ಚಳ್ಳಕೆರೆ ನ.16. ಜನಧ್ವನಿ ವತದಿ ಬೆಳಕು ಚೆಲ್ಲಿದ ತಕ್ಷಣ ಬಸ್ ನೊಂದಿ ಪ್ರತಿಭಟನಾ ಸ್ಥಳಕ್ಕೆ ದಾವಿಸಿ ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಿದ ಅಧಿಕಾರಿಗಳು. ಹೌದು ಇದು ಚಳ್ಳಕೆರೆ ತಾಲೂಕಿನ ಮಿರಸಾಭಿಹಳ್ಳಿ ಗ್ರಾಮದ ಸಮೀಪ ಕರಿಕೆರೆ ಗ್ರಾಮದ ಬಳಿ ಬಸ್ಸಿಗಾಗಿ ರಸ್ತೆಗಿಳಿದು ರಸ್ತೆ ತಡೆ ನಡೆಸಿಸಾರಿಗೆ ಅಧಿಕಾರಿಗಳ ವಿರುದ್ದ ಅಕ್ರೋಶ ವ್ಯಕ್ತಪಡಿಸುತ್ತಿದ್ದ ಸುದ್ದಿಯನ್ನು ಜನಧ್ವನಿ ಡಿಜಿಟಲ್ ಮೀಡಿಯಾ ಸುದ್ದಿ ಬೆಳಕು ಚರಲ್ಲಿದ ಬೆನ್ನಲ್ಲೇ ಪ್ರತಿಭಟನಾ ಸ್ಥಳಕ್ಕೆ ಸಾರಿಗೆ ಬಸ್ಸ್ ಕಳಿಸಿ ಪ್ರತಿಭಟನೆಯನ್ನು ತೆರವುಗೊಳಿಸಿದ್ದಾರೆ. ಸಾರಿಗೆ ವ್ಯವಸ್ಥಾಪಕ ಪ್ರಭು ಜನಧ್ವನಿ ಡಿಜಿಟಲ್ ಮೀಡಿಯಾ ದೊಂದಿಗೆ ಮಾತನಾಡಿ ದೀಪಾವಳಿ ಹಬ್ಬದ ಪ್ರಯುಕ್ತ ಬೆಂಗಳೂರು ಸೇರಿದಂತೆ ವಿವಿಧ ಕಡೆ ಹೋಗುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿರುವುದರಿಂದ ಕೆಲವು ಬಸ್ ಗಳನ್ನು ಬೆಂಗಳೂರಿಗೆ ವ್ಯವಸ್ಥೆ ಮಾಡಿರುವುದರಿಂದ ವ್ಯಾತ್ಯಾಯವಾಗಿ ಸಾರಿಗೆ ಘಟದಲ್ಲಿ ಸುಮಾರು50 ಬಸ್ ಗಳಿದ್ದು ಬಸ್ ಗಳ ಕೊರತೆ ಇದೆ ಈ ಬಗ್ಗೆ ಮೇಲಾಧಿಕಾರಿಗಳ ಗಮನ ತರಲಾಗಿದೆ ಹೆಚ್ಚುವರಿ ಬಸ್ ಗಳ ಒದಗಿಸಿದಾಗ ಈ ಸಮಸ್ಯೆ ಬರುವುದಿಲ್ಲ ಮತ್ತೊಮ್ಮ ಮೇಲಾಧಿಕಾರಿಗಳ ಗಮನತರಲಾಗುವುದು ಎಂದು ಮಾಹಿತಿ ನೀಡಿದರು. ವಿದ್ಯಾರ್ಥಿಗಳ ಪ್ರತಿಭಟನಾ ಸ್ಥಳಕ್ಕೆ ಚಳ್ಳಕೆರೆ ಪೋಲಿಸ್ ಅಧಿಕಾರಿಗಳು ಭೇಟಿ ನೀಡಿ ವಿದ್ಯಾರ್ಥಿಗಳ ಮನವೊಲಿಸಿ ಪ್ರತಿಭಟನೆ ಹಿಂಪಡೆಯುವಂತೆ ಹಾಗೂ ವಿದ್ಯಾರ್ಥಿಗಳ ವ್ಯಾಸಂಗದ ದೃಷ್ಟಿಯಿಂದ ನಿಗಧಿತ ಸಮಯಕ್ಕೆ ಬಸ್ ವ್ಯವಸ್ಥೆ ಕಲ್ಪಿಸಿದರೆ ಈ ಸಮಸ್ಯೆ ಬರುವುದಿಲ್ಲ ಎಂದು ಸಾರಿಗೆ ಅಧಿಕಾರಿಗಳಿಗೆ ತಿಳಿಸಿದರು.
ಜನಧ್ವನಿ ವರದಿ ಬೆಳಕು ಚೆಲ್ಲಿದ ತಕ್ಷಣ ಬಸ್ ನೊಂದಿಗೆ ಪ್ರತಿಭಟನಾ ಸ್ಥಳಕ್ಕೆ ದಾವಿಸಿ ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಿದ ಅಧಿಕಾರಿಗಳು.
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments