ಚಿತ್ರದುರ್ಗದಲ್ಲಿ ಹಾಲಿ ಸಂಸದರಿಗೆ ಟಿಕೆಟ್ ಕೊಡದೆ ಹೊಸಬರಿಗೆ ಟಿಕೆಟ್ ಕೊಡುವ ವಿಚಾರ ‌ಕೇವಲ ಊಹಾ ಪೋಹ ಅಧಿಕೃತವಾಗಿ ಟಿಕೆಟ್ ಘೋಷಣೆ ಮಾಡಿದ‌ ಮೇಲೆಯೇ ಅದು ಗೊತ್ತಾಗಲಿದೆ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ.

by | 15/03/24 | ಸುದ್ದಿ


ಚಿತ್ರದುರ್ಗ ಮಾ.14ಚಿತ್ರದುರ್ಗದ ಲೋಕಸಭಾ ಟಿಕೆಟ್ ಯಾರಿಗೆಂದು ಇಷ್ಟರಲ್ಲೆ ಘೋಷಣೆಯಾಗಲಿದೆ.

ಕೊಟೆನಾಡು ಚಿತ್ರದುರ್ಗದ ಲೋಕಸಭಾ ಟಿಕೆಟ್ ಇಷ್ಟರಲ್ಲಿ ಘೋಷಣೆ ಮಾಡುತ್ತೇವೆ
ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು.‌

ಚಿತ್ರದುರ್ಗದ ಮಾದಾರ ಚನ್ನಯ್ಯ ಶ್ರೀಗಳ ಮಠಕ್ಕೆ ಭೇಟಿ‌ ಕೊಟ್ಟು ಅಶೀರ್ವಾದ ಪಡೆದು ನಂತರ ಮಾಧ್ಯಮಗಳೊಂದಿಗೆ ಮಾತಾಡಿದರು. ಶ್ರೀ ಮಠಕ್ಕೆ ಆಗಾಗ್ಗೆ ಭೇಟಿ‌ ಕೊಡುತ್ತಿರುತ್ತೇನೆ. ಹಾಗೆ ಇಂದು‌ ಕೊಟ್ಟಿದ್ದೇನೆ. ಈ ಮೊದಲು ಚುನಾವಣೆ ಪೂರ್ವದಲ್ಲಿ‌ ಆಶೀರ್ವಾದ ಪಡೆದುಕೊಂಡಿದ್ದೆ ಎಂದರು.ಚಿತ್ರದುರ್ಗದ ಟಿಕೆಟ್ ಘೋಷಣೆಯಾಗುವುದು ಬಾಕಿ‌ ಇದೆ. ದೆಹಲಿಯಲ್ಲಿ ರಾಷ್ಟ್ರೀಯ ಅಧ್ಯಕ್ಷರು, ಪ್ರಧಾನಿಗಳು ಹಾಗೂ ಬೋರ್ಡ್ ಕಮಿಟಿಯ ಸಬ
ಭೆ ನಡೆಯಲಿದ್ದು, ನಾಳೆ ನಾಡಿದ್ದರಲ್ಲಿ ಉಳಿದ ಎಲ್ಲಾ ಸ್ಥಾನಗಳ ಟಿಕೆಟ್ ಮತ್ತು ಅಭ್ಯರ್ಥಿಗಳ ಘೋಷಣೆಯಾಗಲಿದೆ ಎಂದರು.

ಮಾದಾರ ಚನ್ನಯ್ಯ ಶ್ರೀಗಳ ಹೆಸರು ಕೇಳಿ‌ ಬರುತ್ತಿದೆ ಎಂಬ ಪ್ರಶ್ನೆಗೆ, ಯಾವುದೇ ಚರ್ಚೆ ಆಗುತ್ತಿಲ್ಲ.‌ಇದರ ಬಗ್ಗೆ ನನಗೆ ಮಾಹಿತಿ‌ ಇಲ್ಲ. ಚಿತ್ರದುರ್ಗದಲ್ಲಿ ಹಾಲಿ ಸಂಸದರಿಗೆ ಟಿಕೆಟ್ ಕೊಡದೆ ಹೊಸಬರಿಗೆ ಟಿಕೆಟ್ ಕೊಡುವ ವಿಚಾರ ‌ಕೇವಲ ಊಹಾ ಪೋಹ ಅಧಿಕೃತವಾಗಿ ಟಿಕೆಟ್ ಘೋಷಣೆ ಮಾಡಿದ‌ ಮೇಲೆಯೇ ಅದು ಗೊತ್ತಾಗಲಿದೆ. ಈಶ್ವರಪ್ಪ ಅವರ ಜೊತೆಗೆ ನಾನು ವರಿಷ್ಟರು ಮಾತಾಡಿದ್ದೇವೆ ಎಲ್ಲವೂ ಸರಿಯಾಗಲಿದೆ. ಶ್ರೀ‌ಮಠದ ಬೆಂಬಲ‌ ಕೋರಿ‌ ನಾನು ಬಂದಿಲ್ಲ.‌ನಾನು 35 ವರ್ಷ ರಾಜಕಾರಣ ಮಾಡಿದ್ದೇನೆ. ಗ್ರಾಮ ಪಂಚಾಯಿತಿಗಳ ಮಟ್ಟದಲ್ಲಿ‌ ಭೇಟಿ ಮಾಡಿದ್ದೇನೆ. ಎರಡು ಬಾರಿ ವಿಧಾನ ಪರಿಷತ್ ಸದಸ್ಯನಾಗಿದ್ದೆ, ಈಗ ಎಂಪಿ ಟಿಕೆಟ್ ಕೊಟ್ಟಿದ್ದಾರೆ. ನಮ್ಮ ಪಕ್ಷದಲ್ಲಿ ನಿಷ್ಠಾವಂತರಿಗೆ ಟಿಕೆಟ್ ನೀಡಿದ್ದೇವೆ. ಯಡಿಯೂರಪ್ಪ ಮೇಲೆ ಬಂದಿರುವ ಲೈಂಗಿಕ ದೌರ್ಜನ್ಯದ ಆರೋಪದ ಬಗ್ಗೆ ಈಗಾಗಲೇ ಗೃಹ ಮಂತ್ರಿಗಳು ಮಾತಾಡಿದ್ದಾರೆ,ತನಿಖೆ ನಡೆಸುತ್ತೇವೆ ಎಂದಿದ್ದಾರೆ.

ರಾಜಕಾರಣದಲ್ಲಿ ಅವರ ಮೇಲೆ ಕಳಂಕ ತರುವ ಕೆಲಸ ಮಾಡಲಾಗುತ್ತಿದೆ. ಇದರಲ್ಲಿ ಯಾವುದೇ ಸದುದ್ದೇಶವಿಲ್ಲ ತನಿಖೆಯಲ್ಲಿ ಸತ್ಯ ಹೊರ ಬರಲಿದೆ. ಚುನಾವಣೆ ಸಮಯದಲ್ಲಿ ಇಂತಹ ಪ್ರಯತ್ನಗಳು ನಡೆಯುತ್ತಿರುತ್ತವೆ,ಆದರೆ ಸತ್ಯಕ್ಕೆ ಜಯ ಸಿಗಲಿದೆ ಎಂದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page