ್ನು ಪಡೆದು ಹೀನಾಯವಾಗಿ ಸೋಲುಕಂಡಿದ್ದರು.
ಹೀಗೆ ಶಶಿಕುಮಾರ್ ತಮ್ಮ ರಾಜಕೀಯ ಜೀವನಕ್ಕೆ ಜೀವ ನೀಡಿದ್ದ ಕೋಟೆ ನಾಡನ್ನು ಕಡೆಗಣಿಸಿ ಚುನಾವಣೆ ಬಂದಾಗ ಮಾತ್ರ ಬರುವುದು ಪ್ರಚಾರ ಮಾಡುವುದು ಮಾಡಿದರೂ ಕೂಡ ಜನರ ಪ್ರೀತಿ ಮಾತ್ರ ಕಡಿಮೆ ಆಗಿರಲಿಲ್ಲ. ಆದರೆ ಪ್ರೀತಿ ಮಾತ್ರ ಮತಗಳಾಗಿ ಪರಿವರ್ತನೆಯಾಗಲೇ ಇಲ್ಲ.
ಜಿಲ್ಲೆಯ ಎಸ್‌ಟಿ ಮೀಸಲು ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಚಳ್ಳಕೆರೆ.ಮೊಳಕಾಲ್ಮೂರು ಕ್ಷೇತ್ರಗಳಿಗೆ ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ನಂತರ ಮಾಧ್ಯಮದವರೊಂದಿಗೆ ಶಶಿಕುಮಾರ್ ಜಿಲ್ಲೆಯ ಎಸ್ಟಿ ಮೀಸಲು ಕ್ಷೇತ್ರದಿಂದ ಯಾವ ಪಕ್ಷದಿಂದ ಅಂತ ಹೇಳದೆ ಸ್ಪರ್ಧೆ ಮಾಡುವುದು ಖಚಿತ ಎಂದು ಹೇಳಿತ್ತಿದ್ದರು . ಆದರೆ ಯಾವ ಮೀಸಲು ಕ್ಷೇತ್ರ ಎಂದು ನಿಖರವಾಗಿ ತಿಳಿಸುತ್ತಿರಲಿಲ್ಲ. ಆದರೆ ಜನಧ್ವನಿ ಮಾಧ್ಯಮದೊಂದಿಗೆ ಭಾನುವಾರ ದೂರವಾಣಿ ಮೂಲಕ ಕರೆ ಮಾಡಿ ಸಚಿವ ಶ್ರೀರಾಮುಲು ಮೊಳಕಾಲ್ಮೂರು ಕ್ಷೇತ್ರದಿಂದ ಸ್ಪರ್ಧೆ ಮಾಡಿದರೆ ನಾನು ಚಳ್ಳಕೆರೆ ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ಖಚಿತ ಚಳ್ಳಕೆರೆ ಕ್ಷೇತ್ರದಲ್ಲಿ ಇನ್ನೆರಡು ದಿನಗಳಲ್ಲಿ ಪ್ರಚಾರ ಮಾಡುವ ಮೂಲಕ ಜನಗಳ ಮುಂದೆ ಬರಲಾಗುವುದು ಈಗಾಗಲೆ ಚಳ್ಳಕೆರೆ ನಗರದಲ್ಲಿ ಮನೆ ಹಾಗೂ ಕಚೇರಿ ಮಾಡಲು ಸಿದ್ದತೆ ಮಾಡಿಕೊಂಡಿದ್ದು ಕ್ಷೇತ್ರದ ಕಾರ್ಯಕರ್ತರ.ಮುಖಂಡರ ಹಾಗೂ ಮತದಾರರೊಂದಿಗೆ ಇದ್ದು ಸೇವೆ ಮಾಡಲು ಅಗತ್ಯ ಸಿದ್ದತೆಗಳನ್ನು ಮಾಡಿಕೊಂಡಿದ್ದೇನೆ ಎಂದು ತಿಳಿಸಿದ್ದಾರೆ. ಈಗಾಗಲೆ ಬಿಜೆಪಿ ಪ್ರಭಲ ಆಕಾಂಕ್ಷಿಗಳೆಂದು ಸ್ಥಳಿಯರಾದ ಬಾಳೆಕಾಯಿ ರಾಮದಾಸ್. ಜಯಪಾಲಯ್ಯ ಜಯರಾಂ.ಅನುಲ್ ಕುಮಾರ್. ಜತೆಗೆ ತಹಶಿಉಲ್ದಾರ್ ಎನ್.ರಘುಮೂರ್ತಿ ಹೆಸರು ಕೇಳಿ ಬರುತ್ತಿದ್ದು ಕಚೇರಿ ಕರ್ತವ್ಯದ ಜತೆಗೆ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ನಡೆಯುವ ಪ್ರತಿಯೊಂದು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ ಈಗ ಚಕನ ಚಿತ್ರ ನಟ ಮಾಜಿ ಸಂಸದ ಶಶಿಕುಮಾರ್ ಸಹ ಚಳ್ಳಕೆರೆ ಕ್ಷೇತ್ರದಿಂದ ಬುಜೆಪಿ ಅಭ್ಯರ್ಥಿ ಯಾಗಿ ಚುನಾವಣೆ ಕಣಕ್ಕಿಳಿಯುವುದಾಗಿ ಖಚಿತ ಪಡಿಸಿದ್ದಾರೆ

Latest News >>

ಹಾಸ್ಯನಟ ಸಂಗೀತ ನಿರ್ದೇಶಕ ಸಾಧುಕೋಕಿಲ ಸೂರನಹಳ್ಳಿ ಗ್ರಾಮಕ್ಕೆ ಭೇಟಿ.

ಚಳ್ಳಕೆರೆ ಜು.14ಚಳ್ಳಕೆರೆ ತಾಲೂಕಿನ‌ ಸೂರನಹಳ್ಳಿ‌ಗ್ರಾಮದ ಶ್ರೀ ಆಂಜನೇಸ್ವಾಮಿ ದೇವಸ್ಥಾನ ಕ್ಕೆ ಹಾಸ್ಯನಟ, ಸಂಗೀತಗಾರ, ಚಲನಚಿತ್ರ ನಿರ್ದೇಶಕ...

ಮೊಳಕಾಲ್ಮೂರಿಗೆ ಇಎಸ್ ಐ ಆಸ್ಪತ್ರೆ ಹಾಗೂ ಜವಳಿ ಪಾರ್ಕ್ ಮಂಜುರಾತಿ ನೀಡುವಂತೆ ಕೇಂದ್ರ ಸಚಿವರಿಗೆ ಜೆ.ಡಿ.ಎಸ್ ಮುಖಂಡ ಟಿ.ವೀರಭದ್ರಪ್ಪ ಮನವಿ

ಬೆಂಗಳೂರು ಜು. 14ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರವು ತುಂಬಾ ಹಿಂದುಳಿದ ಪ್ರದೇಶವಾಗಿದ್ದು ಹಾಗೂ ಅತ್ಯಂತ ಕಡಿಮೆ ಮಳೆ ಬೀಳುವ ಪ್ರದೇಶ ಇಲ್ಲಿ...

ಗಜ್ಜುಗಾನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷ ಮಾಳಜ್ಜಯ್ಯನವರಿಗೆ ಸನ್ಮಾನ ಪಟ್ಟಣ ಪಂಚಾಯಿತಿ ಸದಸ್ಯ ಕೆ.ಪಿ. ತಿಪ್ಪೇಸ್ವಾಮಿ ,

ನಾಯಕನಹಟ್ಟಿ. ಜುಲೈ 14 . ಗಜ್ಜುಗಾನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಗ್ರಾಮೀಣ ಪ್ರದೇಶದ ರೈತರಿಗೆ ಸಹಕಾರವಾಗಲಿ ಎಂದು ಪಟ್ಟಣ...

ವಿದ್ಯಾರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಮತದಾನ ಮಾಡಲು ಸರತಿ ಸಾಲಿನಲ್ಲಿ ತಮ್ಮ ಹಕ್ಕು ಚಲಾಯಿಸಿದರು.

ಚಳ್ಳಕೆರೆ ಜು.13 ಶಾಲೆಗಳಲ್ಲಿ ವಿದ್ಯಾರ್ಥಿ ನಾಯಕರ ಆಯ್ಕೆ ಮತದಾನದ ಮೂಲಕ ಸಾಗಿದ್ದು ಮಕ್ಕಳಿಗೆ ಚಿಕ್ಕಂದಿನಿಂದಲೇ ಚುನಾವಣಾ ಮಜಲುಗಳನ್ನು...

ಲೋಕ ಅದಾಲತ್ ಮೂಲಕ ಪ್ರಕರಣಗಳು ಇತ್ಯರ್ಥ ಗೊಂಡರೆ ದ್ವೇಷ ಭಾವನೆ ದೂರವಾಗಿ ಸಂಬಂಧಗಳು ಸುಧಾರಿಸಲಿವೆ: ಕೆಎಂ ನಾಗರಾಜ್ 

ಚಳ್ಳಕೆರೆ: ಲೋಕ ಅದಾಲಾತ್ ಕಾರ್ಯಕ್ರಮವು ಸರ್ವೋಚ್ಚ ನ್ಯಾಯಾಲಯದ ಆದೇಶದ ಮೇರೆಗೆ ಇಡೀ ದೇಶದಾದ್ಯಂತ ನಡೆಯುತ್ತಿದ್ದು ಕಕ್ಷಿದಾರರು ಇದರ...

ಕರ್ನಾಟಕರಾಜ್ಯವೆಂದು ನಾಮಾಕರಣ ಮಾಡಿ 50ವರ್ಷಗಳುಸಂದ ಹಿನ್ನಲೆಯಲ್ಲಿ ಇಂದು ಸುವರ್ಣಾಕರ್ನಾಟಕಉತ್ಸವವನ್ಆಚರಿಸುತ್ತಿದ್ದೇವೆ:ತಹಶೀಲ್ದಾರ್ ರಾಜೇಶ್ ಕುಮಾರ್

ಹಿರಿಯೂರು: ಅಂದಿನ ಮುಖ್ಯಮಂತ್ರಿಗಳಾದ ಡಿ.ದೇವರಾಜ ಅರಸು ಮೈಸೂರು ರಾಜ್ಯವನ್ನು ಕರ್ನಾಟಕ ರಾಜ್ಯವೆಂದು ನಾಮಾಕರಣ ಮಾಡಿ 50 ವರ್ಷಗಳು ಸಂದ...

ಪತ್ರಿಕಾ ದಿನಾಚರಣೆಯಲ್ಲಿ ಸಚಿವ ಡಿ.ಸುಧಾಕರ್ ಹೇಳಿಕೆಸತ್ಯಕ್ಕೆ ಹತ್ತಿರವಾದ ಸುದ್ದಿಗಳಿಗೆ ಮಾತ್ರ ಜನಮನ್ನಣೆ

ಚಿತ್ರದುರ್ಗ ಜುಲೈ.13: ಪತ್ರಿಕೆ ಹಾಗೂ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪ್ರಕಟವಾಗುವ ಸತ್ಯಕ್ಕೆ ಹತ್ತಿರವಾದ ಸುದ್ದಿಗಳಿಗೆ ಮಾತ್ರ ಜನಮನ್ನಣೆ...

ಅಧಿಕಾರಿಗಳ ಸಭೆಯಲ್ಲಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಸೂಚನೆ ಡೆಂಗ್ಯೂ ಪರೀಕ್ಷೆ: ಖಾಸಗಿ ಲ್ಯಾಬ್‍ಗಳು ವಿಧಿಸುವ ದರ ಸಾರ್ವಜನಿಕರಿಗೆ ಹೊರೆಯಾಗದಿರಲಿ

ಚಿತ್ರದುರ್ಗ ಜು.13 ಡೆಂಗ್ಯೂ ಪರೀಕ್ಷೆಗೆ ಖಾಸಗಿ ನರ್ಸಿಂಗ್ ಹೋಂ, ಲ್ಯಾಬ್‍ಗಳು ವಿಧಿಸುವ ದರದ ಬಗ್ಗೆ ನಿಗಾವಹಿಸಿ, ಸರ್ಕಾರ ನಿಗಧಿಪಡಿಸಿದ ದರ...

ಡಾ. ಬಾಬು ಜಗಜೀವನ್ ರಾಮ್ ಭವನ ರಾಜ್ಯದ ಎಲ್ಲಾ ವಿದ್ಯಾರ್ಥಿಗಳ ಹಾಗೂ ಸಂಶೋಧಕರ ಕೇಂದ್ರವಾಗಿ ಹೊರಹೊಮ್ಮಲಿ. ಹಿರಿಯ ದಲಿತ ಮುಖಂಡ ತೊರೆಕೋಲಮ್ಮನಹಳ್ಳಿ ಆರ್. ಬಸಪ್ಪ,

ನಾಯಕನಹಟ್ಟಿ:: ಜುಲೈ 13 . ಡಾ. ಬಾಬು ಜಗಜೀವನ್ ರಾಮ್ ಸಂಶೋಧನ ಕೇಂದ್ರ ರಾಜ್ಯದ ದಲಿತ ಜನಾಂಗದ ಹಿಂದುಳಿದ ಹಾಗೂ ಅಲ್ಪಸಂಖ್ಯಾತರಿಗೆ ಅಧ್ಯಯನ...

ಪ್ರತಿಭೋತ್ಸವದಲ್ಲಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ವಿದ್ಯಾರ್ಥಿಗಳು ವೈಯಕ್ತಿಕ ಹಿತಾಸಕ್ತಿ ಅರಿತು ಉದಯೋನ್ಮುಖರಾಗಿ ಬೆಳೆಯಬೇಕು

ಚಿತ್ರದುರ್ಗ ಜುಲೈ.12: ವಿದ್ಯಾರ್ಥಿಗಳು ಪಾಠದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಶೈಕ್ಷಣಿಕವಾಗಿ, ಸಾಮಾಜಿಕವಾಗಿ ತಮ್ಮ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page