ಚಿತ್ರದುರ್ಗ ಲೋಕಸಭಾ ಕ್ಷೇತ್ರದ ನೂತನ ಸಂಸದ ಗೋವಿಂದ ಎಂ ಕಾರಜೋಳ ರವರಿಗೆ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಕಾರ್ಯಕರ್ತರು ಅದ್ದೂರಿ ಸ್ವಾಗತ.

by | 15/06/24 | ಸುದ್ದಿ


ನಾಯಕನಹಟ್ಟಿ:: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ಸದಾ ಸಿದ್ಧ ನಿರುತ್ತೇನೆ ನೂತನ ಸಂಸದ ಗೋವಿಂದ ಎಂ. ಕಾರಜೋಳ ಹೇಳಿದ್ದಾರೆ

ಅವರು ಗುರುವಾರ ಪಟ್ಟಣದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಹೊರಮಠದ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ
ಭಾರತೀಯ ಜನತಾ ಪಕ್ಷ ನಾಯಕನಹಟ್ಟಿ ಮಂಡಲ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ನೂತನ ಸಂಸದರಾದ ಶ್ರೀ ಗೋವಿಂದ ಕಾರಜೋಳ ರವರಿಂದ ಎನ್. ಡಿ. ಎ. ಕಾರ್ಯಕರ್ತರಿಗೆ ಮತ್ತು ಮತದಾರ ಪ್ರಭುಗಳಿಗೆ ಕೃತಜ್ಞತಾ ಸಮಾರಂಭದಲ್ಲಿ ಸಸಿಗೆ ನೀರು ಹಾಕಿ ಮಾತನಾಡಿದ ಅವರು. ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿ ಅಭ್ಯರ್ಥಿ ಸೋಲುವುದು ಖಚಿತ ಅಂತ ಅನೇಕ ಸಮೀಕ್ಷಾ ಕಾರರು ಮತ್ತು ಮಾಧ್ಯಮ ಮಿತ್ರರು ಚಿಂತನೆಯನ್ನು ಮಾಡಿದರು ಎಲ್ಲ ಸಮೀಕ್ಷೆಗಳ ಉಲ್ಟಾ ಹೊಡೆದು ನನ್ನ ಗೆಲುವಿಗೆ ಕಾರಣರಾದಂತಹ ಮತದಾರರು ಮತ್ತು ಬಿಜೆಪಿ ಜೆಡಿಎಸ್ ಮುಖಂಡರು ಕಾರ್ಯಕರ್ತರು ಅಭಿಮಾನಿಗಳಿಗೆ ನಾನು ಸದಾ ಚಿರೃಣಿಯಾಗಿರುತ್ತೇನೆ. ಮತ್ತು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು.

ಚಿತ್ರದುರ್ಗ ಬಿಜೆಪಿ ಜಿಲ್ಲಾಧ್ಯಕ್ಷ
ಎ.ಮುರುಳಿ ಮಾತನಾಡಿ ಮಾಡಿದಷ್ಟು ನೀರು ಭಿಕ್ಷೆ ಎಂಬ ವಾಕ್ಯವನ್ನು ನಾಡಿಗೆ ಸಾರಿದಂತಹ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಕೊಟ್ಟಂತವರ ನಮ್ಮ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ನೂತನ ಸಂಸದರಾದ ಗೋವಿಂದ ಎಂ ಕಾರಜೋಳ ರವರ ಗೆಲುವಾಗಿದೆ ಮುಂಬರುವ ಜಿಲ್ಲಾ ಪಂಚಾಯತಿ ಮತ್ತು ತಾಲ್ಲೂಕು ಪಂಚಾಯತಿ. ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಪ್ರತಿಯೊಬ್ಬ ಮುಖಂಡರು ಕಾರ್ಯಕರ್ತರು ಶ್ರಮವಹಿಸಿ ಕೆಲಸ ಮಾಡಬೇಕಾಗಿದೆ ಎಂದರು.

ಮಾಜಿ ಶಾಸಕ ನೇರಲಗುಂಟೆ ಎಸ್ ತಿಪ್ಪೇಸ್ವಾಮಿ ಮಾತನಾಡಿದರು. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ಗೋವಿಂದ ಎಂ ಕಾರಜೋಳ ರವರ ಗೆಲುವು ಜಿಲ್ಲೆಯ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರಿಗೆ ಮುಖಂಡರಿಗೆ ಆನೆ ಬಲ ಬಂದಂತಾಗಿದೆ. ಆದ್ದರಿಂದ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಪಕ್ಷ ಸಂಘಟನೆಯಲ್ಲಿ ತೊಡಗಿ ಮುಂಬರುವ ತಾಲೂಕು ಪಂಚಾಯಿತಿ ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವಂತಾಗಬೇಕು.
ರಾಜ್ಯ ಸರ್ಕಾರ ಜನರಿಗೆ ಬಿಟ್ಟಿ ಭಾಗ್ಯಗಳನ್ನು ನೀಡುವ ಮೂಲಕ ಅಧಿಕಾರದ ಗದ್ದಿಗೇರಿ ಒಂದು ವರ್ಷ ಕಳೆದರೂ ಯಾವುದೇ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮಗಳಲ್ಲಿ 187 ಕೋಟಿ ಹಣವನ್ನು ಲೋಕಸಭಾ ಚುನಾವಣೆಗೆ ಬಳಕೆ ಮಾಡಿಕೊಂಡಿದ್ದಾರೆ. ನುಡಿದಂತೆ ನಡೆಯುವ ಸರ್ಕಾರ ಎಸ್ಸಿ ಎಸ್ಟಿ ಅನುದಾನವನ್ನ ದುರುಪಯೋಗ ಮಾಡಿಕೊಂಡಿರುವುದು ಯಾವ ನ್ಯಾಯ ಕೂಡಲೆ ಸರ್ಕಾರ ಎಸ್ಸಿ ಎಸ್ಟಿ ಅನುದಾನವನ್ನ ವಾಪಸ್ ಕೊಡಬೇಕು ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಬೃಹತ್ ಪ್ರತಿಭಟನೆ ಮಾಡುವುದಾಗಿ ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಿದರು.

ಇದೇ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್, ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪರಾಜಿತ ಅಭ್ಯರ್ಥಿ ಟಿ ವೀರಭದ್ರಪ್ಪ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾಮದಾಸ್. ನಿಕಟ ಪೂರ್ವ ಅಧ್ಯಕ್ಷ ಎಂವೈಟಿ ಸ್ವಾಮಿ, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಓಬಳೇಶ್, ಮಲ್ಲೂರಹಳ್ಳಿ ಓ. ಮಂಜುನಾಥ್, ನಾಯಕನಹಟ್ಟಿ ಮಂಡಲ ಅಧ್ಯಕ್ಷ ಈ ರಾಮರೆಡ್ಡಿ, ಮಂಡಲ ಪ್ರಧಾನ ಕಾರ್ಯದರ್ಶಿ ಬೆಂಕಿ ಗೋವಿಂದಪ್ಪ, ಚನ್ನಗಾನಹಳ್ಳಿ ಮಲ್ಲೇಶ್, ಮೊಳಕಾಲ್ಮೂರು ಮಂಡಲ ಅಧ್ಯಕ್ಷ ಡಾ.ಮಂಜುನಾಥ್, ಎಸ್ ಟಿ ಮೋರ್ಚಾ ಜಿಲ್ಲಾಧ್ಯಕ್ಷ ಪಿ. ಶಿವಣ್ಣ, ಜೆಡಿಎಸ್ ಮೊಳಕಾಲ್ಮೂರು ತಾಲೂಕು ಅಧ್ಯಕ್ಷ ಡಿ.ಬಿ ಕರಿಬಸಪ್ಪ ಚೌಳಕೆರೆ,ಹೊನ್ನೂರ್ ಗೋವಿಂದಪ್ಪ, ಎಸ್ಸಿ ಮೋರ್ಚಾ ಮಂಡಲ ಅಧ್ಯಕ್ಷ ಟಿ ಶಿವದತ್ತ. ತಾರಕೇಶ್, ಹಿರೇಹಳ್ಳಿ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಡಿ ಎಚ್ ಪರಮೇಶ್ವರಪ್ಪ, ಗುಂತಕೋಲಮನಹಳ್ಳಿ ಜೆಸಿಬಿ ತಿಪ್ಪೇಸ್ವಾಮಿ, ಮಲ್ಲೂರಹಳ್ಳಿ ಮಲ್ಲಯ್ಯ, ಅಬ್ಬೇನಹಳ್ಳಿ ಎಂ. ಶಿವಪ್ರಕಾಶ್, ಅಬ್ಬೇನಹಳ್ಳಿ ಗ್ರಾ.ಪಂ ಸದಸ್ಯ ಮಾಜಿ ಅಧ್ಯಕ್ಷ ಬಿ ಶಂಕರ್ ಸ್ವಾಮಿ. ಇನ್ನೂ ಮುಂತಾದವರು ಇದ್ದರು

Latest News >>

ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು,ನಾವು ರೋಗಿಗಳ ಸೇವೆಮಾಡುವಲ್ಲಿ ದೇವರನ್ನ ಕಾಣಬೇಕು. ಬೆಂ.ಗ್ರಾ.ಕ್ಷೇತ್ರದಸಂಸದ ಡಾ.ಸಿ.ಎನ್.ಮಂಜುನಾಥ್

ತುಮಕೂರು : ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು ಸಾರ್ವಜನಿಕರು, ರೋಗಿಗಳು ನಮ್ಮನ್ನು ದೇವರಿಗೆ ಹೋಲಿಕೆ ಮಾಡುತ್ತಾರೆ. ನಾವು...

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page