ಚಿತ್ರದುರ್ಗ ಅ.31:
ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2022ನೇ ಸಾಲಿನಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಕ್ರೀಡಾಪಟುವಾಗಿ, ತರಬೇತುದಾರರಾಗಿ ನಿರಂತರ ಸೇವೆ ಸಲ್ಲಿಸಿ ಸಾಧನೆ ಮಾಡಿದಂತಹ ಹಿರಿಯ ಕ್ರೀಡಾಪಟು, ತರಬೇತುದಾರರಿಗೆ ಜೀವನ ಪರ್ಯಂತ ಸಾಧನಾ ಪ್ರಶಸ್ತಿ ನೀಡಲು ಹಾಗೂ ಗ್ರಾಮೀಣ ಕ್ರೀಡೆಗಳಲ್ಲಿ ವಿಶೇಷ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ನವೆಂಬರ್ 30 ಅರ್ಜಿ ಸಲ್ಲಿಸಲು ಕೊನೆ ದಿನ.
ರಾಷ್ಟ್ರೀಯ, ಅಂತರಾಷ್ಟ್ರೀಯ ಜೀವಮಾನ ಸಾಧನೆ ಮಾಡಿದ ಹಾಗೂ ಅತ್ಯುತ್ತಮ ಸಾಧನೆ ಮಾಡಿರುವ ಕ್ರೀಡಾಪಟುಗಳು ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸುವ ಕ್ರೀಡಾಪಟುಗಳು, ತರಬೇತುದಾರರು ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ ಮತ್ತು ಜೀವಮಾನ ಸಾಧನೆ ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರು ಇಲಾಖಾ ವೆಬ್‍ಸೈಟ್ http://sevasindhuservicse.karnataka.gov.in ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೀವಮಾನ ಸಾಧನೆ ಪ್ರಶಸ್ತಿಗಾಗಿ ಅರ್ಜಿ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments