ಜನಸಂಕಲ್ಪ, ಹಾಗೂ ಎಸ್ಟಿ ಮೋರ್ಚ ಸಮವೇಶಗಳಿಗೆ ಹೆಚ್ಚಿನ ಜನಸಂಖ್ಯೆ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮಂಡಲ ಅಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್

by | 02/11/22 | ರಾಜಕೀಯ

ಚಳ್ಳಕೆರೆ ನ.2 ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಗೆಲುವು ಸಾಧಿಸಲು ಕಾರ್ಯಕರ್ತರು ಬೂತ್ ಮಟ್ಟದಿಂದ ಪಕ್ಷ ಸಂಘಟನೆ ಮುಂದಾಗ ಬೇಕು. ಜನಸಂಕಲ್ಪ, ಹಾಗೂ ಎಸ್ಟಿ ಮೋರ್ಚ ಸಮವೇಶಗಳಿಗೆ ಹೆಚ್ಚಿನ ಜನಸಂಖ್ಯೆ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮಂಡಲ ಅಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್ ಹೇಳಿದರು.
ನಗರದ ಬಿಜೆಪಿ ಮಂಡ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಇದೆ ತಿಂಗಳ ದಿನಾಂಕ 23 ರಂದು ನಮ್ಮ ಚಳ್ಳಕೆರೆಯಲ್ಲಿ ನಡೆಯುವ ಜನಸಂಕಲ್ಪ ಯಾತ್ರೆಯ ಹಾಗು ದಿನಾಂಕ 20 ರಂದು ಬಳ್ಳಾರಿಯಲ್ಲಿ ನಡೆಯುವ ಎಸ್ ಟಿ ಮೋರ್ಚಾ ರಾಜ್ಯ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಸಭೆಯಲ್ಲಿ ಜಿಲ್ಲಾಧ್ಯಕ್ಷಎ.ಮುರುಳಿ ಅವರು, ವಿಭಾಗ ಸಂಘಟನಾ ಕಾರ್ಯದರ್ಶಿ ಜೇಷ್ಠ ಪಡಿವಾಳ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಪಾಲಯ್ಯ, ಜಿಲ್ಲಾ ಉಪಾಧ್ಯಕ್ಷ ಬಾಳೆಕಾಯಿ ರಾಮದಾಸ್ ಮಾತನಾಡಿದರು.
ರೈತ ಮೋರ್ಚಾ ಜಿಲ್ಲಾಧ್ಯಕ್ಷರಾದ ವೆಂಕಟೇಶ್ ಯಾದವ್ ಅವರು , ಎಸ್ ಟಿ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಜಯರಾಮ್ ಅವರು ,ಹಿರಿಯ ಮುಖಂಡರಾದ ಶಿವಪುತ್ರಪ್ಪ ಅವರು ಹಾಗೂ ಮಂಡಲದ ಪದಾಧಿಕಾರಿಗಳು, ಮೋರ್ಚಾಗಳ ಪದಾಧಿಕಾರಿಗಳು, ಶಕ್ತಿ ಕೇಂದ್ರ ಹಾಗು ಮಹಾ ಶಕ್ತಿ ಕೇಂದ್ರ ಅಧ್ಯಕ್ಷರು, ಮುಖಂಡರು, ಕಾರ್ಯಕರ್ತರು ಇತರಿದ್ದರು.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *