ಜಂಟಿಖಾತೆಯಲ್ಲಿದ್ದ ನಿವೇಶನವನ್ನು ಅಕ್ರಮವಾಗಿ ಇ-ಸ್ವತ್ತು ಮಾಡಿದ ಪಿಡಿಒ ಅಮಾನತು

by | 26/09/23 | ಅಮಾನತು


ಜಿಪಂ ಸಿಇಒ ಎಸ್.ಜೆ. ಸೋಮಶೇಖರ್
ಹಿರಿಯೂರು ಸೆ. 26 :ಜಂಟಿ ಖಾತೆಯಲ್ಲಿದ್ದ ನಿವೇಶನಗಳನ್ನು ಅಕ್ರಮವಾಗಿ ಇತರೆ ವ್ಯಕ್ತಿಯೊಬ್ಬರಿಗೆ ಖಾತೆ ಮಾಡಿಕೊಟ್ಟು, ಇ- ಖಾತೆ ಮಾಡಿದ ಹಿರಿಯೂರು ತಾಲ್ಲೂಕು ಯರಬಳ್ಳಿ ಗ್ರಾಮ ಪಂಚಾಯತ್ ಪಿ ಡಿಒ ಬಸವರಾಜು ಎಸ್. ಅವರನ್ನು
ಅಮಾನತುಗೊಳಿಸಿ ಜಿಲ್ಲಾ ಪಂಚಾಯತ್ ಸಿಇಒ
ಎಸ್.ಜೆ. ಸೋಮಶೇಖರ್ ಆದೇಶ
ಹೊರಡಿಸಿದ್ದಾರೆ. ತಿಪ್ಪಮ್ಮ ಇವರ ಹೆಸರಿನಲ್ಲಿನ ಸೈಟ್ ನಂ. 31ಹಾಗೂ 32 ಸ್ವತ್ತನ್ನು ವೈನ್ ಶಾಪ್ ಅಂಗಡಿ ವ್ಯವಹಾರ ನಡೆಸುವುದಕ್ಕಾಗಿ ಯರಬಳ್ಳಿ ಗ್ರಾಮ ಪಂಚಾಯತ್‌ನ ಕಂದಿಕೆರೆ ಗ್ರಾಮದ ಕೆ.ವಿ. ಉಮಾದೇವಿ ಹಾಗೂ ಆರ್.ಹೊರಕೇರಪ್ಪ ಅವರು ಹಿರಿಯೂರಿನ ಉಪನೊಂದಣಿ ಕಚೇರಿಯಲ್ಲಿ ಕಳೆದ 2017
ರ ಫೆಬ್ರವರಿ 13 ರಂದು ಜಂಟಿ ಖಾತೆಯಾಗಿ
ನೊಂದಣಿ ಮಾಡಿಸಿಕೊಂಡಿದ್ದರು. ಆದರೆ‌ ಇದನ್ನು ಅಕ್ರಮವಾಗಿ ನಕಲಿ ಮತ್ತು‌ ಪೋರ್ಜರಿ ದಾಖಲೆಗಳನ್ನು ಸೃಷ್ಟಿಸಿಕೊಂಡು,ಆರ್. ಹೊರಕೇರಪ್ಪ ಇವರ ಖಾತೆಗೆ ಮಾಡಿ,ಅಕ್ರಮವಾಗಿ ಮತ್ತು ಕಾನೂನು ಬಾಹಿರವಾಗಿ
ಇ-ಸ್ವತ್ತು ಮಾಡಿಕೊಟ್ಟು ಅಧಿಕಾರದದುರುಪಯೋಗ ಮಾಡಿರುತ್ತಾರೆ ಎಂಬುದಾಗಿ ದೂರು ಬಂದ ಹಿನ್ನೆಲೆಯಲ್ಲಿ ಹಿರಿಯೂರು ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು ಪರಿಶೀಲಿಸಿ ಕ್ರಮ ಕೈಗೊಂಡಿದ್ದರು, ಈ ಬಗ್ಗೆ ಸ್ಥಳ ತನಿಖೆ ನಡೆಸಿ ವರದಿ ಸಲ್ಲಿಸುವಂತೆ
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಯವರಿಗೆ ಆದೇಶಿಸಲಾಗಿತ್ತು. ಅದರನ್ವಯ ಜಿ.ಪಂ. ಉಪಕಾರ್ಯದರ್ಶಿ‌ಅವರು ಸಲ್ಲಿಸಿರುವ ವರದಿ ಆಧಾರದಲ್ಲಿ,ಯರಬಳ್ಳಿ ಗ್ರಾಮ ಪಂಚಾಯತ್ ಪಿಡಿಒ
ಬಸವರಾಜು ಎಸ್. ಅವರು ಜವಾಬ್ದಾರಿಯುತ ಸರ್ಕಾರಿ ಅಧಿಕಾರಿಯಾಗಿ, ಅಕ್ರಮವಾಗಿ, ಕಾನೂನು ಬಾಹಿರವಾಗಿ ಇ-ಸ್ವತ್ತುಗಳನ್ನು ಮಾಡಿ, ಕರ್ತವ್ಯ ಲೋಪ ಎಸಗಿದ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆ
ಕಾಯ್ದಿರಿಸಿ, ಇವರನ್ನು ತಕ್ಷಣದಿಂದ ಜಾಣ
ಬರುವಂತೆ ಸೇವೆಯಿಂದ. ಅಮಾನತುಗೊಳಿಸಲಾಗಿದೆ ಎಂದು ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ
ಅಧಿಕಾರಿ ಎಸ್.ಜೆ. ಸೋಮಶೇಖರ್ ಅವರು
ಆದೇಶದಲ್ಲಿ ತಿಳಿಸಿದ್ದಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page