ಜನರಲ್ ತಿಮ್ಮಯ್ಯ ಸಾಹಸ ತರಬೇತಿ ಅಕಾಡೆಮಿ ಕೇಂದ್ರವು ಮಕ್ಕಳಿಗೆ ನಿರಂತರವಾಗಿ ತರಬೇತಿ ಶಿಬಿರಗಳು ನಡೆಯುತ್ತಿದೆ

by | 09/05/24 | ಕ್ರೇಡೆ


ಹಿರಿಯೂರು :
ಜನರಲ್ ತಿಮ್ಮಯ್ಯ ಸಾಹಸ ತರಬೇತಿ ಅಕಾಡೆಮಿ ತರಬೇತಿ ಕೇಂದ್ರವು ವಿದ್ಯಾರ್ಥಿಗಳು, ಸ್ವಯಂ ಸೇವಕರಿಗೆ ಸಾಹಸ ಚಟುವಟಿಕೆಗಳ ಬಗ್ಗೆ ಪರಿಚಯಿಸಿ, ಯುವಕರಲ್ಲಿ ಸಾಹಸ ಮನೋಭಾವನೆ ತುಂಬಿ, ಅವರಲ್ಲಿ ಧೈರ್ಯ, ಆತ್ಮವಿಶ್ವಾಸ ಹೆಚ್ಚಾಗುವುದರ ಜೊತೆಗೆ ಅವರ ಉಜ್ವಲ ಭವಿಷ್ಯಕ್ಕೆ ಅನುಕೂಲವಾಗಲಿದೆ ಎಂಬುದಾಗಿ ಜನರಲ್ ತಿಮ್ಮಯ್ಯ ಸಾಹಸ ತರಬೇತಿ ಅಕಾಡೆಮಿ ಮ್ಯಾನೇಜರ್ ಶಬ್ಬೀರ್ ತಿಳಿಸಿದ್ದಾರೆ.
ಮಕ್ಕಳಿಗೆ ನಿರಂತರವಾಗಿ ತರಬೇತಿ ಶಿಬಿರಗಳು ನಡೆಯುತ್ತಿದ್ದು, ಬೇಸಿಗೆ ಶಿಬಿರ ವಿಶೇಷವಾಗಿರುತ್ತದೆ, ಈಜುವುದರ ಜೊತೆಗೆ ಅನೇಕ ತರಬೇತಿಗಳನ್ನು ಪಡೆದ ಮಕ್ಕಳು ಖೇಲ್ ಇಂಡಿಯಾ, ನ್ಯಾಷನಲ್ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ, ಪದಕ ಪಡೆದಿದ್ದಾರೆ, ಕ್ರೀಡೆಗಳಿಗೆ ಹೆಚ್ಚಿನ ಉತ್ತೇಜನ ನೀಡುವುದು ನಮ್ಮ ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ.
2008 ರಲ್ಲಿ ಕ್ರೀಡಾ ಸಚಿವರಾಗಿದ್ದ ಗೂಳಿಹಟ್ಟಿ ಶೇಖರ್, ವಿವಿಎಸ್ ಡ್ಯಾಂ ಹಿನ್ನೀರಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸರ್ಕಾರದ ವತಿಯಿಂದ ಜನರಲ್ ತಿಮ್ಮಯ್ಯ ಸಾಹಸ ತರಬೇತಿ ಅಕಾಡೆಮಿ ಸ್ಥಾಪಿಸಿದ್ದು, ಅಂದಿನಿಂದ ಬೇಸಿಕ್ ಜಲ ಸಾಹಸ ಕ್ರೀಡಾ ತರಬೇತಿಯನ್ನು ಶಿಬಿರಗಳ ಮೂಲಕ ನೀಡಲಾಗುತ್ತಿದೆ.
ಈ ಕೇಂದ್ರದಲ್ಲಿ ತರಬೇತಿಯು ನಿರಂತರವಾಗಿ ನಡೆಯುತ್ತಿದ್ದು, 10-14, 14-17 ವರ್ಷದ ಮಕ್ಕಳು, ಶಾಲಾ ಕಾಲೇಜು ಮಕ್ಕಳು, ನಾನಾ ಇಲಾಖೆಯ ಸಿಬ್ಬಂದಿಗಳು ಭಾಗವಹಿಸಬಹುದು. ಇಲಾಖೆ ವತಿಯಿಂದ ಅವರನ್ನು ಆಯ್ಕೆ ಮಾಡಿ ಕಳುಹಿಸಲಾಗುತ್ತದೆ. ಇಲ್ಲಿ 3 ದಿನದ ಓರಿಯಂಟೇಷನ್, 5 ಮತ್ತು 10 ದಿನದ ಬೇಸಿಕ್ಸ್ ಹಾಗೂ ಅಡ್ವಾನ್ಸ್ 21 ದಿನದ ಟೀಚರ್ಸ್ ಟ್ರೈನಿಂಗ್ ಕೋರ್ಸ್ ಗಳ ತರಬೇತಿ ನೀಡಲಾಗುತ್ತಿದೆ.
ಈ ತರಬೇತಿ ಶಿಬಿರದಲ್ಲಿ ಈಜು, ರ್ಯಾಪಿಂಗ್, ಕಾಯಕಿಂಗ್, ವಿಂಗ್ ಸರ್ಫಿಂಗ್, ಕೋನೋ, ಬಾನಾನ ರೈಡ್, ಸೈಕ್ಲಿಂಗ್, ನೇಚರ್ ಸ್ಟಡಿ, ಪಕ್ಷಿಗಳ ವೀಕ್ಷಣೆ, ಹಾವುಗಳಿಂದ ರಕ್ಷಣೆ ಪಡೆಯುವ ಬಗ್ಗೆ, ಚಿತ್ರಕಲೆ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ತರಬೇತಿ ನೀಡಲಾಗುತ್ತದೆ. ಊಟ, ವಸತಿಗಳೊಂದಿಗೆ ತರಬೇತಿ ನೀಡಲಾಗುತ್ತಿದೆ. ಮಹಿಳೆಯರು ಹಾಗೂ ಪುರುಷರಿಗೆ ಪ್ರತ್ಯೇಕ ವಸತಿ ಸೌಲಭ್ಯವಿದೆ. ಆದರೆ ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ಪ್ರವೇಶವಿಲ್ಲ.
ಅಲ್ಲದೆ ಪ್ರತಿವರ್ಷವೂ ಬೇಸಿಗೆ ಶಿಬಿರಗಳು ನಡೆಯುತ್ತಿದ್ದು, ಈ ವರ್ಷ 3 ಬ್ಯಾಚ್ ನಡೆದಿದೆ, ಇತ್ತೀಚೆಗೆ ಚಿತ್ರದುರ್ಗ ಜಿಲ್ಲೆಯ ಎಲ್ಲಾ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ಭಾಗವಹಿಸಿ, ಸೂಕ್ತ ತರಬೇತಿ ಪಡೆದಿದ್ದಾರೆ. ಈ ಜಿಲ್ಲೆ ಮಾತ್ರವಲ್ಲದೆ ದಾಂಡೇಲಿ, ರಾಮನಗರ, ಬಾದಾಮಿ, ಕಾರವಾರ, ಕೂರ್ಗ್ ಹಾಗೂ ವಿವಿಸಾಗರ ಕೇಂದ್ರದಲ್ಲಿ ತರಬೇತಿ ನಡೆಯುತ್ತದೆ. ಒಂದು ಬ್ಯಾಚ್ ನಲ್ಲಿ ಕನಿಷ್ಠ 50 ವಿದ್ಯಾರ್ಥಿಗಳು ಭಾಗವಹಿಸುತ್ತಾರೆ. ಅವರಿಗೆ ವಿಮಾ ಸೌಲಭ್ಯವೂ ಇರುತ್ತದೆ, ವರ್ಷದಲ್ಲಿ ಕನಿಷ್ಠ 15-20 ಬ್ಯಾಚ್ ಗಳಿಗೆ ತರಬೇತಿ ನಡೆಯುತ್ತದೆ.
ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೂ ವಿಶೇಷ ಅನುದಾನದಡಿ ತರಬೇತಿ ಕೊಡಲಾಗುತ್ತದೆ. ಎಂದರಲ್ಲದೆ ಸ್ಕೌಟ್ ಅಂಡ್ ಗೈಡ್ಸ್ ಹಾಗೂ ಎನ್.ಎಸ್.ಎಸ್. ಎನ್.ಸಿಸಿ, ಪೋಲೀಸ್ ಇಲಾಖೆ, ಆರ್.ಎಸ್.ಐ ಪೋಲೀಸ್ ತಂಡದವರಿಗೂ ತರಬೇತಿ ನೀಡಲಾಗುತ್ತಿದ್ದು, ಸಾಕಷ್ಟು ತಂಡಗಳು ಭಾಗವಹಿಸಿ ತರಬೇತಿ ಪಡೆದಿದ್ದಾರೆ.
ಅಲ್ಲದೇ ಈ ಕೇಂದ್ರದಲ್ಲಿ ತರಬೇತಿ ಪಡೆದ ಸುಮಾರು ಹತ್ತಾರು ಮಂದಿ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಪದಕ ಪಡೆದಿದ್ದಾರೆ. ಈ ಕೇಂದ್ರವು ರಾಷ್ಟ್ರಮಟ್ಟದ ಕಾಯಕಿಂಗ್ ಸ್ಪೋರ್ಟ್ಸ್ ನಲ್ಲಿ 2 ನೇ ಸ್ಥಾನ ಅಲಂಕರಿಸಿದ್ದಾರೆ. ಈ ತರಬೇತಿ ಕೇಂದ್ರದಲ್ಲಿ ಓರ್ವ ಮಹಿಳಾ ಟ್ರೈನರ್, ಮೂವರು ಪುರುಷರು ಟ್ರೈನರ್, ಒಬ್ಬ ನೇಚರ್ ಸ್ಟಡಿ ಟ್ರೈನರ್ ಹಾಗೂ 3 ಕಾವಲುಗಾರರು, ಅಡುಗೆ ಭಟ್ಟರು ಈ ತರಬೇತಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

Latest News >>

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಸಹಾಯವಾಣಿ ಆರಂಭ

ಚಿತ್ರದುರ್ಗ ಮೇ.30: ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ-2024ರ ಸಂಬಂಧ ಶಿಕ್ಷಕರು ಮತ ಚಲಾಯಿಸಲು ಮತದಾರರಿಗೆ ಸಹಾಯ ಮಾಡಲು ಮತದಾರರ...

ಜೆಜೆಎಂ ಕಾಮಗಾರಿ ಪರಿಶೀಲಿಸಿದ ಜಿ.ಪಂ ಸಿಇಒ ಸೋಮಶೇಖರ್

ಮೊಳಕಾಲ್ಮೂರು ಮೇ.30: ಮೊಳಕಾಲ್ಮರು ತಾಲ್ಲೂಕಿನ ರಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆಕೊಂಡಾಪುರ ಗ್ರಾಮ ಹಾಗೂ ಅಶೋಕ ಸಿದ್ದಾಪುರ ಗ್ರಾಮ...

ಕಾರ್ಮಿಕರಿಗೆ ರಾಜಕೀಯ ತಿಳುವಳಿಕೆ ಬರುವವರೆಗೂ ಜೀವನದಲ್ಲಿ ಬದಲಾವಣೆ ಸಾಧ್ಯವಿಲ್ಲ: ಸಿಐಟಿಯು ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಪತ್ತರ್

ಚಳ್ಳಕೆರೆ: ಕಾರ್ಮಿಕರಿಗೆ ರಾಜಕೀಯ ತಿಳುವಳಿಕೆ ಬರುವವರೆಗೂ ಅವರ ಜೀವನದಲ್ಲಿ ಬದಲಾವಣೆ ಸಾಧ್ಯವಿಲ್ಲ ಎಂದು ಸಿಐಟಿಯು ಸಂಘಟನೆಯ ರಾಜ್ಯ ಪ್ರಧಾನ...

ಸರಕಾರಿ ಹಾಗೂ ಖಾಸಗಿ ಜಮೀನಿನಲ್ಲಿ ಬಹಳ ವರ್ಷಗಳಿಂದ ಮನೆಗಳನ್ನು ನಿರ್ಮಿಸಿಕೊಂಡು ವಾಸ ಮಾಡುತ್ತಿದ್ದ ಪ್ರದೇಶವನ್ನು ಕಂದಾಯ ಗ್ರಾಮಗಳನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಉಪವಿಭಾಗಾಧಿಕಾರಿ ಕಾರ್ತಿಕ್.

ಚಳ್ಳಕೆರೆ ಜನಧ್ವನಿಮೆ30 ಸರಕಾರಿ ಹಾಗೂ ಖಾಸಗಿ ಜಮೀನಿನಲ್ಲಿ ಬಹಳ ವರ್ಷಗಳಿಂದ ಮನೆಗಳನ್ನು ನಿರ್ಮಿಸಿಕೊಂಡು ವಾಸ ಮಾಡುತ್ತಿದ್ದ ಪ್ರದೇಶವನ್ನು...

ಮಗು ಇದೇ ಏಗಪ್ಪ ಕೂಲಿಕೆಲಕ್ಕೆ ಹೋಗೋದು ಎಂಬ ಚಿಂತೆ ಬಿಡಿ ಕೂಸಿನ‌ಮನೆ ಬಿಡಿ ಕೆಲಸಕ್ಕೆ ಹೋಗಿ ಎಂದು ತಾಪಂ ಇಒ‌ ಲಕ್ಷ್ಮಣ್.

ಚಳ್ಳಕೆರೆ ಮೇ.30 ಮಗು ಇದೇ ಏಗಪ್ಪ ಕೂಲಿಕೆಲಕ್ಕೆ ಹೋಗೋದು ಎಂಬ ಚಿಂತೆ ಬಿಡಿ ಕೂಸಿನ‌ಮನೆ ಬಿಡಿ ಕೆಲಸಕ್ಕೆ ಹೋಗಿ ಎಂದು ತಾಪಂ ಇಒ‌ ಲಕ್ಷ್ಮಣ್...

ತಿಮ್ಮಪ್ಪಯ್ಯನಹಳ್ಳಿ ಗ್ರಾಪಂ ಉಪಾಧ್ಯಕ್ಷರಾಗಿ ಎಂ.ತಿಪ್ಪೇಸ್ವಾಮಿ ಅವಿರೋಧವಾಗಿ ಆಯ್ಕೆ.

ನಾಯಕನಹಟ್ಟಿ::ಮೇ28. ಸಮೀಪದ ತಿಮ್ಮಪ್ಪಯ್ಯನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ರಾಜಿನಾಮೆಯಿಂದ ತೆರವಾಗಿದ್ದ ಉಪಧ್ಯಾಕ್ಷ ಸ್ಥಾನಕ್ಕೆ ಮಂಗಳವಾರ ನಡೆದ...

ಬಿಜೆಪಿ ನೇತೃತ್ವದ ಸರ್ಕಾರ ದೇಶದ ಜನರ ಸಂಪತ್ತನ್ನು ಕೆಲವೇ ಶತ ಕೋಟ್ಯಾಧಿಪತಿಗಳಿಗೆ ಧಾರೆ ಎರೆದಿದೆ ಸಿ.ವೈ. ಶಿವರುದ್ರಪ್ಪ

ಚಳ್ಳಕೆರೆ ಮೋದಿ ಸರ್ಕಾರ ದೇಶದ ಕಾನೂನುಗಳನ್ನು ಕಾರ್ಪೊರಿಕ್ ಸಾಗರ ಪ ತಿದ್ದುಪಡಿ ಮಾಡಿ, ಅವುಗಳ ಲಕ್ಷಾಂತರ ಕೋಟಿ ರೂಗಳ ಸಾಲ ಮನ್ನಾ ಮಾಡಿದೆ...

ಯುಪಿ ಯಿಂದ ಬಂದು ಅನಧಿಕೃತವಾಗಿ ಸೆಲೂನ್ ಅಂಗಡಿ ಪ್ರಾರಂಭಿಸುತ್ತಿರುವ ವ್ಯಕ್ತಿಗಳಿಗೆ ಅಂಗಡಿ ಪ್ರಾರಂಭಿಸಲು ಪರವಾನಗಿ ನೀಡದಿರಲು ಮನವಿ

ಹಿರಿಯೂರು : ಉತ್ತರಪ್ರದೇಶ ರಾಜ್ಯದಿಂದ ಹಿರಿಯೂರು ನಗರಕ್ಕೆ ಬಂದು ಅನಧಿಕೃತವಾಗಿ ಸೆಲೂನ್ ಅಂಗಡಿ ಪ್ರಾರಂಭಿಸುತ್ತಿರುವ ವ್ಯಕ್ತಿಗಳಿಗೆ ಅಂಗಡಿ...

ವಿದ್ಯುತ್ ತಂತಿ ಹರಿದು ಬಿದ್ದು ಎಮ್ಮೆ ಸ್ಥಳದಲ್ಲೇ ಸಾವು.

ಚಳ್ಳಕೆರೆ ಮೇ28 ಹಳ್ಳದಲ್ಲಿ ಮೇಯುತ್ತಿದ್ದ ಎಮ್ನೆ ಮೇಲೆ ವಿದ್ಯುತ್ ತಂತಿ ಹರಿದ ಬಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಹೌದು...

ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್ ಸೂಚನೆ ವಸತಿ ನಿಲಯಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ, ಕಾವಲುಗಾರರ ನೇಮಿಸಿ

ಚಿತ್ರದುರ್ಗ ಮೇ.27: ಜಿಲ್ಲೆಯ ವಸತಿ ನಿಲಯಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾಗಳು ಸುಸ್ಥಿತಿಯಲ್ಲಿರಬೇಕು. ಒಂದು ವೇಳೆ ಸಿಸಿ ಕ್ಯಾಮೆರಾಗಳು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page