ಚಿತ್ರದುರ್ಗ ಮಠದ ಮಾಜಿ ಆಡಳಿತಾಧಿಕಾರಿಗೆ ನ್ಯಾಯಾಂಗ ಬಂಧನ

by | 14/11/22 | ಕರ್ನಾಟಕ, ಕ್ರೈಂ

ಚತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಸುಳ್ಳು ಹೇಳಿಕೆ ನೀಡುವಂತೆ ಪೋಕ್ಸೊ ಸಂತ್ರಸ್ತ ವಿದ್ಯಾರ್ಥಿನಿಯರಿಗೆ ಕುಮ್ಮಕ್ಕು ನೀಡಿದ ಆರೋಪದಡಿ ಬಂಧಿತರಾಗಿರುವ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಹಾಗೂ ಶಿಕ್ಷಕ ಬಸವರಾಜೇಂದ್ರ ಅವರಿಗೆ ಜಿಲ್ಲಾ ನ್ಯಾಯಾಲಯ ನ.28ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಪೊಲೀಸ್ ಕಸ್ಟಡಿ ಅವಧಿ ಮುಗಿದ ಪರಿಣಾಮ ತನಿಖಾ ತಂಡ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಸೋಮವಾರ ಹಾಜರುಪಡಿಸಿತು. ಪೊಲೀಸ್ ವಿಚಾರಣೆ ಪೂರ್ಣಗೊಂಡಿದ್ದರಿಂದ ಇಬ್ಬರು ಆರೋಪಿಗಳನ್ನು ನ್ಯಾಯಾಯಲ 14 ದಿನ ನ್ಯಾಯಾಂಗ ಬಂದನಕ್ಕೆ ಆದೇಶಿಸಿತು.

ಜಿಲ್ಲಾ ಕಾರಾಗೃಹದಲ್ಲಿ ಶಿವಮೂರ್ತಿ ಶರಣರು ಇರುವ ಕಾರಣಕ್ಕೆ ತಮ್ಮ ಕಕ್ಷಿದಾರರಿಗೆ ದಾವಣಗೆರೆ ಜಿಲ್ಲಾ ಕಾರಾಗೃಹ ನೀಡುವಂತೆ ಬಸವರಾಜನ್ ಪರ ವಕೀಲರು ಕೋರಿಕೊಂಡರು. ಈ ಕೋರಿಕೆಯನ್ನು ನ್ಯಾಯಾಲಯ ತಿರಸ್ಕರಿಸಿತು. ಪೋಕ್ಸೊ ಪ್ರಕರಣದಲ್ಲಿ ಬಂಧಿತರಾಗಿರುವ ಶಿವಮೂರ್ತಿ ಶರಣರು, ಮಠದ ವ್ಯವಸ್ಥಾಪಕರಾಗಿದ್ದ ಪರಮಶಿವಯ್ಯ ಹಾಗೂ ಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್ ಈಗ ಒಂದೇ ಜೈಲು ಸೇರಿದ್ದಾರೆ.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *