ಚಿತ್ರದುರ್ಗ-ಚಳ್ಳಕೆರೆ-ಪಾವಗಡ ರಸ್ತೆ: ರಾಷ್ಟಿçÃಯ ಹೆದ್ದಾರಿಯಾಗಿ ಮೇಲ್ದರ್ಜೆಗೆ ಏರಿಸಲು ಕೇಂದ್ರಕ್ಕೆ ಪ್ರಸ್ತಾವನೆ -ಸಂಸದ ಗೋವಿಂದ ಎಂ ಕಾರಜೋಳ

by | 11/07/24 | ಸುದ್ದಿ

ಚಿತ್ರದುರ್ಗ.ಜುಲೈ.11: ಚಿತ್ರದುರ್ಗ-ಚಳ್ಳಕೆರೆ-ಪಾವಗಡ ಮಧ್ಯದ 120 ಕಿ.ಮೀ. ಉದ್ದದ ರಸ್ತೆಯನ್ನು ರಾಷ್ಟಿçÃಯ ಹೆದ್ದಾರಿಯಾಗಿ ಮೇಲ್ದರ್ಜೆಗೆ ಏರಿಸಲು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಈ ರಸ್ತೆ ಅಭಿವೃದ್ದಿಯಿಂದ ಆಂದ್ರಪ್ರದೇಶÀ ಹಾಗೂ ಕರ್ನಾಟಕದ ನಡುವೆ ಸಂಪರ್ಕ ವೃದ್ಧಿಸಲಿದೆ. ಕೇಂದ್ರ ಸರ್ಕಾರದಿಂದ ಈ ಯೋಜನೆಗೆ ಅನುಮೋದನೆ ಪಡೆಯಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಸಂಸದ ಗೋವಿಂದ ಎಂ ಕಾರಜೋಳ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ರಾಷ್ಟಿçÃಯ ಹೆದ್ದಾರಿ ವಿಭಾಗ ಹಾಗೂ ರಾಷ್ಟಿçÃಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.
ಚಳ್ಳಕೆರೆ ತಾಲ್ಲೂಕಿನ 8000 ಎಕೆರೆ ಪ್ರದೇಶದಲ್ಲಿ ಐ.ಎಸ್.ಎಸ್.ಸಿ, ಇಸ್ರೋ, ಡಿ.ಆರ್.ಡಿ.ಓ ಸಂಸ್ಥೆಗಳ ಸ್ಥಾಪನೆಯಿಂದ ಚಳ್ಳಕೆರೆ ದೇಶದ ಪ್ರಮುಖ ನಗರವಾಗಿ ಮುನ್ನೆಲೆಗೆ ಬಂದಿದೆ. ಚಳ್ಳಕೆರೆ ನಗರ ವ್ಯಾಪ್ತಿಯ ರಸ್ತೆಗಳು ಸರಿಯಿಲ್ಲ. ಈ ರಸ್ತೆಗಳನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರವು ಅಭಿವೃದ್ಧಿ ಪಡಿಸುತ್ತಿಲ್ಲ. ಆದ್ದರಿಂದ ಚಳ್ಳಕೆರೆ ನಗರ ಪ್ರದೇಶದ 5.7 ಕಿ.ಮೀ. ರಸ್ತೆಯನ್ನು ರೂ.50 ಕೋಟಿ ವೆಚ್ಚದಲ್ಲಿ ಒಂದು ಬಾರಿಗೆ ಅಭಿವೃದ್ಧಿ ಪಡೆಸಲು ಭಾರತ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಮಂಜೂರಾತಿ ಪಡೆದುಕೊಳ್ಳಲಾಗುವುದು ಎಂದು ಸಂಸದ ಗೋವಿಂದ ಎಂ ಕಾರಜೋಳ ಭರವಸೆ ನೀಡಿದರು.

ಬಿ.ಜೆ.ಕೆರೆ ಹೆದ್ದಾರಿ : ರೂ. 1.48 ಕೋಟಿ ವೆಚ್ಚದ ಫೂಟ್ ಓವರ್ ಬ್ರಿಡ್ಜ್ ನಿರ್ಮಾಣ
ಮೊಳಕಾಲ್ಮೂರು ತಾಲ್ಲೂಕು ಬಿ.ಜಿ.ಕೆರೆ ಬಳಿಯ ಹೆದ್ದಾರಿ ಕಾಮಗಾರಿಯಿಂದ ಬಿ.ಜಿ.ಕೆರೆ ಗ್ರಾಮ ಎರೆಡು ಸೀಳಾಗಿ ಓಳಾಗಿದ್ದು, ಪ್ರತಿನಿತ್ಯ ಜನರು, ಶಾಲಾ ಮಕ್ಕಳು ಓಡಾಟ ಮಾಡಲು ತೊಂದರೆಯಾಗಿರುವ ಕುರಿತು ಪತ್ರಿಕೆಗಳಲ್ಲಿ ವರದಿ ಪ್ರಕಟವಾಗಿವೆ. ಸಮಸ್ಯೆ ನಿವಾರಣೆಗಾಗಿ ರೂ. 1.48 ಕೋಟಿ ವೆಚ್ಚದ ಫೂಟ್ ಓವರ್ ಬ್ರಿಡ್ಜ್ ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಇದರಿಂದ ಶಾಲಾ ಮಕ್ಕಳು ಹಾಗೂ ಸ್ಥಳೀಯರಿಗೆ ಉಪಯೋಗವಾಗಲಿದೆ ಎಂದು ಸಂಸದ ಗೋವಿಂದ ಎಂ ಕಾರಜೋಳ ತಿಳಿಸಿದರು.
ಹಿರಿಯೂರು-ಹುಳಿಯಾರು ಹೆದ್ದಾರಿಯ 31.3 ಕಿ.ಮೀ. ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ 26 ಕಿ.ಮೀ ಹಾಗೂ ಹೊಸದುರ್ಗ-ಹೊಳಲ್ಕೆರೆ ಹೆದ್ದಾರಿಯ 31.72 ಕಿ.ಮೀ. ರಸ್ತೆ ಕಾಮಗಾರಿಯಲ್ಲಿ 26 ಕಿ.ಮೀ ರಸ್ತೆ ನಿರ್ಮಿಸಲಾಗಿದೆ. ಎರೆಡು ಕಾಮಗಾರಿಗಳ ಪೈಕಿ ಬಾಕಿ ಇರುವ 5 ಕಿ.ಮೀ ರಸ್ತೆಗಳನ್ನು ಎರೆಡು ತಿಂಗಳಲ್ಲಿ ಪೂರ್ಣಗೊಳಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಕಡೂರು-ಹೊಸದುರ್ಗ ಹೊಸ ಹೆದ್ದಾರಿ ಕಾಮಗಾರಿ ಟೆಂಡರ್ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. 184 ಕೋಟಿ ವೆಚ್ಚದಲ್ಲಿ 48 ಕಿ.ಮೀ. ಹೆದ್ದಾರಿ ನಿಮಾರ್ಣಕ್ಕೆ ಶೀಘ್ರದಲ್ಲಿ ಪೂಜೆ ಮಾಡಿ ಕೆಲಸ ಪ್ರಾರಂಭಿಸಲಾಗುವುದು. ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು 353 ಕಿ.ಮೀ ಉದ್ದ ರಾಷ್ಟಿçÃಯ ಹೆದ್ದಾರಿ ಹಾದು ಹೋಗಿದೆ. ಇದರಲ್ಲಿ 218 ಕಿ.ಮೀ ರಸ್ತೆ ಭಾರತ ಸರ್ಕಾರದ ಎನ್.ಹೆಚ್.ಐ ನಿರ್ವಹಣೆ ಮಾಡುತ್ತಿದೆ. ಉಳಿದ ರಸ್ತೆಯನ್ನು ರಾಜ್ಯದ ರಾಷ್ಟಿçÃಯ ಹೆದ್ದಾರಿ ವಿಭಾಗದಿಂದ ನಿರ್ವಹಣೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಹೈವೆ ಕಾಮಗಾರಿಗಳನ್ನು 8 ರಿಂದ 10 ತಿಂಗಳಲ್ಲಿ ಪೂರ್ಣಗೊಳಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ ಎಂದು ಹೇಳಿದರು.

ಪೊಲೀಸ್ ಬಂದೋಬಸ್ತ್ನೊAದಿಗೆ ಕಾಮಗಾರಿ:

ಚಳ್ಳಕೆರೆ ಹಾಗೂ ಹಿರಿಯೂರು ಮಧ್ಯದ ಹೆದ್ದಾರಿ ಕಾಮಗಾರಿ ಭೂ ಸ್ವಾಧೀನ ಸಮಸ್ಯೆ ಹಾಗೂ ಸ್ಥಳೀಯರ ಸಮಸ್ಯೆಯಿಂದ ವಿಳಂಭ ಆಗಿದೆ. ಸದ್ಯ ಹಿರಿಯೂರು ಸಮೀಪದ 9 ಕಿ.ಮೀ ರಸ್ತೆ ನಿರ್ಮಾಣ ಬಾಕಿದೆ. ವಿನಾ ಕಾರಣ ಯಾರು ಹೆದ್ದಾರಿ ಅಭಿವೃದ್ಧಿಗೆ ಅಡ್ಡಿಗಾಲು ಹಾಕಬಾರದು. ಸೂಕ್ತ ಪೊಲೀಸ್ ಬಂದೋಬಸ್ತ್ನಲ್ಲಿ ಈ ಹೆದ್ದಾರಿ ಕಾಮಗಾರಿಯನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ ಎಂದು ಸಂಸದ ಗೋವಿಂದ ಎಂ ಕಾರಜೋಳ ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಉಪವಿಭಾಗಧಿಕಾರಿ ಎಂ.ಕಾರ್ತಿಕ್, ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶಿವಕುಮಾರ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಮಲ್ಲಿಕಾರ್ಜುನ್ ಸೇರಿದಂತೆ ರಾಷ್ಟಿçÃಯ ಹೆದ್ದಾರಿ ವಿಭಾಗ ಹಾಗೂ ಪ್ರಾಧಿಕಾರದ ಅಧಿಕಾರಿಗಳು ಇದ್ದರು. ಜಿಲ್ಲೆಯ ರಾಷ್ಟಿçÃಯ ಹೆದ್ದಾರಿಗಳ ಸಮಸ್ಯಾತ್ಮಕ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page