ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ: ಪ್ರತಿಜ್ಞಾವಿಧಿ ಬೋಧನೆ

by | 09/02/24 | ಆರೋಗ್ಯ


ಚಿತ್ರದುರ್ಗ ಫೆ.09:
ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಅಂಗವಾಗಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ಜೀತ ಪದ್ದತಿ ನಿರ್ಮೂಲನಾ ದಿನಾಚರಣೆಯ ಪ್ರತಿಜ್ಞಾವಿಧಿ ಬೋಧಿಸಿದರು.
ಕರ್ನಾಟಕವನ್ನು ಜೀತ ವಿಮುಕ್ತಗೊಳಿಸಲು, ಸಂಕಷ್ಟದಲ್ಲಿರುವ ಸಮುದಾಯಗಳ ಜನರಿಗೆ ನ್ಯಾಯ ಒದಗಿಸಲು ನನ್ನ ಸೇವೆಯನ್ನು ಮುಡುಪಾಗಿಡುತ್ತೇನೆ. ಈ ಮೂಲಕ ಸಮಾನತೆಯನ್ನು ಸಾಧಿಸಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇನೆ ಎಂದು ಈ ಮೂಲಕ ಪ್ರತಿಜ್ಞೆ ಮಾಡುತ್ತೇನೆ ಎಂಬ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ಆಟೋ ಪ್ರಚಾರಕ್ಕೆ ಚಾಲನೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆ ಅಂಗವಾಗಿ ಜನರಲ್ಲಿ ಜಾಗೃತಿ ಮೂಡಿಸಲು ಆಟೋ ಮೂಲಕ ಪ್ರಚಾರ ಕಾರ್ಯಕ್ರಮಕ್ಕೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಪಿ.ಸತೀಶ್ ಕುಮಾರ್ ಸೇರಿದಂತೆ ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ ಸಿಬ್ಬಂದಿ ವರ್ಗದವರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ಫೋಟೋ ವಿವರ: ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಅಂಗವಾಗಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಜೀತಪದ್ದತಿ ನಿರ್ಮೂಲನಾ ದಿನಾಚರಣೆ ಪ್ರತಿಜ್ಞಾವಿಧಿ ಬೋಧಿಸಿದರು.
ಫೋಟೋ ವಿವರ: ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶುಕ್ರವಾರ ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಅಂಗವಾಗಿ ಜನರಲ್ಲಿ ಜಾಗೃತಿ ಮೂಡಿಸಲು ಆಟೋ ಪ್ರಚಾರ ಕಾರ್ಯಕ್ರಮಕ್ಕೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page