ಚುನಾವಣೆ ನಿಮಿತ್ತ ಮತದಾನ ದಿನದಂದು ಅಗತ್ಯ ಸೇವೆಗಳಲ್ಲಿ ಕಾರ್ಯನಿರ್ವಹಿಸುವ ನೌಕರರುಗಳಿಗೆ ಅಂಚೆಮತದಾನದಮೂಲಕ ಮತದಾನಕ್ಕೆಅವಕಾಶ

by | 20/04/24 | ಲೋಕಸಭಾ ಚುನಾವಣೆ-2024


ಚಿತ್ರದುರ್ಗ:
ಲೋಕಸಭಾ ಸಾರ್ವತ್ರಿಕ ಚುನಾವಣೆ ಕರ್ತವ್ಯ ನಿಮಿತ್ತ ಮತದಾನ ದಿನದಂದು ಗೈರು ಹಾಜರಿ ಹಾಗೂ ಅಗತ್ಯ ಸೇವೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರು ಪೋಸ್ಟಲ್ ವೋಟಿಂಗ್ ಸೆಂಟರ್ ನಲ್ಲಿ ಮತಚಲಾಯಿಸಲು ಅವಕಾಶ ಕಲ್ಪಿಸಿದ್ದು, ಮೊದಲ ದಿನವಾದ ಶುಕ್ರವಾರ ಜಿಲ್ಲೆಯ 99 ಅಗತ್ಯ ಸೇವಾ ಮತದಾರರು ಮತ ಚಲಾಯಿಸಿದ್ದಾರೆ.
ಅಗತ್ಯ ಸೇವೆಯಲ್ಲಿ ಕರ್ತವ್ಯ ನಿರತರಾಗಿರುವ ವಿವಿಧ ಕ್ಷೇತ್ರಗಳ ಸಿಬ್ಬಂದಿಗಳು ಮತದಾನದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಚುನಾವಣಾ ಆಯೋಗವು ಮತದಾನ ಮಾಡಲು ವಿಶೇಷ ಸೌಲಭ್ಯ ಕಲ್ಪಿಸಿದ್ದು ಮೊದಲ ದಿನ ಶುಕ್ರವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೆಎಸ್ಆರ್ ಟಿಸಿ, ಪೋಲೀಸ್ ಇಲಾಖೆ, ಆಕಾಶವಾಣಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಪತ್ರಕರ್ತರು ಸೇರಿದಂತೆ ಅಗತ್ಯ ಸೇವೆಗಳ ಕ್ಷೇತ್ರದ 99 ಮತದಾರರು ಮತ ಚಲಾಯಿಸಿದರು.
ಚಿತ್ರದುರ್ಗ ನಗರದ ತಹಶೀಲ್ದಾರ್ ಕಚೇರಿಯಲ್ಲಿರುವ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾ ಅಧಿಕಾರಿಗಳ ಕಚೇರಿಯಲ್ಲಿ ಸ್ಥಾಪಿಸಲಾಗಿರುವ ಅಂಚೆ ಮತದಾನ ಕೇಂದ್ರಕ್ಕೆ ( ಪೋಸ್ಟಲ್ ವೋಟಿಂಗ್ ಸೆಂಟರ್) ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಸಂಬಂಧ ಕರ್ತವ್ಯ ನಿರತ ಗೈರು ಹಾಜರಿ ಮತದಾರರು ಆಗಮಿಸಿ ತಮ್ಮ ಮತ ಚಲಾಯಿಸಬಹುದು. ಅಗತ್ಯ ಸೇವೆಗಳ ನೌಕರರು ಮತ ಚಲಾಯಿಸಲು ಏಪ್ರಿಲ್ 21 ರವರೆಗೆ ಅವಕಾಶ ಕಲ್ಪಿಸಲಾಗಿದೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page