ಜಾತಿ ಮತ ಧರ್ಮದ ಸಂಕೋಲೆಯಿಂದ ಹೊರಬಂದು ಆಧ್ಯಾತ್ಮಿಕ ಚಿಂತನೆಗಳನ್ನು ನಡೆಸಿದಾಗ ಮಾತ್ರ ಸಮಾಜದ ದೃಷ್ಟಿಕೋನ ಬದಲಾಗಲು ಸಾಧ್ಯ: ಕಬೀರಾನಂದಾಶ್ರಮದ ಶಿವಲಿಂಗಾನಂದ ಸ್ವಾಮೀಜಿ

by | 12/05/24 | ಸುದ್ದಿ


ಚಳ್ಳಕೆರೆ: ತಾಲೂಕಿನ ನರಹರಿ ನಗರದಲ್ಲಿರುವ ಶ್ರೀ ನರಹರೇಶ್ವರ ದೇವಾಲಯದ ಪ್ರಾಂಗಣದಲ್ಲಿ ಶ್ರೀ ನರಹರಿ ಸೇವಾ ಪ್ರತಿಷ್ಠಾನ ವತಿಯಿಂದ ಬ್ರಹ್ಮಶ್ರೀ ಲಕ್ಷ್ಮಿನರಸಿಂಹ ಸದ್ಗುರು ಸ್ವಾಮಿ ಶ್ರೀ ಸಿಂಹಾದ್ರಿ ಸದ್ಗುರು ಸ್ವಾಮಿ ಹಾಗೂ ಮಾತೃಶ್ರೀ ನಾಗವೇಣಮ್ಮನವರ ದಿವ್ಯ ಮಂಗಳ ವಿಗ್ರಹ ಅನಾವರಣ ಮಹೋತ್ಸವ ಕಾರ್ಯಕ್ರಮವನ್ನು ಭಾನುವಾರ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀ ನರಹರಿ ಸೇವಾ ಪ್ರತಿಷ್ಠಾನದ ಮಾರ್ಗದರ್ಶಕರಾದ ಶ್ರೀ ಶಾಂತರಾಮ್ ಸ್ವಾಮೀಜಿಗಳವರು ಮಾತನಾಡಿ ಚಳ್ಳಕೆರೆ ತಾಲೂಕು ಬರಪೀಡಿತ ಪ್ರದೇಶವಾಗಿದ್ದರೂ ಸಹ ಆಧ್ಯಾತ್ಮಿಕತೆಯಲ್ಲಿ ಉತ್ತಮ ನೆಲೆಯಾಗಿ ರೂಪುಗೊಳ್ಳುತ್ತಿದೆ ಇತ್ತೀಚಿನ ದಿನಗಳಲ್ಲಿ ವೇಗದ ಬದುಕು ಸಾಗಿಸುತ್ತಿರುವ ಸಾರ್ವಜನಿಕರು ಆಧ್ಯಾತ್ಮಿಕ ದ ಕಡೆ ಒಲವು ತೋರುತ್ತಿದ್ದಾರೆ. ಆಧ್ಯಾತ್ಮಿಕ ಭಾವನೆ ಜನರಲ್ಲಿ ಜಾಗೃತಿಗೊಂಡಾಗ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. 

ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಶ್ರೀ ಸದ್ಗುರು ಕಬೀರಾನಂದಶ್ರಮದ ಶಿವಲಿಂಗಾನಂದ ಸ್ವಾಮೀಜಿ ಮಾತನಾಡಿ ಶಂಕರಾಚಾರ್ಯರ ಅದ್ವೈತ ಸಿದ್ಧಾಂತವನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕಿದೆ ಜಾತಿ ಮತ ಧರ್ಮದ ಸಂಕೋಲೆಯಿಂದ ಹೊರಬಂದು ಚಿಂತನೆಗಳನ್ನು ನಡೆಸಿದಾಗ ಮಾತ್ರ ಸಮಾಜದ ದೃಷ್ಟಿಕೋನ ಬದಲಾಗಲು ಸಾಧ್ಯ ಮುಂದಿನ ಯುವ ಪೀಳಿಗೆಗೆ ಆಧ್ಯಾತ್ಮವನ್ನು ಬೋಧಿಸುವುದು ಪ್ರತಿಯೊಬ್ಬ ತಂದೆ ತಾಯಿಯ ಕರ್ತವ್ಯವಾಗಬೇಕು ಪ್ರತಿ ಮಗು ಸಂಸ್ಕಾರಯುತವಾಗಿ ಬೆಳೆದಾಗ ಮಾತ್ರ ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ರೂಪುಗೊಳ್ಳಲು ಸಾಧ್ಯ ಎಂದು ಕಿವಿಮಾತು ಹೇಳಿದರು. 


ಕಾರ್ಯಕ್ರಮದ ನೇತೃತ್ವ ವಹಿಸಿದ್ದ ನರಹರಿ ಸದ್ಗುರು ಸಂಪ್ರದಾಯ ಪೀಠಾಧ್ಯಕ್ಷ ಡಾ. ರಾಜಾರಾಮ್ ಸ್ವಾಮೀಜಿ ಮಾತನಾಡಿ ಭಾರತೀಯ ಧಾರ್ಮಿಕ ನಂಬಿಕೆ ಉಳಿಯಬೇಕೆಂದರೆ ಇಲ್ಲಿ ಸನ್ಯಾಸಿಯತೆ ಗೃಹಸ್ಥನು ಮುಕ್ತಿ ಮಾರ್ಗ ಕಂಡುಕೊಳ್ಳಬೇಕು ಅಂತಹ ಚಿಂತನೆಯಲ್ಲಿ ಜಾತಿ ವರ್ಗ ಭೇದ ಮರೆತು 200 ವರ್ಷಗಳ ಕಾಲಮಾನದ ನರಹರಿ ಸದ್ಗುರು ಸ್ವಾಮೀಜಿಗಳು ಅನುಸರಿಸುವ ಗೃಹಸ್ತ ಸಂಪ್ರದಾಯ ಅಧ್ಯಾತ್ಮಿಕ ಸೇವಾ ಕಾರ್ಯ ನಡೆಸಲಾಗುತ್ತಿದೆ ಈ ಪರಂಪರೆ ಅನುಸರಣೆಯಲ್ಲಿ ತಮ್ಮನ್ನು ಅರ್ಪಿಸಿಕೊಂಡಿರುವ ಲಕ್ಷ್ಮಿ ನರಸಿಂಹ ಸದ್ಗುರು ಸ್ವಾಮೀಜಿ ಸಿಂಹಾದ್ರಿ ಸದ್ಗುರು ಸ್ವಾಮೀಜಿ ಮಾತೃಶ್ರೀ ನಾಗವೇಣಿ ಅಮ್ಮನವರ ವಿಗ್ರಹಗಳ ಅನಾವರಣ ಕಾರ್ಯವನ್ನು ನಡೆಸಲಾಗುತ್ತದೆ ಪ್ರತಿಯೊಬ್ಬರು ಲೋಕ ಮತ್ತು ಬದುಕಿನ ನಡುವೆ ತನ್ನನ್ನು ತಾನು ಅರ್ಥೈಸಿಕೊಳ್ಳಲು ಪ್ರಯತ್ನ ಪಡಬೇಕು ಎಂದು ತಿಳಿಸಿದರು.

ಸಭಾ ಕಾರ್ಯಕ್ರಮಕ್ಕೆ ಮುನ್ನ ಬೆಳಗ್ಗೆಯಿಂದಲೇ ಸುಪ್ರಭಾತ ಪ್ರಾರ್ಥನೆ, ಪುಣ್ಯ ವಾಚನ ರುದ್ರಭಿಷೇಕ ಗಣ ಹೋಮ ನವಗ್ರಹ ವಾಸ್ತು ಹೋಮ ಸಾಮೂಹಿಕ ಗುರುಮಾಲ ಮಂತ್ರ ಹೋಮ ಭೂಮಿ ಪೂಜೆ ಹಾಗೂ ದಿವ್ಯ ಮಂಗಳ ವಿಗ್ರಹಗಳ ಅನಾವರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಶ್ರೀ ಶಾರದಾಶ್ರಮದ ಮಾತಾಜಿ ತ್ಯಾಗಮಯಿ ನರಹರಿ ಸೇವಾ ಪ್ರತಿಷ್ಠಾನ ಹಾಗೂ ಸ್ಥಾನಿಕ ಕಾರ್ಯಕಾರಿ ಸಮಿತಿಯ ಜಂಟಿ ಕಾರ್ಯದರ್ಶಿ ಬಿಸಿಮೂರ್ತಿ ಎನ್ ಪದ್ಮನಾಭ ಪುರುಷೋತ್ತಮ ಸಿಕೇಶ್ ದರ್ಶನ್ ಸುಧಾಕರ್ ಬಿಸಿ ವೆಂಕಟೇಶ್ ಮೂರ್ತಿ ಬಿಸಿ ರಾಘವೇಂದ್ರ ಗುಪ್ತ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page