ಚಿತ್ರದುರ್ಗ
ಚಿತ್ರದುರ್ಗ ಜಿಲ್ಲೆಯ ಕೇಂದ್ರ ಸಹಕಾರ ಬ್ಯಾಂಕ್ ನಿಂದ ಜಿಲ್ಲೆಯ ಜನರೊಂದಿಗೆ ಉತ್ತಮ ಸಂಪರ್ಕ ಹಾಗೂ ಸಾರ್ವಜನಿಕರಿಗೆ ಉತ್ತಮ ಯೋಜನೆಗಳನ್ನು ರೂಪಿಸಿರುವುದಲ್ಲದೆ ಅತ್ಯುತ್ತಮ ಕಾರ್ಯವೈಖರಿಯಿಂದ ಕೆಲಸ ನಿರ್ವಹಿಸುವ ಮೂಲಕ ಈ ನಮ್ಮ ದೇಶದಲ್ಲಿ ಎರಡನೇ ಅತ್ಯುತ್ತಮ ಬ್ಯಾಂಕ್ ಎಂಬ ಪ್ರಶಸ್ತಿಗೆ ಪಾತ್ರವಾಗಿದೆ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಡಿಸಿಸಿ ಬ್ಯಾಂಕ್ ನ ಅಧ್ಯಕ್ಷರಾದ ಡಿ.ಸುಧಾಕರ್ ಮಾಧ್ಯಮಗಳಿಗೆ ತಿಳಿಸಿದರು.
ನಗರದ ಡಿಸಿಸಿ ಬ್ಯಾಂಕ್ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಆವರು ನಮ್ಮ ಬ್ಯಾಂಕ್ ದೇಶದಲ್ಲೇ ಎರಡನೇ ಅತ್ಯುತ್ತಮ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ನ್ಯಾಷನಲ್ ಫೆಡರೇಷನ್ ಆಫ್ ಸ್ಟೇಟ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಮುಂಬೈ ವತಿಯಿಂದ ರಾಷ್ಟ್ರ ಮಟ್ಟದ ಈ ಪ್ರಶಸ್ತಿಯನ್ನ ಪ್ರಧಾನ ಮಾಡಲಾಗಿದೆ, ಈ ಮೂಲಕ ನಮ್ಮ ಸಹಕಾರಿ ಬ್ಯಾಂಕ್ 2021-22ನೇ ಸಾಲಿನಲ್ಲಿ ದೇಶದಲ್ಲೇ ಎರಡನೇ ಸ್ಥಾನ ಗಳಿಸಿದೆ ಎಂದರಲ್ಲದೆ,
ಈ ದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ 351 ಡಿಸಿಸಿ ಬ್ಯಾಂಕ್ ಗಳ ಪೈಕಿ ನಮ್ಮ ಚಿತ್ರದುರ್ಗ ಕೇಂದ್ರ ಸಹಕಾರ ಬ್ಯಾಂಕ್ ಅನ್ನು ದೇಶದಲ್ಲೇ ಎರಡನೆಯ ಅತ್ಯುತ್ತಮ ಬ್ಯಾಂಕ್ ಎಂದು ಗುರುತಿಸಿ, ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಇದು ನಮ್ಮ ಜಿಲ್ಲೆಗೆ ಸಂದ ಗೌರವವಾಗಿದ್ದು, ಹೆಮ್ಮೆಪಡುವ ಸಂಗತಿಯಾಗಿದೆ ಎಂದರಲ್ಲದೆ,
ರಾಜಸ್ಥಾನದ ಜೈಪುರದಲ್ಲಿ ನಡೆದ ಸಮಾರಂಭದಲ್ಲಿ ಬ್ಯಾಂಕ್ ನ ಉಪಾಧ್ಯಕ್ಷರಾದ ಹೆಚ್.ಪಿ.ಮಂಜುನಾಥ್, ಮತ್ತು ವ್ಯವಸ್ಥಾಪಕ ನಿರ್ದೇಶಕ ಇಲ್ಯಾಸ್ ಉಲ್ಲಾ ಷರೀಫ್ ಈ ಪ್ರಶಸ್ತಿ ಹಾಗೂ ಪಾರಿತೋಷಕವನ್ನು ಸ್ವೀಕರಿಸಿದರು ಎಂಬುದಾಗಿ ಸಚಿವರಾದ ಡಿ.ಸುಧಾಕರ್ ರವರು ಮಾಧ್ಯಮಗಳೊಂದಿಗೆ ಮಾತನಾಡಿ ಸಂತಸ ಹಂಚಿಕೊಂಡರು.
ಚಿತ್ರದುರ್ಗ ಡಿಸಿಸಿ ಬ್ಯಾಂಕ್ ಗೆ ದೇಶದಲ್ಲಿಯೇ 2 ನೇ ಸ್ಥಾನ ಸಿಕ್ಕಿದೆ : ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಪ್ರಶಂಸೆ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments