ಚಳ್ಳಕೆರೆ ತಾಲೂಕೀನ ಎನ್.ಮಹದೇವಪುರ ಸೇರಿ 237 ಗ್ರಾಪಂ ಗಳಿಗೆ ಗಾಂಧಿ ಪುಸ್ಕೃತ ಪ್ರಧಾನ.

by | 02/10/23 | ಸುದ್ದಿ


ಬೆಂಗಳೂರು: ಗ್ರಾಮೋದ್ಯೋಗ ಉತ್ಪನ್ನಗಳಿಗೆ ಮಾರುಕಟ್ಟೆ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ 2023ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಸ್ವಚ್ಚ ಸರ್ವೇಕ್ಷಣಾ ಗ್ರಾಮೀಣ ರಾಜ್ಯ ಮಟ್ಟದ ಪ್ರಶಸ್ತಿ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.
ಮಹಾತ್ಮ ಗಾಂಧಿ ಅವರ ಕನಸಿನ ‘ಅಧಿಕಾರ ವಿಕೇಂದ್ರೀಕರಣ’ ಮತ್ತು ‘ಮಹಿಳಾ ಮೀಸಲಾತಿ’ಗೆ ಮುನ್ನುಡಿ ಬರೆದವರು ದಿ. ರಾಜೀವ್ ಗಾಂಧಿ ಅವರು.
ಅಧಿಕಾರ ವಿಕೇಂದ್ರಕರಣದಿಂದ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ. ದೇಶ, ರಾಜ್ಯದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ನಂಬಿದ್ದರು. ಹೀಗಾಗಿ ಗ್ರಾಮ ಸ್ವರಾಜ್ಯವನ್ನು ಪ್ರತಿಪಾದಿಸಿದರು. ಗ್ರಾಮಗಳ ಅಭಿವೃದ್ದಿ ಇಲ್ಲದೆ ದೇಶದ ಅಭಿವೃದ್ಧಿ ಸಾಧ್ಯವಿಲ್ಲ ಎನ್ನುವುದು ಗಾಂಧೀಜಿಯವರ ನೀತಿಯಾಗಿತ್ತು.
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ಮಹಾತ್ಮ ಗಾಂಧಿಯವರ ಆಶಯದಂತೆ ಅಧಿಕಾರ ವಿಕೇಂದ್ರೀಕರಣಕ್ಕೆ ಮುನ್ನುಡಿ ಬರೆದರು. ಜನತಂತ್ರದ ವಿಕೇಂದ್ರೀಕರಣಕ್ಕಾಗಿ ಸಂವಿಧಾನಕ್ಕೆ ತಿದ್ದುಪಡಿ ತಂದವರು ರಾಜೀವ್ ಗಾಂಧಿಯವರು ಮತ್ತು ಇದನ್ನು ಜಾರಿ ಮಾಡಿದವರು ಮಾಜಿ ಪ್ರಧಾನಿ ನರಸಿಂಹರಾವ್ ಅವರು.
ಸ್ಥಳೀಯ ಸಂಸ್ಥೆ ಮತ್ತು ಪಂಚಾಯತ್ ಗಳಲ್ಲಿ ಶೇ.50 ಮೀಸಲಾತಿ ಜಾರಿಗೆ ಬರಲು ಕಾರಣ ಆದವರು ರಾಜೀವ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷ.
ಈಗ ಕೇಂದ್ರ ಸರ್ಕಾರ ಜಾರಿ ಮಾಡಿದ್ದೀವಿ ಎಂದು ಹೇಳಿಕೊಳ್ಳುತ್ತಿರುವ ಮಹಿಳೆಯರ ರಾಜಕೀಯ ಮೀಸಲಾತಿಗೆ ಮುನ್ನುಡಿ ಬರೆದದ್ದು ಕಾಂಗ್ರೆಸ್ ಸರ್ಕಾರ. ಈಗ ಹಿಂದುಳಿದ ವರ್ಗಗಳ ಮಹಿಳೆಯರಿಗೂ ಮೀಸಲಾತಿ ಕಲ್ಪಿಸಬೇಕು ಎನ್ನುವುದು ನಮ್ಮ ಒತ್ತಾಯವಾಗಿದೆ.
ಗ್ರಾಮಗಳ ವ್ಯಾಜ್ಯಗಳು ಗ್ರಾಮಗಳಲ್ಲೇ ಬಗೆಹರಿಯಬೇಕು ಎನ್ನುವ ಮಹತ್ವಾಕಾಂಕ್ಷೆಯಿಂದ ಗ್ರಾಮ ನ್ಯಾಯಾಲಯಗಳನ್ನು ಸ್ಥಾಪಿಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ.
ಮಹಾತ್ಮಗಾಂಧಿ ಮತ್ತು ರಾಜೀವ್ ಗಾಂಧಿ ಅವರ ಗ್ರಾಮ ಸ್ವರಾಜ್ಯ ಮತ್ತು ಅಧಿಕಾರ ವಿಕೇಂದ್ರೀಕರಣ ಆಶಯದಂತೆ ಗ್ರಾಮ ನ್ಯಾಯಾಲಯಗಳ ಸ್ಥಾಪನೆಯಾದರೆ ಗ್ರಾಮಸ್ಥರಿಗೆ ಬಹಳ ಅನುಕೂಲ ಆಗುತ್ತದೆ. ಖಾದಿ-ಗ್ರಾಮೋದ್ಯೋಗ ಸ್ಥಳಗಳನ್ನು ಅಭಿವೃದ್ಧಿಪಡಿಸಲಾಗುವುದು ಮತ್ತು ಗ್ರಾಮೋದ್ಯೋಗ ಉತ್ಪನ್ನಗಳಿಗೆ ಮಾರುಕಟ್ಟೆ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಪ್ರತಿ ವರ್ಷ ಮಹಾತ್ಮ ಗಾಂಧಿಜೀಯವರ ಜಯಂತಿಯಂದು ರಾಜ್ಯದಲ್ಲಿ ಉತ್ತಮ ಕೆಲಸ ಮಾಡುತ್ತಿರುವ ಗ್ರಾಮ ಪಂಚಾಯತಿಗಳಿಗೆ ನೀಡುತ್ತಿರುವ ‘ಗಾಂಧಿ ಗ್ರಾಮ ಪುರಸ್ಕಾರʼಕ್ಕೆ ಈ ಬಾರಿ 233 ಗ್ರಾಮ ಪಂಚಾಯಿತಿಗಳು ಆಯ್ಕೆಯಾಗಿದ್ದು, 4 ಗ್ರಾಮ ಪಂಚಾಯತಿಗಳಿಗೆ ವಿಶೇಷ ‘ಗಾಂಧಿ ಗ್ರಾಮ ಪುರಸ್ಕಾರ’ ಪ್ರದಾನ ಮಾಡಲಾಗುತ್ತಿದೆ.

ಗ್ರಾಮೀಣ ಭಾಗದ ಜನರ
– ಜೀವನ ಗುಣಮಟ್ಟ ಸುಧಾರಣೆ,
– ಸಂಪನ್ಮೂಲ ಕ್ರೋಢೀಕರಣ,
– ಶುದ್ಧ ಕುಡಿಯುವ ನೀರು,
– ಶೌಚಾಲಯ,
– ನೈರ್ಮಲ್ಯ,
– ರಸ್ತೆ ಸೌಲಭ್ಯ
– ಬೀದಿ ದೀಪಗಳ ನಿರ್ವಹಣೆ,
– ಮಹಿಳಾ ಸ್ವ ಸಹಾಯ ಸಂಘಗಳ ಮೂಲಕ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟ ಹಾಗೂ ಮನೆ ಮನೆಗಳಿಂದ ಘನ ತ್ಯಾಜ್ಯ ಸಂಗ್ರಹಿಸಲು ಉಪಯೋಗಿಸುವ ವಾಹನಕ್ಕೆ ಮಹಿಳಾ ಚಾಲಕರನ್ನು ನೇಮಕ ಮಾಡುವಲ್ಲಿ ಕೈಗೊಂಡಿರುವ ಕ್ರಮಗಳನ್ನು ಆಧರಿಸಿ ಪುರಸ್ಕಾರಕ್ಕೆ ಗ್ರಾಮ ಪಂಚಾಯತಿಗಳನ್ನು ಆಯ್ಕೆ ಮಾಡಲಾಗಿದೆ.

ಈ ವರ್ಷದ ಪ್ರಶಸ್ತಿಗೆ ಆಯ್ಕೆಯಾಗಿರುವ ಎಲ್ಲಾ ಗ್ರಾಮಪಂಚಾಯತಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು.

ಸದೃಢ ಗ್ರಾಮ ಸಮೃದ್ಧಿ ನಾಡು ಕಟ್ಟುವ ಮೂಲಕ ಗಾಂಧೀಜಿ ಅವರ ನೈಜ ಸ್ವರಾಜ್ಯದ ಕನಸನ್ನು ನನಸು ಮಾಡಲು ನಮ್ಮ ಪ್ರಾಮಾಣಿಕ ಪ್ರಯತ್ನ ನಿರಂತರವಾಗಿರಲಿದೆ.

Latest News >>

ಭಗವಂತನಲ್ಲಿ ಪ್ರೇಮಭಕ್ತಿ ಅವಶ್ಯವಾದದ್ದು:- ಸ್ವಾಮಿ ಪ್ರಕಾಶಾನಂದಜೀ ಮಹಾರಾಜ್ ಅಭಿಪ್ರಾಯ.

ಚಳ್ಳಕೆರೆ:-ನಗರದ ಬೆಂಗಳೂರು ರಸ್ತೆಯಲ್ಲಿರುವ ವಾಸವಿ ಕಾಲೋನಿಯ ಶ್ರೀ ಶಾರದಾಶ್ರಮದಲ್ಲಿ ಆಯೋಜಿಸಿದ್ದ ಎರಡನೇ ದಿನದ ಶ್ರೀಮದ್ ಭಾಗವತ ಸಪ್ತಾಹ...

ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮದಲ್ಲಿ ಸಚಿವ ಡಿ.ಸುಧಾಕರ್ ಶಿಕ್ಷಣದಿಂದ ಸ್ವಾವಲಂಬಿ ಜೀವನ ಸಾಧ್ಯ

ಚಿತ್ರದುರ್ಗ ಜುಲೈ27: ಬದುಕಿನಲ್ಲಿ ಶಿಕ್ಷಣ ಬಹಳ ದೊಡ್ಡ ಪಾತ್ರವಹಿಸಲಿದ್ದು, ಶಿಕ್ಷಣ ಪಡೆಯುವುದರಿಂದ ಸ್ವಾವಲಂಬನೆಯಿAದ ಜೀವನ ಮಾಡುವ...

ಸಂಗೀತ ಹಾಗೂ ಕಲೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಂಗೀತ ಸಿಂಚನದಂತಹ ಕಾರ್ಯಕ್ರಮಗಳು ಅತ್ಯಗತ್ಯ ವಾಣಿವಿಲಾಸ ವಿದ್ಯಾಸಂಸ್ಥೆ ಅಧ್ಯಕ್ಷ: ಬಿ.ಎಸ್.ರಘುನಾಥ್

ಹಿರಿಯೂರು : ಇಂದಿನ ಆಧುನಿಕ ಜಗತ್ತಿನಲ್ಲಿ ಸಂಗೀತ, ನೃತ್ಯ ಮತ್ತು ನಾಟಕಗಳಂತಹ ಜಾನಪದ ಕಲೆಗಳು ನಶಿಸಿ ಹೋಗುತ್ತಿದ್ದು, ಸಂಗೀತ ಹಾಗೂ ಕಲೆಗಳನ್ನು...

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page