ಜಾತಿನಿಂದನೆ, ದೌರ್ಜನ್ಯಗಳಂತಹ ಆರೋಪಗಳನ್ನು ಪರಿಶಿಷ್ಟರು ಕೈಬಿಟ್ಟಾಗ ಮಾತ್ರ ಸಮಾಜದಲ್ಲಿಬೆಳೆಯಲು ಸಾಧ್ಯ: ನೂತನ ಸಂಸದರಾದ ಗೋವಿಂದ ಕಾರಜೋಳ

by | 19/06/24 | ಸುದ್ದಿ


ಹಿರಿಯೂರು:
ಜಾತಿ ನಿಂದನೆ ಮತ್ತು ದಲಿತ ದೌರ್ಜನ್ಯಗಳಂತಹ ವೃತಾ ಆರೋಪಗಳನ್ನು ಪರಿಶಿಷ್ಟರು ಕೈ ಬಿಟ್ಟಾಗ ಮಾತ್ರ ಸಮಾಜದಲ್ಲಿ ಬೆಳೆಯಲು ಸಾಧ್ಯ ಎಂಬುದಾಗಿ ನೂತನ ಸಂಸದರಾದ ಗೋವಿಂದ ಕಾರಜೋಳ ಅವರು ತಿಳಿಸಿದರು.
ಕೋಡಿಹಳ್ಳಿ ಮಾದಿಗ ಆದಿಜಾಂಬವ ಮಠದ ಶ್ರೀ ಷಡಕ್ಷರಮುನಿ ಸ್ವಾಮೀಜಿಯವರನ್ನು ಮಂಗಳವಾರದಂದು ಭೇಟಿ ಮಾಡಿ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ತಳ ಸಮುದಾಯಗಳಿಗೆ ಅನ್ಯಾಯವಾದಾಗ ಕಾನೂನು ಪ್ರಕಾರ ನ್ಯಾಯ ಕಂಡು ಕೊಳ್ಳಬೇಕೇ ಹೊರತು, ಮೂರನೇ ವ್ಯಕ್ತಿ ಮೂಲಕ ಕೈ ಜೋಡಿಸಬಾರದು. ಪರಿಶಿಷ್ಟರು ಅನ್ಯ ಸಮುದಾಯದೊಂದಿಗೆ ಪ್ರೀತಿ, ವಿಶ್ವಾಸ, ಭ್ರಾತೃತ್ವ ಬೆಳೆಸಿ ಕೊಳ್ಳಬೇಕು ಎಂಬುದಾಗಿ ಕಿವಿಮಾತು ಹೇಳಿದರಲ್ಲದೆ,ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕೇಂದ್ರದ ಯೋಜನೆಗಳನ್ನು ತರಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂಬುದಾಗಿ ಅವರು ಭರವಸೆ ನೀಡಿದರು.
ಒಂದು ಜಾತಿಯ ಬಲದಿಂದ ನಾವು ರಾಜಕಾರಣದಲ್ಲಿ ಯಶಸ್ಸು ಕಾಣುವುದು ಸಾಧ್ಯವಿಲ್ಲ. ಎಲ್ಲ ಸಮುದಾಯದ ಬೆಂಬಲ ಇದ್ದರೆ ಮಾತ್ರ ನಾವು ಗೆಲುವು ಸಾಧಿಸಬಹುದು. ಅದನ್ನು ಜಿಲ್ಲೆಯ ಎಲ್ಲ ಸಮುದಾಯಗಳು ನಮ್ಮ ಜೊತೆಗಿದ್ದು ಸಾಬೀತುಪಡಿಸಿವೆ.ಹಾಗಾಗಿ ಜಿಲ್ಲೆಯ ಜನರಿಗೆ ಕೃತಜ್ಞತೆ ಸಲ್ಲಿಸುತ್ತೇನೆ.ತಳ ಸಮುದಾಯಗಳು ರಾಜಕೀಯ ಜಾಗೃತಿ ಮೈಗೂಡಿಸಿಕೊಳ್ಳಬೇಕು ಎಂಬುದಾಗಿ ಸಂಸದರು ಅಭಿಪ್ರಾಯ ವ್ಯಕ್ತಪಡಿಸಿದರು.
ಬಾಗಲಕೋಟೆ ಜಿಲ್ಲೆಯವನಾದ ನನ್ನನ್ನು ಹೊರಗಿನವನು ಎನ್ನದೆ ಜಿಲ್ಲೆಯ ಜನ ನನಗೆ ರಾಜಕೀಯ ಶಕ್ತಿ ನೀಡಿದ್ದಾರೆ. ಇದಕ್ಕೆ ಕಾರಣ ನಮ್ಮಲ್ಲಿನ ಸರಳತೆ, ಸಜ್ಜನಿಕೆ, ನಡವಳಿಕೆ ಹಾಗೂ ಇತರೆ ಸಮುದಾಯದ ಜೊತೆಗಿನ ಸ್ನೇಹ, ವಿಶ್ವಾಸ ಮುಖ್ಯ ಕಾರಣ ಎಂದರು.ನಾವು ಎಂದಿಗೂ ದ್ವೇಷ ರಾಜಕಾರಣ ಮಾಡುವುದಿಲ್ಲ. ಅದು ನಮ್ಮ ಜಾಯಮಾನವಲ್ಲ ಎಂಬುದಾಗಿ ಸಂಸದರು ಹೇಳಿದರು.
ಕೋಡಿಹಳ್ಳಿ ಆದಿಜಾಂಬವ ಮಠದ ದೇಶಿಕೇಂದ್ರ ಶ್ರೀ ಷಡಕ್ಷರಮುನಿ ಸ್ವಾಮೀಜಿಯವರು ಮಾತನಾಡಿ ನಮ್ಮ ರಾಜ್ಯದವರೇ ಆದ ವಿ.ಸೋಮಣ್ಣ ಅವರು ರೈಲ್ವೆ ಇಲಾಖೆ ಸಚಿವರಾಗಿದ್ದಾರೆ. ಅವರೊಂದಿಗೆ ಸಮಾಲೋಚಿಸಿ ನಿಮ್ಮ ಅವಧಿಯಲ್ಲಿ ದಾವಣಗೆರೆ, ತುಮಕೂರು ನೇರ ರೈಲ್ವೆ ಮಾರ್ಗ ಯೋಜನೆ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಲು ಶ್ರಮವಹಿಸಬೇಕು.
ಇದರಿಂದ ಹೆಚ್ಚಿನದಾಗಿ ಸರಕು, ಸಾಗಣೆ, ವ್ಯಾಪಾರ ವಹಿವಾಟು, ಪ್ರಯಾಣಕ್ಕೆ ಸುಗಮ ಅನುಕೂಲ ಆಗುತ್ತದೆ ಎಂಬುದಾಗಿ ತಿಳಿಸಿದಾಗ ಸಂಸದರು ಸಕಾರಾತ್ಮಕವಾಗಿ ಸ್ಪಂದಿಸಿದರು ಎಂಬುದಾಗಿ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಎಂ.ಜಯಣ್ಣ, ಮಾಜಿ ಜಿ.ಪಂ. ಸದಸ್ಯ ಶಿವಪ್ಪನಾಯಕ, ಹಾಲಪ್ಪ ಸೇರಿದಂತೆ ಬಿಜೆಪಿ ಮೋರ್ಚಾ ಹಾಗೂ ಜೆಡಿಎಸ್ ನ ಹಲವಾರು ಮುಖಂಡರು ಉಪಸ್ಥಿತರಿದ್ದರು.

Latest News >>

ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು,ನಾವು ರೋಗಿಗಳ ಸೇವೆಮಾಡುವಲ್ಲಿ ದೇವರನ್ನ ಕಾಣಬೇಕು. ಬೆಂ.ಗ್ರಾ.ಕ್ಷೇತ್ರದಸಂಸದ ಡಾ.ಸಿ.ಎನ್.ಮಂಜುನಾಥ್

ತುಮಕೂರು : ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು ಸಾರ್ವಜನಿಕರು, ರೋಗಿಗಳು ನಮ್ಮನ್ನು ದೇವರಿಗೆ ಹೋಲಿಕೆ ಮಾಡುತ್ತಾರೆ. ನಾವು...

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page