ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸೋಲಿನ ಹೊಣೆಯನ್ನು ನಾನೇ ಹೊರುವೆ: ಪರಾಜಿತ ಅಭ್ಯರ್ಥಿ ಬಿ ಎನ್ ಚಂದ್ರಪ್ಪ 

by | 20/06/24 | ಸುದ್ದಿ

ಚಳ್ಳಕೆರೆ: ಚಿತ್ರದುರ್ಗ ಜಿಲ್ಲೆಯು ಕಳೆದ ಹತ್ತು ವರ್ಷಗಳಿಂದ ನನ್ನ ಕರ್ಮಭೂಮಿಯಾಗಿದ್ದು ಇಲ್ಲಿನ ಜನತೆ ಮನೆ ಮಗನಂತೆ ನೋಡಿದ್ದು ಒಂದು ಬಾರಿ ಸಂಸದನಾಗಿ ಆಯ್ಕೆಯಾಗಿ ಜನರ ಸೇವೆ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ ಇದಕ್ಕೆ ನನ್ನ ಜೀವನಪೂರ್ತಿ ಚಿರಋಣಿಯಾಗಿ ಇರುತ್ತೇನೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದೇನೆ ಇದು ನನ್ನ ಸೋಲಾಗಿದ್ದು ಪಕ್ಷದ ಯಾವುದೇ ಮುಖಂಡರನ್ನು ಕಾರ್ಯಕರ್ತರನ್ನು ಹೊಣೆ ಮಾಡಲು ಸಾಧ್ಯವಿಲ್ಲ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಬಿ ಎನ್ ಚಂದ್ರಪ್ಪ ತಿಳಿಸಿದರು. 

ನಗರದ ಚೇಂಬರ್ ಆಫ್ ಕಾಮರ್ಸ್ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಪಕ್ಷದ ಕಾರ್ಯಕರ್ತರಿಗೆ ಹಾಗೂ ಜನತೆಗೆ ಕೃತಜ್ಞತಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷ 2014 ರಿಂದ 2024ರ ವರೆಗೆ ಮೂರು ಬಾರಿ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಿ ನನ್ನನ್ನು ಬೆಂಬಲಿಸಿದೆ ಪಕ್ಷದ ಮುಖಂಡರು ಕಾರ್ಯಕರ್ತರು ಹಗಲಿರುಳು ಶ್ರಮಿಸಿ ಪಕ್ಷದ ಗೆಲುವಿಗಾಗಿ ಹೋರಾಟ ನಡೆಸಿದರು ಆದರೆ ಅದು ಸಾಧ್ಯವಾಗಲಿಲ್ಲ ಜಾತಿ ವ್ಯವಸ್ಥೆಯಿಂದ ನನಗೆ ಸೋಲಾಗಿರಬಹುದು ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಹೊಂದಾಣಿಕೆ ರಾಜಕಾರಣ ಇಲ್ಲಿ ಕೆಲಸ ಮಾಡಿದೆ ಕಾಂಗ್ರೆಸ್ ಪಕ್ಷವು ಸ್ವಾತಂತ್ರ್ಯ ಬಂದಾಗಿನಿಂದಲೂ ಇಂತಹ ಹಲವು ಸೋಲು ಗೆಲುವುಗಳನ್ನು ಕಂಡಿದೆ ಕಾಂಗ್ರೆಸ್ ಪಕ್ಷವು ಒಂದು ಸಮೂಹವಾಗಿದ್ದು ಪಕ್ಷದಲ್ಲಿ ಎಲ್ಲಾ ಕಾರ್ಯಕರ್ತರನ್ನು ಒಂದೇ ರೀತಿಯಲ್ಲಿ ನೋಡಲಾಗುತ್ತದೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ನಾನು ಸೋತಿರಬಹುದು ಆದರೆ ಚಳ್ಳಕೆರೆ ಕ್ಷೇತ್ರದಲ್ಲಿ ನಾನು ಗೆದ್ದಿದ್ದೇನೆ ತಾಲೂಕಿನ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಮತಗಳನ್ನು ನೀಡಿ ಕಾಂಗ್ರೆಸ್ ಪಕ್ಷದ ಪರವಾದ ನಿಲುವನ್ನು ಪ್ರದರ್ಶಿಸಿದ್ದಾರೆ ಚುನಾವಣಾ ಮತ ಎಣಿಕೆ ಪೂರ್ವದಲ್ಲಿ ಬಿಜೆಪಿ ಪಕ್ಷ ಚಿತ್ರದುರ್ಗ ಕ್ಷೇತ್ರದಲ್ಲಿ ಸೋಲನ್ನು ಒಪ್ಪಿಕೊಂಡಿತ್ತು ಆದರೆ ಕಾಂಗ್ರೆಸ್ ಪಕ್ಷಕ್ಕೆ ಸೋಲಾಗಿರುವುದು ನಂಬಲಾರದ ವಿಷಯವಾಗಿದೆ ಪಕ್ಷದ ಸೋಲಿಗೆ ವಿಮರ್ಶೆ ಮಾಡುವ ಅಗತ್ಯತೆ ಇಲ್ಲ ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಪಕ್ಷವನ್ನು ಬೂತ್ ಮಟ್ಟದಿಂದ ಸಂಘಟಿಸಿ ಗೆಲುವು ಸಾಧಿಸುವತ್ತ ಗಮನಹರಿಸೋಣ ಎಂದು ಕರೆ ನೀಡಿದರು. 


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಟಿ ರಘುಮೂರ್ತಿ ಮಾತನಾಡಿ ಕಾಂಗ್ರೆಸ್ ಪಕ್ಷ ಕಳೆದ ಲೋಕಸಭಾ ಚುನಾವಣೆಯಲ್ಲಿ ಸೋಲು ಕಾಣುತ್ತದೆ ಎಂದು ಯಾರು ಊಹಿಸಿರಲಿಲ್ಲ ಎಲ್ಲ ಸಮೀಕ್ಷೆಗಳಲ್ಲಿ ಚಿತ್ರದುರ್ಗ ಕ್ಷೇತ್ರ ಕಾಂಗ್ರೆಸ್ ಗೆಲ್ಲುತ್ತದೆ ಎಂದು ಹೇಳಿದ್ದವು ಆದರೆ ಅನಿವಾರ್ಯ ಕಾರಣಗಳಿಂದ ಕೆಲ ನಮ್ಮ ತಪ್ಪುಗಳಿಂದಲೂ ಸಹ ಸೋಲುಂಟಾಗಿರಬಹುದು ಚಂದ್ರಪ್ಪನವರಿಗೆ ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಉತ್ತಮ ಸ್ಥಾನಮಾನ ದೊರೆಯುವ ವಿಶ್ವಾಸವಿದ್ದು ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಶಾಸಕರು ಅವರ ಪರ ನಿಲ್ಲುತ್ತೇವೆ ಕಾಂಗ್ರೆಸ್ ಪಕ್ಷ ಕಾರ್ಯಕರ್ತರು ಸೋಲಿನಿಂದ ಹತಾಶರಾಗದೆ ಮುಂದಿನ ತಾಲೂಕು ಪಂಚಾಯಿತಿ ಜಿಲ್ಲಾ ಪಂಚಾಯತಿ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲಿ ಒಗ್ಗಟ್ಟಿನಿಂದ ಪಕ್ಷವನ್ನು ಗೆಲ್ಲಿಸುವತ್ತ ಗಮನಹರಿಸೋಣ ಎಂದು ತಿಳಿಸಿದರು. 

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ರವಿಕುಮಾರ್ ಹೆಚ್ ಎಸ್ ಸೈಯದ್ ಗದ್ದಿಗೆ ತಿಪ್ಪೇಸ್ವಾಮಿ ಸೇರಿದಂತೆ ಹಲವರು ಭಾವುಕನುಡಿಗಳನ್ನು ನುಡಿದರು. 


ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ತಾಜ್ ಪೀರ್ ತಾಲೂಕು ಅಧ್ಯಕ್ಷ ವೀರಭದ್ರಪ್ಪ  ಮುಖಂಡರಾದ ಸಿ ಟಿ ಶ್ರೀನಿವಾಸ್ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ರವಿಕುಮಾರ್ ಪ್ರಕಾಶ್ ಮೂರ್ತಿ ಬಾಬುರೆಡ್ಡಿ ನೇತಾಜಿ ಆರ್ ಪ್ರಸನ್ನ ತಿಪ್ಪಣ್ಣ ಮರಿಕುಂಟೆ ಕಂದಿಕೆರೆ ಸುರೇಶ್ ಬಾಬು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Latest News >>

ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು,ನಾವು ರೋಗಿಗಳ ಸೇವೆಮಾಡುವಲ್ಲಿ ದೇವರನ್ನ ಕಾಣಬೇಕು. ಬೆಂ.ಗ್ರಾ.ಕ್ಷೇತ್ರದಸಂಸದ ಡಾ.ಸಿ.ಎನ್.ಮಂಜುನಾಥ್

ತುಮಕೂರು : ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು ಸಾರ್ವಜನಿಕರು, ರೋಗಿಗಳು ನಮ್ಮನ್ನು ದೇವರಿಗೆ ಹೋಲಿಕೆ ಮಾಡುತ್ತಾರೆ. ನಾವು...

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page