ಜಿಲ್ಲೆಯ ಸಂಸದನಾದರೆ ಪಕ್ಷದ ಮುಂಚೂಣಿ ನಾಯಕರ ಜೊತೆ ಕೂರದೆ ಜನರ ಪರವಾದ ಕೆಲಸ ಮಾಡುವೆ ಬಿಜೆಪಿಯ ಗೋವಿಂದ ಕಾರಜೋಳ ಮಾತಿಗೆ ತಿರುಗೇಟು ನೀಡಿದ ಬಿ ಎನ್ ಚಂದ್ರಪ್ಪ

by | 14/04/24 | ಲೋಕಸಭಾ ಚುನಾವಣೆ-2024


ಚಳ್ಳಕೆರೆ: ಚಿತ್ರದುರ್ಗ ಜಿಲ್ಲೆಯ ಜನತೆ ಈಗಾಗಲೇ ಕಾಂಗ್ರೆಸ್ ಪಕ್ಷವನ್ನು ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸಲು ಮನಸ್ಸು ಮಾಡಿದ್ದು ಬಿಜೆಪಿಯವರ ಸುಳ್ಳು ಭರವಸೆಗಳಿಗೆ ಕಿವಿ ಕೊಡುವುದಿಲ್ಲ ಕಳೆದ 2014 ರಿಂದ 18ರವರೆಗೆ ಜಿಲ್ಲೆಯ ಸಂಸದನಾಗಿ ಜನರ ಸೇವೆ ಮಾಡಿದ್ದು ಈ ಬಾರಿಯೂ ಜನತೆ ಆಶೀರ್ವಾದ ಮಾಡಲಿದ್ದಾರೆ ಎಂದು ಲೋಕಸಭಾ ಅಭ್ಯರ್ಥಿ ಬಿ ಎನ್ ಚಂದ್ರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ನಗರದ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಬಿಜೆಪಿ ಪಕ್ಷದ ಅಭ್ಯರ್ಥಿ ಗೋವಿಂದ ಕಾರಜೋಳ ರವರು ಮಾಧ್ಯಮದೊಂದಿಗೆ ಮಾತನಾಡುತ್ತಾ ನಾನು ಗೆದ್ದರೆ ಮೋದಿ ಪಕ್ಕ ಕೋರುತ್ತೇನೆ ಚಂದ್ರಪ್ಪ ಗೆದ್ದರೆ 30 ಜನ ಸಂಸದರೊಂದಿಗೆ ಒಬ್ಬರಾಗಿ ಕೂರುತ್ತಾರೆ ಎಂಬ ಮಾತು ಹೇಳಿದ್ದಾರೆ ಇದು ಅವರ ಅಹಂನ್ನು ತೋರಿಸುತ್ತದೆ ನಾನು ಚುನಾವಣೆಯಲ್ಲಿ ಜಯಗಳಿಸಿದರೆ ಯಾವ ನಾಯಕರ ಜೊತೆಯೂ ಕೂರುವುದಿಲ್ಲ ಜನತೆಯೊಂದಿಗೆ ಬೆರೆತು ಜನರ ಪರವಾಗಿ ಕೆಲಸ ಮಾಡುವ ಇಚ್ಛೆ ಹೊಂದಿದ್ದೇನೆ ಈಗಾಗಲೇ ಬಿಜೆಪಿ ಪಕ್ಷದ ದುರೋಡಳಿತದಿಂದ ರಾಜ್ಯದಲ್ಲಿ ಅಧಿಕಾರ ಕಳೆದುಕೊಂಡಿದ್ದು ಮುಂದಿನ ಲೋಕಸಭಾ ಚುನಾವಣೆಯಲ್ಲಿಯೂ ಸಹ ಬಿಜೆಪಿಗೆ ತಕ್ಕ ಪಾಠ ರಾಜ್ಯದ ಹಾಗೂ ಜಿಲ್ಲೆಯ ಜನತೆ ಕಲಿಸಲಿದ್ದಾರೆ ಎಂದು ತಿಳಿಸಿದರು.


ಮಾಜಿ ಸಚಿವ ಹೆಚ್ ಆಂಜನೇಯ ಮಾತನಾಡಿ ಕಾಂಗ್ರೆಸ್ ಪಕ್ಷ ವಿಧಾನಸಭಾ ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುವುದರಿಂದ ಬಿಜೆಪಿಗೆ ಸೋಲಿನ ಭಯ ಉಂಟಾಗಿದೆ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಆಗುವುದಿಲ್ಲ ಎಂಬ ಮೂಢನಂಬಿಕೆಯಲ್ಲಿ ಬಿಜೆಪಿಯವರು ಇದ್ದರು ಆದರೆ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗ್ಯಾರಂಟಿ ಯೋಜನೆಗಳನ್ನು ಸಮರ್ಥವಾಗಿರಿಗೆ ತಂದಿದ್ದರಿಂದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ನಾಯಕರಿಗೆ ವಿರೋಧಿಸಲು ಯಾವುದೇ ಅಸ್ತ್ರವಿಲ್ಲದಂತಾಗಿದೆ ಆದ್ದರಿಂದ ಚಂದ್ರಪ್ಪನವರ ಮೇಲೆ ಇಲ್ಲ ಸಲ್ಲದ ಆರೋಪಗಳನ್ನು ಮಾಡುವ ಕೆಲಸಗಳನ್ನು ಮಾಡುತ್ತಿದ್ದಾರೆ ಇದು ಜನತೆಯ ಮರಳು ಮಾಡಲು ಆಗುವುದಿಲ್ಲ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಸ್ವಾಮಿನಾಥನ್ ವರದಿ ಜಾರಿಗೆ ತರುತ್ತದೆ ರೈತರ ಬೆಳೆ ಸಾಲ ಮನ್ನಾ ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ದೇಶದ ಹೆಣ್ಣು ಮಕ್ಕಳಿಗೆ ವರ್ಷಕ್ಕೆ 1 ಲಕ್ಷ ಸೇರಿದಂತೆ ಹಲವು ಯೋಜನೆಗಳನ್ನು ಹಮ್ಮಿಕೊಂಡಿದೆ. ಕಾಂಗ್ರೆಸ್ ನೇತೃತ್ವದಲ್ಲಿ ಅಧಿಕಾರಕ್ಕೆ ಬಂದರೆ ಯಾರು ಪ್ರಧಾನಿ ಆಗತ್ತಾರೆ ಎಂಬುದು  ಬಿಜೆಪಿ ಅವರಿಗೆ ಬೇಡವಾಗಿರುವ ವಿಷಯ ಆ ಸಮಯದಲ್ಲಿ ನಮ್ಮ ಹೈಕಮಾಂಡ್ ಸೂಕ್ತ ನಿರ್ಧಾರ ಕೈಗೊಳ್ಳುತ್ತದೆ. ಕಾಂಗ್ರೆಸ್ ಪಕ್ಷ ಈ ಬಾರಿ ಜಿಲ್ಲೆಯಲ್ಲಿ ಜಯ ಗಳಿಸಲಿದೆ ಎಂದು ಹೇಳಿದರು.


ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಈ ಚುನಾವಣೆ ಸಂವಿಧಾನ ಮತ್ತು ಕೋಮುವಾದಿ ವಿರುದ್ಧ ಹೋರಾಟವಾಗಲಿದೆ ದೇಶದಲ್ಲಿ ಜನತೆಯ ಅಸ್ತಿತ್ವ ಉಳಿಯಬೇಕಾದರೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕಿದೆ ದೇಶದಲ್ಲಿ ಬಿಜೆಪಿಯ ಕೋಮುವಾದ ತತ್ವವನ್ನು ಜನ ವಿರೋಧಿಸುತ್ತಿದ್ದಾರೆ ಹಾಗಾಗಿ ಈ ಬಾರಿ ಕಾಂಗ್ರೆಸ್ ಪಕ್ಷದ ಪರ ಮತ ಚಲಾಯಿಸಲಿದ್ದಾರೆ ಕೇಂದ್ರದ ಕಾಂಗ್ರೆಸ್ ಪಕ್ಷ 25 ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದು ಪಕ್ಷದ ಕಾರ್ಯಕರ್ತರು ಮುಖಂಡರು ಪ್ರತಿ ಮನೆಗೆ ತೆರಳಿ ಮನವರಿಕೆ ಮಾಡಿಕೊಟ್ಟು ಮತ ಕೇಳಬೇಕು ಈ ಬಾರಿ ಚಂದ್ರಪ್ಪನವರನ್ನು ಅತಿ ಹೆಚ್ಚು ಮತಗಳಿಂದ ಗೆಲ್ಲಿಸಿ ಲೋಕಸಭೆಗೆ ಕಳುಹಿಸುವ ಗುರಿ ಹೊಂದಬೇಕು ಎಂದು ಕರೆ ನೀಡಿದರು.

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ ದೇಶದಲ್ಲಿ ಕಳೆದ ಹತ್ತು ವರ್ಷಗಳಿಂದ ಬಿಜೆಪಿ ನೇತೃತ್ವದ ಸರ್ಕಾರ ಯಾವುದೇ ಆಶ್ವಾಸನೆಗಳನ್ನು ಈಡೇರಿಸಿಲ್ಲ ಕಾಂಗ್ರೆಸ್ ಕಟ್ಟಿರುವ ಶಾಲೆಗಳಲ್ಲಿ ಇಂದಿಗೂ ವಿದ್ಯಾರ್ಥಿಗಳು ಪಾಠ ಕಲಿಯುತ್ತಿದ್ದಾರೆ 2014ರ ಚುನಾವಣೆಯಲ್ಲಿ ಮೋದಿ ನೀಡಿದ ಯಾವುದೇ ಭರವಸೆಗಳನ್ನು ಇಲ್ಲಿಯವರೆಗೂ ಈಡೇರಿಸಿಲ್ಲ ಇದು ಜನತೆಗೆ ಮನವರಿಕೆಯಾಗಿದ್ದು ಬಿಜೆಪಿಯ 400 ಸ್ಥಾನ ಗಳಿಸುವ ಕನಸು ಈಡೇರುವುದಿಲ್ಲ ಎಂದು ಭವಿಷ್ಯ ನುಡಿದರು.

ಸಭೆಯಲ್ಲಿ ಶಾಸಕರಾದ ಎನ್ ವೈ ಗೋಪಾಲಕೃಷ್ಣ ಟಿ ರಘುಮೂರ್ತಿ ಕೆಸಿ ವೀರೇಂದ್ರ ಮಾತನಾಡಿದರು

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ತಾಜ್ ಪೀರ್ ತಾಲೂಕು ಘಟಕದ ಅಧ್ಯಕ್ಷ ವೀರಭದ್ರಪ್ಪ ಜಿಎಸ್ ಮಂಜುನಾಥ್ ಅನ್ವರ್ ಭಾಷಾ ಶಂಕರ್ ಕೃಷ್ಣಮೂರ್ತಿ ಗೀತಾ ನಂದಿನಿ ಗೌಡ ಶಶಿಕಲಾ ಸುರೇಶ ಬಾಬು ರವಿ ಕುಮಾರ್ ಗದ್ದುಗೆ ತಿಪ್ಪೇಸ್ವಾಮಿ ರೈತ ಮುಖಂಡ ಸೋಮಗದ್ದು ರಂಗಸ್ವಾಮಿ ಮತ್ತು ನಗರಸಭಾ ಸದಸ್ಯರು ಸೇರಿದಂತೆ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ಬೆಸ್ಕಾಂ: ನೀರಾವರಿ ಪಂಪ್‍ಸೆಟ್ ಬಳಕೆದಾರರು ಆರ್ ಆರ್ ಸಂಖ್ಯೆಗೆ ಆಧಾರ್ ಜೋಡಣೆ ಕಡ್ಡಾಯ

ಚಿತ್ರದುರ್ಗಜು 15 ಚಿತ್ರದುರ್ಗ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೃಷಿ ನೀರಾವರಿ ಪಂಪ್‍ಸೆಟ್ ಬಳಕೆದಾರರು ತಮ್ಮ ನೀರಾವರಿ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page