ಜಿಪಂ.ತಾಪಂ ಸರ್ಕಾರ ಚುನಾವಣೆ ನಡೆಸಲು ಸಿದ್ಧವಾಗಿದೆ ಎಂಬ ಶುಭ ಸೂಚನೆ ನೀಡಿದ ಸಿ.ಎಂ ಸಿದ್ದರಾಮಯ್ಯ.

by | 26/05/24 | ಕರ್ನಾಟಕ


ಮೈಸೂರಿನಲ್ಲಿ ಮೇ.26 ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದೆ. ಲೋಕಸಭಾ ಚುನಾವಣೆ ಫಲಿತಾಂಶದ ನಂತರ ತಾಲ್ಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆ ಕೂಡ ನಡೆಸಲಾಗುವುದು. ಸರ್ಕಾರ ಚುನಾವಣೆ ನಡೆಸಲು ಸಿದ್ಧವಿದೆ. ಕ್ಷೇತ್ರ ಪುನರ್ವಿಗಂಡಣೆಗೆ ಜನವರಿವರೆಗೆ ಗಡುವು ಇದ್ದು, ಈ ಬಗ್ಗೆ ಅಡ್ವೋಕೇಟ್ ಜನರಲ್ ಜೊತೆ ಚರ್ಚೆ ಮಾಡಿ ಅವರು ಕಾನೂನು ಪ್ರಕಾರ ಏನು ಮಾಡಬೇಕೆಂದು ಹೇಳುತ್ತಾರೋ ಹಾಗೆ ಮಾಡುತ್ತೇವೆ. ಪುನರ್ ವಿಂಗಡಣೆಯಾದ ಮೇಲೆ ಮೀಸಲಾತಿ ಮಾಡಲೇಬೇಕಾಗುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.

ಕರ್ನಾಟಕದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿಯ ಅವಧಿ ಮುಗಿದು ಬರೋಬ್ಬರಿ ಮೂರು ವರ್ಷ ಆಗಿದೆ. 2021ರ ಏಪ್ರಿಲ್‌ನಲ್ಲಿಯೇ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಯಬೇಕಿತ್ತು. ಆದರೆ, ಅವಧಿ ಮುಗಿದಿದ್ದರೂ ಹೊಸ ಚುನಾವಣೆ ಇನ್ನೂ ಸಹ ನಡೆದಿಲ್ಲ. ವಿವಿಧ ಕಾರಣಗಳಿಂದ (ಕ್ಷೇತ್ರ ಪುನರ್​ ವಿಂಗಡಣೆ ಹಾಗೂ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕರಣ ಹೈಕೋರ್ಟ್​ನಲ್ಲಿದೆ. ಹೀಗಾಗಿ ಚುನಾವಣೆಗೆ ವಿಳಂಬವಾಗುತ್ತಿದೆ. ಹಾಗೇ ಈ ಹಿಂದಿನ ಸರ್ಕಾರ ಕೆಲ ಕಾರಣಾಂತರಗಳಿಂದ ಚುನಾವಣೆಯನ್ನು ಮುಂದೂಡತ್ತಲೇ ಬಂದಿತು.
ಎಂ ಎಲ್ ಎ. ಎಂ.ಪಿ. ವಿಧಾನ ಪರಿಷತ್.ಆಗ್ನೇಯ ಶಿಕ್ಷಕರ.ಸೇರಿದಂತೆ ಸಾಲು ಸಾಲು ಚುನಾವಣೆಗಳು ನಡೆದರೂ ನಗರಸಭೆ.ಪಟ್ಟಣ ಪಂಚಾಯಿತಿಗಳಿಗೆ ಎರಡನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ಬಿಡುಗಡೆ ಮಾಡಲಿಲ್ಲ.ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳ ಚುನಾವಣೆ ನಡೆಸದೆ ಇರುವುದು ಆಕಾಂಕ್ಷಿಗಳಿಗೆ ಹಿನ್ನಡೆಯಾಗಿತ್ತು.ಈಗ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೈಸೂರಿನಲ್ಲಿ ಜಿಪಂ ತಾಪಂ ಚುನಾವಣೆ ನಡೆಸುವ ಸೂಚನೆ ನೀಡಿದ್ದಾರೆ.
ಈಗ ಸಿದ್ದರಾಮಯ್ಯ ನೇತೃತ್ವದ ಹೊಸ ಸರ್ಕಾರ ಬಂದ ವರ್ಷದ ಆಗಿದ್ದು, ಇದೀಗ ಜೂನ್ 4ರಂದು ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಚುನಾವಣೆಗಳನ್ನು ನಡೆಸಲು ಮುಂದಾಗಿದೆ. ಆದ್ರೆ, ಅದ್ಯಾವಾಗ ನಡೆಸುತ್ತಾರೋ ಗೊತ್ತಿಲ್ಲ. ಮೀಸಲಾತಿ, ಕ್ಷೇತ್ರ ಪುನರ್ ವಿಂಗಡಣೆ ಸಂಬಂಧ ಪ್ರಕರಣಗಳು ಕೋರ್ಟ್​ನಲ್ಲಿ ಇರುವುದರಿಂದ ಇನ್ನಷ್ಟು ತಿಂಗಳು ವಿಳಂಬವಾಗುವ ಸಾಧ್ಯತೆಗಳು ಇವೆ. ಒಂದು ವೇಳೆ ಸರ್ಕಾರ ಈ ಬಗ್ಗೆ ಮುತುವರ್ಜಿ ವಹಿಸಿ ಕೋರ್ಟ್​ ಕಾನೂನು ಪ್ರಕ್ರಿಯೆ ಮುಗಿಸುವುದರ ಜೊತೆಗೆ ಮೀಸಲಾತಿ ನಿಗದಿಪಡಿಸಿದರೆ ಮುಂದಿನ ಒಂದೆರೆಡು ತಿಂಗಳಲ್ಲೇ ಚುನಾವಣೆ ನಡೆಸಬಹುದು ಎನ್ನಲಾಗಿದೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page