ಹಿರಿಯೂರು ನ.3. ರಾಜ್ಯದಲ್ಲಿ ಬರದ ನಾಡು ಎಂದೇ ಪ್ರಸಿದ್ಧವಾಗಿರುವ ಈ ಬಯಲು ಸೀಮೆಯ ಚಿತ್ರದುರ್ಗ ಜಿಲ್ಲೆಗೆ ಹೊಸದಾಗಿ ಆಗಮಿಸಿರುವ ನೂತನ ಜಿಲ್ಲಾಧಿಕಾರಿಗಳು ಜಿಲ್ಲೆಯ ಜನರ ಬದುಕಿಗೆ ಬೆಳಕಾಗುವ ಹಾಗೂ ನೊಂದವರ ಕಣ್ಣೀರೊರೆಸುವ ಕೆಲಸಕ್ಕೆ ಮುಂದಾಗುತ್ತೀರಾ ಎಂಬುದನ್ನು ನಿರೀಕ್ಷೆ ಮಾಡುತ್ತಿದ್ದೇವೆ ಎಂಬುದಾಗಿ ಸಾಮಾಜಿಕ ಕಾರ್ಯಕರ್ತ ಕಸವನಹಳ್ಳಿ ರಮೇಶ್ ಹೇಳಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾಧ್ಯಗಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.
ಜಿಲ್ಲೆಯ ಜಿಲ್ಲಾಧಿಕಾರಿಗಳು ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ನಡೆಯುತ್ತಿರುವ ಅನ್ಯಾಯ-ಅಕ್ರಮಗಳ ಬಗ್ಗೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು, ಆಗಮಾತ್ರ ಭ್ರಷ್ಟಾಚಾರದ ಬಗ್ಗೆ ಜನರು ನೇರವಾಗಿ ದೂರು ಕೊಡುವ ಧೈರ್ಯ ಮಾಡುತ್ತಾರೆ ಎಂಬುದಾಗಿ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರಲ್ಲದೆ,
ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಪಾರದರ್ಶಕ ,ಸ್ವಚ್ಚ,ಪ್ರಾಮಾಣಿಕ ಆಡಳಿತಕ್ಕೆ ಮುನ್ನುಡಿ ಬರೆಯಬೇಕು, ಸಕಾಲ ಮಾಹಿತಿ ಹಕ್ಕು ಗಳನ್ನು ಜನರಿಗೆ ತಲುಪಿಸಲು ಪ್ರಯತ್ನಿಸಬೇಕು, ಅಲ್ಲದೆ ಬಹಳಷ್ಟು ವರ್ಷಗಳಿಂದ ಒಂದೇ ಕಚೇರಿಯಲ್ಲಿ ಬೀಡು ಬಿಟ್ಟಿರುವ ನೌಕರರು ಅಧಿಕಾರಿಗಳನ್ನು ನಿರ್ಧಾಕ್ಷಿಣ್ಯವಾಗಿ ವರ್ಗಾವಣೆ ಮಾಡಬೇಕು ಎಂದಿದ್ದಾರಲ್ಲದೆ,
ತಾಲ್ಲೂಕು ಕಚೇರಿಗಳಲ್ಲಿ ಕಡತಯಜ್ಞ ಮಾಡುವ ಮೂಲಕ ಪಾರದರ್ಶಕ ಆಡಳಿತಕ್ಕೆ ಒತ್ತು ನೀಡಬೇಕು, ಅಲ್ಲದೆ ಟೇಬಲ್ ಇಂದ ಟೇಬಲ್ ಗೇ, ಕಚೇರಿಯಿಂದ ಕಚೇರಿಗೆ ಸಾರ್ವಜನಿಕರು ಅಲೆದಾಡುವುದನ್ನು ತಪ್ಪಿಸಲು ಏಕಗವಾಕ್ಷಿ ಯೋಜನೆಗಳನ್ನು ಜಾರಿಗೊಳಿಸಲು ಪ್ರಯತ್ನಿಸಬೇಕು ಎಂಬುದಾಗಿ ಅವರು ಮನವಿ ಮಾಡಿದ್ದಾರೆ.
ಈ ಸಾಲಿನಲ್ಲಿ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದ್ದು ಕೆರೆಕಟ್ಟೆಗಳು ತುಂಬಿದ್ದು, ಅದಕ್ಕೆ ಸಂಬಂಧಿಸಿದ ಅಭಿವೃದ್ಧಿ ಕೆಲಸಗಳನ್ನು ಮತ್ತು ಹಸಿರೀಕರಣವನ್ನು ವೇಗವಾಗಿ ಮಾಡಲು ಜಿಲ್ಲಾಧಿಕಾರಿಗಳು ಮುಂದಾಗಬೇಕು, ಅಲ್ಲದೆ ಸರ್ಕಾರದ ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವಂತಹ ಕೆಲಸ ಮಾಡಬೇಕು.
ಅಲ್ಲದೆ ಸಾಂಪ್ರದಾಯಿಕ ಆಡಳಿತದ ಜೊತೆಯಲ್ಲಿ ನೂತನ ಸಂವಹನ ತಂತ್ರಜ್ಞಾನವನ್ನು ಬಳಸಿಕೊಂಡು ಜಿಲ್ಲೆಯ ಜನರ ಕುಂದು ಕೊರತೆಗಳನ್ನು ಬಗೆಹರಿಸುವ ಮೂಲಕ ಜನಸ್ನೇಹಿ ಜಿಲ್ಲಾಧಿಕಾರಿಯಾಗಿ ಜನಪರ ಆಡಳಿತ ನಡೆಸುವ ಮೂಲಕ ಜಿಲ್ಲೆಯ ಜನಮೆಚ್ಚಿನ ಅಧಿಕಾರಿಯಾಗಬೇಕು ಎಂಬುದಾಗಿ ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತರಾದ ಕಸವನಹಳ್ಳಿ ರಮೇಶ್, ಮಂಜುನಾಥ್ ಮಾಳಿಗೆ, ಮಹಾಂತೇಶ್ ಹರ್ತಿಕೋಟೆ, ಯರಬಳ್ಳಿ ನಾಗರಾಜ್,ಪವನ್ ಉಪಸ್ಥಿತರಿದ್ದರು.
ಜಿಲ್ಲೆಗೆ ಆಗಮಿಸಿರುವ ಹೊಸ ಜಿಲ್ಲಾಧಿಕಾರಿಗಳಿಂದ ಹೊಸನಿರೀಕ್ಷೆಗಳನ್ನು ಜಿಲ್ಲೆಯ ಜನ ಮಾಡಬಹುದೇ ಸಾಮಾಜಿಕ ಕಾರ್ಯಕರ್ತ ಕಸವನಹಳ್ಳಿರಮೇಶ್
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments