ಜಲಜೀವನ ಮಿಷನ್ ಯೋಜನೆಯಡಿ ರಾಜ್ಯದಲ್ಲಿ 40 ಲಕ್ಷ ಮನೆಗಳಿಗೆ ನೀರು : ಸಿಎಂ ಬೊಮ್ಮಾಯಿ

by | 27/02/23 | ರಾಜಕೀಯ

ಬೆಳಗಾವಿ: ಜಲಜೀವನ ಮಿಷನ್ ಯೋಜನೆಯಡಿ ರಾಜ್ಯದಲ್ಲಿ ಕಳೆದ ಮೂರು ವರ್ಷದಲ್ಲಿ 40 ಲಕ್ಷ ಮನೆಗಳಿಗೆ ನೀರು ತಲುಪಿಸಲಾಗಿದೆ. ಈ ಬೃಹತ್ ಯೋಜನೆಯ ಬಗ್ಗೆ ಇದ್ದ ಸಂಶಯವನ್ನು ಸಂಕಲ್ಪವನ್ನಾಗಿಸಿ, ಅನಿಶ್ಚಿತತೆಯಿಂದ ನಿಶ್ಚಿತತೆಗೆ ಕೊಂಡೊಯ್ದು, ಆಸಾಧ್ಯವಾದುದನ್ನು ಪ್ರಧಾನಿ ಮೋದಿಯವರು ಸಾಧ್ಯವಾಗಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬೆಳಗಾವಿಯಲ್ಲಿ 2240 ಕೋಟಿ‌ ರೂ. ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರಕ್ಕೆ ಸಮರ್ಪಿಸಲು ಏರ್ಪಡಿಸಿದ್ದ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ರೈತರಿಗಾಗಿ ಕೃಷಿ ಸಮ್ಮಾನ್ ಯೋಜನೆಯ ಮೂಲಕ ರೈತರ ಖಾತೆಗೆ ನೇರವಾಗಿ ಹಣ ತಲುಪಿಸಲಾಗುತ್ತಿದ್ದು, ರೈತರು ಕೃಷಿಗೆ ಬೀಜ, ಗೊಬ್ಬರ ಖರೀದಿಗೆ ಅನುಕೂಲ ಕಲ್ಪಿಸಲಾಗಿದೆ. ರೈತರ ಪರವಾಗಿ ನಿಂತು ಯೋಜನೆಗಳನ್ನು ಪ್ರಧಾನಿ ಮೋದಿಯವರು ರೂಪಿಸಿದ್ದಾರೆ. ರಾಜ್ಯದಲ್ಲಿ ರೈತವಿದ್ಯಾನಿಧಿ, ಯಶಸ್ವಿನಿ, ಭೂಸಿರಿಯಂತಹ ರೈತಪರ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ರೈತರಿಗೆ ಆತ್ಮವಿಶ್ವಾಸ ತುಂಬುವ ಕೆಲಸವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಮಾಡುತ್ತಿದೆ. ಪ್ರಧಾನ ಮಂತ್ರಿ ಬೆಳೆ ವಿಮಾ ಯೋಜನೆಯಲ್ಲಿ ಹೆಚ್ಚಿನ ಬೆಳೆ ವಿಮೆ ಬಿಡುಗಡೆಯಾಗಿದೆ. ರೈತರ ಬೆಳೆಗಳಿಗೆ ಬೆಂಬಲ ಬೆಲೆಯನ್ನು ಹೆಚ್ಚಿಸಲಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ರೈಲ್ವೆ ನಿಲ್ದಾಣಗಳ ನಿರ್ಮಾಣ , ಕಳೆದ ಐದು ವರ್ಷದಲ್ಲಿ 6 ಸಾವಿರ ಕಿ.ಮಿ. ರಾಷ್ಟ್ರೀಯ ಹೆದ್ದಾರಿಯನ್ನು ರಾಜ್ಯಕ್ಕೆ ನೀಡಲಾಗಿದೆ. ಧಾರವಾಡ-ಬೆಳಗಾವಿ, ಹುಬ್ಬಳ್ಳಿ- ಅಂಕೋಲಾ ರೈಲ್ವೆ ಯೋಜನೆಗಳು ಶೀಘ್ರದಲ್ಲಿ ಪ್ರಾರಂಭವಾಗುತ್ತದೆ.ಜಲಜೀವನ ಮಿಷನ್ ಯೋಜನೆಯಡಿ ಮನೆ ಮನೆಗೆ ನೀರು ತಲುಪಿಸುವ ಸಂಕಲ್ಪವನ್ನು ಪ್ರಧಾನಿ ಮೋದಿಯವರು ಮಾಡಿದರು. ಕಳೆದ 3 ವರ್ಷಗಳಲ್ಲಿ 10 ಕೋಟಿಗೂ ಮನೆಗಳಿಗೆ ನೀರು ತಲುಪಿಸಿದ ಭಾರತದ ಭಗೀರಥ ಎನಿಸಿದ್ದಾರೆ. ಭಾರತದ ಐದು ಟ್ರಿಲಿಯನ್ ಡಾಲರ್ ಆರ್ಥಿಕತೆಗೆ ಕರ್ನಾಟಕವೂ 1 ಟ್ರಿಲಿಯನ್ ಆರ್ಥಿಕತೆಯ ಕೊಡುಗೆ ನೀಡುವ ಸಂಕಲ್ಪವನ್ನು ಸರ್ಕಾರ ಮಾಡಿದೆ ಎಂದರು.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *