ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಲ್ಲಿಕೆಯಾಗಿರುವ ಸಾರ್ವಜನಿಕರ ಅರ್ಜಿಗಳನ್ನು ತಿಂಗಳ ಒಳಗೆ ವಿಲೇವಾರಿ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್.

by | 06/01/24 | ಸುದ್ದಿ


ಚಳ್ಳಕೆರೆ ಜನಧ್ವನಿ ವಾರ್ತೆ ಜ.6 ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಲ್ಲಿಕೆಯಾಗಿರುವ ಸಾರ್ವಜನಿಕರ ಅರ್ಜಿಗಳನ್ನು ತಿಂಗಳ ಒಳಗೆ ವಿಲೇವಾರಿ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಶ್ರೀಗುರುರಾಘವೇಂದ್ರ ಕಲ್ಯಾಣಮಂಟದಲ್ಲಿ ಮುಖ್ಯ ಮಂತ್ರಿಗಳ ನಿರ್ಶೇನದ ಮೇರೆಗೆ ಜಿಲ್ಲಾಡಳಿತವತಿಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಜನತಾ ದರ್ಶಜನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಜನತಾ ದರ್ಶನ ಕಾರ್ಯಕ್ರಮ ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾಗಿದೆ. ಪ್ರತಿ ತಿಂಗಳು ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ಜನತಾ ದರ್ಶನ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಜನಸಾಮಾನ್ಯರು ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಇದು ಉತ್ತಮ ಕಾರ್ಯಕ್ರಮ. ಸರ್ಕಾರದ ಪ್ರತಿ ಯೋಜನೆಯೂ ಫಲಾನುಭವಿಗಳಿಗೆ ತಲುಪಬೇಕು. ಸರ್ಕಾರದ ಸೌಲಭ್ಯಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ. ಅಧಿಕಾರಿಗಳು ಉದಾಸೀನ ಮಾಡದೆ ಸಾರ್ವಜನಿಕರ ಕೆಲಸ ಮಾಡಬೇಕು’ ಎಂದು ಸೂಚಿಸಿದರು.


ಅಧಿಕಾರಕ್ಕೆ ಬರುವ ಮುನ್ನ ಘೋಷಿಸಿದ 5 ಗ್ಯಾರೆಂಟ್ ಯೋಜನೆಗಳಲ್ಲಿ ನಾಲ್ಕು ಯೋಜನೆಗಳನ್ನು ನೀಡಲಾಗುತ್ತಿದೆ ಮತ್ತೊಂದು ಯುವನ ನಿಧಿ ಗ್ಯಾರೆಂಟ್ ಯೋಜನೆ ಜ.12 ರಂದು ಉದ್ಘಾಟನೆಗೊಳ್ಳಲಿಗೆ ಈಗಾಗಲೆ ಶಕ್ತಿಯೋಜನೆಯಡಿಯಲ್ಲಿ ಮಹಿಳೆಯರು ಸಾರಿಗೆ ಬಸ್ ನಲ್ಲಿ ಪ್ರಯಾಣ ಮಾಡುತ್ತಿದ್ದು ಗಂಡಸರಿಗೆ ಸೀಟ್ ಸಿಗುತ್ತಲ್ಲ. ಹಾಗೂ ಮಹಿಳೆಯರು ಸೀಟಿಗಾಗಿ ಪೈಪೋಟಿ ಮೇಲೆ ಬಸ್ ಹತ್ತಲು ಕಿಟಕಿ,ಬಾಗಿಲು ಹೊಡೆದು ಹಾಕಿರುವ ನಿರ್ಶನಗಳಿವೆ ಇಂತಹ ಘಟನೆಗಳನ್ನು ಮಹಿಳೆಯರು ಮಾಡಬಾರದು ಎಂದು ಹಾಸ್ಯ ಚಟಾಕಿ ಮೂಲಕ ಮಹಿಳೆಯರ ಗಮನ ಸೆಳೆದರು.
ಜಿಲ್ಲೆಯಲ್ಲಿ ಅತಿ ಹೆಚ್ಚು ಜನಸಂಪರ್ಕ ಸಭೆ, ಕುಂದುಕೊರತೆಗಳನ್ನು ಮಾಡಿದ ,ಮಾಡಿದ ಏಕೈಕ ಶಾಸಕ ಎಂದ ರೆ ಅದು ಟಿ.ರಘುಮೂರ್ತಿ ಎಂದು ಶ್ಲಾಘೀಸಿದರು.
ಶಾಸಕ ಟಿ.ರಘುಮೂರ್ತಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿ ಮೊಳಕಾಮ್ಮೂರು ಹಾಗೂ ಚಳ್ಳಕೆರೆ ತಾಲೂಕುಗಳು ಹತಿ ಕಡಮೆ ಮಳೆ ಬೀಳುವ ಪ್ರದೇಶ ಹಾಗೂ ಹಿಂದುಳಿತ ಕುಟುಂಬಗಳು ವಾಸ ಮಾಡುತ್ತಿದ್ದು ರೈತರು ಸಂಕಷ್ಟದಲ್ಲಿದ್ದಾರೆ ಬೆಳೆ ವಿಮೆ ಬೆಳೆ ಪರಿಹಾರ ವಿತರಣೆಯಲ್ಲಿ ಅನ್ಯಾಯ ಮಾಡಿದ ಅಧಿಕಾರಿಗಳ ವಿರುದ್ದ ಕ್ರಮಕೈಗೊಳ್ಳಬೇಕು.
ನಗಸಭೆ ಸದಸ್ಯರು ಆಯ್ಕೆಯಾದರೂ ಅಧಿಕಾರವಿಲ್ಲ ಎಂಬಂತಾಗಿದ್ದು ನಗರ ಪ್ರದೇಶದಲ್ಲಿನ ಸಮಸ್ಯೆಗಳ ಬಗ್ಗೆ ಕೇಳುವರಿಲ್ಲ ಎಂಬಂತಾಗಿದ್ದು ಕೂಡಲೆ ಜಿಲ್ಲಾಧಿಕಾರಿಗಳು ಸಭೆ ಕರೆಯಬೇಕು ಎಂದು ತಿಳಿಸಿದರು. ಸರಕಾರದ ಯೋಜನೆಗಳಾದ ಗ್ಯಾರೆಂಟ್ ಯೋಜನೆಗಳನ್ನು ರದ್ದಪಡಿಸುವಂತೆ ರೈತ ಮುಖಂಡರೊಬ್ಬರು ಮನವಿ ನೀಡಿದ್ದು ಅನ್ನ ಭಾಗ್ಯ ಯೋಜನೆ ಜಾರಿಗೊಳಿಸಿದ್ದರಿಂದ ಬಡಕುಟುಂಬಗಳಿಗೆ ಅನುಕೂಲವಾಗಿದೆ ಅದೇ ರೀತಿ 5 ಗ್ಯಾರೆಂಟಿ ಯೋಜನೆಗಳಿಂದ ಲಕ್ಷಾಂತರ ಬಡಕುಟುಂಬಗಳಿಗೆ ಅನುಕೂಲವಾಗಿದೆ.
ಕಾಂಗ್ರೆಸ್ ಸರಕಾರ ರೈತರ ಬಗ್ಗೆಯೂ ಯೋಜನೆಗಳನ್ನು ಜಾರಿಗೊಳಿಸಲಿದೆ ಕೇಂದ್ರ ಸರಕಾರ ರೈತರಿಗೆ ಬೆಳೆ ಪರಿಹಾರ ವಿತರಣೆ ಮಾಡಲು ಮುಂದಾಗಿಲ್ಲ ರಾಜ್ಯ ಸರಕಾರ ಎರಡು ಸಾವಿರ ರೂಗಳನ್ನು ರೈತರ ಖಾತೆಗೆ ಬಿಡುಗಡೆ ಮಾಡಲು ಸಿದ್ದ ಮಾಡಿಕೊಂಡಿದೆ ಎಂದು ತಿಳಿಸಿದರು.


ಹೋಬಳಿಗೊಂದು ಗೋಶಾಲೆ, ದೇವರ ಎತ್ತುಗಳಿಗೆ ಮೇವು ವಿತರಣೆ ವ್ಯವಸ್ಥೆ ಮಾಡಬೇಕು , ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಳವಾಗದಂತೆ ಅಧಿಕಾರಿಗಳು ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು. ಜನತಾ ದರ್ಶನ ಸಭೆ ಕಾಟಾಚಾರಕ್ಕೆ ಆಗದೆ ಸಾರ್ವಜನಿಕರು ನೀಡಿದ ಅರ್ಜಿಗಳನ್ನು ಪರಿಶೀಲಿಸಿ ನಿಗಧಿತ ಅವಧಿಯೊಳಗೆ ಪರಿಹಾರಕೊಡುವ ನಿಟ್ಟಿನಲ್ಲಿ ಅಧಿಕಾರಿಗಳು ಸರ್ಕಾರದ ಕೆಲಸ ದೇವರ ಕೆಲಸ ಎಂದು ತಿಳಿದು ಕೆಲಸ ಮಾಡಬೇಕು. ಎಲ್ಲ ಸರ್ಕಾರಗಳೂ ಜನರಿಗೆ ಅನುಕೂಲ ಆಗುವ ಕಾರ್ಯಕ್ರಮಗಳನ್ನು ನಡೆಸಬೇಕು ಎಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.
ಜಿಲ್ಲಾಧಿಕಾರಿ ಧೀವ್ಯ ಪ್ರಭು ಮಾತನಾಡಿ ಜಿಲ್ಲೆಯಲ್ಲಿ ಕಳೆದ ಸಾಲಿನ ಮುಂಗಾರು ಹಂಗಾಮಿನಲ್ಲಿ ನಡೆದ ಬೆಳೆ ಪರಿಹಾರ ಬೆಳೆ ವಿಮೆಯಲ್ಲಿ ವ್ಯತ್ಯಾಸವಾಗಿದ್ದು ಅಂತರವರ ಮೇಲೆ ಪ್ರಕರಣ ದಾಖಲಾಗಿದ್ದು ರಾಜ್ಯ ಸರಕಾರ ಚಳ್ಳಕೆರೆ ತಾಲೂಕಿನಲ್ಲೆ ಬೆಳೆ ಪರಿಹಾರದ 2 ಸಾವಿರ ರೂ ಮೊತ್ತವನ್ನು ರೈತರ ಖಾತೆಗೆ ಹಾಕಲು ಪ್ರಯೋಗವಾಗಿ ತೆಗೆದುಕೊಂಡಿದ್ದು ಇನ್ನೆರಡು ಮೂರು ದಿನಗಳಲ್ಲಿ ರೈತರ ಖಾತೆಗೆ ಎರಡು ಸಾವಿರರೂ ಪರಿಹಾರದ ಮೊತ್ತವನ್ನು ಹಾಕಲು ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಲ್ಲಿಕೆಯಾದ ಅರ್ಜಿಗಳನ್ನ್ಉ 30 ದಿನಗಳ ಒಳಗೆ ವಿಲೆವಾರಿ ಮಾಡಲಾಗುವುದು ಒಂದು ವೇಳೆ ಕಂದಾಯ ಇಲಾಖೆಯಲ್ಲಿನ ನ್ಯಾಯಾಲದಲ್ಲಿರುವ ಪ್ರಕರಣಗಳು ವಿಳಂಭವಾಗಲಿವೆ ಎಂದು ತಿಳಿಸಿದರು.
ಕಂದಾಯ ಇಲಾಖೆಯಲ್ಲಿ ಇ-ಆಡಳಿತ ಮಾಡಲಾಗಿದ್ದು ಸಾರ್ವಜಿನರಕು ನೀಡಿದ ಅರ್ಜಿಗಳನ್ನು ಆನ್ ಲೈನ್ ಮೂಲಕ ಸ್ವೀಕರಿಸಿ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ಅರ್ಜಿದಾರರ ಮೊಬೈಲ್ ಸಂಖ್ಯೆಗೆ ಸಂದೇಶ ಬರಲಿದೆ ಎಂದು ತಿಳಿಸಿದರು. ದೂರುಗಳಲ್ಲಿ ಪ್ರಮುಖ ದೂರುಗಳು
ಪಾವಗಡ ರಸ್ತೆಯಲ್ಲಿ ನಗರಸಭೆ ಆಸ್ತಿಯಾದ ಪುಸಭೆ ಹಳೆ ಕಟ್ಟಡ ಬಾಡಿಗೆ ಲೀಸ್ ಅವಧಿ ಮುಗಿದಿದ್ದರೂ ಸಹ ಬೇರೆಯರಿಗೆ ಬಾಡಿ ನೀಡಿದ್ದು ಕೂಡಲೆ ನಗರಸಭೆ ವಶಕ್ಕೆ ಪಡೆಯುವಂತೆ ಮಾಜಿ ನಗರಸಭೆ ಸದಸ್ಯ ಜಿ.ಟಿ.ಗೋವಿಂದರಾಜ್ ದೂರು ನೀಡಿದ್ದಾರೆ.
ನಗರಸಭೆ ಅಧ್ಯಕ್ಷ ಉಪಾಧ್ಯಕ್ಷರ ಅವದಿ ಮುಗಿದ್ದು ಎರಡನೇ ಅವಧಿಗೆ ಮೀಸಲಾತಿ ಪ್ರಕಟವಾಗದ ಕಾರಣ ಜಿಲ್ಲಾಧಿಕಾರಿಗಳ ಅಧ್ಯಕ್ಷರಾಗಿರುತ್ತಾರೆ 8 ತಿಂಗಳು ಕಳೆದರೂ ನಗಸಭೆ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳ ಸದಸ್ಯರಿಗೆ ಸಾಮಾನ್ಯ ಸಭೆ ಕರೆದಿಲ್ಲ ಎಂದು ಸದಸ್ಯರು ದೂರು ನೀಡಿದ್ದಾರೆ.


ಸಭೆಯಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ಕೃಷಿ,. ತೋಟಗಾರಿಕೆ, ರೇಷ್ಮೆ. ಆರೋಗ್ಯ. ಮಹಿಳ ಮಕ್ಕಳ ಕಲ್ಯಾಣ ಇಲಾಖೆ, ಪಶುಸಂಗೋಪನೆ, ಶಿಕ್ಷಣ, ಹಾಲೂ ಉತ್ಪಾದಕರ ಸಂಘ, ಬೆಸ್ಕಾಂ., ಸೇರಿದಂತೆ ವಿವಿಧ ಇಲಾಖೆಗಳಲ್ಲಿ ದೊರೆಯುವ ಸರಕಾರಿ ಸೌಲಭ್ಯಗಳ ಬಗ್ಗೆ ವಸ್ತು ಪ್ರದರ್ಶನ ಮಳಿಗೆ ಗಳನ್ನು ತೆರೆಯಲಾಗಿತ್ತು.


ತಹಶೀಲ್ದಾರ್ ರೇಹಾನ್ ಪಾಷ .ತಾಪಂ ಇಒ ಶಶಿಧರ್ ನೇತೃತ್ವದಲ್ಲಿ ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಲು ವಿಶೇಷ ಗಣಕೀಕೃತ ಯಂತ್ರಗಳ ಕೌಂಟರ್ ತೆರಯಲಾಗಿತ್ತು.

Latest News >>

ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ: -ಮುಖ್ಯಮಂತ್ರಿ ಸಿದ್ದರಾಮಯ್ಯ

ಬಳ್ಳಾರಿ,ಜೂ.20 ರಾಜ್ಯದಲ್ಲಿ ಸಾರಿಗೆ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ವಿಷಯ ಸದ್ಯ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸೋಲಿನ ಹೊಣೆಯನ್ನು ನಾನೇ ಹೊರುವೆ: ಪರಾಜಿತ ಅಭ್ಯರ್ಥಿ ಬಿ ಎನ್ ಚಂದ್ರಪ್ಪ 

ಚಳ್ಳಕೆರೆ: ಚಿತ್ರದುರ್ಗ ಜಿಲ್ಲೆಯು ಕಳೆದ ಹತ್ತು ವರ್ಷಗಳಿಂದ ನನ್ನ ಕರ್ಮಭೂಮಿಯಾಗಿದ್ದು ಇಲ್ಲಿನ ಜನತೆ ಮನೆ ಮಗನಂತೆ ನೋಡಿದ್ದು ಒಂದು ಬಾರಿ...

ಜಾತಿನಿಂದನೆ, ದೌರ್ಜನ್ಯಗಳಂತಹ ಆರೋಪಗಳನ್ನು ಪರಿಶಿಷ್ಟರು ಕೈಬಿಟ್ಟಾಗ ಮಾತ್ರ ಸಮಾಜದಲ್ಲಿಬೆಳೆಯಲು ಸಾಧ್ಯ: ನೂತನ ಸಂಸದರಾದ ಗೋವಿಂದ ಕಾರಜೋಳ

ಹಿರಿಯೂರು: ಜಾತಿ ನಿಂದನೆ ಮತ್ತು ದಲಿತ ದೌರ್ಜನ್ಯಗಳಂತಹ ವೃತಾ ಆರೋಪಗಳನ್ನು ಪರಿಶಿಷ್ಟರು ಕೈ ಬಿಟ್ಟಾಗ ಮಾತ್ರ ಸಮಾಜದಲ್ಲಿ ಬೆಳೆಯಲು ಸಾಧ್ಯ...

ಚಿಕ್ಕಾಲಘಟ್ಟ ಗ್ರಾಮದಲ್ಲಿ ಜನಸ್ಪಂದನ ಕಾರ್ಯಕ್ರಮ ಶೀಘ್ರ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಯ ಭರವಸ -ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭರವಸೆ

ಚಿತ್ರದುರ್ಗ. ಜೂನ್.19: ಚಿಕ್ಕಾಲಘಟ್ಟ ಗ್ರಾಮದ ಬಹುದಿನಗಳ ಬೇಡಿಕೆಯಾದ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ ಈಗಾಗಲೇ ಜಾಗ...

ಜನಪ್ರತಿನಿಧಿಗಳು ಸರ್ಕಾರಿ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸೋಣ – ಸಂಸದ ಗೋವಿಂದ ಕಾರಜೋಳ

ಚಿತ್ರದುರ್ಗ. ಜೂನ್19: ಚುನಾಯಿತ ಪ್ರತಿನಿಧಿಗಳು ಹಾಗೂ ಸರ್ಕಾರಿ ಅಧಿಕಾರಿಗಳು ಸಮನ್ವಯತೆಯಿಂದ ಉತ್ತಮವಾಗಿ ಕಾರ್ಯನಿರ್ವಹಿಸಿ ಕೇಂದ್ರ ಹಾಗೂ...

ಕರ್ನಾಟಕ ಮಾಧ್ಯಮ ಮಹಾಕೂಟ ಜಿಲ್ಲಾ ಅಧ್ಯಕ್ಷರಾಗಿ ಕರುನಾಡು ಜಿಯಾ ಉಲ್ಲಾ ಆಯ್ಕೆ

ಚಳ್ಳಕೆರೆ ಕರ್ನಾಟಕ ಮಾಧ್ಯಮ ಮಹಾಕೂಟ ಜಿಲ್ಲಾ ಅಧ್ಯಕ್ಷರಾಗಿ ಕರುನಾಡು ಜಿಯಾ ಉಲ್ಲಾ ಆಯ್ಕೆ ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಕರ್ನಾಟಕ...

ಜೂ.21 ರ ಶುಕ್ರವಾರ ಬೆಳಗ್ಗೆ 10- 30 ಕ್ಕೆ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನೆ ತಾಪಂ ಇಒ ಶಶಿಧರ್

ಚಳ್ಳಕೆರೆ ಜೂ.19ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜೂ21 ರ ಶುಕ್ರವಾರ ಬೆಳಗ್ಗೆ 10-30 ಕ್ಕೆ ಶಾಸಕ ಟಿ.ರಘುಮೂರ್ತಿ ಅಧ್ಯಕ್ಷತೆಯಲ್ಲಿ...

ಗೋವಿಂದಕಾರಜೋಳರನ್ನು ಕೇಂದ್ರಸಚಿವರಾಗಿ ಮಾಡಬೇಕೆಂದು ಹೆಗ್ಗೆರೆ ಮಂಜುನಾಥ್ ಒತ್ತಾಯ

ಹಿರಿಯೂರು: ರಾಜ್ಯದಲ್ಲಿ ಅತಿ ಹೆಚ್ಚು ಎಡಗೈ ಸಮುದಾಯದವರಿದ್ದು, ಈ ಬಾರಿ ಬಿಜೆಪಿಯನ್ನು ಬೆಂಬಲಿಸಿದ್ದಾರೆ. ಹಾಗೆಯೇ ಚಿತ್ರದುರ್ಗ ಲೋಕಸಭಾ...

ಮಹನೀಯರ ಜಯಂತಿ: ಅರ್ಥಪೂರ್ಣ ಆಚರಣೆಗೆ ನಿರ್ಧಾರ- ಬಿ.ಟಿ. ಕುಮಾರಸ್ವಾಮಿ

ಚಿತ್ರದುರ್ಗ ಜೂನ್19: ಇದೇ ಜೂನ್ 27 ರಂದು ನಾಡಪ್ರಭು ಕೆಂಪೇಗೌಡ ಜಯಂತಿ ಹಾಗೂ ಜುಲೈ 02 ರಂದು ಡಾ. ಫ.ಗು. ಹಳಕಟ್ಟಿಯವರ ಜನ್ಮದಿನದ ಅಂಗವಾಗಿ...

ಯೋಗ ನಡಿಗೆಗೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ

ಚಿತ್ರದುರ್ಗ ಜೂನ್18: 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಮಂಗಳವಾರ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page