ಬೆಂಗಳೂರು, ಅ.4.ರಾಜ್ಯದಲ್ಲಿ ಈ ಬಾರಿ ರೈತನ ಸಂಕಷ್ಟ ಹೇಳತೀರದಾಗಿದೆ. ಮುಂಗಾರು ಮಳೆ ಇಲ್ಲದೇ ಬರಗಾಲ ಪರಿಸ್ಥಿತಿ ಎದುರಾಗಿದೆ. ಹಾಗಾಗಿ ಬರ ಸಮೀಕ್ಷೆಗಾಗಿ ನಾಳೆ ರಾಜ್ಯಕ್ಕೆ ಕೇಂದ್ರ ಸರ್ಕಾರದ ಮೂರು ತಂಡ ಭೇಟಿ ನೀಡಲಿದೆ. ಅ.5ರಿಂದ ಅ.9ರವರೆಗೆ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಧಾರವಾಡ, ಚಿತ್ರದುರ್ಗ, ಹಾವೇರಿ, ಗದಗ, ಕೊಪ್ಪಳ, ವಿಜಯನಗರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ ಒಟ್ಟು 12 ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಿದ್ದಾರೆ. ಆದರೆ ಪ್ರವಾಸಕ್ಕೂ ಮುನ್ನ ಕೇಂದ್ರ ತಂಡದ ಜತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ.
ಈಗಾಗಲೇ 195 ತಾಲೂಕುಗಳು ಬರಪೀಡಿತ ಎಂದು ರಾಜ್ಯ ಸರ್ಕಾರ ಘೋಷಿಸಿದ್ದು, ಕೇಂದ್ರದ ಬಳಿ 6 ಸಾವಿರ ಕೋಟಿ ರೂ. ಪರಿಹಾರವನ್ನು ಕೇಳಿದೆ.
161 ತಾಲೂಕುಗಳಲ್ಲಿ ತೀವ್ರವಾದ ಬರ ಪರಿಸ್ಥಿತಿ ಇದೆ. 34 ತಾಲೂಕುಗಳಲ್ಲಿ ಸಾಧಾರಣ ಬರದ ಪರಿಸ್ಥಿತಿ. ಒಟ್ಟು 195 ತಾಲೂಕುಗಳಲ್ಲಿ ಬರದ ಪರಿಸ್ಥಿತಿ ಇದೆ. ಉಳಿದ 40 ತಾಲೂಕುಗಳಲ್ಲಿ ಮಳೆ ಕೊರತೆ ಇದ್ದರೂ ಕೂಡ ತೇವಾಂಶ ಕೊರತೆ ಕಂಡು ಬರುತ್ತಿಲ್ಲ. ಕಾರ್ಯಸೂಚಿಗಳು ಪ್ರಕಾರ, ಮಧ್ಯಮ ಬರಕ್ಕೆ ಕೇಂದ್ರ ಸರ್ಕಾರ ಪರಿಹಾರ ಕೊಡಬಹುದು ಅಥವಾ ಇಲ್ಲದೇ ಇರಬಹುದು. ಬರ ಘೋಷಣೆ ಮನವಿಗೆ ಎಲ್ಲ ಸಿದ್ದತೆ ಮಾಡಿಕೊಂಡಿದ್ದೇವೆ. ಎಲ್ಲ ಬರ ಪೀಡಿತ ತಾಲೂಕುಗಳಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲು ಸೂಚನೆ ನೀಡಿದ್ದೇವೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದರು.
ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಬರ ಪಟ್ಟಿಗೆ ಕರ್ನಾಟಕದ 62 ತಾಲೂಕುಗಳು ಸೇರ್ಪಡೆ: ಕೃಷ್ಣಭೈರೇಗೌಡ
ಈ ಮುಂಚೆ 113 ತಾಲೂಕುಗಳನ್ನು ಆಯ್ಕೆ ಮಾಡಿಕೊಂಡು ಬೆಳೆ ಸಮೀಕ್ಷೆಗೆ ಆದೇಶ ನೀಡಲಾಗಿತ್ತು. 62 ತಾಲೂಕುಗಳಲ್ಲಿ ಬರಕ್ಕೆ ಅರ್ಹ ವಿವರ ಬಂದಿತ್ತು. ಸಚಿವ ಸಂಪುಟದಲ್ಲೂ ವಿಸ್ರೃತ ಚರ್ಚೆಯಾಗಿತ್ತು. ಆಗ 62 ತಾಲೂಕುಗಳು ಮಾತ್ರವಲ್ಲ ಇನ್ನೂ ಹೆಚ್ಚಿನ ತಾಲೂಕುಗಳಲ್ಲಿ ಬರ ಸ್ಥಿತಿ ಇದೆ ಎಂದು ಚರ್ಚೆಯಾಗಿತ್ತು. ಹೀಗಾಗಿ ಉಳಿದ 134 ತಾಲೂಕುಗಳಲ್ಲಿ ಸಮೀಕ್ಷೆ ಮಾಡಲು ಆದೇಶಿಸಲಾಗಿತ್ತು.
ಬೆಳೆ ಬೆಳೆದು ಬದುಕು ಸಾಗಿಸಬೇಕಿದ್ದ ಅನ್ನದಾತ ಬರಡು ಭೂಮಿಯಲ್ಲಿ ಆಕಾಶ ನೋಡುತ್ತಾ ಕುಳಿತುಕೊಳ್ಳುವ ಭೀಕರ ಪರಿಸ್ಥಿತಿ ಎದುರಾಗಿದೆ. ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಎಲ್ಲಾ ಜಿಲ್ಲೆಯಲ್ಲೂ ಬರದ ಆರ್ತನಾದ ಕೇಳಿಬರುತ್ತಿದೆ. ಸಾಲಸೋಲ ಮಾಡಿ ಬೆವರು ಸುರಿಸಿ ಬಿತ್ತನೆ ಮಾಡಿದ್ದ ಬೆಳೆಯನ್ನ ಬಿಸಿಲಿನ ತಾಪಕ್ಕೆ ಒಣಗಿಹೋಗುತ್ತಿರುವುದನ್ನು ಕಂಡ ರೈತರ ಮೊಗದಲ್ಲಿ ಆತಂಕದ ಛಾಯೆ ಮೂಡಿದೆ. ಕೇಂದ್ರ ಬರ ಅಧ್ಯಯನ ಕಾಟಾಚರಕ್ಕೆ ಆಗದೆ ರೈತರ ನೈಜ ಪರಿಸ್ಥಿಯಿಯನ್ನು ಅರಿತು ಪರಿಹಾರ ಹಾಗೂ ಬೆಳೆವಿಮೆಯನ್ನು ರೈತರಿಗೆ ತಲುಪಿಸುವ ಕೆಲಸ ಹಾಗಬೇಕಿದೆ.
“ರಾಜ್ಯದ ಬರ ಅಧ್ಯಯನಕ್ಕೆ ಕೇಂದ್ರದ ಮೂರು ತಂಡ.”
ಕಲ್ಬುರ್ಗಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿಭಾಗದ 7 ಜಿಲ್ಲೆಗಳಲ್ಲಿನ ಕೃಷಿ ಹಾಗೂ ಜಲಾನಯನ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.
ರಾಜ್ಯದಲ್ಲಿನ ಬರ ಅಧ್ಯಯನಕ್ಕೆ ಈವಾರದಲ್ಲಿ ಕೇಂದ್ರದಿಂದ ಮೂರು ತಂಡಗಳು ಆಗಮಿಸುತ್ತಿದ್ದು. ರಾಜ್ಯದಲ್ಲಿ ಒಟ್ಟು 40 ಲಕ್ಷ ಹೆಕ್ಟೇರ್ ಕೃಷಿ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಅಂದಾಜು 28000 ಸಾವಿರ ಕೋಟಿ ರೂ ನಷ್ಟ ಸಂಭವಿಸಿದೆ.
2023ರ ಮುಂಗಾರಿನಲ್ಲಿ 111ಲಕ್ಷ ಟನ್ ಆಹಾರ ಧಾನ್ಯಗಳಲ್ಲಿ ಉತ್ಪಾದನೆ ಗುರಿ ಹೊಂದಲಾಗಿತ್ತು ಬರಗಾಲದಿಂದಾಗಿ 58 ಲಕ್ಷ ಟನ್ ಉತ್ಪಾದನಾ ಹಾನಿ ಅಂದಾಜಿಸಲಾಗಿದೆ.
ರಾಜ್ಯದ 31 ಜಿಲ್ಲೆಗಳ 161 ತಾಲ್ಲೂಕುಗಳು ತೀವ್ರ ಹಾಗೂ 34 ತಾಲ್ಲೂಕುಗಳು ಸಾಧಾರಣ ಬರ ಎಂದು ಗುರುತಿಸಲಾಗಿದ್ದು ಒಟ್ಟಾರೆ 195 ತಾಲ್ಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲಾಗಿದೆ ಕೇಂದ್ರ ತಂಡ ಬರ ಪರಿಶೀಲನೆ ನಡೆಸಿ ವರದಿ ನೀಡಲಿವೆ.
ಬರದಿಂದ ಬಿತ್ತನಗೆ ಅಡ್ಡಿಯಾಗಿರುವ ರೈತರಿಗೆ 48 ಕೋಟಿ ರೂಪಾಯಿ ಪರಿಹಾರ ವಿತರಿಸಲಾಗುವುದು.
‘ನೆಟೆ ರೋಗ ಪರಿಹಾರ’ ಸಂಕಷ್ಟಕ್ಕೆ ಸಿಲಿಕಿದ ರೈತರಿಗೆ ಒಟ್ಟಾರೆ 224 ಕೋಟಿ ರೂ ಪರಿಹಾರ ಮಂಜೂರು ಮಾಡಿದ್ದು, 2 ಹಂತಗಳಲ್ಲಿ ಈವರೆಗೆ 148 ಕೋಟಿ ಬಿಡುಗಡೆ. ಮಾಡಲಾಗಿದೆ
ಕಲಬುರಗಿ ಜಿಲ್ಲೆಯ 1.58ಲಕ್ಷ ರೈತರಿಗೆ ಒಟ್ಟು 116 ಕೋಟಿ ರೂ ಪರಿಹಾರ ಒದಗಿಸಲಾಗಿದೆ.
ರಾಜ್ಯದಲ್ಲಿ ಜುಲೈನಲ್ಲಿ ಶೇ 29 ಅಧಿಕ ಮಳೆಯಾದರೂ
ಆಗಸ್ಟ್‌ನಲ್ಲಿ ಶೇ 73 ಕೊರತೆಯಾಗಿದೆ. ಹಾಗಾಗಿ ಬೆಳೆ ನಷ್ಟ ಹೆಚ್ಚಾಗಿದ್ದು. ಕಲಬುರಗಿ ಜಿಲ್ಲೆಯಲ್ಲಿ ಮಳೆಯ ಕೊರತೆ ಕೇವಲ 5% ಆದರೆ ಸಕಾಲದಲ್ಲಿ ಮಳೆಯಾಗದ ಕಾರಣ ಬೆಳೆ ಹಾನಿಯಾಗಿದ್ದು ಜಿಲ್ಲೆಯ 11 ತಾಲ್ಲೂಕುಗಳು ಬರ ಪೀಡಿತ ಎಂದು ಘೋಷಣೆ ಮಾಡಲಾಗಿದೆ.
‘ಕೃಷಿ ಭಾಗ್ಯ’ ಯೋಜನೆಯನ್ನು ಈ ವರ್ಷ ಪುನಾರಂಂಭಿಸಿದ್ದು, ಇಲಾಖೆಯಿಂದ 100 ಕೋಟಿ ಅನುದಾನ ದೊರೆಯಲಿದ್ದು, ಮುಂದಿನ ವರ್ಷದಿಂದ ಹೆಚ್ಚಿನ ಅನುದಾನ ಮೀಸಲಿರಿಸಲಾಗುವುದು ಎಂಬುದನ್ನು ತಿಳಿಸಿದೆ.
ನವೋದ್ಯಮ ಯೋಜನೆಯಡಿ ಹೊಸ ಏಫ್ ಪಿ ಒ ಗಳಿಗೆ 5 ರಿಂದ 20 ಲಕ್ಷ ರೂಪಾಯಿವರೆಗೆ ಸಾಲದ ನೆರವನ್ನು 20 – 50 ಲಕ್ಷಗಳಿಗೆ ಏರಿಕೆ ಮಾಡಲಾಗಿದೆ. ಇದಕ್ಕಾಗಿ 10 ಕೋಟಿ ಮೀಸಲಿರಿಸಾಲಾಗಿದೆ.
ಬೃಹತ್ ಕಟಾವ್ ಹಾರ್ವೆಸ್ಟರ್ ಹಬ್ ಸ್ಥಾಪನೆಗೆ 50 ಕೋಟಿ ರೂಪಾಯಿ ಮೀಸಲು 100 ಹಬ್ ಸ್ಥಾಪನೆಯಾದ ಮಾಡಲಾಗುವುದು.
0 Comments