ಜಿ.ಪಂ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸೂಚನೆ ಶಾಲೆಯಿಂದ ಹೊರಗುಳಿದ ಬಾಲಕಿಯರ ಗುರುತಿಸಿ, ಮುಖ್ಯವಾಹಿನಿಗೆ ತನ್ನಿ

by | 26/06/24 | ಸುದ್ದಿ


ಚಿತ್ರದುರ್ಗ ಜೂನ್.26:
ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ ಬಾಲಕಿಯರ ಮಾಹಿತಿಯನ್ನು ಪಡೆದು, ಶಾಲೆಯಿಂದ ಹೊರಗುಳಿದ ಬಾಲಕಿಯರನ್ನು ಮುಖ್ಯವಾಹಿನಿಗೆ ತರಲು ಹಾಗೂ ಬಾಲ್ಯ ವಿವಾಹಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಲಾದ 2023-24ನೇ ಸಾಲಿನ ಮಾರ್ಚ್ ಅಂತ್ಯದವರೆಗಿನ ಕೆ.ಡಿ.ಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಆರು ತಾಲ್ಲೂಕುಗಳ ಅಂಗನವಾಡಿಗಳಿಗೆ ಖುದ್ದಾಗಿ ಭೇಟಿ ನೀಡಬೇಕು. ಶಿಕ್ಷಣ ಇಲಾಖೆಯಿಂದ ಶಾಲೆಯಿಂದ ಹೊರಗುಳಿದ ಬಾಲಕಿಯರ ಮಾಹಿತಿಯನ್ನು ಪಡೆದು, ಶಾಲೆಯಿಂದ ಹೊರಗುಳಿದ ಬಾಲಕಿಯರನ್ನು ಮುಖ್ಯವಾಹಿನಿಗೆ ಕರೆತರಲು ಶ್ರಮಿಸಬೇಕು. ಬಾಲ್ಯ ವಿವಾಹ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಂಗನವಾಡಿಗಳಿಗೆ, ಸೂಪರ್‍ವೈಸರ್‍ಗಳಿಗೆ ಜವಾಬ್ದಾರಿ ನಿಗದಿ ಮಾಡಬೇಕು ಎಂದು ಹೇಳಿದರು.
ಅಂಗನವಾಡಿಗಳಿಗೆ ಸರಬರಾಜು ಆಗುವ ಆಹಾರ ಸಾಮಾಗ್ರಿಗಳು ಕಳಪೆ ಗುಣಮಟ್ಟದಿಂದ ಕೂಡಿವೆ ಎಂದು ದೂರುಗಳು ಕೇಳಿ ಬರುತ್ತಿವೆ. ಕಳಪೆ ಆಹಾರ ಸಾಮಾಗ್ರಿ ಸರಬರಾಜು ಮಾಡಿದವರನ್ನು ಕಪ್ಪುಪಟ್ಟಿಗೆ ಸೇರಿಸುವಂತೆ ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 193 ಬಾಲ್ಯ ವಿವಾಹ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 102 ತಡೆಯಲಾಗಿದ್ದು, 91 ಪ್ರಕರಣಗಳಿಗೆ ಸಂಬಂಧಿಸಿದಂತೆ ಎಫ್‍ಐಆರ್ ದಾಖಲಿಸಲಾಗಿದೆ. 11 ರಿಂದ 18 ವರ್ಷದ 154 ಶಾಲೆಯಿಂದ ಹೊರಗುಳಿದ ಹೆಣ್ಣು ಮಕ್ಕಳನ್ನು ಗುರುತಿಸಿ ಇಲಾಖೆಗೆ ವರದಿ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಅವರು ಕಾನೂನಿನನ್ವಯ ಬಾಲ್ಯ ವಿವಾಹಕ್ಕೆ ಕಾರಣಕರ್ತರಾಗುವ ಪುರೋಹಿತರು, ಕಲ್ಯಾಣ ಮಂಟಪದವರು, ಕೆಟರಿಂಗ್, ಶಾಮಿಯಾನ ಸೇರಿದಂತೆ, ಪಾಲ್ಗೊಂಡ ಎಲ್ಲರ ಮೇಲೂ ಮೊಕದ್ದಮೆ ದಾಖಲಿಸಲು ಅಗತ್ಯ ಕ್ರಮ ವಹಿಸುವಂತೆ ಸೂಚನೆ ನೀಡಿದರು.
ನಿರ್ಮಿತಿ ಕೇಂದ್ರದ ಹಗರಣ ಸಿಓಡಿ ಗೆ ವಹಿಸಲು ಶಿಫಾರಸು :
ಚಿತ್ರದುರ್ಗ ನಿರ್ಮಿತಿ ಕೇಂದ್ರದಲ್ಲಿ ಈ ಹಿಂದಿನ ಯೋಜನಾ ನಿರ್ದೇಶಕರ ಅವಧಿಯಲ್ಲಿ ಆಗಿರುವ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ದುರುಪಯೋಗಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಯನ್ನು ಸಿಒಡಿ ಗೆ ವಹಿಸಲು ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು. ನಿರ್ಮಿತಿ ಕೇಂದ್ರದ ಈಗಿನ ಯೋಜನಾ ನಿರ್ದೇಶಕ ಹರೀಶ್ ಮಾತನಾಡಿ, ನಿರ್ಮಿತಿ ಕೇಂದ್ರದ ಮೂಲಕ ಒಂದು ಸಾವಿರಕ್ಕೂ ಹೆಚ್ಚು ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದ್ದು, ಈ ಹಿಂದಿನ ಅಧಿಕಾರಿಗಳ ಅವಧಿಯಲ್ಲಿ ಭೌತಿಕವಾಗಿ ನಡೆದಿರುವ ಕಾಮಗಾರಿ ಗಿಂತಲೂ ಹೆಚ್ಚಿನ ಹಣವನ್ನು ಪಾವತಿಸಿರುವುದು ಹಾಗೂ ಖರ್ಚು ಮಾಡಿರುವುದು ಕಂಡುಬಂದಿದೆ. ಈಗಾಗಲೆ ಈ ಕುರಿತ ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಮೊಕದ್ದಮೆ ದಾಖಲಿಸಲಾಗಿದೆ ಎಂದರು. ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ಚಿತ್ರದುರ್ಗ ಜಿಲ್ಲಾ ಕೇಂದ್ರ ಮುಖ್ಯ ರಸ್ತೆ ಅಗಲೀಕರಣಕ್ಕೆ ಕ್ರಮವಹಿಸಿ:
ಚಿತ್ರದುರ್ಗ ಜಿಲ್ಲಾ ಕೇಂದ್ರದ ನಗರದ ಬಿ.ಡಿ.ರಸ್ತೆಯನ್ನು ಪ್ರಥಮಾಧ್ಯತೆ ಮೇರೆಗೆ ಅಗಲೀಕರಣ ಮಾಡುವಂತೆ ಅಧಿಕಾರಿಗಳಿಗೆ ಸಚಿವ ಡಿ.ಸುಧಾಕರ್ ಸೂಚನೆ ನೀಡಿದರು.
ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮುಂಭಾಗದಿಂದ ನಗರದ ಹೊಳಲ್ಕೆರೆ ರಸ್ತೆಯ ಕನಕ ವೃತ್ತದವರೆಗೂ ನಿಯಮಾನುಸಾರ ರಸ್ತೆ ಅಗಲವಿರಬೇಕು, ಕಿರಿದಾಗಿರುವ ಕಡೆಗಳಲ್ಲಿ ರಸ್ತೆ ಅಗಲೀಕರಣಕ್ಕೆ ಕ್ರಮ ವಹಿಸಬೇಕು. ಒಂದು ವೇಳೆ ಈ ಮಾರ್ಗದಲ್ಲಿ ಯಾರಾದರೂ ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿದ್ದರೆ ಅದನ್ನು ಕೂಡಲೆ ತೆರವುಗೊಳಿಸಲು ಕ್ರಮವಹಿಸಬೇಕು. ಈ ಕುರಿತು ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಸಭೆ ನಡೆಸಿ, ಜಿಲ್ಲಾ ಕೇಂದ್ರದ ಮುಖ್ಯ ರಸ್ತೆಯನ್ನು ಅಗಲೀಕರಣಕ್ಕೆ ತ್ವರಿತವಾಗಿ ಅಗತ್ಯ ಕ್ರಮವಹಿಸಬೇಕು ಎಂದು ಸೂಚನೆ ನೀಡಿದರು.
ಶಾಸಕ ಎಂ.ಚಂದ್ರಪ್ಪ ಮಾತನಾಡಿ, ಚಿತ್ರದುರ್ಗ ಜಿಲ್ಲಾ ಕೇಂದ್ರಕ್ಕೆ ಬರುವವರು ಅಸಹ್ಯ ಪಟ್ಟುಕೊಳ್ಳುತ್ತಿದ್ದಾರೆ. ಕಳೆದ 29 ವರ್ಷದಿಂದ ನ್ಯಾಯಾಲಯದ ತಡೆಯಾಜ್ಞೆ ತೆರವುಗೊಳಿಸಲು ಸಾಧ್ಯವಿಲ್ಲ. ಅಧಿಕಾರಿಗಳಿಗೆ ಜವಾಬ್ದಾರಿ ಇಲ್ಲವೇ ಎಂದು ಪ್ರಶ್ನಿಸಿದ ಶಾಸಕರು, ಹೊಳಲ್ಕೆರೆಯಲ್ಲಿ ಯಾರ ಮುಲಾಜಿಗೂ ಒಳಗಾಗದೇ ರಸ್ತೆ ಅಗಲೀಕರಣ ಮಾಡಲಾಗಿದೆ ಎಂದು ತಿಳಿಸಿದರು.
ಶಾಸಕ ವೀರೇಂದ್ರ ಪಪ್ಪಿ ಮಾತನಾಡಿ, ಚಿತ್ರದುರ್ಗ ನಗರದ ಒಂದು ಸುತ್ತು ಈಗಾಗಲೇ ಡಿವೈಡರ್ ತೆರವು ಮಾಡಲಾಗಿದೆ. ಜೆಸಿಆರ್ ರಸ್ತೆ, ಎಸ್‍ಬಿಐ ಬ್ಯಾಂಕ್‍ನಿಂದ ಗಾಂಧಿ ಸರ್ಕಲ್‍ವರೆಗಿನ ಮಾರ್ಗದಲ್ಲಿ ಸ್ಕೈವಾಕ್‍ಗೆ ಪ್ರಸ್ತಾವನೆ ಸಿದ್ದವಾಗುತ್ತಿದೆ. ನಗರದ ಚಳ್ಳಕೆರೆ ಗೇಟ್‍ನಲ್ಲಿ ಬಹಳಷ್ಟು ವಾಹನಗಳು ಸಂಚಾರ ಮಾಡುತ್ತವೆ. ಹಾಗಾಗಿ ಅಪಘಾತಗಳು ಸಂಭವಿಸುವ ಸಾಧ್ಯತೆ ಇರುವುದರಿಂದ ಈ ಚಳ್ಳಕೆರೆ ಗೇಟ್‍ನಲ್ಲಿ ವೃತ್ತ ಮಾಡಿಸಿ ಎಂದರು. ಇದಕ್ಕೆ ಧ್ವನಿಗೂಡಿಸಿದ ಶಾಸಕ ಟಿ.ರಘುಮೂರ್ತಿ, ಸಾರ್ವಜನಿಕರ ಸುಗಮ ಸಂಚಾರಕ್ಕೆ ತೊಂದರೆಯಾಗದಂತೆ ರಸ್ತೆ ಅಗಲೀಕರಣಕ್ಕೆ ಅಗತ್ಯ ಕ್ರಮವಹಿಸಬೇಕು ಎಂದು ಸಲಹೆ ನೀಡಿದರು.
ಬಯಲುಸೀಮೆಯಲ್ಲಿಯೂ ಅಡಿಕೆಗೆ ಶೀಘ್ರ ಸಹಾಯಧನ ನಿರೀಕ್ಷೆ: ಪ್ರಸ್ತುತ ಅಡಿಕೆ ಬೆಳೆಯನ್ನು ಬೆಳೆಯುತ್ತಿರುವ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಾತ್ರ ಹನಿ ನೀರಾವರಿ ಘಟಕ ಅಳವಡಿಕೆಗೆ ಸಹಾಯಧನ ನೀಡಲಾಗುತ್ತಿದೆ. ಶೀಘ್ರದಲ್ಲಿಯೂ ಬಯಲುಸೀಮೆಯ ಚಿತ್ರದುರ್ಗ ಜಿಲ್ಲೆಯ ಅಡಿಕೆ ಬೆಳೆಗಾರರಿಗೂ ಸರ್ಕಾರದಿಂದ ಪ್ರೋತ್ಸಾಹ ಧನ ಹಾಗೂ ನರೇಗಾ ಯೋಜನೆಯಡಿ ನೆರವು ನೀಡುವ ಸಂಬಂಧ ಶೀಘ್ರದಲ್ಲಿಯೇ ಸಚಿವ ಸಂಪುಟದ ಅನುಮೋದನೆಯಾಗುವ ನಿರೀಕ್ಷೆ ಇದೆ ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಸವಿತಾ ಸಭೆಗೆ ಮಾಹಿತಿ ನೀಡಿದರು.
ಜಿಲ್ಲೆಯ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಿ:
ಜಿಲ್ಲೆಯ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆಗೆ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಸಚಿವ ಡಿ.ಸುಧಾಕರ್ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಅವರಿಗೆ ಸೂಚನೆ ನೀಡಿದರು.
ಎಲ್ಲ ಕಡೆಯಿಂದಲೂ ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಬೇಡಿಕೆ ಇದೆ. ಹಾಗಾಗಿ ಶುದ್ಧ ಕುಡಿಯುವ ನೀರಿನ ಘಟಕಗಳು ಸುಸ್ಥಿತಿಯಲಿದ್ದು, ಕಾರ್ಯಾರಂಭ ಮಾಡಬೇಕು. ಗ್ರಾಮೀಣ ಕುಡಿಯುವ ನೀರಿನ ಅಧಿಕಾರಿಗಳು ಹಾಗೂ ತಾ.ಪಂ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಸಣ್ಣಪುಟ್ಟ ದುರಸ್ಥಿಯಿದ್ದಲ್ಲಿ ಪಂಚಾಯಿತಿ ಮಟ್ಟದಲ್ಲಿಯೇ ಆರ್.ಓ. ಘಟಕ ರಿಪೇರಿ ಮಾಡಿಸುವಂತೆ ತಿಳಿಸಿದರು.
ಜಿಲ್ಲೆಯಲ್ಲಿರುವ ಆರ್.ಓ.ಘಟಕಗಳ ನಿರ್ವಹಣೆಗೆ ಒಂದೇ ಏಜೆನ್ಸಿ ನಿರ್ವಹಣೆ ಮಾಡುವ ಕುರಿತು ಚಿಂತನೆ ನಡೆಸಲಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಬಸವನಗೌಡ ಸಭೆಗೆ ಮಾಹಿತಿ ನೀಡಿದರು. ವಿದುಯುತ್ ಬಿಲ್ ಪಾವತಿಸಿರುವ, ಸುಸ್ಥಿಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸಂಬಂಧಪಟ್ಟ ಏಜೆನ್ಸಿಯವರು ಗ್ರಾಮ ಪಂಚಾಯಿತಿಯವರಿಗೆ ಹಸ್ತಾಂತರ ಮಾಡಿದರೆ ಇಂತಹ ಆರ್.ಓ. ಘಟಕಗಳನ್ನು ಪಂಚಾಯಿತಿ ವತಿಯಿಂದಲೇ ನಿರ್ವಹಣೆ ಮಾಡಲು ಕ್ರಮವಹಿಸಲಾಗುವುದು ಎಂದು ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್ ತಿಳಿಸಿದರು.
ದೇವರ ಎತ್ತುಗಳಿಗೆ ಟ್ರಸ್ಟ್ ಮಾಡಿ ಅನುದಾನ ನೀಡಿ:
******ಚಳ್ಳಕೆರೆ, ಮೊಳಕಾಲ್ಮುರು ಹಾಗೂ ಚಿತ್ರದುರ್ಗ ತಾಲ್ಲೂಕುಗಳಲ್ಲಿ ದೇವರ ಎತ್ತುಗಳು ಹೆಚ್ಚಾಗಿವೆ. ಈ ದೇವರ ಎತ್ತುಗಳ ನಿರ್ವಹಣೆಗೆ ಟ್ರಸ್ಟ್ ರಚನೆ ಮಾಡಿ ಅನುದಾನ ನೀಡಲು ಕ್ರಮವಹಿಸಬೇಕು ಎಂದು ಶಾಸಕ ಟಿ.ರಘುಮೂರ್ತಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕಿ ಇಂದಿರಾಬಾಯಿ ಅವರಿಗೆ ಸೂಚನೆ ನೀಡಿದರು.
ದೇವರ ಎತ್ತುಗಳಿಗೆ ಟ್ರಸ್ಟ್ ಮಾಡಲು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಬೇಕು. ದೇವರ ಎತ್ತುಗಳಿಗೆ ಟ್ರಸ್ಟ್ ಮಾಡಿ ಅನುದಾನ ಬರವಂತೆ ಮಾಡಬೇಕು ಎಂದು ಸೂಚಿಸಿದರು.
<

strong>ಎಸ್‍ಎಸ್‍ಎಲ್‍ಸಿ ಉತ್ತಮ ಫಲಿತಾಂಶಕ್ಕೆ ಕ್ರಮವಹಿಸಿ:
ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶ ಉತ್ತಮ ಪಡಿಸಿ ರಾಜ್ಯಮಟ್ಟದಲ್ಲಿ ಉನ್ನತ ಸ್ಥಾನ ಪಡೆಯುವ ನಿಟ್ಟಿನಲ್ಲಿ ಪ್ರಾರಂಭದಿಂದಲೇ ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಎಸ್‍ಎಸ್‍ಎಲ್‍ಸಿ ಫಲಿತಾಂಶದಲ್ಲಿ ಮೊದಲ ಸ್ಥಾನದಲ್ಲಿದ್ದ ಚಿತ್ರದುರ್ಗ ಜಿಲ್ಲೆಯು 27ನೇ ಸ್ಥಾನ ಕುಸಿತಕ್ಕೆ ಕಾರಣವೇನು ಎಂದು ಪ್ರಶ್ನಿಸಿದ ಸಚಿವರು, ಡಿಡಿಪಿಐ ಅವರು ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಹೆಚ್ಚಿನ ಜವಾಬ್ದಾರಿ ನೀಡಬೇಕು. ಶಾಲೆಗಳಿಗೆ ನಿಯಮಿತವಾಗಿ ಭೇಟಿ ನೀಡಿ, ಫಲಿತಾಂಶ ಸುಧಾರಣೆಗೆ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳು ಕುರಿತು ಮಾಹಿತಿ ನೀಡಬೇಕು ಎಂದು ತಾಕೀತು ಮಾಡಿದರು.
ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ನಾಸಿರುದ್ಧೀನ್ ಮಾತನಾಡಿ, ಶಾಲಾ ಹಂತದಲ್ಲಿ ಉತ್ತಮ ಫಲಿತಾಂಶಕ್ಕೆ ಕ್ರಮವಹಿಸಲಾಗಿದೆ. ರಾಜ್ಯದ ಫಲಿತಾಂಶದಲ್ಲಿ ಚಿತ್ರದುರ್ಗ ಜಿಲ್ಲೆಯು 10ನೇ ಸ್ಥಾನದೊಳಗೆ ಬರುವಂತೆ ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.[/box]

ವಿಧಾನ ಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ್ ಮಾತನಾಡಿ, ಶಿಕ್ಷಕರನ್ನು ಕಳೆದ ಶೈಕ್ಷಣಿಕ ಸಾಲಿನಲ್ಲಿ ಇತರೆ ಕೆಲಸ ಕಾರ್ಯಗಳಿಗೆ ಹೆಚ್ಚಿನದಾಗಿ ಬಳಸಿಕೊಳ್ಳಲಾಗಿದೆ. ಇದು ಫಲಿತಾಂಶ ಇಳಿಮುಖಕ್ಕೆ ಪ್ರಮುಖ ಕಾರಣವಾಗಿದೆ ಎಂದು ಹೇಳಿದರು.
500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಇರುವ ಶಾಲೆಗಳಲ್ಲಿ ಆದ್ಯತೆ ಅನುಸಾರ ಪ್ರಾರ್ಥನಾ ಪ್ರಾಂಗಣ ಹಾಗೂ ಊಟದ ಸಭಾಂಗಣ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಿದರೆ ವಿಶೇಷ ಅನುದಾನ ಮಂಜೂರಾತಿಗೆ ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯನ್ನು ಸಂಬಂಧಪಟ್ಟ ಏಜೆನ್ಸಿಯವರು ಕಾಮಗಾರಿಯನ್ನು ತ್ವರಿತವಾಗಿ ಮಾಡುತ್ತಿಲ್ಲ. ಕಳೆದ ನಾಲ್ಕು ತಿಂಗಳಲ್ಲಿ ಕೇವಲ ಶೇ.8ರಷ್ಟು ಮಾತ್ರ ಕಾಮಗಾರಿ ಆಗಿದೆ. ಗುತ್ತಿಗೆದಾರರು ಸಹಕರಿಸುತ್ತಿಲ್ಲ ಎಂದು ಭದ್ರಾ ಮೇಲ್ದಂಡೆ ಯೋಜನೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಪ್ರಕಾಶ್ ಸಭೆಗೆ ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಬಿ.ಜಿ.ಗೋವಿಂದಪ್ಪ, ಕಾಮಗಾರಿ ವಿಳಂಬ ಮಾಡುತ್ತಿರುವ ಏಜೆನ್ಸಿಯವರನ್ನು ಕಪ್ಪುಪಟ್ಟಿಗೆ ಸೇರಿಸಲು ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು. ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮವಹಿಸಬೇಕು ಎಂದು ಸಚಿವ ಡಿ.ಸುಧಾಕರ್ ಅಧಿಕಾರಿಗಳಿಗೆ ಸೂಚಿಸಿದರು.
ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡಿ, ಸಂಸದರಾದ ಗೋವಿಂದ ಎಂ.ಕಾರಜೋಳ, ವಿ.ಸೋಮಣ್ಣ ಹಾಗೂ ಬಸವರಾಜ್ ಬೊಮ್ಮಾಯಿ ಅವರು ದೆಹಲಿಯಲ್ಲಿ ಮಂಗಳವಾರದಂದು ಸಭೆ ನಡೆಸಿ, ಭದ್ರಾ ಮೇಲ್ದಂಡೆ ಯೋಜನೆಯ ರೂ.5300 ಕೋಟಿ ಅನುದಾನ ಶೀಘ್ರ ಬಿಡುಗಡೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿದ್ದಾರೆ ಎಂದರು.
ಸಿಸಿ ಕ್ಯಾಮೆರಾ ಸರಿಪಡಿಸಿ: ಚಿತ್ರದುರ್ಗ ನಗರದಲ್ಲಿರುವ ಸಿಸಿ ಕ್ಯಾಮೆರಾಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಈ ಸಿ.ಸಿ.ಕ್ಯಾಮೆರಾಗಳನ್ನು ಕಳೆದ 4-5 ವರ್ಷದ ಹಿಂದೆ ಹಾಕಿದ್ದಾರೆ. ಸರಿಯಾದ ನಿರ್ವಹಣೆ ಇಲ್ಲ. ಈ ಕುರಿತು ಕ್ರಮವಹಿಸಬೇಕು ಎಂದು ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ಅವರಿಗೆ ಸೂಚನೆ ನೀಡಿದರು.
ಚಿತ್ರದುರ್ಗ ನಗರದಲ್ಲಿರುವ ಸಿ.ಸಿ.ಕ್ಯಾಮೆರಾಗಳನ್ನು ಸರಿಪಡಿಸಿ, ನಗರಸಭೆ ವತಿಯಿಂದಲೇ ನಿರ್ವಹಣೆ ಮಾಡುತ್ತೇವೆ ಎಂದು ರೇಣುಕಾ ಸಭೆಗೆ ಮಾಹಿತಿ ನೀಡಿದರು.

ಹೊಸ ಮದ್ಯದಂಗಡಿಗೆ ಅನುಮತಿ ಬೇಡ : ಚಿತ್ರದುರ್ಗ ಕ್ಷೇತ್ರದಲ್ಲಿ ಹಳ್ಳಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಕೇಳಿಬರುತ್ತಿವೆ. ಕೂಡಲೆ ಇದರ ಬಗ್ಗೆ ಅಬಕಾರ ಇಲಾಖೆ ಕ್ರಮ ಕೈಗೊಂಡು, ಹಳ್ಳಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟವನ್ನು ಬಂದ್ ಮಾಡಿಸಬೇಕು, ಅಲ್ಲದೆ ಹೊಸದಾಗಿ ಕ್ಷೇತ್ರ ವ್ಯಾಪ್ತಿಯಲ್ಲಿ ಎಲ್ಲಿಯೂ ಖಾಸಗಿ ಅಥವಾ ಎಂಎಸ್‍ಐಎಲ್ ಮದ್ಯದಂಗಡಿಗೆ ಹಾಗೂ ಸಿಎಲ್-7 ಗೂ ಕೂಡ ಅನುಮತಿ ನೀಡುವುದು ಬೇಡ ಎಂದು ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ಅಬಕಾರ ಇಲಾಖೆ ಉಪ ಆಯುಕ್ತರಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಶಾಸಕರಾದ ಬಿ.ಜಿ.ಗೋವಿಂದಪ್ಪ, ಟಿ.ರಘುಮೂರ್ತಿ, ಕೆ.ಸಿ.ವೀರೇಂದ್ರ ಪಪ್ಪಿ, ಎಂ.ಚಂದ್ರಪ್ಪ, ಎನ್.ವೈ.ಗೋಪಾಲಕೃಷ್ಣ, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲಾನ್ ಆದಿತ್ಯ ಬಿಸ್ವಾಸ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧಮೇರ್ಂದರ್ ಕುಮಾರ್ ಮೀನಾ, ಜಿಲ್ಲಾ ಪಂಚಾಯಿತಿ ಕೆಡಿಪಿ ನಾಮನಿರ್ದೇಶಿತ ಸದಸ್ಯರಾದ ಖಲಿಂ ಉಲ್ಲಾ, ರಂಗಸ್ವಾಮಿ, ದೀಪಿಕಾ, ಸತೀಶ್, ತಿಮ್ಮಯ್ಯ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

Latest News >>

ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು,ನಾವು ರೋಗಿಗಳ ಸೇವೆಮಾಡುವಲ್ಲಿ ದೇವರನ್ನ ಕಾಣಬೇಕು. ಬೆಂ.ಗ್ರಾ.ಕ್ಷೇತ್ರದಸಂಸದ ಡಾ.ಸಿ.ಎನ್.ಮಂಜುನಾಥ್

ತುಮಕೂರು : ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು ಸಾರ್ವಜನಿಕರು, ರೋಗಿಗಳು ನಮ್ಮನ್ನು ದೇವರಿಗೆ ಹೋಲಿಕೆ ಮಾಡುತ್ತಾರೆ. ನಾವು...

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page