ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಆದೇಶ ಬಯಲು ಪ್ರದೇಶದಲ್ಲಿ ನ. 10 ರಿಂದ 15 ರವರೆಗೆ ಮಾತ್ರ ಹಸಿರು ಪಟಾಕಿ ಮಾರಾಟ

by | 10/11/23 | ಪರಿಸರ


ಚಿತ್ರದುರ್ಗ ನ.10:
ದೀಪಾವಳಿ ಹಬ್ಬದ ನಿಮಿತ್ತ ಜಿಲ್ಲೆಯ ನಗರ, ಪಟ್ಟಣಗಳಲ್ಲಿ ಬಯಲು ಪ್ರದೇಶದಲ್ಲಿ ಇದೇ ನವೆಂಬರ್ 10 ರಿಂದ 15 ರವರೆಗೆ ಬಯಲು ಪ್ರದೇಶದಲ್ಲಿ ತಾತ್ಕಾಲಿಕ ಶೆಡ್‍ಗಳನ್ನು ಹಾಕಿಕೊಂಡು ಪಟಾಕಿಗಳನ್ನು ಮಾರಾಟ ಮಾಡಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಆದೇಶಿಸಿದ್ದಾರೆ.
ದೀಪಾವಳಿ ಹಬ್ಬದ ಸಮಯದಲ್ಲಿ ಮಾರಾಟ ಮಾಡಲಾಗುವ, ತಯಾರಾದ ಹಸಿರು ಪಟಾಕಿಯನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕರ ಆಸ್ತಿ ಸುರಕ್ಷತೆಗಾಗಿ ಪ್ರತಿ ವರ್ಷದಂತೆ ಈ ವರ್ಷವೂ ಸಹ, ಜಿಲ್ಲೆಯಲ್ಲಿ ಈಗಾಗಲೇ ಅಧಿಕೃತ ಪರವಾನಗಿ ಹೊಂದಿರುವವರು ಮತ್ತು 2023ನೇ ಸಾಲಿಗೆ ಪರವಾನಗಿ ನವೀಕರಿಸಿಕೊಂಡಿರುವವರು ನಗರ, ಪಟ್ಟಣಗಳಲ್ಲಿ ಬಯಲು ಪ್ರದೇಶದಲ್ಲಿ ಹಂಗಾಮಿ ಶೆಡ್‍ಗಳನ್ನು ಹಾಕಿಕೊಂಡು ಪಟಾಕಿಗಳನ್ನು ಮಾರಾಟ ಮಾಡಲು ಆದೇಶಿಸಲಾಗಿದೆ. ಯಾವ ಪರವಾನಗಿದಾರರೂ ಅಧಿಕೃತ ಪ್ರದೇಶಗಳನ್ನು ಹೊರತುಪಡಿಸಿ ಬೇರೆ ಸ್ಥಳಗಳಲ್ಲಿ ಪಟಾಕಿ ವ್ಯಾಪಾರ ಮಾಡುವಂತಿಲ್ಲ.
ಪಟಾಕಿ ಮಾರಾಟಕ್ಕೆ ನಿಗದಿಪಡಿಸಿದ ಸ್ಥಳ ವಿವರ: ಚಿತ್ರದುರ್ಗ ನಗರದ ಹಳೇ ಮಾದ್ಯಮಿಕ ಶಾಲಾ ಮೈದಾನ, ಹಿರಿಯೂರು ನಗರದ ನೆಹರು ಮೈದಾನ, ಚಳ್ಳಕೆರೆ ನಗರದ ಬಿಸಿ ನೀರು ಮುದ್ದಪ್ಪ ಪ್ರೌಢಶಾಲೆ ಆವರಣ, ಹೊಳಲ್ಕೆರೆ ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಕನ್ನಡ ಮತ್ತು ಉರ್ದು ಪಾಠಶಾಲೆ ಆವರಣ, ಹೊಸದುರ್ಗ ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಆವರಣ, ವೀರಭದ್ರಸ್ವಾಮಿ ದೇವಸ್ಥಾನ ಹಾಗೂ ಪೊಲೀಸ್ ಕ್ವಾಟ್ರರ್ಸ್ ಎದುರು ಹೊಸದುರ್ಗ, ಮೊಳಕಾಲ್ಮೂರು ಪಟ್ಟಣದ ಬಾಲಕಿಯರ ಸರ್ಕಾರಿ ಪ್ರಾಥಮಿಕ ಶಾಲೆ ಆವರಣದ ಬಯಲು ಪ್ರದೇಶದಲ್ಲಿ ಹಂಗಾಮಿ ಶೆಡ್‍ಗಳನ್ನು ಹಾಕಿಕೊಂಡು ಹಸಿರು ಪಟಾಕಿಗಳನ್ನು ಮಾರಾಟ ಮಾಡಬಹುದು.
ತಯಾರಾದ ಸ್ಪೋಟಕ ವಸ್ತುಗಳನ್ನು ದಾಸ್ತಾನು ಮಾಡಿ ಮಾರಾಟ ಮಾಡಲು ಸ್ಪೋಟಕ ವಸ್ತುಗಳ ಜಂಟಿ ನಿಯಂತ್ರಕರು ಚೆನ್ನೈ ಇವರಿಂದ 100 ಕೆ.ಜಿ. ಯಷ್ಟು ಹಸಿರು ಪಟಾಕಿ ಹೊಂದಲು ಮತ್ತು 50 ಕೆ.ಜಿ.ಯಷ್ಟು ದಾಸ್ತಾನು ಮಾಡಿ ಮಾರಾಟ ಮಾಡಲು ಚಿತ್ರದುರ್ಗ ಜಿಲ್ಲಾ ದಂಡಾಧಿಕಾರಿಗಳು ಇವರಿಂದ ಪರವಾನಿಗೆ ಹೊಂದಿರುವವರು ಮೇಲ್ಕಂಡ ಅವಧಿಯಲ್ಲಿ ನಿಗದಿತ ಸ್ಥಳದ ಬಯಲು ಪ್ರದೇಶದಲ್ಲಿ ಪಟಾಕಿಗಳನ್ನು ಮಾರಾಟ ಮಾಡಲು ಆದೇಶಿಸಿದೆ.
ಷರತ್ತುಗಳು: ಹಂಗಾಮಿ ಶೆಡ್‍ಗಳನ್ನು ಸ್ಥಾಪಿಸುವ ಮುನ್ನ ಪರವಾನಗಿದಾರರು ಸ್ಥಳೀಯ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ತಹಶೀಲ್ದಾರ್ ಇವರನ್ನು ಸಂಪರ್ಕಿಸಿ ಸೂಕ್ತ ರೀತಿಯಲ್ಲಿ ಶೇಡ್‍ಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಬೇಕು. ಹಂಗಾಮಿ ಶೇಡ್‍ಗಳನ್ನು ಸರ್ಕಾರದ ಮಾರ್ಗಸೂಚಿಗಳನ್ವಯ ಸ್ಥಾಪಿಸಬೇಕು. ಪರವಾನಿಗೆದಾರರು, ಅವರ ಶೆಡ್‍ಗಳಲ್ಲಿ ಸುಲಭವಾಗಿ ಬೆಂಕಿ ಹತ್ತುವ ಇತರೆ ವಸ್ತುಗಳನ್ನು ಇಡಬಾರದು. ಅಡುಗೆ ಅಥವಾ ಧೂಮಪಾನ ನಿμÉೀಧಿಸಿದ ಬಗ್ಗೆ ಫಲಕಗಳನ್ನು ಹಾಕಬೇಕು. ಪರವಾನಿಗೆದಾರರು ಅವರು ಹೊಂದಿರುವ ಅಧಿಕೃತ ಪರವಾನಿಗೆ ಪತ್ರವನ್ನು ಮಾರಾಟ ಸ್ಥಳದಲ್ಲಿ ಇಟ್ಟುಕೊಂಡಿರಬೇಕು ಮತ್ತು ಪರಿಶೀಲನೆಗಾಗಿ ಸಂಬಂಧಪಟ್ಟ ಅಧಿಕಾರಿಗಳು ವಿಚಾರಿಸಿದಾಗ ತೋರಿಸಬೇಕು. ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು, ಮಾರಾಟಗಾರರು ಸರ್ಕಾರದ ಪರಿಷ್ಕøತ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.
ದೀಪಾವಳಿ ಹಬ್ಬದ ಆಚರಣೆ ಸಂಬಂಧದ ಮಾರ್ಗಸೂಚಿಗಳು: ಸರ್ವೋಚ್ಚ ನ್ಯಾಯಾಲಯವು ನೀಡಿರುವ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಅಧಿಕಾರಿಗಳು ಎಲ್ಲಾ ಹಸಿರು ಪಟಾಕಿಗಳ ಮೇಲೆ ಪ್ಯಾಕೆಟ್ಟುಗಳನ್ನು ರ್ಯಾಂಡಮ್ ಆಗಿ ಸಂಗ್ರಹಿಸಿ, ನಿಗದಿತ ವಿಧಿ ವಿಧಾನಗಳ ಮೂಲಕ ಅವುಗಳ ಶಬ್ದ ಮಟ್ಟವನ್ನು ಮಾಪನ ಮಾಡಬೇಕು ಮತ್ತು ನಿಗದಿತ ಗುಣಮಾಪನಗಳಿಗೆ ಸರಿಹೊಂದದಿದ್ದಲ್ಲಿ ಅವುಗಳನ್ನು ಸಹಾ ಕೂಡಲೇ ಮುಟ್ಟುಗೋಲು ಹಾಕಿಕೊಳ್ಳಬೇಕು. ಸರ್ವೋಚ್ಚ ನ್ಯಾಯಾಲಯವು ಮೇಲ್ಕಾಣಿಸಿದ ನಿರ್ದೇಶನಗಳಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಅವುಗಳನ್ನು ಬಿಟ್ಟು ಉಳಿದ ಯಾವುದೇ ಇತರೆ ಪಟಾಕಿಗಳನ್ನು ಮಾರಾಟ ಮಾಡುವಂತಿಲ್ಲ ಮತ್ತು ಹಚ್ಚುವಂತಿಲ್ಲ. ನ್ಯಾಯಾಲಯದ ಆದೇಶದಂತೆ ಂಂಕಿಒ ಮತ್ತು ಶಬ್ದ ಮಟ್ಟ ಮಾನಿಟರಿಂಗ್ ಮಾಡಲು ಕ್ರಮ ವಹಿಸಬೇಕು. ಮಾದರಿಗಳು ಮತ್ತು ಗುಣ ಮಾಪನಗಳ ವಿಶ್ಲೇಷಣೆ ಹಾಗೂ ಶಬ್ದ ಮಟ್ಟ ಮಾನಿಟರಿಂಗ್ ವಿಷಯದಲ್ಲಿ ಡಿ.ಎಸ್.ಓ. ಡಾ. ರಾಘವೇಂದ್ರ ದೂರವಾಣಿ ಸಂಖ್ಯೆ 9880046189 ಗೆ ಸಂಪರ್ಕಿಸಬಹುದು.
ಹಸಿರು ಪಟಾಕಿ ಮಾರಾಟದ ಮಳಿಗೆಗಳನ್ನು ನವೆಂಬರ್ 10 ರಿಂದ 15ರವರೆಗೆ ಮಾತ್ರ ತೆರೆದಿರತಕ್ಕದ್ದು, ಪರವಾನಗಿದಾರರು ಸಂಬಂಧಪಟ್ಟ ಇಲಾಖೆ, ಪ್ರಾಧಿಕಾರದಿಂದ ನೀಡಿರುವ ಪರವಾನಗಿಯಲ್ಲಿ ನಿಗದಿಪಡಿಸಿರುವ ದಿನಾಂಕ ಮತ್ತು ಸ್ಥಳದಲ್ಲಿ ಮಾತ್ರ ತಾತ್ಕಾಲಿಕ ಹಸಿರು ಪಟಾಕಿ ಅಂಗಡಿಗಳನ್ನು ತೆರೆಯಬೇಕು. ಬೇರೆ ಸ್ಥಳಗಳಲ್ಲಿ ಮತ್ತು ದಿನಾಂಕಗಳಲ್ಲಿ ಅಂಗಡಿಯನ್ನು ತೆರೆಯಬಾರದು, ಸಾರ್ವಜನಿಕ ವಸತಿ ಸ್ಥಳಗಳಿಂದ ದೂರವಿರುವ ಮೈದಾನ ಅಥವಾ ಬಯಲು ಪ್ರದೇಶಗಳಲ್ಲಿ ಹಸಿರು ಪಟಾಕಿ ಮಾರಾಟ ಮಳಿಗೆಗಳನ್ನು ಸ್ಥಾಪಿಸಲು ಸಂಬಂಧಿಸಿದ ಇಲಾಖೆ ಪ್ರಾಧಿಕಾರಿಗಳು ಅನುಮತಿಸಬೇಕು.
ಮಾರಾಟಕ್ಕಾಗಿ ಸಂಗ್ರಹಿಸಲಾದ ಯಾವುದೇ ಪಟಾಕಿಗಳು ಲಿಥಿಯಂ, ಅಂಟೆಮನಿ ಪಾದರಸ, ಅರ್ಸೆನಿಕ್, ಸೀಸ ಮತ್ತು ಸ್ಟ್ರಾಂಷಿಯಂ ಕ್ರೋಮೆಟ್ ಸಂಯುಕ್ತಗಳನ್ನು ಹೊಂದಿರಬಾರದು. ಹಸಿರು ಪಟಾಕಿಗಳನ್ನು ಅಧಿಕೃತ ಉತ್ಪಾದಕರಿಂದ ಹಾಗೂ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಗೊಂಡು ಉತ್ಪಾದಿಸಲಾಗಿದೆಯೇ ಎಂಬುದರ ಬಗ್ಗೆ ಮತ್ತು ಮಾರಾಟ ಮಾಡಲಾಗುತ್ತಿರುವ ಪಟಾಕಿಗಳ ಮೇಲೆ ನಿಗಧಿಪಡಿಸಿರುವ ಲೋಗೋ ಹಾಗೂ ಬಾರ್ ಕೋಡ್ ನ್ನು ಮೊಬೈಲ್‍ನಲ್ಲಿ ಡೌನ್ ಲೋಡ್ ಮಾಡಿ ಪರಿಶೀಲಿಸ ಬಹುದಾಗಿದೆ. ಹಸಿರು ಪಟಾಕಿಗಳನ್ನು ಹಚ್ಚಿಸುವ ಅಥವಾ ಸಿಡಿಸುವ ಸಮಯ ರಾತ್ರಿ 8 ರಿಂದ 10 ಗಂಟೆಯವರೆಗೆ ಸೀಮಿತಗೊಳಿಸಿರುವುದರಿಂದ ಈ ಬಗ್ಗೆ ನಿಗಾವಹಿಸಬೇಕು.
ಮಳಿಗೆಗೆ ಮಾರ್ಗಸೂಚಿ : ಮಳಿಗೆಗಳಲ್ಲಿ ಎರಡು ಕಡೆಯಿಂದ ಸರಾಗವಾಗಿ ಗಾಳಿಯಾಡುವಂತಿರಬೇಕು, ಒಂದು ಮಾರಾಟ ಮಳಿಗೆಯಿಂದ ಮತ್ತೊಂದು ಮಾರಾಟ ಮಳಿಗೆಗೆ 6 ಮೀಟರ್ ಅಂತರವಿರಬೇಕು. ಪ್ರತಿಯೊಂದು ಮಾರಾಟ ಮಳಿಗೆಯಲ್ಲಿ ಸಂಬಂಧಪಟ್ಟ ಇಲಾಖೆ, ಪ್ರಾಧಿಕಾರದಿಂದ ನೀಡಿರುವ ಪರವಾನಗಿ ಪ್ರತಿಯನ್ನು ಸಾರ್ವಜನಿಕರಿಗೆ ಕಡ್ಡಾಯವಾಗಿ ಕಾಣುವಂತೆ ಪ್ರದರ್ಶಿಸುವುದು. ಪರವಾನಗಿ ಪತ್ರವನ್ನು ಪಡೆದಂತವರು ಕಡ್ಡಾಯವಾಗಿ ಮಳಿಗೆಗಳಲ್ಲಿ ಹಾಜರಿರಬೇಕು. ಹಸಿರು ಪಟಾಕಿ ಗಳ ಖರೀದಿಯ ಸಂದರ್ಭದಲ್ಲಿ ಯಾವುದೇ ರೀತಿಯ ಜನದಟ್ಟೆಯಾಗದಂತೆ ಕಟ್ಟುನಿಟ್ಟಾಗಿ ನೋಡಿಕೊಳ್ಳಬೇಕು.
ಮಳಿಗೆಗಳನ್ನು ನಿರ್ಮಿಸಲು ಉಪಯೋಗಿಸುವ ಸಾಧನಗಳು ಸುಲಭವಾಗಿ ಬೆಂಕಿ ಹತ್ತಿಕೊಳ್ಳುವ ರೀತಿಯದ್ದಾಗಿರಬಾರದು. ಸಾಧ್ಯವಾದರೆ ಬೆಂಕಿಯನ್ನು ತಡೆಗಟ್ಟುವ ಸಾಧನಗಳನ್ನು ನಿರ್ಮಾಣಕ್ಕೆ ಉಪಯೋಗಿಸಬೇಕು. ಪ್ರತಿಯೊಂದು ಮಳಿಗೆಗಳ ಗಾತ್ರ 10:10 ಅಡಿಗೆ ಸೀಮಿತಗೊಳಿಸಬೇಕು, ಒಳಗೆ ಯಾವುದೇ ದಾಸ್ತಾನಿನ ಹೆಚ್ಚಿನ ದಾಸ್ತಾನಿನ ವ್ಯವಸ್ಥೆ ಇರಬಾರದು. ರಾತ್ರಿ ವೇಳೆಯಲ್ಲಿ ಮಳಿಗೆಗಳಲ್ಲಿ ಯಾರೂ ಮಲಗಬಾರದು. ಪ್ರತಿಯೊಂದು ಮಳಿಗೆಯಲ್ಲಿ ಪರವಾನಗಿದಾರರು ಅಗ್ನಿ ನಿವಾರಣಾ ಮತ್ತು ಅಗ್ನಿ ಶಮನ ವ್ಯವಸ್ಥೆ ಬಗ್ಗೆ ಅಗತ್ಯ ಸಲಕರಣೆಗಳನ್ನು ಶೇಖರಿಸಿಟ್ಟಿರಬೇಕು. ಪ್ರತಿಯೊಂದು ಮಳಿಗೆಗೆ ಮುಂದಿನಿಂದ ಹಾಗೂ ಹಿಂದಿನಿಂದ ಪ್ರವೇಶಿಸುವ ವ್ಯವಸ್ಥೆ ಇರಬೇಕು. ಇದರಿಂದ ಅಪಘಾತ ಸಂದರ್ಭದಲ್ಲಿ ಮಳಿಗೆಗಳನ್ನು ಪರಿಸ್ಥಿತಿಗನುಗುಣವಾಗಿ ಪ್ರವೇಶಿಸಿ ಒಳಗಿದ್ದವರನ್ನು ರಕ್ಷಿಸಬಹುದು ಹಾಗೂ ಅವಶ್ಯಕತೆ ಬಿದ್ದರೆ ಮಳಿಗೆಗಳನ್ನು ಒಡೆದು ಒಳ ಪ್ರವೇಶಿಸಬಹುದು. ಪ್ರತಿಯೊಂದು ಮಳಿಗೆಯಲ್ಲಿ 9 ಲೀಟರ್ ಸಾಮಥ್ರ್ಯದ ಒಂದು ವಾಟರ್ ಪ್ರೆಜರ್ ಮಾದರಿ ಅಗ್ನಿನಂದಕ ಹಾಗೂ ಎರಡು ಬಕೆಟ್‍ಗಳಲ್ಲಿ ನೀರನ್ನು ಇಟ್ಟಿರಬೇಕು. ಪ್ರತಿಯೊಂದು ಮಳಿಗೆ ಪಕ್ಕದಲ್ಲಿ ಎರಡು ಡ್ರಮ್‍ನಲ್ಲಿ ಕನಿಷ್ಟ 400 ಲೀಟರ್ ನೀರನ್ನು ಶೇಖರಿಸಿಟ್ಟಿರಬೇಕು. ಪಟಾಕಿಗಳನ್ನು ಹಗಲಿನ ವೇಳೆಯಲ್ಲಿ ಮಾತ್ರ ಮಾರಾಟ ಮಾಡಬೇಕು. ಸಾರ್ವಜನಿಕರ ಮತ್ತು ಮಕ್ಕಳ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೆÇಲೀಸ್ ಇಲಾಖೆ, ನಗರಸಭೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇತರೆ ಇಲಾಖೆ, ಪಾಲಿಕೆ, ಪ್ರಾಧಿಕಾರಗಳಿಂದ ಹೊರಡಿಸಲಾದ ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಸಹ ಕಡ್ಡಾಯವಾಗಿ ಪಾಲಿಸಬೇಕು.
ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಆದೇಶ ಮತ್ತು ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 188 ರ ಅಡಿಯಲ್ಲಿ ಶಿಸ್ತಿನ ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ತಿಳಿಸಿದ್ದಾರೆ.

Latest News >>

ನೂತನ ಸಂಸದ ಗೋವಿಂದ ವಿವಿಧ ಕ್ಷೇತ್ರಗಳಲ್ಲಿ ಕೃತಜ್ಞತಾ ಸಮಾವೇಶ.

ಚಿತ್ರದುರ್ಗ ಜೂ. 12 ಚಿತ್ರದುರ್ಗದ ನೂತನ ಸಂಸದರಾದ ಗೋವಿಂದ ಕಾರಜೋಳರವರು ತಮ್ಮ ಗೆಲುವಿಗೆ ಶ್ರಮಿಸಿದ ಮತದಾರರು ಮತ್ತು ಬಿಜೆಪಿ ಹಾಗೂ ಜೆಡಿಎಸ್...

ಗ್ರಾಮೀಣ ಮತ್ತು ನಗರ ಕುಂಚಿಟಿಗ ಎಂದುತಾರತಮ್ಯ ಮಾಡದಂತೆ ಸಮಸ್ಥ ಕುಂಚಿಟಿಗರಿಗೆ ಕೇಂದ್ರ ಓಬಿಸಿ ಮೀಸಲಾತಿ ಕಲ್ಪಿಸಲು ಆಗ್ರಹ :ಎಸ್.ವಿ.ರಂಗನಾಥ್

ಹಿರಿಯೂರು: ಕುಂಚಿಟಿಗರಿಗೆ ಗ್ರಾಮೀಣ ಮತ್ತು ನಗರ ಕುಂಚಿಟಿಗ ಎಂದು ತಾರತಮ್ಯ ಮಾಡದಂತೆ ಸಮಸ್ಥ ಕುಂಚಿಟಿಗರಿಗೆ ಕೇಂದ್ರ ಸರ್ಕಾರದ ಓಬಿಸಿ ಮೀಸಲಾತಿ...

ಅಂಬೇಡ್ಕರ್ ಸ್ವಾಭಿಮಾನಿ ಸೇನೆ ತಾಲ್ಲೂಕು ಸಮಿತಿ ಯಿಂದ ಎಲ್ಲಾ ಜಾತಿಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ:ಅಧ್ಯಕ್ಷರಾದ ರಾಮಚಂದ್ರ

ಹಿರಿಯೂರು: ಅಂಬೇಡ್ಕರ್ ಸ್ವಾಭಿಮಾನಿ ಸೇನೆ ತಾಲ್ಲೂಕು ಸಮಿತಿ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ರವರ ಜಯಂತಿ ಮತ್ತು ಪ್ರೊ.ಬಿ. ಕೃಷ್ಣಪ್ಪ ರವರ...

ಚಿಕ್ಕೋಡಿ ಲೋಕಸಭಾಕ್ಷೇತ್ರದ ನೂತನ ಸಂಸದರಾದ ಪ್ರಿಯಾಂಕ ಹಾಗೂ ರಾಹುಲ್ ಜಾರಕಿಹೊಳಿಯವರಿಗೆ ವಾಲ್ಮೀಕಿನಾಯಕ ಸಮುದಾಯದಿಂದ ಗೌರವಸನ್ಮಾನ

ಹಿರಿಯೂರು: 12-ಜೂನ್ 2024 ಬುಧವಾರದಂದು ನಗರಕ್ಕೆ ಆಗಮಿಸಿದ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸದಸ್ಯರು ಪ್ರಿಯಾಂಕ ಜಾರಕಿಹೊಳಿ ಹಾಗೂ ರಾಹುಲ್...

ಕೇಂದ್ರ ಸಚಿವ ಸಂಪುಟದಲ್ಲಿ ಮಾದಿಗ ಸಮುದಾಯಕ್ಕೆ ಸಚಿವ ಸ್ಥಾನ ನೀಡುವಲ್ಲಿ ಕೇಂದ್ರ ಸರ್ಕಾರ ಎಡವಿದೆ. ಅದಿಜಾಂಬವ ಮಠದ ಶ್ರೀಷಡಕ್ಷರಿಮುನಿಸ್ವಾಮೀಜಿ

ಚಿತ್ರದುರ್ಗ: ಮಾದಿಗ ಸಮುದಾಯ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಕೇಂದ್ರದಲ್ಲಿ ನೂತನ ಸರ್ಕಾರ ರಚನೆಯಾಗಿದೆ ಅದರಲ್ಲಿ ರಾಜಕೀಯವಾಗಿ ಕುಗ್ಗಿರುವ,...

ಕೇಂದ್ರ ಸಚಿವ ಸಂಪುಟದಲ್ಲಿ ಅಹಿಂದ ವರ್ಗಕ್ಕೆ ಅನ್ಯಾಯ* *ವೀರಶೈವ ಲಿಂಗಾಯತ ವರ್ಗಕ್ಕೆ ಅಪಮಾನ* *ಮತಗಳಿಗಷ್ಟೇ ಲಿಂಗಾಯತರು, ಅಧಿಕಾರಕ್ಕೆ ಅಲ್ಲ* *ಬಿಜೆಪಿ ನಿಜವಾದ ಮುಖವಾಡ ಬಯಲು* *ಮಾಜಿ ಸಚಿವ ಎಚ್.ಆಂಜನೇಯ ಆರೋಪ*

ಚಿತ್ರದುರ್ಗ, ಜೂ. 10 ಲಿಂಗಾಯತರು ಹಾಗೂ ಅಹಿಂದ ಸಮುದಾಯದ ಜನರು ಮತ ಹಾಕಲು ಅಷ್ಟೇ ಸೀಮಿತ, ಅಧಿಕಾರಕ್ಕೆ ಅಲ್ಲ ಎಂಬ ಬಿಜೆಪಿಯ ಮನಸ್ಥಿತಿ ಕೇಂದ್ರ...

ವಾಣಿವಿಲಾಸ ಸಾಗರದಿಂದ ಗಾಯಿತ್ರಿ ಜಲಾಶಯಕ್ಕೆ ನೀರು ಹರಿಸುವಂತೆ ಜೆಜೆ ಹಳ್ಳಿಯ ಬಂದ್ ಯಶಸ್ವಿ ತಾಲ್ಲೂಕು ರೈತ ಸಂಘದ ಅಧ್ಯಕ್ಷ ಕೆ.ಟಿ. ತಿಪ್ಪೇಸ್ವಾಮಿ

ಹಿರಿಯೂರು : ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಗಾಯಿತ್ರಿ ಜಲಾಶಯ ಸೇರಿದಂತೆ ಎಲ್ಲಾ ಕೆರೆಗಳಿಗೆ ವಾಣಿವಿಲಾಸ ಸಾಗರ ಜಲಾಶಯದಿಂದ ನೀರು...

ಸಡಗರ ಸಂಭ್ರಮದಿಂದ ಜರುಗಿದ ಬಸವೇಶ್ವರ ಮೂರ್ತಿ ಪ್ರತಿಷ್ಠಾಪನೆ

ಚಳ್ಳಕೆರೆ: ತಾಲ್ಲೂಕಿನ ಮೈಲನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಬಸವ ಮಂಟಪದಲ್ಲಿ ಬಸವಣ್ಣನವರ ನೂತನ ಮೂರ್ತಿ ಪ್ರತಿಷ್ಠಾಪನೆ ಮತ್ತು...

ಶಾಸಕ ಟಿ.ರಘುಮೂರ್ತಿ ಹುಟ್ಟು ಹಬ್ಬದ ಹಂಗವಾಗಿ ಬನಶ್ರೀ ವೃದ್ಧಾಶ್ರಮಕ್ಕೆ ಪಾತ್ರೆ ದಿನಸಿ ಹಾಗೂ ರೋಗಗಿಳಿಗೆ ಹಾಲು ಬ್ರೆಡ್ ವಿತರಿಸಿ ಹುಟ್ಟು ಹಬ್ಬ ಸಂಭ್ರಮಿಸಿದ ಕಾರ್ಯಕರ್ತರು.

ಚಳ್ಳಕೆರೆ ಜೂ10 ಚಳ್ಳಕೆರೆ ಜೂ10 ಶಾಸಕ ಟಿ ರಘುಮೂರ್ತಿ ಇವರ ಹುಟ್ಟು ಹಬ್ಬದ ಪ್ರಯುಕ್ತ ನೂತನ ನಗರಸಭಾ ನಾಮನಿರ್ದೇಶನ ಸದಸ್ಯರು ಬನಶ್ರೀ...

ಒತ್ತುವರಿ ಮಾಡಿಕೊಂಡಿರುವ ನಕಾಷೆ ಕಂಡ ದಾರಿಯನ್ನು ಬಿಡಿಸಿಕೊಡುವಂತೆ ಗ್ರಾಮಸ್ಥರು ಮನವಿ.

ಚಳ್ಳಕೆರೆ ಜೂ.10.ತಾಲ್ಲೂಕಿನ ಚನ್ನಮ್ಮನಾಗತಿಹಳ್ಳಿ ಗ್ರಾಮದಲ್ಲಿ ಜಮೀನಿನಲ್ಲಿ ನಕಾಶೆ ದಾರಿ ಬಿಡಿಸಿಕೊಡುವಂತೆ ಗ್ರಾಮಸ್ಥರು ತಹಶೀಲ್ದಾರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page