ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸಲಿದೆ.ಅರಳಲಿದೆ ಜಿಲ್ಲಾಧ್ಯಕ್ಷ ಮುರಳಿ.

by | 07/03/23 | ರಾಜಕೀಯ

ಚಳ್ಳಕೆರೆ ಜನಧ್ವನಿ ವಾರ್ತೆ ಮಾ.7.ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಪರಶುರಾಂಪುರ ಹೋಬಳಿಯ ನಾಗಗೊಂಡನಹಳ್ಳಿಯ ಶ್ರೀ ಚೆಲುಮೆರುದ್ರಸ್ವಾಮಿ ಮಠದಲ್ಲಿ ಮಂಡಲದ ಪದಾಧಿಕಾರಿಗಳು, ಮಹಾ ಶಕ್ತಿಕೇಂದ್ರ ಹಾಗೂ ಶಕ್ತಿಕೇಂದ್ರದ ಪ್ರಮುಖರ ಸಭೆ ನಡೆಯಿತು.

ಈ ಸಭೆಯಲ್ಲಿ ಪ್ರಸ್ತುತ ಕ್ಷೇತ್ರದ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಚಳ್ಳಕೆರೆಯಲ್ಲಿ ಗೆಲ್ಲಿಸುವ ಬಗ್ಗೆ ರೂಪವೇಷಗಳನ್ನು ಸಿದ್ಧಪಡಿಸಲಾಯಿತು. ಜಾಹಿರಾತು

ಕೇಂದ್ರ ಹಾಗೂ ರಾಜ್ಯ ಸರಕಾರದ ಜನಪರ ಕೆಲಸಗಳನ್ನು ಜನರ ಮನೆ-ಮನಗಳಿಗೆ ತಲುಪಿಸುವದರಿಂದ ಬಿಜೆಪಿ ಗೆಲ್ಲಲಿದ್ದು, ಜಿಲ್ಲೆಯಲ್ಲೂ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವ ಮೂಲಕ ಬಿಜೆಪಿ ಶಾಸಕರು ವಿಧಾನ ಸಭೆ ಪ್ರವೇಶಿಸಲಿದ್ದಾರೆ. ಆ ಮೂಲಕ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಮುಖಂಡರು ತಿಳಿಸಿದರು .

ಇದೇ ಸಂದರ್ಭದಲ್ಲಿ ರಾಜ್ಯ ಎಸ್ ಟಿ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸದಸ್ಯ ಆರ್. ಅನಿಲ್ ಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ಎ ಮುರಳಿ ಯಾದವ್ ,ಮಂಡಲದ ಅಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್, ಪ್ರಬಂಧಕ ನರೇಂದ್ರನಾಥ್, ರೈತ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಯಾದವ್ ,ಯುವ ಮೋರ್ಚಾ ಅಧ್ಯಕ್ಷ ಕಾಲುವೆಹಳ್ಳಿ ಪಾಲಯ್ಯ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೈಪಾಲಯ್ಯ,ಜಿಲ್ಲಾ ಉಪಾಧ್ಯಕ್ಷ ರಾಮದಾಸ್, ರಾಜ್ಯ ಎಸ್.ಟಿ ಮೋರ್ಚಾದ ಕಾರ್ಯಕಾರಣಿ ಸದಸ್ಯ ಜೈರಾಮ್, ಬಿಜೆಪಿಯ ಹಿರಿಯ ಮುಖಂಡರು ಹಾಗೂ ಎಪಿಎಂಸಿ ಮಾಜಿ ಅಧ್ಯಕ್ಷ ಸೋಮಶೇಖರ್ ಮಂಡಿಮಠ, ವಿಸ್ತಾರಕ ರಾಜಣ್ಣ, ಪ್ರಧಾನ ಕಾರ್ಯದರ್ಶಿ ಶಶಿಧರ್ ರೆಡ್ಡಿ ಹಾಗೂ ಬಸವರಾಜ್ ಹಾಗೂ ಮಂಡಲದ ಪದಾಧಿಕಾರಿಗಳು, ಮೋರ್ಚಾ ,ಶಕ್ತಿಕೇಂದ್ರ , ಮಹಾಶಕ್ತಿಕೇಂದ್ರ , ಭೂತ್ ಅಧ್ಯಕ್ಷರು,ಕಾರ್ಯಕರ್ತರು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *