ಚಿತ್ರದುರ್ಗ ಮಾ.17:
ಎಸ್‍ಎಸ್‍ಟಿ (ಸ್ಯಾಟಿಕ್ ಸರ್ವೆಲೆನ್ಸ್ ಟೀಂ) ಮತ್ತು ಎಫ್‍ಎಸ್‍ಟಿ (ಪ್ಲೈಯಿಂಗ್ ಸ್ಕ್ವಾಡ್) ತಂಡಗಳ ಸದಸ್ಯರು ತಪಾಸಣೆ ಮಾಡುವಾಗ ಸಾರ್ವಜನಿಕರೊಂದಿಗೆ ಗೌರವಯುತವಾಗಿ ನಡೆದುಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಚುನಾವಣಾ ತರಬೇತಿ ನಿರ್ವಹಣಾ ಕೋಶ ಇವರುಗಳ ಸಂಯುಕ್ತಾಶ್ರಯದಲ್ಲಿ ನಡೆದ ವಿಧಾನಸಭಾ ಸಾರ್ವತ್ರಿಕ ಚುನಾವಣಾ-2023ಕ್ಕೆ ಸಂಬಂಧಿಸಿದಂತೆ ಚುನಾವಣಾ ಮಾದರಿ ನೀತಿ ಸಂಹಿತೆ ಎರಡನೇ ಹಂತದ ಕಾರ್ಯಾಗಾರದಲ್ಲಿ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಅಬಕಾರಿ ಜಿಲ್ಲಾ ಅಧಿಕಾರಿ ಬಿ.ಮಾದೇಶ ಮಾತನಾಡಿ, ಮದ್ಯ ಮತ್ತು ಮಾದಕ ವಸ್ತುಗಳ ವಶಪಡಿಸುವ ವಿಧಾನ ಮತ್ತು ಪ್ರಮಾಣವನ್ನು ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ, ಸಂಪನ್ಮೂಲ ವ್ಯಕ್ತಿಗಳಾದ ನಾಗಭೂಷಣ್ ಅವರು ಚುನಾವಣಾ ಮಾದರಿ ನೀತಿ ಸಂಹಿತೆ ಸಂಬಂಧಿಸಿದ ತರಬೇತಿ ನೀಡಿದರು.
ಕಾರ್ಯಾಗಾರದಲ್ಲಿ ಡಯಟ್ ಹಿರಿಯ ಉಪನ್ಯಾಸಕರು ಹಾಗೂ ಜಿಲ್ಲಾ ಚುನಾವಣಾ ತರಬೇತಿ ನಿರ್ವಹಣಾ ಕೋಶದ ನೋಡಲ್ ಅಧಿಕಾರಿ ಅಯುಬ್ ಸೊರಬ, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಎಸ್‍ಎಸ್‍ಟಿ ಮತ್ತು ಎಫ್‍ಎಸ್‍ಟಿ ತಂಡಗಳು ಭಾಗವಹಿಸಿದ್ದರು.
ಚುನಾವಣಾ ಮಾದರಿ ನೀತಿ ಸಂಹಿತೆ ಕಾರ್ಯಾಗಾರ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments