ಚಿತ್ರದುರ್ಗ ನಗರ ಪ್ರದೇಶದಲ್ಲಿ ತಂಬಾಕು ಕಾರ್ಯಾಚರಣೆ

by | 13/10/23 | ಕಾನೂನು

ಚಿತ್ರದುರ್ಗ ಅ.13:
ಕೋಟ್ಪಾ-2003ರ ಕಾಯ್ದೆಯ ಕುರಿತು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಶುಕ್ರವಾರ ಚಿತ್ರದುರ್ಗ ನಗರ ಪ್ರದೇಶಗಳಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ತಂಬಾಕು ತನಿಖಾ ತಂಡವು ತಂಬಾಕು ಉತ್ಪನ್ನಗಳ ಮಾರಾಟಗಾರರ ಅಂಗಡಿಗಳಿಗೆ ಭೇಟಿ ನೀಡಿ ದಾಳಿ ನಡೆಸಿ ದಂಡ ವಿಧಿಸಿದೆ.
ಜಿಲ್ಲೆಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್, ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿ ಡಾ.ಚಂದ್ರಶೇಖರ್ ಕಂಬಾಳಿಮಠ ಮಾರ್ಗದರ್ಶನದಲ್ಲಿ ಸಾರ್ವಜನಿಕರಲ್ಲಿ ಮತ್ತು ಅಂಗಡಿ ಮಾಲೀಕರಿಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡದಂತೆ, ಪಾನ್ ಮಸಾಲ, ತಂಬಾಕು ಜಗಿದು ಉಗಿಯದಂತೆ ಎಚ್ಚರಿಸಿ ಜಾಗೃತಿ ಮೂಡಿಸಲಾಯಿತು.
ಸಂಬಂಧಪಟ್ಟ ಸೆಕ್ಷನ್-4, 6ಎ ಮತ್ತು 6ಬಿ ಬೋರ್ಡ್ ಹಾಕಲು ಸೂಚಿಸಲಾಯಿತು ಮತ್ತು ಸೆಕ್ಷನ್-4 ಅಡಿಯಲ್ಲಿ 18 ಕೇಸು ದಾಖಲಿಸಿ ರೂ. 1500 ದಂಡವನ್ನು ಮತ್ತು ಸೆಕ್ಷನ್-6ಎ ಅಡಿಯಲ್ಲಿ 3 ಕೇಸು ದಾಖಲಿಸಿ ರೂ.600 ದಂಡ ವಸೂಲಿ ಮಾಡಲಾಯಿತು.
ತಂಬಾಕು ದಾಳಿಯಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ತನಿಖಾ ತಂಡದ ಅಧಿಕಾರಿಗಳಾದ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಬಿ.ಎಂ.ಪ್ರಭುದೇವ್, ತಂಬಾಕು ನಿಯಂತ್ರಣ ಕೋಶದ ಕೆ.ಎಂ.ತಿಪ್ಪೇಸ್ವಾಮಿ, ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ಟಿ.ರಘು, ಅಸಿಸ್ಟೆಂಟ್ ಸಬ್‍ಇನ್ಸ್‍ಪೆಕ್ಟರ್ ಟಿ.ಉಮಾಶಂಕರ್, ಹೆಡ್‍ಕಾನ್ಸ್‍ಟೇಬಲ್ ಸಿ.ಜಯರಾಮ್, ಆರೋಗ್ಯ ನಿರೀಕ್ಷಣಾಧಿಕಾರಿ ರಂಗಾರೆಡ್ಡಿ ಇದ್ದರು.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *