ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ ಜುಲೈ 09 ರಿಂದ ಜಿಲ್ಲೆಯಾದ್ಯಂತ ಕರ್ನಾಟಕ ಜ್ಯೋತಿ ರಥಯಾತ್ರೆ ಸಂಚಾರ

by | 25/06/24 | ಸುದ್ದಿ


ಚಿತ್ರದುರ್ಗ ಜೂನ್.25:
ಕರ್ನಾಟಕ ಸಂಭ್ರಮ-50ರ ಅಂಗವಾಗಿ ಕರ್ನಾಟಕ ಜ್ಯೋತಿ ರಥಯಾತ್ರೆಯು ರಾಜ್ಯಾದ್ಯಂತ ಸಂಚರಿಸುತ್ತಿದ್ದು, ಜುಲೈ 09ರಂದು ಚಿತ್ರದುರ್ಗ ಜಿಲ್ಲೆಗೆ ಆಗಮಿಸಲಿದೆ. ಜುಲೈ 9 ರಿಂದ 14 ರವರೆಗೆ ಜಿಲ್ಲೆಯಾದ್ಯಂತ “ಕರ್ನಾಟಕ ಜ್ಯೋತಿ ರಥಯಾತ್ರೆ” ನಡೆಯಲಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕರ್ನಾಟಕ ಸಂಭ್ರಮ-50ರ ಅಂಗವಾಗಿ ಜ್ಯೋತಿ ರಥಯಾತ್ರೆಯನ್ನು ಗೌರವದಿಂದ ಬರ ಮಾಡಿಕೊಳ್ಳಲು ಹಮ್ಮಿಕೊಂಡಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಆರು ತಾಲ್ಲೂಕುಗಳನ್ನು ಒಳಗೊಂಡಂತೆ ಕರ್ನಾಟಕ ಜ್ಯೋತಿ ರಥಯಾತ್ರೆಯು ಜಿಲ್ಲೆಯಾದ್ಯಂತ ಜುಲೈ 09 ರಿಂದ 14 ರವರೆಗೆ ಸಂಚಾರ ನಡೆಯಲಿದ್ದು, ಸಂಬಂಧಪಟ್ಟ ಆಯಾ ತಾಲ್ಲೂಕಿನ ತಹಶೀಲ್ದಾರ್‍ಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರ ಸಮನ್ವಯತೆಯೊಂದಿಗೆ ಕರ್ನಾಟಕ ಜ್ಯೋತಿ ರಥಯಾತ್ರೆಗೆ ಸಂಭ್ರಮದ ಸ್ವಾಗತ ಸಂಚಾರಕ್ಕೆ ಅಗತ್ಯ ಕ್ರಮವಹಿಸಬೇಕು ಎಂದು ಸೂಚಿಸಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ಮಾತನಾಡಿ, ಸುವರ್ಣ ಸಂಭ್ರಮ-50ರ ಅಂಗವಾಗಿ ಕರ್ನಾಟಕ ಜ್ಯೋತಿ ರಥಯಾತ್ರೆಯು ಚಿತ್ರದುರ್ಗ ಜಿಲ್ಲೆಗೆ ಆಗಮಿಸಲಿದ್ದು, ರಥಯಾತ್ರೆಯನ್ನು ಅದ್ದೂರಿಯಾಗಿ ಸ್ವಾಗತಿಸಲು ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ಮೂಲಕ ಜುಲೈ 9ರಂದು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿಗೆ ಆಗಮಿಸಲಿದ್ದು, ರಥಯಾತ್ರೆಯನ್ನು ಸಂಭ್ರಮದಿಂದ ಬರ ಮಾಡಿಕೊಳ್ಳಲಾಗುವುದು. ಜುಲೈ 10ರಂದು ಚಿತ್ರದುರ್ಗ, ಜುಲೈ 11ರಂದು ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದ ನಾಯಕನಹಟ್ಟಿ, ಜುಲೈ 12ರಂದು ಚಳ್ಳಕೆರೆ, ಜುಲೈ 13ರಂದು ಹಿರಿಯೂರು, ಜುಲೈ 14ರಂದು ಹೊಸದುರ್ಗ ತಾಲ್ಲೂಕಿನಲ್ಲಿ ರಥಯಾತ್ರೆ ಸಂಚರಿಸಿ ನಂತರ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಗೆ ತೆರಳಲಿದೆ ಎಂದು ಮಾಹಿತಿ ನೀಡಿದರು.
ಕರ್ನಾಟಕ ಜ್ಯೋತಿ ಯಾತ್ರೆ ಸಂದರ್ಭದಲ್ಲಿ ಎರಡು ಕಲಾ ತಂಡಗಳು ಮತ್ತು ಯಾತ್ರೆಗೆ ಸಂಬಂಧಿಸಿದಂತೆ ನಗರದಲ್ಲಿ, ತಾಲ್ಲೂಕುವಾರು ರೂಟ್ ಮ್ಯಾಪ್ ಸಿದ್ಧಪಡಿಸಿ ವಿವಿಧ ಸ್ಥಳಗಳ ಮೂಲಕ ಜ್ಯೋತಿಯಾತ್ರೆ ಹೋಗುವ ಪಟ್ಟಿಯನ್ನು ಸಿದ್ದಪಡಿಸಿ ಮಾಹಿತಿ ನೀಡಲಾಗುವುದು ಎಂದು ತಿಳಿಸಿದ ಅವರು, ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿಯೂ ಬೆಳಿಗ್ಗೆ 9 ಗಂಟೆಗೆ ಜ್ಯೋತಿ ರಥಯಾತ್ರೆಯು ಪ್ರಾರಂಭವಾಗಲಿದ್ದು, ಒಂದು ದಿನ ಸಂಪೂರ್ಣ ಆಯಾ ತಾಲ್ಲೂಕಿನಲ್ಲಿಯೇ ಸಂಚರಿಸಲಿದೆ. ರಥಯಾತ್ರೆಯು ವಿವಿಧ ಸಾಂಸ್ಕøತಿಕ ಕಲಾತಂಡಗಳನ್ನು ಒಳಗೊಂಡು, ವೈಭವಯುತವಾಗಿರಲಿದೆ. ಸಂಚಾರದ ಸಂದರ್ಭದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಕನ್ನಡಪರ ಸಂಘಟನೆಗಳು, ಸಾರ್ವಜನಿಕರು, ಸಾಹಿತಿಗಳು, ಜನಪ್ರತಿನಿಧಿಗಳು ಯಾತ್ರೆಗೆ ಅದ್ಧೂರಿ ಸ್ವಾಗತ ಕೋರುವಂತಾಗಬೇಕು. ಇದೇ ವೇಳೆ ಕನ್ನಡ ಧ್ವಜ ವಿತರಣೆಗೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ, ಶಿಕ್ಷಣ ಇಲಾಖೆಯ ಚಿದಾನಂದಸ್ವಾಮಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ಫೋಟೋ ವಿವರ: ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕರ್ನಾಟಕ ಜ್ಯೋತಿ ರಥಯಾತ್ರೆಯನ್ನು ಗೌರವದಿಂದ ಬರಮಾಡಿಕೊಳ್ಳಲು ಹಾಗೂ ಬೀಳ್ಕೊಡಲು ಕೈಗೊಳ್ಳಬೇಕಾದ ಅಗತ್ಯ ಪೂರ್ವ ಸಿದ್ಧತೆಗಳ ಕುರಿತು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ಬೆಸ್ಕಾಂ: ನೀರಾವರಿ ಪಂಪ್‍ಸೆಟ್ ಬಳಕೆದಾರರು ಆರ್ ಆರ್ ಸಂಖ್ಯೆಗೆ ಆಧಾರ್ ಜೋಡಣೆ ಕಡ್ಡಾಯ

ಚಿತ್ರದುರ್ಗಜು 15 ಚಿತ್ರದುರ್ಗ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೃಷಿ ನೀರಾವರಿ ಪಂಪ್‍ಸೆಟ್ ಬಳಕೆದಾರರು ತಮ್ಮ ನೀರಾವರಿ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page