ಹುಬ್ಬಳ್ಳಿ ಮಾ.4. ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಮಾಡಾಳ್ ಹಾಗೂ ಅವರ ಪುತ್ರ ಪ್ರಶಾಂತ್ ಮನೆಯಲ್ಲಿ ಕೋಟ್ಯಂತರ ರೂ. ನಗದು ಪತ್ತೆಯಾದ ಬೆನ್ನಲ್ಲೇ ಇದೀಗ ಹುಬ್ಬಳ್ಳಿಯ ಉದ್ಯಮಿಯೊಬ್ಬರ ಮನೆಯಲ್ಲಿ 3 ಕೋಟಿ ರೂ. ನಗದು ಸಿಕ್ಕಿದೆ. ಉದ್ಯಮಿ ರಮೇಶ್ ಬೊಣಗೇರಿ ಎಂಬವರ ಮನೆಗೆ ಶನಿವಾರ ಸಿಸಿಬಿ ಡಿವೈಎಸ್ಪಿ ನಾರಾಯಣ ಬರಮನಿ ನೇತೃತ್ವದಲ್ಲಿ ಹುಬ್ಬಳ್ಳಿ-ಧಾರವಾಡ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಗದನ್ನು ವಶಪಡಿಸಿಕೊಂಡಿದ್ದಾರೆ. ಈ ವಿಚಾರವಾಗಿ ಇದೀಗ ಅಶೋಕ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಮೇಶ್ ಬೊಣಗೇರಿ ಕೃಷಿ ಇಲಾಖೆಗೆ ರಾಸಾಯನಿಕ ಸರಬರಾಜು ಮಾಡುತ್ತಿದ್ದ ಉದ್ಯಮಿಯಾಗಿದ್ದಾರೆ.
ವಿರೂಪಾಕ್ಷಪ್ಪ ಮಾಡಾಳ್ ಹಾಗೂ ಪ್ರಶಾಂತ್ ನಿವಾಸಗಳಲ್ಲಿ ಕೋಟ್ಯಂತರ ರೂ. ನಗದು, ಚಿನ್ನಾಭರಣ ಪತ್ತೆಯಾಗಿರುವುದು ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜೀನಾಮೆಗೆ ಪ್ರತಿಪಕ್ಷ ಕಾಂಗ್ರೆಸ್ ಆಗ್ರಹಿಸಿದೆ.
ಈ ಮಧ್ಯೆ, ಶಾಸಕ ಮಾಡಾಳ್ ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆಯಾಗಿರುವುದು ಬಿಜೆಪಿ ಸರ್ಕಾರ 40% ಭ್ರಷ್ಟಾಚಾರದಲ್ಲಿ ಮುಳುಗಿರುವುದನ್ನು ತೋರಿಸಿಕೊಟ್ಟಿದೆ ಎಂದು ಕಾಂಗ್ರೆಸ್ ನಾಯಕ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್ ಟೀಕಿಸಿದ್ದಾರೆ. ರಾಜ್ಯದಲ್ಲಿ ಬಹುತೇಕ ಎಲ್ಲಾ ಸಚಿವರು ಕೂಡ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಚುನಾವಣೆ ಸಮೀಪದಲ್ಲಿ ಸಿಸಿಬಿ ಹಾಗೂ ಲೋಕಾಯುಕ್ತ ದಾಳಿಯಿಂದ ಕಂತೆ ಕಂತೆ ಹಣ ಪತ್ತೆ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments