ಎನ್.ಮಹದೇವಪುರ ಗ್ರಾಮಪಂಚಾಯತ್
ಬೆಂಗಳೂರು ಸೆ.26 2022-23ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿಗೆ 237 ಗ್ರಾಮ ಪಂಚಾಯಿತಿಗಳನ್ನು ಆಯ್ಕೆ ಮಾಡಲಾಗಿದೆ.
ಪಂಚಾಯತ್ ರಾಜ್ ಇಲಾಖೆ ಪ್ರತಿ ವರ್ಷ ಈ ಪ್ರಶಸ್ತಿ ನೀಡುತ್ತ ಬಂದಿದೆ. ಈ ಬಾರಿ 237ಗ್ರಾಮ ಪಂಚಾಯಿತಿಗಳಿಗೆ ಗಾಂಧಿ ಗ್ರಾಮ ಪುರಸ್ಕಾರ ನೀಡಲಾಗಿದೆ.
![](https://janadhwani.in/wp-content/uploads/2023/09/FB_IMG_1694769466875.jpg)
![](https://janadhwani.in/wp-content/uploads/2023/09/IMG-20230926-WA0195.jpg)
ಆಯ್ಕೆಯಾದ ಗ್ರಾಮ ಪಂಚಾಯತಿಗಳಿಗೆ ಅಕ್ಟೋಬರ್ 2 ರಂದು ಬೆಳಗ್ಗೆ 10ಕ್ಕೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಯೋಜಿಸಾಗಿದೆ. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಭಾಗವಹಿಸಿ ಪುಶಸ್ತಿ ಸ್ವೀಕರಿಸಲು ಸೂಚಿಸಲಾಗಿದೆ.
0 Comments